Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಮರಾಠಾ ಅಭಿವೃದ್ಧಿ ನಿಗಮಕ್ಕೆ ಸಾವಿರ ಕೋಟಿ ರೂ.ಅನುದಾನ ನೀಡಿ: ಕಿರಣ್ ಜಾಧವ್ ಆಗ್ರಹ

ಬೆಳಗಾವಿ : ಕರ್ನಾಟಕ ರಾಜ್ಯದಲ್ಲಿ ಶೈಕ್ಷಣಿಕ ಹಾಗೂ ಆರ್ಥಿಕವಾಗಿ ಹಿಂದುಳಿದಿರುವ ಮರಾಠಾ ಸಮಯದಾಯದ ಸರ್ವತೋಮುಖ ಅಭಿವೃದ್ಧಿಗಾಗಿ ವಿಶೇಷ ಆದ್ಯತೆ ನೀಡುವ ಮೂಲಕ ಕರ್ನಾಟಕ ಮರಾಠಾ ಸಮುದಾಯಗಳ ಅಭಿವೃದ್ಧಿ ನಿಗಮಕ್ಕೆ ಕನಿಷ್ಠ ಸಾವಿರ ಕೋಟಿ ರೂ.ಅನುದಾನ ಮೀಸಲಿಡಬೇಕು ಎಂದು ಮರಾಠಾ ಮುಖಂಡ ಕಿರಣ್ ಜಾಧವ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಒತ್ತಾಯಿಸಿದ್ದಾರೆ.

ಈ ಬಗ್ಗೆ ಪ್ರಕಟಣೆ ನೀಡಿರುವ ಅವರು, ನಿಗಮಕ್ಕೆ
ಪ್ರಸ್ತುತ ನೀಡಲಾಗುತ್ತಿರುವ ಅನುದಾನ ಸಮುದಾಯದ ಅಗತ್ಯಗಳಿಗೆ ತಕ್ಕಂತೆ ಸಾಲುತ್ತಿಲ್ಲ. ಯಾವಾಗಲೂ ಸಾಮಾಜಿಕ ಸಮಾನತೆಗೆ ಆದ್ಯತೆ ನೀಡುವ ಸಿದ್ದರಾಮಯ್ಯ ಅವರು, ಈ ಬಾರಿ ಬಜೆಟ್‌ನಲ್ಲಿ ಹೆಚ್ಚಿನ ಮೊತ್ತ ಮೀಸಲಿಟ್ಟು ನಿಗಮದ ಮೂಲಕ ವಿದ್ಯಾರ್ಥಿವೇತನ, ಉನ್ನತ ಶಿಕ್ಷಣಕ್ಕೆ ಆರ್ಥಿಕ ನೆರವು, ವಿದೇಶ ವ್ಯಾಸಂಗ ಸಹಾಯಧನ ಹಾಗೂ ಕೃಷಿ ಮತ್ತು ಪಶು ಸಂಗೋಪನೆ ಚಟುವಟಿಕೆಗಳಿಗೆ ಪ್ರೋತ್ಸಾಹ ಸೇರಿದಂತೆ ವಿಶೇಷ ಯೋಜನೆಗಳನ್ನು ಜಾರಿಗೆ ತರಬೇಕು.‌ಮುದಾಯದ ನಿರುದ್ಯೋಗಿ ಯುವಕರಿಗೆ ಕಡಿಮೆ ಬಡ್ಡಿದರದಲ್ಲಿ ಸಾಲ ಸೌಲಭ್ಯ ಒದಗಿಸಿ, ಸ್ವಯಂ ಉದ್ಯೋಗಕ್ಕೆ ಉತ್ತೇಜನ ನೀಡುವ ಕಾರ್ಯಕ್ರಮಗಳಿಗೆ ಆದ್ಯತೆ ನೀಡಬೇಕು ಎಂದು ಒತ್ತಾಯಿಸಿದ್ದಾರೆ.
ರಾಜ್ಯದಲ್ಲಿ ಮರಾಠಾ ಸಮುದಾಯದವರು ಶಿಕ್ಷಣ ಹಾಗೂ ಆರ್ಥಿಕ ಕ್ಷೇತ್ರದಲ್ಲಿ ಇನ್ನೂ ಸಾಕಷ್ಟು ಸವಾಲುಗಳನ್ನು ಎದುರಿಸುತ್ತಿದ್ದಾರೆ. ಮುಖ್ಯಮಂತ್ರಿಗಳು ಈ ಬಜೆಟ್‌ನಲ್ಲಿ ಸಮುದಾಯದ ಆಶೋತ್ತರಗಳಿಗೆ ಸ್ಪಂದಿಸಿ, ಮರಾಠಾ ಅಭಿವೃದ್ಧಿ ನಿಗಮಕ್ಕೆ ವಿಶೇಷ ಪ್ಯಾಕೇಜ್ ಘೋಷಿಸಬೇಕು, ಎಂದು ಕಿರಣ್ ಜಾಧವ್ ಹೇಳಿದ್ದಾರೆ.
Advertisement
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪೋಕ್ಸೋ ಪ್ರಕರಣ : ಪೊಲೀಸರ ಮುಂದೆ ಶರಣಾದ ಕೇಂದ್ರ ಸಚಿವ ಬಂಡಿ ಸಂಜಯ ಪುತ್ರ3 ನೇ ಮಗು ಜನಿಸಿದರೆ ₹30 ಸಾವಿರ, 4ನೇ ಮಗು ಜನಿಸಿದರೆ ₹40 ಸಾವಿರ ಧನಸಹಾಯ ! ವಿಶಿಷ್ಟ ಯೋಜನೆ ಘೋಷಿಸಿದ ಆಂಧ್ರ ಸಿಎಂ…!SSLC ಮರುಮೌಲ್ಯಮಾಪನ : ಜಿಲ್ಲೆಯ ವಿದ್ಯಾರ್ಥಿ ಈಗ ಇಡೀ ರಾಜ್ಯಕ್ಕೆ ಪ್ರಥಮ..!ಕಕ್ಷಿದಾರರ ಸಮಾಲೋಚನಾ ಸ್ಪರ್ಧೆ: ರಾಷ್ಟ್ರೀಯ ಕಾನೂನು ಉತ್ಸವದಲ್ಲಿ ಪ್ರಥಮ ಸ್ಥಾನ ಪಡೆದ ಗದಗ ಮಾನ್ವಿ ಕಾನೂನು ಮಹಾವಿದ್ಯಾಲಯದ ವಿದ್ಯಾರ್ಥಿಗಳುಸಾವಿರಾರು ಕೋಟಿ ಹೂಡಿಕೆ ಮಾಡಿದವರಿಗೆ ಆತಂಕ :  ICE CREAM ಮಾರುತ್ತಿದ್ದವ ಈ ಪರಿ ಬೆಳೆದದ್ದು ಹೇಗೆ ?ಕೊನೆಗೂ ಶಿವಾನಂದ ನೀಲಣ್ಣವರ ಬಂಧನ..!ರಾಷ್ಟ್ರೀಯ ಸ್ಪರ್ಧೆಯಲ್ಲಿ ಕಂಚಿನ ಪದಕ ಗೆದ್ದ ಲಿಂಗರಾಜ ಕಾಲೇಜು ವಿದ್ಯಾರ್ಥಿನಿಟ್ರ್ಯಾಕ್ಟರ್ ಸೇತುವೆಯಿಂದ ಕೆಳಗೆ ಬಿದ್ದು ಸಂಭವಿಸಿದ ಭೀಕರ ಅಪಘಾತದಲ್ಲಿ 4 ಕ್ಕೂ ಅಧಿಕ ಜನ ಸಾವುಬೆಳಗಾವಿ ಕೃಷ್ಣಮಠದಲ್ಲಿ ಅಧಿಕ ಮಾಸದ ಪ್ರಯುಕ್ತ ವಿಶೇಷ ಧಾರ್ಮಿಕ ಕಾರ್ಯಕ್ರಮ ಆಯೋಜನೆಕಾನೂನು ವಿದ್ಯಾರ್ಥಿಗಳು ವೃತ್ತಿಪರ ಕೌಶಲಗಳನ್ನು ಬೆಳೆಸಿಕೊಳ್ಳಬೇಕು: ಬೆಳಗಾವಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಮಂಜುನಾಥ ನಾಯಕ್ ಕರೆ