Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಕೇಂದ್ರ ಸರಕಾರದಿಂದ ವಿಶೇಷ ಯೋಜನೆ ಮತ್ತು ಅನುದಾನ ಒದಗಿಸುವಂತೆ ಕೇಂದ್ರ ಸಚಿವರಿಗೆ ಮನವಿ ಮಾಡಿದ ಕಿರಣ್ ಜಾಧವ ಆಟೋನಗರ, ರಾಮತೀರ್ಥನಗರ ಕೈಗಾರಿಕಾ ಪ್ರದೇಶಗಳಲ್ಲಿ ಮೂಲ ಸೌಕರ್ಯ ಹೆಚ್ಚಿಸಿ ಕೈಗಾರಿಕಾ ಅಭಿವೃದ್ಧಿಗೆ ಉತ್ತೇಜನ ನೀಡಿ

ಬೆಳಗಾವಿ : ಉತ್ತರ ವಿಧಾನಸಭಾ ಕ್ಷೇತ್ರದ ಆಟೋನಗರ ಹಾಗೂ ರಾಮತೀರ್ಥನಗರ ಕೈಗಾರಿಕಾ ಪ್ರದೇಶಗಳಲ್ಲಿ ಮೂಲಸೌಕರ್ಯಗಳನ್ನು ಹೆಚ್ಚಿಸಿ ಕೈಗಾರಿಕಾ ಅಭಿವೃದ್ಧಿಗೆ ಹೆಚ್ಚಿನ ಉತ್ತೇಜನ ನೀಡುವಂತೆ ಬಿಜೆಪಿ ಮುಖಂಡ ಕಿರಣ ಜಾಧವ್ ಅವರು ಕೇಂದ್ರ ಭಾರೀ ಕೈಗಾರಿಕೆ ಹಾಗೂ ಉಕ್ಕು ಖಾತೆ ರಾಜ್ಯ ಸಚಿವ ಭೂಪತಿ ರಾಜು ಶ್ರೀನಿವಾಸ ವರ್ಮಾ ಅವರಿಗೆ ಮನವಿ ಮಾಡಿದರು.

ಮಂಗಳವಾರ ನಗರಕ್ಕೆ ಭೇಟಿ ನೀಡಿದ್ದ ಸಚಿವರನ್ನು ಭೇಟಿಯಾದ ಅವರು, ಉತ್ತರ ಕ್ಷೇತ್ರದ ಆಟೋನಗರ ಮತ್ತು ರಾಮತೀರ್ಥನಗರ ಕೈಗಾರಿಕಾ ಪ್ರದೇಶಗಳಲ್ಲಿ ನೂರಾರು ಸಣ್ಣ, ಮಧ್ಯಮ ಮತ್ತು ಬೃಹತ್ ಕೈಗಾರಿಕೆಗಳು ಕಾರ್ಯನಿರ್ವಹಿಸುತ್ತಿದ್ದು, ಸಾವಿರಾರು ಜನರಿಗೆ ಉದ್ಯೋಗಾವಕಾಶ ಕಲ್ಪಿಸುತ್ತಿವೆ. ಆದರೆ, ಕೈಗಾರಿಕೆಗಳ ಸಂಖ್ಯೆಗೆ ಅನುಗುಣವಾಗಿ ಮೂಲಸೌಕರ್ಯಗಳ ಅಭಿವೃದ್ಧಿಯಾಗದಿರುವುದರಿಂದ ಉದ್ಯಮಿಗಳು ಹಲವು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ ಎಂದು ಸಚಿವರ ಗಮನಕ್ಕೆ ತಂದರು.
ಪ್ರಮುಖವಾಗಿ ಕೈಗಾರಿಕಾ ಪ್ರದೇಶಗಳಲ್ಲಿನ ರಸ್ತೆಗಳನ್ನು ಅಭಿವೃದ್ಧಿಪಡಿಸುವುದು, ಸಮರ್ಪಕ ಒಳಚರಂಡಿ ವ್ಯವಸ್ಥೆ ನಿರ್ಮಿಸುವುದು, ನಿರಂತರ ವಿದ್ಯುತ್ ಪೂರೈಕೆ, ಕುಡಿಯುವ ನೀರಿನ ಸೌಲಭ್ಯ, ಬೀದಿ ದೀಪಗಳ ವ್ಯವಸ್ಥೆ, ಮಳೆ ನೀರು ಹರಿದು ಹೋಗಲು ಅಗತ್ಯ ವ್ಯವಸ್ಥೆ ಹಾಗೂ ಕೈಗಾರಿಕೆಗಳಿಗೆ ಅಗತ್ಯವಾದ ಇತರ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸುವ ನಿಟ್ಟಿನಲ್ಲಿ ಕೇಂದ್ರ ಸರಕಾರದಿಂದ ವಿಶೇಷ ಯೋಜನೆ ಮತ್ತು ಅನುದಾನ ಒದಗಿಸುವಂತೆ ಮನವಿ ಮಾಡಿದರು.
ಬೆಳಗಾವಿ ದೇಶದ ಪ್ರಮುಖ ಕೈಗಾರಿಕಾ ನಗರಗಳಲ್ಲಿ ಒಂದಾಗಿದ್ದು, ಇಲ್ಲಿನ ಫೌಂಡ್ರಿ, ಎಂಜಿನಿಯರಿಂಗ್, ಆಟೋಮೊಬೈಲ್ ಮತ್ತು ಉತ್ಪಾದನಾ ಕ್ಷೇತ್ರಗಳು ದೇಶದ ಆರ್ಥಿಕ ಬೆಳವಣಿಗೆಗೆ ಮಹತ್ವದ ಕೊಡುಗೆ ನೀಡುತ್ತಿವೆ. ಆದ್ದರಿಂದ ಆಟೋನಗರ ಮತ್ತು ರಾಮತೀರ್ಥನಗರ ಕೈಗಾರಿಕಾ ಪ್ರದೇಶಗಳ ಅಭಿವೃದ್ಧಿಗೆ ವಿಶೇಷ ಆದ್ಯತೆ ನೀಡಿದರೆ ಹೊಸ ಹೂಡಿಕೆಗಳು ಬರಲಿದ್ದು, ಸ್ಥಳೀಯ ಯುವಕರಿಗೆ ಹೆಚ್ಚಿನ ಉದ್ಯೋಗಾವಕಾಶಗಳು ಸೃಷ್ಟಿಯಾಗಲಿವೆ ಎಂದು ಕಿರಣ ಜಾಧವ್ ಅಭಿಪ್ರಾಯಪಟ್ಟರು.
ಮನವಿಗೆ ಸ್ಪಂದಿಸಿದ ಸಚಿವ ಭೂಪತಿ ರಾಜು ಶ್ರೀನಿವಾಸ ವರ್ಮಾ ಅವರು, ಕೈಗಾರಿಕಾ ಅಭಿವೃದ್ಧಿಗೆ ಸಂಬಂಧಿಸಿದ ವಿಷಯಗಳನ್ನು ಗಂಭೀರವಾಗಿ ಪರಿಗಣಿಸಿ, ಸಂಬಂಧಿತ ಇಲಾಖೆಗಳೊಂದಿಗೆ ಚರ್ಚಿಸಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಮುಕ್ತಿಯಾರ್ ಪಠಾಣ ಸೇರಿದಂತೆ ಸ್ಥಳೀಯ ಕೈಗಾರಿಕೋದ್ಯಮಿಗಳು, ಬಿಜೆಪಿ ಮುಖಂಡರು ಇದ್ದರು.

Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವಿದ್ಯಾರ್ಥಿಗಳು ವಿವಿಧ ಕೌಶಲ್ಯಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳುವ ಕರೆ: ಪ್ರವೀಣ ಗುಡಿಜಗತ್ತಿನ ಆವಿಷ್ಕಾರದಲ್ಲಿ ನ್ಯಾನೋ ತಂತ್ರಜ್ಞಾನದ ಪಾತ್ರ ಅಪಾರ: ಕುಲಪತಿ ಸಿ. ಎಂ. ತ್ಯಾಗರಾಜ ಆಡಳಿತದಲ್ಲಿ ಇನ್ಮುಂದೆ 'ಬಂಗಾಳಿ' ಕಡ್ಡಾಯ: ಪಶ್ಚಿಮ ಬಂಗಾಳ ಸಿಎಂ ಸುವೇಂದು ಘೋಷಣೆಕೌಶಲ್ಯ ಅಭಿವೃದ್ಧಿ ಯುವಕರ ಭವಿಷ್ಯದ ಕೀಲಿ ಜನರಲ್ಲಿ ಪುಸ್ತಕ ಓದುವ ಹವ್ಯಾಸ ಬೆಳೆಸುವ ಕಾರ್ಯ ಸ್ತುತ್ಯಾರ್ಹ : ಪ್ರೊ. ಹೊಸಕೋಟಿಬಿಸಿಸಿಐ ಚುನಾವಣೆ : ಎಲ್ಲ ಸ್ಥಾನಗಳಿಗೆ ಅವಿರೋಧ ಆಯ್ಕೆಕರ್ನಾಟಕದ ಹಲವು ಜಿಲ್ಲೆಗಳಲ್ಲಿ 4 ದಿನ ಭಾರಿ ಮಳೆಯ ಮುನ್ಸೂಚನೆಒಡೆಸಾ ಬಂದರಿನಲ್ಲಿ ವಾಣಿಜ್ಯ ಹಡಗಿನ ಮೇಲೆ ಕ್ಷಿಪಣಿ ದಾಳಿ: ನಾಲ್ವರು ಭಾರತೀಯರು ಸಾವು, ಮತ್ತೊಬ್ಬನ ಸ್ಥಿತಿ ಗಂಭೀರಸಿಜೆಪಿ ನಾಯಕರ ಜೊತೆ ಸೌಹಾರ್ದಯುತ ಮಾತುಕತೆ ಬಳಿಕ ಧರಣಿ ಅಂತ್ಯಗೊಳಿಸುವಂತೆ ಕೇಂದ್ರ ಸರ್ಕಾರದ ಮನವಿನ್ಯಾನೋ ಜಾಥಾ-2026' ಕಾರ್ಯಕ್ರಮ