Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಗಡಿ ಭಾಗದಲ್ಲಿ ಕನ್ನಡ ಶಾಲೆಗಳನ್ನು ಕಟ್ಟಿ ಕೆಎಲ್ಇ ಸಂಸ್ಥೆ ಮೌಲಿಕ ಸೇವೆ ಮಾಡಿದೆ: ಕಾಶಿ ಪೀಠದ ಪೂಜ್ಯ ಜಗದ್ಗುರು ಡಾ. ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ಅಭಿಮತ ಯಡೂರಿನಲ್ಲಿ ಕನ್ನಡ ಮಾಧ್ಯಮ ಶಾಲೆ ಕಟ್ಟಡದ ಭೂಮಿ ಪೂಜೆ

ಬೆಳಗಾವಿ : ಜಾಗತಿಕವಾಗಿ ವಿಸ್ತರಿಸಿರುವ ಗಡಿಭಾಗದಲ್ಲಿ ಹತ್ತು ಹಲವಾರು ಕನ್ನಡ ಮಾಧ್ಯಮ ಶಾಲೆಗಳನ್ನು ಹುಟ್ಟುಹಾಕಿ ಕನ್ನಡ ಸೇವೆಯನ್ನು ನಿಸ್ವಾರ್ಥವಾಗಿ ಮಾಡಿದೆ. ಆಂಗ್ಲ ಮಾಧ್ಯಮದ ಭರಾಟೆಯಲ್ಲಿ ಕನ್ನಡವನ್ನು ಉಳಿಸಿ ಬೆಳೆಸುತ್ತಿರುವ ಕೆಎಲ್ಇ ಸಂಸ್ಥೆಯ ಕೊಡುಗೆ ಅನನ್ಯ ಎಂದು ಕಾಶಿ ಪೀಠದ ಪೂಜ್ಯ ಜಗದ್ಗುರು ಡಾ. ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ನುಡಿದರು.

ಅವರು ಯಡೂರಿನಲ್ಲಿ ಕೆಎಲ್ಇ ಕನ್ನಡ ಮಾಧ್ಯಮ ಶಾಲೆ ಕಟ್ಟಡದ ಭೂಮಿ ಪೂಜೆಯನ್ನು ನೆರವೇರಿಸಿ ಆಶರ‍್ವಚನ ನೀಡಿದರು. ಕೆಎಲ್ಇ ಸಂಸ್ಥೆಯು ಶಿಕ್ಷಣ ಆರೋಗ್ಯ ಕ್ಷೇತ್ರದಲ್ಲಿ ನೀಡಿರುವ ಕೊಡುಗೆ ಚಿರಸ್ಮರಣೀಯ. ಅದರ ಹಿಂದೆ ಗೌರವ ಕಾರ‍್ಯಾಧ್ಯಕ್ಷರಾಗಿರುವ ಡಾ.ಪ್ರಭಾಕರ ಕೋರೆಯವರ ಶ್ರಮ ಅಗಾಧವಾದುದು. ಒಂದು ಸಂಸ್ಥೆಯನ್ನು ಅದ್ಭುತವಾಗಿ ಕಟ್ಟುವುದರ ಮೂಲಕ ಅದನ್ನು ಸಮಾಜಮುಖಿಯಾಗಿ ವಿಸ್ತರಿಸಿದ್ದು ಅವರ ಹೆಗ್ಗಳಿಕೆ. ಅದರೊಂದಿಗೆ ಕನ್ನಡವನ್ನು ಈ ನೆಲದಲ್ಲಿ ಜಾಗೃತಿಯಿಂದ ಉಳಿಸಿ ಬೆಳೆಸಿದ್ದಾರೆ. ಇಂದು ಯಡೂರು ವೀರಭದ್ರನ ಸನ್ನಿಧಾನದಲ್ಲಿ ಕನ್ನಡ ಮಾಧ್ಯಮ ಶಾಲೆಯನ್ನು ಹುಟ್ಟು ಹಾಕುತ್ತಿರುವುದು ಅವರ ಕನ್ನಡ ಪ್ರೇಮಕ್ಕೆ ಸಾಕ್ಷಿಯಾಗಿ ನಿಂತಿದೆ. ಈ ಪವಿತ್ರ ಭೂಮಿ ಪೂಜೆಗೆ ಪಂಚಪೀಠದ ಶಿವಾಚಾರ್ಯರನ್ನು ಆಹ್ವಾನಿಸಿ ನೆರವೇರಿಸುತ್ತಿರುವುದು ಈಶ್ವರನ ಕೃಪೆಯೆಂದುಕೊಂಡಿದ್ದೇವೆ.
ಸಮಾಜಮುಖಿಯಾದ ಸೇವೆಗೆ ಅಣಿಯಾಗಿರುವ ಕೆಎಲ್ಇ ಸಂಸ್ಥೆಯ ಈ ಶಾಲೆ ಈ ಭಾಗದ ವಿದ್ಯಾರ್ಥಿಗಳ ಸರ್ವಾಂಗೀಣ ವಿಕಾಸವನ್ನು ಮಾಡಲಿ ಸಂಸ್ಥೆಯು ವಿಸ್ತಾರವಾಗಿ ಬೆಳೆಯಲಿ ಎಂದು ಆಶೀರ್ವದಿಸಿದರು.

ಗೌರವ ಕಾರ‍್ಯಾಧ್ಯಕ್ಷ ಡಾ. ಪ್ರಭಾಕರ ಕೋರೆ ಮಾತನಾಡಿ, ಸಂಸ್ಥೆಯ ಕಾರ‍್ಯಗಳಿಗೆ ಪಂಚಪೀಠದ ಜಗದ್ಗುರುಗಳು ಸದಾ ಆಶೀರ್ವದಿಸುತ್ತಾ ಬಂದಿದ್ದಾರೆ. ಇಂದು ಅವರ ಅಮೃತ ಹಸ್ತದಿಂದ ಭೂಮಿ ಪೂಜೆ ನೆರವೇರಿರುವುದು ಬಹಳ ಸಂತೋಷ ತಂದಿದೆ. ಮುಂಬರುವ ದಿನಗಳಲ್ಲಿ ಅತ್ಯುನ್ನತವಾದ ಶಾಲೆಯನ್ನು ಇಲ್ಲಿ ನಿರ‍್ಮಿಸಿ ವಿದ್ಯಾರ್ಥಿಗಳಿಗೆ ಅನುಕೂಲ ಮಾಡಿಕೊಡಲಾಗುವುದು ಎಂದು ಹೇಳಿದರು.

ಶ್ರೀಶೈಲ ಪೀಠದ ಪೂಜ್ಯ ಜಗದ್ಗುರು ಶ್ರೀ ಚನ್ನ ಸಿದ್ದರಾಮ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ, ಉಜ್ಜಯಿನಿ ಪೀಠದ ಪೂಜ್ಯ ಜಗದ್ಗುರು ಶ್ರೀ ಸಿದ್ದಲಿಂಗ ರಾಜ ದೇಶಿ ಕೇಂದ್ರ ಶಿವಾಚಾರ್ಯ ಸ್ವಾಮೀಜಿ, ಕಾಶಿ ಮಹಾಪೀಠದ ಪೂಜ್ಯಶ್ರೀ ಜಗದ್ಗುರು ಡಾ. ಮಲ್ಲಿಕಾರ್ಜುನ ವಿಶ್ವರಾಧ್ಯ ಶಿವಾಚಾರ್ಯ ಸ್ವಾಮೀಜಿ ದಿವ್ಯ ಸಾನಿಧ್ಯವನ್ನು ವಹಿಸಿ ಭೂಮಿ ಪೂಜೆಯನ್ನು ನೆರವೇರಿಸಿದರು.

ಕೆಎಲ್‌ಇ ಆಡಳಿತ ಮಂಡಳಿಯ ನಿರ್ದೇಶಕ ಮಹಾಂತೇಶ ಕವಟಗಿಮಠ, ಜಯಾನಂದ ಮುನವಳ್ಳಿ, ಬಸವರಾಜ ಪಾಟೀಲ, ವಿಶ್ವನಾಥ ಪಾಟೀಲ, ಪ್ರವೀಣ ಬಾಗೇವಾಡಿ, ಮಂಜುನಾಥ ಮುನವಳ್ಳಿ, ವಿಜಯ ಮೆಟಗುಡ್, ಮಾಜಿ ನಿರ್ದೇಶಕ ಶಂಕ್ರಣ್ಣ ಮುನವಳ್ಳಿ, ಶಾಸಕ ಗಣೇಶ ಹುಕ್ಕೇರಿ ಮುಂತಾದವರು ಉಪಸ್ಥಿತರಿದ್ದರು.
Advertisement
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಷ್ಟ್ರೀಯ ಸ್ಪರ್ಧೆಯಲ್ಲಿ ಕಂಚಿನ ಪದಕ ಗೆದ್ದ ಲಿಂಗರಾಜ ಕಾಲೇಜು ವಿದ್ಯಾರ್ಥಿನಿಟ್ರ್ಯಾಕ್ಟರ್ ಸೇತುವೆಯಿಂದ ಕೆಳಗೆ ಬಿದ್ದು ಸಂಭವಿಸಿದ ಭೀಕರ ಅಪಘಾತದಲ್ಲಿ 4 ಕ್ಕೂ ಅಧಿಕ ಜನ ಸಾವುಬೆಳಗಾವಿ ಕೃಷ್ಣಮಠದಲ್ಲಿ ಅಧಿಕ ಮಾಸದ ಪ್ರಯುಕ್ತ ವಿಶೇಷ ಧಾರ್ಮಿಕ ಕಾರ್ಯಕ್ರಮ ಆಯೋಜನೆಕಾನೂನು ವಿದ್ಯಾರ್ಥಿಗಳು ವೃತ್ತಿಪರ ಕೌಶಲಗಳನ್ನು ಬೆಳೆಸಿಕೊಳ್ಳಬೇಕು: ಬೆಳಗಾವಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಮಂಜುನಾಥ ನಾಯಕ್ ಕರೆಖ್ಯಾತ ನಟ ದರ್ಶನ್ ಗೆ ಇನ್ನೊಂದು ವರ್ಷ ಜಾಮೀನು ಇಲ್ಲ : ಸುಪ್ರೀಂ ಕೋರ್ಟ್ಸಿದ್ದಾಪುರ : ಸ್ಕೂಟಿಗೆ ಟ್ರ್ಯಾಕ್ಟರ್ ಡಿಕ್ಕಿ ; ಜನಗಣತಿ ಜವಾಬ್ದಾರಿ ನಿರ್ವಹಿಸುತ್ತಿದ್ದ ಶಿಕ್ಷಕಿ ಸಾವುಗಾಳಿ ಮಳೆಗೆ ಮನೆಯ ಮೇಲ್ಛಾವಣಿ ಕುಸಿದು ಒಂದೇ ಕುಟುಂಬದ ನಾಲ್ವರ ದಾರುಣ ಸಾವುಒಂದೇ ಸಲ 224 ವಿಧಾನ ಸಭೆ ಸ್ಥಾನ ಗೆದ್ದು ಸಿಎಂ ಆಗುತ್ತೇನೆ ಎಂದಿದ್ದ ನೀಲಣ್ಣನವರಿಗೆ ಅಧಿಕಾರಿಗಳಿಂದ ಶಾಕ್ ..!ಉತ್ತರ ಪ್ರದೇಶದಲ್ಲಿ ಭೀಕರ ಬಿರುಗಾಳಿ ಮಳೆಗೆ 100ಕ್ಕೂ ಹೆಚ್ಚು ಮಂದಿ ಸಾವುಪ್ರತಿ ಲೀಟರ್‌ ಪೆಟ್ರೋಲ್‌, ಡೀಸೆಲ್‌ ದರ ಏರಿಕೆ