Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಕೆಎಲ್‌ಎಸ್ ರಾಜಾ ಲಖಮಗೌಡ ಕಾನೂನು ಮಹಾವಿದ್ಯಾಲಯದ ಪ್ರತಿಭಾ ಪುರಸ್ಕಾರದಲ್ಲಿ ನಾಗಶ್ರೀ ನಂದಗಾವಿಗೆ ಎಂ.ಕೆ. ನಂಬಿಯಾರ್ ಚಿನ್ನದ ಪದಕ

ಬೆಳಗಾವಿ : ನಗರದ ಕೆಎಲ್‌ಎಸ್ ರಾಜಾ ಲಖಮಗೌಡ ಕಾನೂನು ಮಹಾವಿದ್ಯಾಲಯದಲ್ಲಿ ನಡೆದ 2025–26ನೇ ಶೈಕ್ಷಣಿಕ ವರ್ಷದ ಪ್ರತಿಭಾ ಪುರಸ್ಕಾರ ಹಾಗೂ ಜಿಮಖಾನಾ ಸಮಾರೋಪ ಸಮಾರಂಭ ವಿಜೃಂಭಣೆಯಿಂದ ನಡೆಯಿತು. 

ಶೈಕ್ಷಣಿಕ, ಸಾಂಸ್ಕೃತಿಕ ಹಾಗೂ ಕ್ರೀಡಾ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಈ ಸಂದರ್ಭದಲ್ಲಿ ಸನ್ಮಾನಿಸಲಾಯಿತು.

ಕಾರ್ಯಕ್ರಮದ ಪ್ರಮುಖ ಆಕರ್ಷಣೆಯಾಗಿ, ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯ ನಡೆಸಿದ ಭಾರತೀಯ ಸಂವಿಧಾನ ವಿಷಯದಲ್ಲಿ ಅತಿ ಹೆಚ್ಚು ಅಂಕಗಳನ್ನು ಗಳಿಸಿದ ವಿದ್ಯಾರ್ಥಿನಿ ನಾಗಶ್ರೀ ನಂದಗಾವಿ ಅವರಿಗೆ ಭಾರತದ ಮಾಜಿ ಅಟಾರ್ನಿ ಜನರಲ್ ಹಾಗೂ ಪದ್ಮವಿಭೂಷಣ ಪ್ರಶಸ್ತಿ ಪುರಸ್ಕೃತ ಕೆ.ಕೆ. ವೇಣುಗೋಪಾಲ್ ಪ್ರಾಯೋಜಿತ ಎಂ.ಕೆ. ನಂಬಿಯಾರ್ ಚಿನ್ನದ ಪದಕವನ್ನು ಪ್ರದಾನಿಸಲಾಯಿತು. ಕಳೆದ 33 ವರ್ಷಗಳಿಂದ ಈ ಪ್ರತಿಷ್ಠಿತ ಚಿನ್ನದ ಪದಕವನ್ನು ಅರ್ಹ ವಿದ್ಯಾರ್ಥಿಗಳಿಗೆ ನೀಡಲಾಗುತ್ತಿದೆ.

ಭಾರತೀಯ ಸೇನೆಯ ನಿಯೋಜಿತ ಅಧಿಕಾರಿ ಲೆಫ್ಟಿನೆಂಟ್ ಕರ್ನಲ್ ಪಂಕಜಾ ಎ. ಕುಗಜಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿ, ಭಾರತೀಯ ಸೇನೆಯ ಕಾನೂನು ಮತ್ತು ನ್ಯಾಯಾಂಗ ವ್ಯವಸ್ಥೆಯ ಕುರಿತು ವಿವರಿಸಿದ ಅವರು, ಮೇಜರ್ ಜನರಲ್ ನೇತೃತ್ವದಲ್ಲಿ ಕಾರ್ಯನಿರ್ವಹಿಸುವ ಈ ವಿಭಾಗವು ಸೇನಾ ಅಧಿಕಾರಿಗಳಿಗೆ ಕಾನೂನು ಸಲಹೆ ನೀಡುವುದು, ಕೋರ್ಟ್ ಮಾರ್ಷಲ್ ಪ್ರಕ್ರಿಯೆಗಳನ್ನು ನಡೆಸುವುದು, ಸೇನಾ ಕಾನೂನುಗಳ ವ್ಯಾಖ್ಯಾನ ಮಾಡುವುದು ಹಾಗೂ ನ್ಯಾಯಮಂಡಳಿ ಮತ್ತು ನಾಗರಿಕ ನ್ಯಾಯಾಲಯಗಳಲ್ಲಿ ಸಶಸ್ತ್ರ ಪಡೆಗಳನ್ನು ಪ್ರತಿನಿಧಿಸುವಂತಹ ಮಹತ್ವದ ಜವಾಬ್ದಾರಿಗಳನ್ನು ನಿರ್ವಹಿಸುತ್ತದೆ ಎಂದು ತಿಳಿಸಿದರು. 

ಕಾನೂನು ವಿದ್ಯಾರ್ಥಿಗಳು ತಮ್ಮ ವೃತ್ತಿಜೀವನವನ್ನು ಕಟ್ಟಿಕೊಳ್ಳುವುದರ ಜೊತೆಗೆ ರಾಷ್ಟ್ರ ನಿರ್ಮಾಣದಲ್ಲಿಯೂ ಪ್ರಮುಖ ಪಾತ್ರವಹಿಸುತ್ತಾರೆ ಎಂದು ಅವರು ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಮಹಾವಿದ್ಯಾಲಯದ ಆಡಳಿತ ಮಂಡಳಿಯ ಅಧ್ಯಕ್ಷ ಹಾಗೂ ಹಿರಿಯ ನ್ಯಾಯವಾದಿ ಆರ್.ಎಸ್. ಮುತಾಲಿಕ್  ಅವರು, 1939 ರಲ್ಲಿ ಸ್ಥಾಪನೆಯಾದ ರಾಜಾ ಲಖಮಗೌಡ ಕಾನೂನು ಮಹಾವಿದ್ಯಾಲಯದ ಸುದೀರ್ಘ ಪರಂಪರೆ ಹಾಗೂ ವಕೀಲಿಕೆ, ನ್ಯಾಯಾಂಗ, ರಾಜಕೀಯ ಮತ್ತು ಸಾರ್ವಜನಿಕ ಸೇವಾ ಕ್ಷೇತ್ರಗಳಲ್ಲಿ ಗಣನೀಯ ಸಾಧನೆ ಮಾಡಿದ ಹಳೆಯ ವಿದ್ಯಾರ್ಥಿಗಳ ಕೊಡುಗೆಗಳನ್ನು ಸ್ಮರಿಸಿದರು.

ಈ ಸಂದರ್ಭದಲ್ಲಿ ಸುಮಾರು 40 ದತ್ತಿ ಪ್ರಶಸ್ತಿಗಳು ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಬಹುಮಾನಗಳನ್ನು ವಿತರಿಸಿ ಗೌರವಿಸಲಾಯಿತು.

ಜಿಮಖಾನಾ ಒಕ್ಕೂಟದ ಅಧ್ಯಕ್ಷ ಡಾ. ಡಿ. ಪ್ರಸನ್ನಕುಮಾರ ಸ್ವಾಗತಿಸಿದರು. ಮಹಾವಿದ್ಯಾಲಯದ ಜಿಮಖಾನಾ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ತನ್ಮಯಿ ಸಾರಾಫ್ ವಾರ್ಷಿಕ ಚಟುವಟಿಕೆಗಳ ವರದಿಯನ್ನು ಮಂಡಿಸಿದರು. ಮಹಿಳಾ ಪ್ರತಿನಿಧಿ ಚಂದ್ರಲೇಖಾ ಪಾಟೀಲ ವಂದಿಸಿದರು.

ಕಾರ್ಯಕ್ರಮದಲ್ಲಿ ಮಹಾವಿದ್ಯಾಲಯದ ಪ್ರಾಚಾರ್ಯ ಡಾ. ಎ.ಎಚ್. ಹಾವಳದಾರ, ಸಹಾಯಕ ದೈಹಿಕ ಶಿಕ್ಷಣ ನಿರ್ದೇಶಕ ಅಮಿತ್ ಜಾಧವ್, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವಿದ್ಯಾರ್ಥಿಗಳು ವಿವಿಧ ಕೌಶಲ್ಯಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳುವ ಕರೆ: ಪ್ರವೀಣ ಗುಡಿಜಗತ್ತಿನ ಆವಿಷ್ಕಾರದಲ್ಲಿ ನ್ಯಾನೋ ತಂತ್ರಜ್ಞಾನದ ಪಾತ್ರ ಅಪಾರ: ಕುಲಪತಿ ಸಿ. ಎಂ. ತ್ಯಾಗರಾಜ ಆಡಳಿತದಲ್ಲಿ ಇನ್ಮುಂದೆ 'ಬಂಗಾಳಿ' ಕಡ್ಡಾಯ: ಪಶ್ಚಿಮ ಬಂಗಾಳ ಸಿಎಂ ಸುವೇಂದು ಘೋಷಣೆಕೌಶಲ್ಯ ಅಭಿವೃದ್ಧಿ ಯುವಕರ ಭವಿಷ್ಯದ ಕೀಲಿ ಜನರಲ್ಲಿ ಪುಸ್ತಕ ಓದುವ ಹವ್ಯಾಸ ಬೆಳೆಸುವ ಕಾರ್ಯ ಸ್ತುತ್ಯಾರ್ಹ : ಪ್ರೊ. ಹೊಸಕೋಟಿಬಿಸಿಸಿಐ ಚುನಾವಣೆ : ಎಲ್ಲ ಸ್ಥಾನಗಳಿಗೆ ಅವಿರೋಧ ಆಯ್ಕೆಕರ್ನಾಟಕದ ಹಲವು ಜಿಲ್ಲೆಗಳಲ್ಲಿ 4 ದಿನ ಭಾರಿ ಮಳೆಯ ಮುನ್ಸೂಚನೆಒಡೆಸಾ ಬಂದರಿನಲ್ಲಿ ವಾಣಿಜ್ಯ ಹಡಗಿನ ಮೇಲೆ ಕ್ಷಿಪಣಿ ದಾಳಿ: ನಾಲ್ವರು ಭಾರತೀಯರು ಸಾವು, ಮತ್ತೊಬ್ಬನ ಸ್ಥಿತಿ ಗಂಭೀರಸಿಜೆಪಿ ನಾಯಕರ ಜೊತೆ ಸೌಹಾರ್ದಯುತ ಮಾತುಕತೆ ಬಳಿಕ ಧರಣಿ ಅಂತ್ಯಗೊಳಿಸುವಂತೆ ಕೇಂದ್ರ ಸರ್ಕಾರದ ಮನವಿನ್ಯಾನೋ ಜಾಥಾ-2026' ಕಾರ್ಯಕ್ರಮ