Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಜ್ಞಾನವೇ ಭವಿಷ್ಯದ ದೀಪಸ್ತಂಭ : ಡಾ. ಅನಂತ ನಾಯಕ

ಬೆಳಗಾವಿ : ಪ್ರಸ್ತುತ ಸಂದರ್ಭದಲ್ಲಿ ಜ್ಞಾನ ಎಲ್ಲದಕ್ಕಿಂತಲೂ ಮಿಗಿಲಾದುದು, ಜ್ಞಾನವೇ ಭವಿಷ್ಯದ ದೀಪಸ್ತಂಭ ಎಂದು ರಾಜಸ್ಥಾನದ ಅಜ್ಮೇರ್ ನ ಎನ್. ಸಿ. ಇ. ಆರ್. ಟಿ. ಯ ಸಹಾಯಕ ಪ್ರಾಧ್ಯಾಪಕ ಡಾ. ಅನಂತ ಎಸ್ ನಾಯಕ ಅಭಿಪ್ರಾಯಪಟ್ಟರು.

ನಗರದ ಸಂಗೊಳ್ಳಿ ರಾಯಣ್ಣ ಪ್ರಥಮ ದರ್ಜೆ ಘಟಕ ಮಹಾವಿದ್ಯಾಲಯದ ಭೌತಶಾಸ್ತ್ರ ವಿಭಾಗದಿಂದ ಮಹಾವಿದ್ಯಾಲಯದ ಸಭಾಂಗಣದಲ್ಲಿ ಅಂತರರಾಷ್ಟ್ರೀಯ ಕ್ವಾಂಟಮ್ ವಿಜ್ಞಾನ ಮತ್ತು ತಂತ್ರಜ್ಞಾನ ವರ್ಷಾಚರಣೆಯ ನಿಮಿತ್ತ ಹಮ್ಮಿಕೊಂಡಿದ್ದ ವಿಶೇಷ ಉಪನ್ಯಾಸದಲ್ಲಿ ಮಾತನಾಡಿದರು.

ಸಮಕಾಲೀನ ಸಂದರ್ಭದಲ್ಲಿ ಕ್ವಾಂಟಮ್ ವಿಜ್ಞಾನ ಹೆಚ್ಚು ಬೇಡಿಕೆಯನ್ನು ಪಡೆದುಕೊಂಡಿದೆ. ಕ್ವಾಂಟಮ್ ಸಿದ್ಧಾಂತದ ಹುಟ್ಟು ಹಾಗೂ ಶಾಸ್ತ್ರೀಯ ಭೌತಶಾಸ್ತ್ರದಿಂದ ಕ್ವಾಂಟಮ್ ಭೌತಶಾಸ್ತ್ರವಾಗಿ ಪರಿವರ್ತನೆಯಾದ ಬಗೆಯನ್ನು ವಿವರಿಸಿದರು. ಇದು ಅತ್ಯಂತ ಸಂಕೀರ್ಣ ಸಮಸ್ಯೆಗಳನ್ನು ಸಾಂಪ್ರದಾಯಿಕ ಕಂಪ್ಯೂಟರ್‌ಗಳಿಗಿಂತ ಹೆಚ್ಚು ವೇಗವಾಗಿ ಪರಿಹರಿಸಬಲ್ಲ ಸಾಮರ್ಥ್ಯ ಹೊಂದಿದೆ. ಈ ತಂತ್ರಜ್ಞಾನವು ಭವಿಷ್ಯವನ್ನು ಹೇಗೆ ಬದಲಾಯಿಸುತ್ತದೆ ಎಂಬುದನ್ನು ಹಲವು ನಿದರ್ಶನಗಳ ಮೂಲಕ ತೋರಿಸಿದರು.

ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯ ಪ್ರೊ. ಎಂ. ಜಿ. ಹೆಗ್ಡೆ ಅವರು, ಜಗತ್ತಿನ ಆವಿಷ್ಕಾರಗಳು ವಿಜ್ಞಾನದ ಕೊಡುಗೆ. ವಿಜ್ಞಾನದಲ್ಲಿ ವಿದ್ಯಾರ್ಥಿಗಳಿಗೆ ಬಹು ದೊಡ್ಡ ಅವಕಾಶಗಳಿವೆ. ವಿದ್ಯಾರ್ಥಿಗಳು ತಮ್ಮ ಗುರಿಗಳನ್ನು ಸಾಧಿಸಲು ಅಧ್ಯಯನ ಮತ್ತು ಸಂಶೋಧನೆಯಲ್ಲಿ ತೊಡಗಿಸಿಕೊಳ್ಳಬೇಕು ಎಂದರು.

ಭೌತಶಾಸ್ತ್ರ ವಿಭಾಗದ ಉಪನ್ಯಾಸಕಿ ಲಾವಣ್ಯ ಬಿ. ಗುಂಜಾಳ ಪ್ರಾಸ್ತಾವಿಕವಾಗಿ ಮಾಡಿದರು. ಜ್ಯೋತಿ ಭೋವಿ ಸ್ವಾಗತಿಸಿದರು. ಗೀತಾ ಪಿ. ಜೆ. ಪರಿಚಯಿಸಿದರು. ರೂಪಾ ಮಲಗೌಡರ್ ನಿರೂಪಿಸಿದರು. ಡಾ. ಬಸವರಾಜ ಗುರವ ವಂದಿಸಿದರು. ವಿದ್ಯಾರ್ಥಿನಿ ಪಾರ್ವತಿ ಮೇತ್ರಿ ಪ್ರಾರ್ಥಿಸಿದರು. ಪ್ರಾಧ್ಯಾಪಕರು, ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿ ವರ್ಗ ಹಾಜರಿದ್ದರು.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ