Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಕಂಚಿನ ಪದಕ ಗೆದ್ದ ಕೊಲ್ಲಾಪುರದ ರೈಲ್ವೆ ಟಿಕೆಟ್ ಕಲೆಕ್ಟರ್

ಪ್ಯಾರಿಸ್​: ಪ್ಯಾರಿಸ್​ ಒಲಿಂಪಿಕ್ಸ್​ನಲ್ಲಿ ಭಾರತ ಸ್ವಪ್ನಿಲ್‌ ಕುಸಾಲೆ ಪುರುಷರ 50 ಮೀ. ರೈಫ‌ಲ್‌ 3 ಪೊಸಿಶನ್‌ನಲ್ಲಿ ಭಾರತಕ್ಕೆ ಕಂಚಿನ ಪದಕ ಗೆದ್ದಿದ್ದಾರೆ. ಈ ಮೂಲಕ ಭಾರತದ ಪದಕ ಸಂಖ್ಯೆ ಮೂರಕ್ಕೇರಿದೆ. ಈ ಮೂರು ಪದಕ ಒಲಿದದ್ದು ಶೂಟಿಂಗ್​ ವಿಭಾಗದಲ್ಲಿ.​

ಗುರುವಾರ ನಡೆದ 50 ಮೀ. ರೈಫ‌ಲ್‌ 3 ಪೊಸಿಶನ್‌ ಫೈನಲ್​ ಪಂದ್ಯದಲ್ಲಿ ಸ್ವಪ್ನಿಲ್ ಅವರು 451.4 ಅಂಕ ಗಳಿಸಿ ಕಂಚಿನ ಪದಕ ತಮ್ಮದಾಗಿಸಿಕೊಂಡರು. ಸ್ವಪ್ನಿಲ್‌ ಫೈನಲ್​ ಪಂದ್ಯದ ಪ್ರೋನ್‌ನಲ್ಲಿ 156.8, ನೀಲಿಂಗ್‌ನಲ್ಲಿ 153.3 ಮತ್ತು ಸ್ಟ್ಯಾಂಡಿಂಗ್‌ನಲ್ಲಿ 195 ಅಂಕಗಳಿಸಿ ಮೂರನೇ ಸ್ಥಾನ ಪಡೆದು ಕಂಚಿನ ಪದಕ್ಕಕೆ ಕೊರಳೊಡ್ಡಿದರು. 463.6 ಅಂಕ ಗಳಿಸಿದ ಚೀನಾದ ಲಿಯು ಯುಕುನ್ ಚಿನ್ನ ಮತ್ತು ಉಕ್ರೇನ್​ನ ಕುಲಿಶ್ ಸೆರ್ಹಿ(461.3) ಬೆಳ್ಳಿ ಪದಕ ಗೆದ್ದರು.

ಬುಧವಾರ ನಡೆದಿದ್ದ ಅರ್ಹತಾ ಸುತ್ತಿನಲ್ಲಿ ಸ್ವಪ್ನಿಲ್‌ ಕುಸಾಲೆ 7ನೇ ಸ್ಥಾನಿಯಾಗಿ ಫೈನಲ್‌ ಪ್ರವೇಶಿಸಿದ್ದರು. ಭೋಪಾಲ್‌ನಲ್ಲಿ ನಡೆದಿದ್ದ ಕೊನೆಯ ಅರ್ಹತಾ ಸುತ್ತಿನಲ್ಲಿ ಅವರು ಪ್ಯಾರಿಸ್‌ ಒಲಿಂಪಿಕ್ಸ್‌ ಅರ್ಹತೆ ಪಡೆದಿದ್ದರು. 2015ರ ಕುವೈತ್​ ಏಷ್ಯನ್‌ ಶೂಟಿಂಗ್‌ ಚಾಂಪಿಯನ್‌ಶಿಪ್‌ ಜೂನಿಯರ್‌ ವಿಭಾಗದಲ್ಲಿ ಚಿನ್ನ, 59ನೇ ಹಾಗೂ 61ನೇ ರಾಷ್ಟ್ರೀಯ ಚಾಂಪಿಯನ್‌ಶಿಪ್‌ನಲ್ಲೂ ಚಿನ್ನ ಗೆದ್ದ ಸಾಧನೆ ಮಾಡಿದ್ದಾರೆ. 50 ಮೀ. ರೈಫ‌ಲ್‌ 3 ಪೊಸಿಶನ್‌ನ ಒಲಿಂಪಿಕ್ಸ್​ನಲ್ಲಿ ಪದಕ ಗೆದ್ದ ಮೊದಲ ಭಾರತೀಯ ಶೂಟರ್​ ಎಂಬ ಕೀರ್ತಿಗೂ ಪಾತ್ರರಾಗಿದ್ದಾರೆ.

ರೈಲ್ವೆ ಟಿಕೆಟ್ ಕಲೆಕ್ಟರ್ :
ಮಹಾರಾಷ್ಟ್ರದ ಕೊಲ್ಲಾಪುರದ ಕಂಬಳವಾಡಿ ಗ್ರಾಮದ 28 ವರ್ಷದ ಸ್ವಪ್ನಿಲ್ ಕುಶಲೆ ಭಾರತ ಕ್ರಿಕೆಟ್​ ತಂಡದ ಮಾಜಿ ನಾಯಕ ಹಾಗೂ ಆಟಗಾರ ಮಹೇಂದ್ರ ಸಿಂಗ್​ ಅವರ ಅಪಟ್ಟ ಅಭಿಮಾನಿ. ಜತೆಗೆ ಧೋನಿಯಂತೆಯೇ ಇವರು ರೇಲ್ವೆ ಟಿಕೆಟ್ ನಿರೀಕ್ಷಕರಾಗಿ ಕಾರ್ಯನಿರ್ವಹಿಸಿದ್ದರು. ಧೋನಿಯವರ ಬಯೋಪಿಕ್ ಸಿನೆಮಾವನ್ನು ಪದೇ ಪದೇ ವೀಕ್ಷಿಸಿದ ಬಳಿಕ ಸ್ವಪ್ನಿಲ್ ಪೂರ್ಣಪ್ರಮಾಣದಲ್ಲಿ ಶೂಟಿಂಗ್‌ನಲ್ಲಿ ತೊಡಗಿಕೊಂಡರು. ಧೋನಿಯವರಂತೆ ಶಾಂತ ಸ್ವಭಾವದ ಈ ಶೂಟರ್​ ಇದೀಗ ಒಲಿಂಪಿಕ್ಸ್‌ ಪದಕವೊಂದನ್ನು ಗೆದ್ದು ಇತಿಹಾಸದ ಪುಟ ಸೇರಿದ್ದಾರೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪ್ರಶ್ನೆ ಪತ್ರಿಕೆ ಸೋರಿಕೆ ವಿಚಾರಣೆಗೆ ತ್ವರಿತ ನ್ಯಾಯಾಲಯ ಸ್ಥಾಪನೆ: ಪ್ರಧಾನಿ ಮೋದಿಶಾಸಕರ ಮನೆಗಳಿಗೆ ಸೀಮಿತವಾದರೆ BLO ಗಳು ? ಸಾರ್ವಜನಿಕರನ್ನು ಸತಾಯಿಸುತ್ತಿರುವ ಬಿ ಎಲ್ ಒ ಗಳ ವಿರುದ್ಧ ಕ್ರಮಕ್ಕೆ ಅಗ್ರಹಶಾಸಕರ ಮನೆಗಳಿಗೆ ಸೀಮಿತವಾದರೆ BLO ಗಳು ?ದೇಶಾದ್ಯಂತ ಆವರಿಸಿದ ಮೋಡಗಳು ; ಉಪಗ್ರಹ ಚಿತ್ರಗಳಲ್ಲಿ ಸ್ಪಷ್ಟ ; ಮುಂಗಾರು ಬಲಗೊಳ್ಳುತ್ತಿದೆ ಎಂದ ಹವಾಮಾನ ಇಲಾಖೆನೀಟ್‌ ಹೋರಾಟ : ಯುವ ಪ್ರತಿಭಟನಾಕಾರರ ವಿರುದ್ಧ ಯಾವುದೇ ಕ್ರಮವಿಲ್ಲ ಎಂದು ಭರವಸೆ ನೀಡಿದ್ರೆ ಉಪವಾಸ ಅಂತ್ಯ ; ಕೇಂದ್ರಕ್ಕೆ ವಾಂಗ್ಚುಕ್ ಷರತ್ತುಕೋಚಿಂಗ್ ಸೆಂಟರ್‌ನಲ್ಲಿ ಲೈಂಗಿಕ ದೌರ್ಜನ್ಯ: ಆರೋಪಿಯನ್ನು ವಶಕ್ಕೆ ಪಡೆದ ಪೊಲೀಸರುಆಷಾಢ ಏಕಾದಶಿ ಪ್ರಯುಕ್ತ ಧಾರವಾಡ-ಪಂಡರಪುರ ನಡುವೆ ವಿಶೇಷ ರೈಲು ಸಂಚಾರಕೆಎಲ್‌ಇ ಜೆಜಿಎಂಎಂ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಕೆಎಲ್‌ಇ ಆಸ್ಪತ್ರೆ, ಹುಬ್ಬಳ್ಳಿ ಉದ್ಘಾಟನಾ ಸಮಾರಂಭ ಮುಂದೂಡಿಕೆಎನ್‌ಡಿಎಗೆ ಎನ್‌ಸಿಪಿ ಬೆಂಬಲದ ವದಂತಿಗಳ ನಡುವೆ ಪ್ರಧಾನಿ ಮೋದಿ ಭೇಟಿ ಮಾಡಿದ ಶರದ್ ಪವಾರ್–ಸುಪ್ರಿಯಾ ಸುಳೆಗಣಿಕೊಪ್ಪ : ಶಾಸಕ ಬಾಬಾಸಾಹೇಬ ಪಾಟೀಲ ಅವರ ಜನ್ಮದಿನದ ಅಂಗವಾಗಿ ವಿದ್ಯಾರ್ಥಿಗಳಿಗೆ ಸಿಹಿ ಭೋಜನ, ಕಲಿಕಾ ಸಾಮಗ್ರಿ ವಿತರಣೆ