Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್‌ ಜಾರಕಿಹೊಳಿ ನಾಮಪತ್ರ ಸಲ್ಲಿಕೆ

 

ಹುಕ್ಕೇರಿ: ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್‌ ಜಾರಕಿಹೊಳಿಯವರು ಯಮಕನಮರಡಿ ವಿಧಾನಸಭಾ ಎಸ್ಟಿ ಮೀಸಲು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಗುರುವಾರ ರಾಹುಕಾಲದಲ್ಲೇ ನಾಮಪತ್ರ ಸಲ್ಲಿಸಿದರು.

ಸಮಾಜದಲ್ಲಿ ಮೌಡ್ಯದ ವಿರುದ್ಧ ಸದಾ ಜಾಗೃತಿ ಮೂಡಿಸುತ್ತಿರುವ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್‌ ಜಾರಕಿಹೊಳಿ ಅವರು ರಾಹುಕಾಲದಲ್ಲಿ ನಾಮಪತ್ರ ಸಲ್ಲಿಸುವ ಮೂಲಕ ಮತ್ತೊಮ್ಮೆ ತಮ್ಮ ವೈಚಾರಿಕ ಚಿಂತನೆ ಸಾಬೀತು ಪಡಿಸಿದರು.

ನಾಮಪತ್ರವನ್ನು ಮೆರವಣಿಗೆ ನಡೆಸದೆ ಕೇವಲ ಐದು ಜನರೊಂದಿಗೆ ಹುಕ್ಕೇರಿ ತಹಶೀಲ್ದಾರ್‌ ಕಚೇರಿಗೆ ಬಂದು ಚುನಾವಣಾ ಅಧಿಕಾರಿಗೆ ನಾಮಪತ್ರ ಸಲ್ಲಿಸಿದರು.

ಯಮಕನಮರಡಿ ವಿಧಾನಸಭಾ ಕ್ಷೇತ್ರದಿಂದ ನಾಲ್ಕನೇ ಬಾರಿಗೆ ನಾಮಪತ್ರ ಸಲ್ಲಿಸಿದ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ, ಈ ಬಾರಿಯೂ ಯಾವುದೇ ಆಡಂಬರ ಇಲ್ಲದೆ ಐದು ಜನರೊಂದಿಗೆ ಬಂದು ನಾಮಪತ್ರ ಸಲ್ಲಿಸಿದರು.
ಇದೇ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಜನರ ಆಶೋತ್ತರಗಳಿಗೆ ಅನುಗುಣವಾಗಿ ಕಳೆದ 15 ವರ್ಷಗಳಿಂದ ಯಮಕನಮರಡಿ ಮತಕ್ಷೇತ್ರದ ಜನರ ಸೇವೆ ಮಾಡುತ್ತಾ ಬಂದಿದ್ದೇನೆ. ಈ ಬಾರಿಯೂ ಜನರ ಆಶೀರ್ವಾದ ಮತ್ತು ಬೆಂಬಲದೊಂದಿಗೆ ನಾಲ್ಕನೇ ಬಾರಿಗೆ ನಾಮಮಪತ್ರ ಸಲ್ಲಿಸಿದ್ದು, ಅಭಿವೃದ್ಧಿ ಮುಂದುವರೆಸಲು ಜನ ನನಗೆ ಮತ್ತೊಮ್ಮೆ ಅವಕಾಶ ನೀಡುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಚಿಕ್ಕೋಡಿ ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಲಕ್ಷ್ಮಣರಾವ್‌ ಚಿಂಗಳೆ, ಯುವ ನಾಯಕ ರಾಹುಲ್‌ ಜಾರಕಿಹೊಳಿ, ಮಹಾಂತೇಶ ಮಗದುಮ್‌, ಅಬ್ದುಲ್‌ ಗಣಿ ದರ್ಗಾ, ಸಾಗರ ಪಿಂಗಟ್‌, ಕಿರಣ ರಜಪೂತ್, ಮಂಜುಗೌಡ ಪಾಟೀಲ್‌, ಸಿದ್ದು ಸುಣಗಾರ, ಸೇರಿದಂತೆ ಯಮಕನಮರಡಿ ಮತಕ್ಷೇತ್ರದ ಹಲವು ಮುಖಂಡರು ಇದ್ದರು.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ