Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

KSRTC ಚಾಲಕರು ಇನ್ಮುಂದೆ ಡಬಲ್ ಡ್ಯೂಟಿ ಮಾಡುವಂತಿಲ್ಲ

ಬೆಂಗಳೂರು: ಕೆಎಸ್​ಆರ್​ಟಿಸಿ ಬಸ್​ ಚಾಲಕರು ಹೆಚ್ಚುವರಿ ಡ್ಯೂಟಿ ಮಾಡುತ್ತಿದ್ದ ಹಿನ್ನೆಲೆ ಅಪಘಾತ ಪ್ರಕರಣಗಳು ನಡೆಯುತ್ತಿದ್ದವು. ಇದಕ್ಕೆ ಕಾರಣ ಹೆಚ್ಚುವರಿ ಡ್ಯೂಟಿ ಮತ್ತು ವಿಶ್ರಾಂತಿ ಇಲ್ಲದೇ ಇರುವುದು. ಇದೇ ಕಾರಣಕ್ಕೆ ಮಹತ್ವದ ನಿರ್ಧಾರ ಕೈಗೊಂಡ ಕೆಎಸ್​ಆರ್​ಟಿಸಿ, ಬಸ್​ ಚಾಲಕರಿಗೆ ಡಬಲ್ ಡ್ಯೂಟಿಯಿಂದ ಮುಕ್ತಿ ನೀಡಿದೆ. ವಿಶ್ರಾಂತಿ ಪಡೆಯುವುದು ಕಡ್ಡಾಯ ಎಂದು ಆದೇಶಿಸಲಾಗಿದೆ.

ಇಂದಿನಿಂದ ರಾತ್ರಿ ಮತ್ತು ದೂರದ ಪ್ರಯಾಣದ ನಂತರ ಚಾಲಕರು ವಿಶ್ರಾಂತಿ ಪಡೆಯುವುದನ್ನು ಕಡ್ಡಾಯಗೊಳಿಸಲಾಗಿದೆ. ಎಂಟು ಗಂಟೆಗಳಿಗಿಂತ ಹೆಚ್ಚು ಡ್ಯೂಟಿ ಮಾಡಿಸುವಂತಿಲ್ಲ. 8 ಗಂಟೆಗಿಂತ ಅಧಿಕ ಮತ್ತು ರಾತ್ರಿ ವೇಳೆ ಹೆಚ್ಚುವರಿ ಡ್ಯೂಟಿ ಮಾಡಿದರೆ ನಾಲ್ಕೈದು ಗಂಟೆಗಳ ಕಾಲ ವಿಶ್ರಾಂತಿಗೆ ಅವಕಾಶ ನೀಡಬೇಕು. ವಾರದಲ್ಲಿ ಕೆಲಸದ ಅವಧಿ 48 ಗಂಟೆ ದಾಟುವಂತಿಲ್ಲ ಎಂದು ಸೂಚಿಸಲಾಗಿದೆ.

ಕೆಎಸ್​ಆರ್​ಟಿಸಿ ಬಸ್​ಗಳಿಂದ ಅಪಘಾತ ಪ್ರಕರಣಗಳು ಹೆಚ್ಚಾಗುತ್ತಿದೆ. ಇದಕ್ಕೆ ಕಾರಣ ಏನೆಂಬುದನ್ನು ಪತ್ತೆಹಚ್ಚಲು ಸಮಿತಿ ರಚನೆ ಮಾಡಲಾಗಿತ್ತು. ಅದರಂತೆ ಡಬಲ್ ಡ್ಯೂಟಿ ಮತ್ತು ರಾತ್ರಿ ವಿಶ್ರಾಂತಿಯನ್ನು ನೀಡದಿರುವುದರಿಂದ ನಿದ್ದೆಗೆಟ್ಟು ಬಸ್ ಚಲಾಯಿಸಲು ಸಾಧ್ಯವಾಗದೆ ಅಪಘಾತಗಳು ಸಂಭವಿಸುತ್ತಿವೆ ಎಂದು ತಿಳಿದುಬಂದಿದೆ. ಈ ಸಂಬಂಧ ಸಮಿತಿಯು ಕೆಎಸ್​ಆರ್​ಟಿಸಿಗೆ ವರದಿ ಸಲ್ಲಿಸಿತ್ತು.

ಇದರ ಬೆನ್ನಲ್ಲೇ, ವರದಿ ಆಧರಿಸಿ ಕೆಎಸ್​ಆರ್​ಟಿಸಿ ಬಸ್ ಚಾಲಕರಿಗೆ ಡಬಲ್​ ಡ್ಯೂಟಿಗೆ ಬ್ರೇಕ್ ಹಾಕಿ ವಿಶ್ರಾಂತಿಗೆ ಅವಕಾಶ ನೀಡಲಾಗಿದೆ. ಇದರಿಂದ ಕೆಎಸ್ಆರ್​ಟಿಸಿ ಬಸ್​ಗಳ ಅಪಘಾತಗಳು ತಪ್ಪುತ್ತವೆ. ನೂರಾರು ಅಮಾಯಕರ ಪ್ರಾಣ ಉಳಿಸಲು ಸಹಾಯವಾಗಲಿದೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪ್ರಶ್ನೆ ಪತ್ರಿಕೆ ಸೋರಿಕೆ ವಿಚಾರಣೆಗೆ ತ್ವರಿತ ನ್ಯಾಯಾಲಯ ಸ್ಥಾಪನೆ: ಪ್ರಧಾನಿ ಮೋದಿಶಾಸಕರ ಮನೆಗಳಿಗೆ ಸೀಮಿತವಾದರೆ BLO ಗಳು ? ಸಾರ್ವಜನಿಕರನ್ನು ಸತಾಯಿಸುತ್ತಿರುವ ಬಿ ಎಲ್ ಒ ಗಳ ವಿರುದ್ಧ ಕ್ರಮಕ್ಕೆ ಅಗ್ರಹಶಾಸಕರ ಮನೆಗಳಿಗೆ ಸೀಮಿತವಾದರೆ BLO ಗಳು ?ದೇಶಾದ್ಯಂತ ಆವರಿಸಿದ ಮೋಡಗಳು ; ಉಪಗ್ರಹ ಚಿತ್ರಗಳಲ್ಲಿ ಸ್ಪಷ್ಟ ; ಮುಂಗಾರು ಬಲಗೊಳ್ಳುತ್ತಿದೆ ಎಂದ ಹವಾಮಾನ ಇಲಾಖೆನೀಟ್‌ ಹೋರಾಟ : ಯುವ ಪ್ರತಿಭಟನಾಕಾರರ ವಿರುದ್ಧ ಯಾವುದೇ ಕ್ರಮವಿಲ್ಲ ಎಂದು ಭರವಸೆ ನೀಡಿದ್ರೆ ಉಪವಾಸ ಅಂತ್ಯ ; ಕೇಂದ್ರಕ್ಕೆ ವಾಂಗ್ಚುಕ್ ಷರತ್ತುಕೋಚಿಂಗ್ ಸೆಂಟರ್‌ನಲ್ಲಿ ಲೈಂಗಿಕ ದೌರ್ಜನ್ಯ: ಆರೋಪಿಯನ್ನು ವಶಕ್ಕೆ ಪಡೆದ ಪೊಲೀಸರುಆಷಾಢ ಏಕಾದಶಿ ಪ್ರಯುಕ್ತ ಧಾರವಾಡ-ಪಂಡರಪುರ ನಡುವೆ ವಿಶೇಷ ರೈಲು ಸಂಚಾರಕೆಎಲ್‌ಇ ಜೆಜಿಎಂಎಂ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಕೆಎಲ್‌ಇ ಆಸ್ಪತ್ರೆ, ಹುಬ್ಬಳ್ಳಿ ಉದ್ಘಾಟನಾ ಸಮಾರಂಭ ಮುಂದೂಡಿಕೆಎನ್‌ಡಿಎಗೆ ಎನ್‌ಸಿಪಿ ಬೆಂಬಲದ ವದಂತಿಗಳ ನಡುವೆ ಪ್ರಧಾನಿ ಮೋದಿ ಭೇಟಿ ಮಾಡಿದ ಶರದ್ ಪವಾರ್–ಸುಪ್ರಿಯಾ ಸುಳೆಗಣಿಕೊಪ್ಪ : ಶಾಸಕ ಬಾಬಾಸಾಹೇಬ ಪಾಟೀಲ ಅವರ ಜನ್ಮದಿನದ ಅಂಗವಾಗಿ ವಿದ್ಯಾರ್ಥಿಗಳಿಗೆ ಸಿಹಿ ಭೋಜನ, ಕಲಿಕಾ ಸಾಮಗ್ರಿ ವಿತರಣೆ