Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಸಿಎಂ ಮಾಧ್ಯಮ ಸಲಹೆಗಾರರಿಗೆ ಅಭಿಮಾನದ ಅಭಿವಂದನೆ

ಕೆ.ವಿ.ಪ್ರಭಾಕರ್ ಅಭಿನಂದನಾ ಸಮಾರಂಭ
---------------------------------
ಪತ್ರಕರ್ತರು ವೃತ್ತಿ ಘನತೆ ಎತ್ತಿ ಹಿಡಿಯಬೇಕು: ಸಚಿವ ಸತೀಶ ಜಾರಕಿಹೊಳಿ

ಬೆಳಗಾವಿ: ಸಮಾಜ ತಿದ್ದುವ ಪಾತ್ರ ನಿರ್ವಹಿಸುತ್ತಿದೆ. ಸಮಾಜದಲ್ಲಿ ತೊಂದರೆ, ಸಮಸ್ಯೆಗಳಿದ್ದಲ್ಲಿ ಅಂತಹ ಕಡೆ ಬೆಳಕು ಚೆಲ್ಲುವ ಕೆಲಸಕ್ಕೆ ಮಾಧ್ಯಮ ಮುಂದಾಗಬೇಕು. ಪತ್ರಕರ್ತರು ತಮ್ಮ ವರದಿಗಳಿಂದ ವೃತ್ತಿ ಘನತೆಯನ್ನು ಎತ್ತಿ ಹಿಡಿಯಬೇಕು ಎಂದು ಲೋಕೋಪಯೋಗಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಅವರು ಕಿವಿಮಾತು ಹೇಳಿದರು.

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಬೆಳಗಾವಿ ಜಿಲ್ಲಾ ಘಟಕದ ವತಿಯಿಂದ ನಗರದ ಕನ್ನಡ ಭವನದಲ್ಲಿ ಭವನದಲ್ಲಿ ಶನಿವಾರ (ನ.11) ನಡೆದ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್ ಅವರ ಅಭಿನಂದನಾ ಸಮಾರಂಭದಲ್ಲಿ ಅವರು ಮಾತನಾಡಿದರು.

ಇಂದಿನ ಎಲೆಕ್ಟ್ರಾನಿಜ್ ಹಾಗೂ ಡಿಜಿಟಲ್ ಮಾಧ್ಯಮಗಳು ಸುದ್ದಿ ಭರಾಟೆ ಹೆಚ್ಚಾಗಿದ್ದು, ಮೂಲ ಸುದ್ದಿಯ ಸ್ವರೂಪವೇ ಬದಲಾಗಿ ಕೆಲವೊಮ್ಮೆ ಬೇರೆಯದೇ ಅರ್ಥ ಮೂಡಿಸುತ್ತಿದೆ. ಆದ್ದರಿಂದ ಮೂಲ ಸುದ್ದಿ ಅಥವಾ ಹೇಳಿಕೆಗಳು ಯಥಾವತ್ತಾಗಿ ವರದಿಯಾಗಬೇಕು ಎಂದು ಹೇಳಿದರು.

ಪತ್ರಿಕಾ ಭವನ ನಿರ್ಮಾಣಕ್ಕೆ ಭರವಸೆ:

ಪತ್ರಕರ್ತರು ತಮ್ಮ ಕುಟುಂಬ ಮಕ್ಕಳ ವಿದ್ಯಾಭ್ಯಾಸಗಳತ್ತ ಗಮನಹರಿಸಬೇಕು. ಬೆಳಗಾವಿ ನಗರದಲ್ಲಿ ಪತ್ರಿಕಾ ಭವನ ನಿರ್ಮಾಣಕ್ಕೆ ಜಿಲ್ಲಾಧಿಕಾರಿಗಳ ಜತೆಗೆ ಈಗಾಗಲೇ ಸಭೆ ನಡೆಸಿ ಚರ್ಚಿಸಲಾಗಿದೆ. ಸ್ಥಳ ಗೊಂದಲವಿರುವ ಕಾರಣ ವಿಳಂಬವಾಗಿದೆ. ಸ್ಥಳ ನಿಗದಿಯಾದ ತಕ್ಷಣವೇ ಭವನ ನಿರ್ಮಾಣಕ್ಕೆ ಸೂಚಿಸಲಾಗುವುದು ಎಂದು ಲೋಕೋಪಯೋಗಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ
ಸತೀಶ್ ಜಾರಕಿಹೊಳಿ ಭರವಸೆ ನೀಡಿದರು.

ಇದಕ್ಕೂ ಮುಂಚೆ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ. ಪ್ರಭಾಕರ್ ಅವರು ಮಾತನಾಡಿ ಬೆಳಗಾವಿ ಜಿಲ್ಲೆ ಅತೀ ವಿಶೇಷವಾದ ಜಿಲ್ಲೆಯಾಗಿದೆ. ಇಲ್ಲಿ ಅಭಿನಂದನಾ ಕಾರ್ಯಕ್ರಮ ಆಯೋಜನೆ ಮಾಡಿರುವುದು ಸಂತಸದ ವಿಷಯ. ಈ ಅಭಿನಂದನಾ ಕಾರ್ಯಕ್ರಮವನ್ನು ಎಲ್ಲ ಪತ್ರಕರ್ತ ಮಿತ್ರರಿಗೆ ಅರ್ಪಿಸುತ್ತೇನೆ ಎಂದು ಹೇಳಿದರು.

ಪತ್ರಿಕಾ ವಿತರಕರ ಕಾರ್ಯ ಶ್ಲಾಘನೀಯ:

ಈ ದಿನದಲ್ಲಿ ವಿಶೇಷವಾಗಿ ಪತ್ರಿಕಾ ವಿತರಕರನ್ನು ಸ್ಮರಿಸುತ್ತೇನೆ. ದಿನ ಬೆಳಿಗ್ಗೆ ಚಳಿ, ಮಳೆ, ಗಾಳಿ ಯಾವುದೇ ಲೆಕ್ಕಿಸದೆ ಮನೆ ಮನೆಗೆ ಪತ್ರಿಕೆಗಳನ್ನು ತಲುಪಿಸುವ ಕೆಲಸ ಅವರು ಪ್ರಾಮಾಣಿಕ, ನಿಷ್ಠೆಯಿಂದ ಮಾಡುತ್ತಾರೆ. ಹಾಗಾಗಿ ಈ ಬಾರಿ ನಡೆದ ಕನ್ನಡ ರಾಜ್ಯೋತ್ಸವ ಪ್ರಶಸ್ತಿಯನ್ನು ಸುಮಾರು 76 ವರ್ಷದ ಜವರಪ್ಪ ಎಂಬ ಪತ್ರಿಕಾ ವಿತರಕರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೀಡಿ ಗೌರವಿಸಿದ್ದಾರೆ.

ಪತ್ರಕರ್ತರಿಗೆ ನಿವೇಶನ ಮೀಸಲಿಡುವುದು ಹಾಗೂ ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್ ಒದಗಿಸುವ ನಿಟ್ಟಿನಲ್ಲಿ ಪ್ರಯತ್ನಿಸುವುದಾಗಿ ಅವರು ಭರವಸೆ ನೀಡಿದರು.
ಮಾಧ್ಯಮ ಪ್ರತಿನಿಧಿಗಳ ಪ್ರತಿನಿಧಿಯಾಗಿ ಸರಕಾರದ ಮಟ್ಟದಲ್ಲಿ ಪತ್ರಕರ್ತರ ಬೇಡಿಕೆಗಳ ಈಡೇರಿಕೆಗೆ ಸ್ಪಂದಿಸುತ್ತೇನೆ ಎಂದು ಕೆ. ಪ್ರಭಾಕರ ಅವರು ತಿಳಿಸಿದರು.

 

ನಿವೃತ್ತ ಪತ್ರಕರ್ತರ ಮಾಶಾಸನ 10 ರಿಂದ 12 ಸಾವಿರ ಹೆಚ್ಚಳ ಮಾಡಲಾಗಿದೆ. ಬೆಳಗಾವಿ ನಗರಾಭಿವೃದ್ದಿ ಪ್ರಾಧಿಕಾರದ ಬಡಾವಣೆಯಾದ ಕಣಬರ್ಗಿಯಲ್ಲಿ ನಿವೇಶನ ಮಂಜೂರು ಮಾಡಲು ಸದ್ಯದಲ್ಲೇ ಚರ್ಚಿಸಿ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ ಅವರು ಹೇಳಿದರು.

ಸಂಕಷ್ಟದಲ್ಲಿರುವ ಪತ್ರಕರ್ತರಿಗೆ ಸಹಾಯ ಹಸ್ತ:

ತೊಂದರೆಯಲ್ಲಿರುವ ಪತ್ರಕರ್ತರಿಗೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಜಿಲ್ಲಾ ಘಟಕದಿಂದ ಆರ್ಥಿಕ ನೆರವು ನೀಡಲಾಗುವುದು. ಹಳ್ಳಿಯಿಂದ ಬಂದಿರುವ ಪ್ರತಿಭೆಗಳನ್ನು ಗುರುತಿಸುವ ನಿಟ್ಟಿನಲ್ಲಿ ಪತ್ರಿಕಾ ವಿತರಕರಿಗೆ ಸನ್ಮಾನ, ಅನಾರೋಗ್ಯದಿಂದ ಇರುವ ಪತ್ರಕರ್ತರಿಗೆ ಸಹಾಯ ಮಾಡಲಾಗುತ್ತಿದೆ ಎಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ದಿಲೀಪ್ ಕುರಂದವಾಡೆ ಅವರು ಆಶಯ ನುಡಿಗಳನ್ನಾಡಿದರು.

20 ವರ್ಷಗಳ ಹಿಂದೆ ಬೆಳಗಾವಿಯ ನಗರಾಭಿವೃದ್ಧಿ ಪ್ರಾಧಿಕಾರದ ವತಿಯಿಂದ ಪತ್ರಕರ್ತರಿಗೆ ನಿವೇಶನ ಹಂಚಿಕೆ ಮಾಡಲಾಗಿತ್ತು. ಆದರೆ ನಂತರ ಈವರೆಗೆ ಯಾವುದೇ ನಿವೇಶನಗಳು ಅವರಿಗೆ ನೀಡಲಿಲ್ಲ ನಗರದಲ್ಲಿ 5 ಪ್ರತಿಶತ ಪತ್ರಕರ್ತರಿಗೆ ನಿವೇಶನ ಹಂಚಿಕೆ ಹಾಗೂ ನಗರದಲ್ಲಿ ಪತ್ರಕರ್ತರ ಮಕ್ಕಳಿಗೆ ವಿದ್ಯಾಭ್ಯಾಸಕ್ಕೆ ಅನುಕೂಲವಾಗುವ ನಿಟ್ಟಿನಲ್ಲಿ ವಸತಿ ನಿಲಯಗಳನ್ನು ಪ್ರಾರಂಭಿಸುವ ನಿಟ್ಟಿನಲ್ಲಿ ಪ್ರಯತ್ನಿಸಲಾಗುತ್ತಿದೆ ಎಂದರು.

ಪತ್ರಿಕೋದ್ಯಮದಲ್ಲಿ ನೈತಿಕತೆ ಮುಖ್ಯ:

ಈ ವೇಳೆ ಮಾತನಾಡಿದ ಬೆಳಗಾವಿ ಉತ್ತರ ವಿಧಾನ ಸಭಾ ಮತ ಕ್ಷೇತ್ರದ ಶಾಸಕ ಆಸೀಫ್ (ರಾಜು) ಸೇಠ್ ಅವರು
ಪತ್ರಕರ್ತರು ಯಾವುದೇ ಸಮುದಾಯ ಹಾಗೂ ಪಕ್ಷದ ಪರವಾಗಿ ವರದಿಗಳನ್ನು ಮಾಡದೆ ಸಮಾಜಕ್ಕೆ ಕೊಡುಗೆ ನೀಡುವ ನಿಟ್ಟಿನಲ್ಲಿ ಸತ್ಯ, ನ್ಯಾಯ, ನೀತಿ ಮೂಲಕ ಪಾರದರ್ಶಕವಾಗಿ ವರದಿ ಮಾಡಬೇಕು ಎಂದು ತಿಳಿಸಿದರು.

ಪತ್ರಿಕಾ ರಂಗದಲ್ಲಿ ಪ್ರತಿಯೊಬ್ಬರೂ ತಮ್ಮ ತಮ್ಮ ಜವಾಬ್ದಾರಿ ನಿರ್ವಹಿಸುತ್ತಾರೆ. ಅದ್ರಲ್ಲೂ ಪತ್ರಿಕಾ ವಿತರಕರಿಗೆ ಬಹಳ ಜವಾಬ್ದಾರಿಯಿದೆ. ಅದಕ್ಕೆ ಕನ್ನಡ ರಾಜ್ಯೋತ್ಸವ ಅಂಗವಾಗಿ ರಾಜ್ಯ ಸರ್ಕಾರ ಹಿರಿಯ ಪತ್ರಿಕಾ ವಿತರಕರಿಗೆ ಸನ್ಮಾನಿಸಿ, ಪತ್ರಿಕಾರಂಗಕ್ಕೆ ಗೌರವ ಸಲ್ಲಿಸಿದೆ. ಪತ್ರಕರ್ತರದ್ದು ಬಹಳ ಕಷ್ಟದ ಜೀವನ. ಅವರ ಬೇಡಿಕೆ ಸಮಸ್ಯೆಗಳಿಗೆ ಸರಕಾರ ಸ್ಪಂದಿಸುತ್ತಿರುವದು ಹೆಮ್ಮೆಯ ಸಂಗತಿ ಎಂದು ಗದಗದ ತೋಂಟದಾರ್ಯ ಮಠದ ಶ್ರೀಗಳಾದ ತೋಂಟದ ಡಾ.ಸಿದ್ದರಾಮ ಸ್ವಾಮೀಜಿ ಅವರು ತಿಳಿಸಿದರು.

ಸನ್ಮಾನ ಕಾರ್ಯಕ್ರಮ:

ಇದಕ್ಕೂ ಮೊದಲು ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಘಟಕದ ವತಿಯಿಂದ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಅವರನ್ನು ಗೌರವಿಸಿ, ಅಭಿನಂದಿಸಲಾಯಿತು.
ಇದೇ ವೇಳೆ ಮುಖ್ಯಮಂತ್ರಿಗಳ ಕಚೇರಿಯ ಗಿರಿಶ್ ಕೆ., ಕೆ.ಪಿ.ಪುಟ್ಟಸ್ವಾಮಯ್ಯ, ದೀಪಕ್ ಕರಾಡೆ ಅವರನ್ನು ಹಾಗೂ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರ ವಿಶೇಷ ಕರ್ತವ್ಯಾಧಿಕಾರಿ ಎಂ.ಕೆ.ಹೆಗಡೆ ಅವರನ್ನು ಸನ್ಮಾನಿಸಲಾಯಿತು.
ಜಿಲ್ಲಾ ವಿವಿಧ ಪತ್ರಿಕೆಯ ಜಿಲ್ಲಾ ವರದಿಗಾರರು, ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕತರನ್ನೂ ಗೌರವಿಸಲಾಯಿತು.

ಸೈಕಲ್ ವಿತರಣೆ:

ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ ಅವರು ಜಿಲ್ಲೆಯಿಂದ ಆಗಮಿಸಿದ ವಿವಿಧ ತಾಲೂಕಾ ಪತ್ರಿಕಾ ವಿತರಕರಿಗೆ ಸೈಕಲ್ ವಿತರಣೆ ಮಾಡಿದರು.

ಕ. ಕಾ.ಪ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರ,
ರಾಜ್ಯ ಉಪಾಧ್ಯಕ್ಷ ಪುಂಡಲೀಕ ಬಾಳೋಜಿ, ಸರ್ವೋತ್ತಮ ಜಾರಕಿಹೊಳಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಭೀಮಾಶಂಕರ ಗುಳೇದ್, ಮಹಾನಗರ ಪಾಲಿಕೆ ಆಯುಕ್ತ ಅಶೋಕ ದುಡಗುಂಟಿ, ನ್ಯಾಷನಲ್ ಇಂಟರ್ ಪೀಟರ್ ಶ್ರೀಲಂಕಾದ ಶುಭಾ ರತ್ನಾಯಕ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಉಪ ನಿರ್ದೇಶಕ ಗುರುನಾಥ ಕಡಬೂರ, ಕ.ಕಾ.ಪ.ಸಂಘದ ಉಪಾಧ್ಯಕ್ಷ ರಾಜಶೇಖರ ಪಾಟೀಲ, ಯಲ್ಲಪ್ಪ ತಳವಾರ, ಶ್ರೀಶೈಲ ಮಠದ, ಪ್ರಧಾನ ಕಾರ್ಯದರ್ಶಿ ಅರುಣ ಪಾಟೀಲ, ಕಾರ್ಯದರ್ಶಿ ಶ್ರೀಕಾಂತ ಕುಬಕಡ್ಡಿ, ಈಶ್ವರ ಹೋಟಿ, ತಾನಜಿರಾವ್ ಮೂರಂಕರ,ಖಜಾಂಚಿ ಚೇತನ ಹೊಳೆಪ್ಪಗೊಳ, ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ಮಲ್ಲಿಕಾರ್ಜುನ ಗೊಂದಿ, ನಾಮ ನಿರ್ದೇಶಿತ ಸದಸ್ಯ ಮಂಜುನಾಥ ಪಾಟೀಲ, ನೌಶಾದ್ ಬಿಜಾಪುರ ಸೇರಿದಂತೆ ಜಿಲ್ಲಾ ವಿವಿಧಡೆಯಿಂದ ಆಗಮಿಸಿದ ಪತ್ರಕರ್ತರು, ಸಂಘದ ಪದಾಧಿಕಾರಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಕ ಮಲ್ಲಿಕಾರ್ಜುನ ರೆಡ್ಡಿ ಗೊಂದಳಿ ಅವರು ಸ್ವಾಗತ ಕೋರಿದರು. ಐಶ್ವರ್ಯ ನಿರೂಪಿಸಿ ವಂದಿಸಿದರು.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ