ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯ ದೇವಾಲಯಕ್ಕೆ ಭೇಟಿ ನೀಡುವ ಭಕ್ತರಿಗೆ ಅನುಕೂಲವಾಗುವಂತೆ ದೇವರ ದರ್ಶನದ ಅವಧಿಯನ್ನು ಹೆಚ್ಚುವರಿ 1 ಗಂಟೆ ವಿಸ್ತರಿಸಲಾಗಿದೆ.
ಈ ಮೊದಲು ಪ್ರತಿದಿನ ಮಧ್ಯಾಹ್ನ 1.30ರಿಂದ 3.30ರ ವರೆಗೆ ದರ್ಶನ ಸ್ಥಗಿತಗೊಳಿಸಲಾಗುತ್ತಿತ್ತು. ಆದರೆ, ಹೊಸ ವ್ಯವಸ್ಥೆಯಂತೆ ಈಗ ಮಧ್ಯಾಹ್ನ 2ರಿಂದ 3ರ ವರೆಗೆ ಮಾತ್ರ ದರ್ಶನ ಬಂದ್ ಇರಲಿದೆ. ಹೊಸ ವೇಳಾಪಟ್ಟಿಯಂತೆ ಬೆಳಗ್ಗೆ 6.30ರಿಂದ ಮಧ್ಯಾಹ್ನ 2ರ ವರೆಗೆ ಹಾಗೂ ಮಧ್ಯಾಹ್ನ 3ರಿಂದ ರಾತ್ರಿ 8.30ರವರೆಗೆ ದೇವರ ದರ್ಶನ ವ್ಯವಸ್ಥೆ ಇರಲಿದೆ.
ಮಹಾಮಂಗಳಾರತಿ ಸಮಯದಲ್ಲಿ ಮಾತ್ರ ಹಿಂದಿನಂತೆ ಅಲ್ಪಕಾಲದವರೆಗೆ ದರ್ಶನ ಇರುವುದಿಲ್ಲ. ಈ ಹೊಸ ವ್ಯವಸ್ಥೆ ಮೇ 10ರಿಂದಲೇ ಜಾರಿಯಾಗಿರುವುದಾಗಿ ದೇವಾಲಯ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಹರೀಶ್ ಇಂಜಾಡಿ ತಿಳಿಸಿದ್ದಾರೆ.