Press ID & Credential Portal
Apply / Verify  ➔
LIVE TV LocalCrimeNationalInternationalPoliticsEducationSportsHealthFeature
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ದಕ್ಷಿಣ ಪ್ರಯಾಗ ಎಂದೇ ಖ್ಯಾತಿ ಪಡೆದಿರುವ ತಿರುಮಕೂಡಲಿನಲ್ಲಿ ಇಂದಿನಿಂದ ಕುಂಭಮೇಳ

 

ಮೈಸೂರು: ಜಿಲ್ಲೆಯ ತಿ.ನರಸೀಪುರದಲ್ಲಿರುವ ತ್ರಿವೇಣಿ ಸಂಗಮದಲ್ಲಿ ಸೋಮವಾರ (ಫೆ.10) ಮೂರು ದಿನಗಳ ಕುಂಭಮೇಳ ಆರಂಭವಾಗಲಿದ್ದು, ಲಕ್ಷಾಂತರ ಭಕ್ತರು ಪುಣ್ಯಸ್ನಾನ ಮಾಡಲಿದ್ದಾರೆ.

ದಕ್ಷಿಣ ಪ್ರಯಾಗ ಎಂದೇ ಖ್ಯಾತಿ ಪಡೆದಿರುವ ತಿರುಮಕೂಡಲಿನಲ್ಲಿ ನಡೆಯುತ್ತಿರುವ 13ನೇ ಕುಂಭಮೇಳ ಇದಾಗಿದೆ. ಜೀವನದಿಗಳಾದ ಕಾವೇರಿ, ಕಪಿಲಾ ಹಾಗೂ ಗುಪ್ತಗಾಮಿನಿಯಾಗಿ ಹರಿಯುವ 'ಸ್ಪಟಿಕ' ನದಿಯ ಸಂಗಮದಲ್ಲಿ ಜನರು ಮಿಂದೇಳಲಿದ್ದಾರೆ.

ಜಿಲ್ಲಾಡಳಿತದ ಎಲ್ಲ ಸಿದ್ಧತೆಗಳು ಪೂರ್ಣಗೊಂಡಿವೆ. ಭಾನುವಾರವೂ ನದಿ ಸಂಗಮದಲ್ಲಿ ಭಕ್ತರು ಪುಣ್ಯಸ್ನಾನ ಮಾಡಿ, ಗುಂಜಾ ನರಸಿಂಹಸ್ವಾಮಿ, ಅಗಸ್ತೇಶ್ವರ ಸ್ವಾಮಿ ದೇಗುಲಗಳಲ್ಲಿ ಪೂಜೆ ಸಲ್ಲಿಸಿದರು.

ಸೋಮವಾರ ಬೆಳಿಗ್ಗೆ 9ಕ್ಕೆ ಅಗಸ್ತೇಶ್ವರ ಸ್ವಾಮಿ ದೇಗುಲದಲ್ಲಿ ಅನುಜ್ಞೆ, ಪುಣ್ಯಾಹ, ಗಣಹೋಮ, ಪೂರ್ಣಾಹುತಿ, ಅಭಿಷೇಕ, ಮಹಾಮಂಗಳಾರತಿ ನೆರವೇರಲಿದೆ. ಸಂಜೆ 5 ಗಂಟೆಗೆ ಧಾರ್ಮಿಕ ಸಭೆ, ಅತಿಥಿಗಳಿಂದ ಉದ್ಘಾಟನೆ ಮತ್ತು ಧ್ವಜಾರೋಹಣ ನೆರವೇರಲಿದೆ.

ನದಿ ತಟದಲ್ಲಿ ಸ್ವಾಮೀಜಿಗಳಿಗೆ ಕುಟೀರ ವ್ಯವಸ್ಥೆ ಮಾಡಲಾಗಿದ್ದು, ಸಾಧುಗಳು- ಮಠಾಧೀಶರಿಗೆ ನಡುಹೊಳೆ ಬಸಪ್ಪನ ಸನ್ನಿಧಿಯಲ್ಲಿ ಸ್ನಾನಕ್ಕೆ ಸ್ಥಳ ಮೀಸಲಿರಿಸಲಾಗಿದೆ. ಅತಿ ಗಣ್ಯರ ಸ್ನಾನಕ್ಕೆ ಪ್ರತ್ಯೇಕ ಸ್ಥಳವನ್ನು ನಿಗದಿ ಮಾಡಲಾಗಿದೆ.

12ರಂದು ಬೆಳಗ್ಗೆ 9ರಿಂದ 9.30ರೊಳಗೆ ಪವಿತ್ರ ಕುಂಭಸ್ನಾನ ನಡೆಯಲಿದ್ದು, ಅಹಿತಕರ ಘಟನೆಗಳು ನಡೆಯದಂತೆ ಅಗತ್ಯ ಮುನ್ನೆಚ್ಚರಿಕೆ ವಹಿಸಲಾಗಿದೆ. ನದಿ ಪಾತ್ರದ ಹಲವೆಡೆ ಮುಳುಗುತಜ್ಞರು, ತೆಪ್ಪ- ದೋಣಿ ನಿಯೋಜಿಸಲಾಗಿದೆ. ಅಗ್ನಿಶಾಮಕ ದಳ ಹಾಗೂ ನೂರಾರು ಪೊಲೀಸರು ಸರ್ವಸನ್ನದ್ದರಾಗಿದ್ದಾರೆ. ಸರ್ಕಾರ ಕುಂಭಮೇಳಕ್ಕೆ ₹ 6 ಕೋಟಿ ಅನುದಾನ ಬಿಡುಗಡೆ ಮಾಡಿದೆ.

Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಅಂಕಲಗಿ ಪಟ್ಟಣದಲ್ಲಿ ವಿಜಯ ದಶಮಿ ನಿಮಿತ್ತ ಶ್ರೀ ಮಹಾಲಕ್ಷ್ಮೀ ದೇವಿ ಅಗ್ನಿ ಹಾಯುವ ಕಾರ್ಯಕ್ರಮ.ಮಾರ್ಕಂಡೇಯ ನದಿಯಲ್ಲಿ  ಮರ್ಡರ್..?ಬೆಳಗಾವಿಯಲ್ಲಿ ಹೊಸ ಶೋರೂಮ್ ಮೂಲಕ ಕರ್ನಾಟಕದಲ್ಲಿ ತನ್ನ ಅಸ್ತಿತ್ವ ವಿಸ್ತರಿಸಿದ PuREPowerನೀಲಿ ಡ್ರಮ್ ಕೊಲೆ ಪ್ರಕರಣ : ಪತ್ನಿ ಮುಸ್ಕಾನ್‌, ಪ್ರಿಯಕರ ಸಾಹಿಲ್‌ಗೆ ಮರಣದಂಡನೆ ಶಿಕ್ಷೆRCU ದಲ್ಲಿ ಲಕ್ಷಾಂತರ ರೂ  ಗೋಲ್ಮಾಲ್, ಮೂವರು ಜೈಲುಪಾಲು.ಚೌತಿ ರಾತ್ರಿ ಅವಘಡ:  ಚವಾಟಗಲ್ಲಿಯಲ್ಲಿ ನಾಲ್ವರು ಸಜೀವ ದಹನದ್ವಿಚಕ್ರ ವಾಹನ-ಸಾರಿಗೆ ಬಸ್ ಅಪಘಾತ: ಮೂವರು ಸ್ಥಳದಲ್ಲೇ ಸಾವುಬೆಂಗಳೂರು-ಬೆಳಗಾವಿ ನಡುವೆ ಎರಡು ವಿಶೇಷ ರೈಲುಗಳ ಸಂಚಾರಕ್ಕೆ ವ್ಯವಸ್ಥೆ ಮಾಡಿದೆ.ಪಾರ್ಕಿಂಗ್‌ ಮಾಡಿದ್ದ ಕಾರಿನ ಬಾನೆಟ್‌ನಲ್ಲಿ ಅಡಗಿತ್ತು ಬೃಹತ್‌ ಹೆಬ್ಬಾವು ; ಬೆಚ್ಚಿಬಿದ್ದ ನಿವಾಸಿಗಳು  ಥ್ರೋ ಬಾಲ್ ಪಂದ್ಯಾವಳಿಯಲ್ಲಿ ಗೆಲುವು ಸಾಧಿಸಿದ ಬೆಳಗಾವಿ ಜಿಎ ಪ್ರೌಢಶಾಲೆಯ ಬಾಲೆಯರು