Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಮುಡಾ ಪ್ರಕರಣದಲ್ಲಿ ಸಾಕ್ಷ್ಯಾಧಾರಗಳ ಕೊರತೆ ; ಸಿಎಂ ಸಿದ್ದರಾಮಯ್ಯ ಸೇರಿ ನಾಲ್ವರಿಗೆ ಕ್ಲೀನ್ ಚಿಟ್?

 

ಮೈಸೂರು: ರಾಜ್ಯ ರಾಜಕೀಯದಲ್ಲಿ ಬಿರುಗಾಳಿ ಎಬ್ಬಿಸಿದ್ದ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ)ದ ನಿವೇಶ ಹಂಚಿಕೆ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಅವರ ಪತ್ನಿ ಪಾರ್ವತಿ ಮತ್ತು ಇತರರ ವಿರುದ್ಧ ತನಿಖೆ ಪೂರ್ಣಗೊಳಿಸಿರುವ ಲೋಕಾಯುಕ್ತ ಪೊಲೀಸರು ನ್ಯಾಯಾಲಯಕ್ಕೆ ಬಿ ರಿಪೋರ್ಟ್ ಸಲ್ಲಿಸಲು ಸಿದ್ಧತೆ ನಡೆಸಿದ್ದಾರೆ.
ಈ ಸಂಬಂಧ ಈ ಸಂಬಂಧ ದೂರುದಾರ ಸ್ನೇಹಮಯಿ ಕೃಷ್ಣಗೆ ಲೋಕಾಯುಕ್ತ ನೋಟಿಸ್‌ ನೀಡಿದ್ದು, ಸಾಕ್ಷ್ಯಾಧಾರಗಳ ಕೊರತೆಯಿಂದ ಬಿ ರಿಪೋರ್ಟ್‌ ಸಲ್ಲಿಸುವುದಾಗಿ ಲೋಕಾಯುಕ್ತ ಮಾಹಿತಿ ನೀಡಿದೆ. ಆರೋಪಗಳು ಸಾಕ್ಷ್ಯಾಧಾರಗಳ ಕೊರತೆಯಿಂದ ಸಾಬೀತಾಗಿಲ್ಲ ಎಂದು ತಿಳಿಸಿದೆ. A1 ಸಿದ್ದರಾಮಯ್ಯ, A2 ಪಾರ್ವತಿ, A3 ಮಲ್ಲಿಕಾರ್ಜುನ ಸ್ವಾಮಿ, A4 ದೇವರಾಜು ವಿರುದ್ಧ ದಾಖಲಾದ ಕೇಸ್‌ನಲ್ಲಿ ಸಾಕ್ಷ್ಯಾಧಾರಗಳ ಕೊರತೆಯಿಂದ ತನಿಖೆಗೆ ಅರ್ಹವಲ್ಲದ ಪ್ರಕರಣ ಎಂದು ತಿಳಿಸಿದೆ.

ತಾವು (ಸ್ನೇಹಮಯಿ ಕೃಷ್ಣ) ನೀಡಿದ ದೂರಿನ ಮೇರೆಗೆ ಮೈಸೂರು ಲೋಕಾಯುಕ್ತ ಠಾಣೆಯಲ್ಲಿ ಪ್ರಕರಣ ದಾಖಲಿಸಿ ನ್ಯಾಯಾಲಯದಲ್ಲಿ ಮೊಕದ್ದಮೆ ಹೂಡಲಾಗಿತ್ತು. ಪ್ರಕರಣವು ತನಿಖಾಧಿಕಾರಿಗಳಿಗೆ ಸಿವಿಲ್‌ ಸ್ವರೂಪದ್ದೆಂದು, ತನಿಖೆ ನಡೆಸಲು ತಕ್ಕುದಲ್ಲವೆಂದು, ಸಂಗತಿ ಅಥವಾ ಕಾನೂನಿನ ತಪ್ಪು ತಿಳಿವಳಿಕೆಯೆಂದು, ಕ್ರಮ ಜರುಗಿಸಲು ತಕ್ಕುದಲ್ಲವೆಂದು ಸಾಕ್ಷ್ಯಾಧಾರಗಳ ಕೊರತೆ ಎಂದು ಕಂಡುಬಂದಿದೆ. ಈ ವರದಿಯನ್ನು ವಿರೋಧಿಸುವುದಿದ್ದರೆ, ತಾವು ಈ ನೋಟಿಸ್‌ ತಲುಪಿದ ಒಂದು ವಾರದೊಳಗೆ ಮ್ಯಾಜಿಸ್ಟ್ರೇಟರ ಎದುರು ಆ ಬಗ್ಗೆ ವಿರೋಧಿಸಬಹುದು ಎಂದು ಸ್ನೇಹಮಯಿ ಕೃಷ್ಣಗೆ ನೀಡಿದ ನೋಟಿಸ್‌ನಲ್ಲಿ ಲೋಕಾಯುಕ್ತ ತಿಳಿಸಿದೆ.

ಪ್ರಕರಣದ ಎ1 ಆರೋಪಿಯಿಂದ ಎ4 ಆರೋಪಿ ವರೆಗಿನ ಮೇಲಿನ ಆರೋಪಗಳು ಸಾಕ್ಷ್ಯಾಧಾರಗಳ ಕೊರತೆಯಿಂದ ಸಾಬೀತಾಗಿಲ್ಲ. ಹೀಗಾಗಿ, ಅಂತಿಮ ವರದಿಯನ್ನು ಘನ ನ್ಯಾಯಾಲಯಕ್ಕೆ ಸಲ್ಲಿಸಲಾಗುವುದು. ಮುಡಾದಿಂದ 2016ರಿಂದ 2024ನೇ ಸಾಲಿನ ವರೆಗೆ 50:50 ಅನುಪಾತದಲ್ಲಿ ಪರಿಹಾರಾತ್ಮಕ ನಿವೇಶನಗಳನ್ನು ನೀಡಿರುವ ಆರೋಪಗಳ ಬಗ್ಗೆ ಹೆಚ್ಚುವರಿ ತನಿಖೆ ನಡೆಸಿ ಕಲಂ 173 (8) ಸಿಆರ್‌ಪಿಸಿಯಡಿ ಹೆಚ್ಚುವರಿ ಅಂತಿಮ ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಲಾಗುವುದು ಎಂದು ಲೋಕಾಯುಕ್ತ ಹೇಳಿದೆ.
ಆರ್‌ಟಿಐ ಕಾರ್ಯಕರ್ತೆ ಸ್ನೇಹಮಯಿ ಕೃಷ್ಣ ಅವರ ದೂರಿನ ಮೇರೆಗೆ, ಬೆಂಗಳೂರಿನ ವಿಶೇಷ ನ್ಯಾಯಾಲಯವು ಸೆಪ್ಟೆಂಬರ್ 25 ರಂದು ಮೈಸೂರಿನ ಲೋಕಾಯುಕ್ತ ಪೊಲೀಸರಿಗೆ ತನಿಖೆ ನಡೆಸುವಂತೆ ಆದೇಶಿಸಿತ್ತು.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ