Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ರಾಜ್ಯದಲ್ಲೇ ಬೆಳಗಾವಿ ಗ್ರಾಮೀಣ ಕ್ಷೇತ್ರ ಮಾದರಿ: ಲಕ್ಷ್ಮೀ ಹೆಬ್ಬಾಳಕರ

 

ಬೆಳಗಾವಿ:

ಇಡೀ ರಾಜ್ಯದಲ್ಲಿಯೇ ಬೆಳಗಾವಿ ಗ್ರಾಮೀಣ ಕ್ಷೇತ್ರವನ್ನು ಮಾದರಿ ಕ್ಷೇತ್ರವಾಗಿ ಪರಿವರ್ತಿಸಲಾಗಿದೆ. ಬೆಳಗಾವಿ ಗ್ರಾಮೀಣ ಕ್ಷೇತ್ರದ ಪ್ರತಿಯೊಂದು ಗ್ರಾಮಕ್ಕೆ ವಿವಿಧ ಬಗೆಯ ಅನುದಾನಗಳನ್ನು ತಂದು ಅಭಿವೃದ್ಧಿಯ ಕೆಲಸಗಳನ್ನು ಕೈಗೊಳ್ಳಲಾಗಿದೆ ಎಂದು ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮೀ ಹೆಬ್ಬಾಳಕರ ಹೇಳಿದರು.

ಅವರು ಅರಳೀಕಟ್ಟಿ ಗ್ರಾಮಕ್ಕೆ ತೆರಳಿ ಗ್ರಾಮದೇವತೆಗೆ ಭಕ್ತಿಪೂರ್ವಕ ನಮನಗಳನ್ನು ಸಲ್ಲಿಸಿ, ಅರಿಶಿಣ ಕುಂಕುಮ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.

"ಗ್ರಾಮೀಣ ಕ್ಷೇತ್ರ ಯಾವುದೇ ಪರಿಸ್ಥಿತಿಯಲ್ಲಿ ಹಿಂದುಳಿಯಬಾರೆದೆನ್ನುವ ಉದ್ದೇಶದಿಂದ ನಾನು ಕ್ಷೇತ್ರದಲ್ಲಿ ಗೈರಾದರೂ ಸಹ ಆಯಾ ಗ್ರಾಮಗಳ ಜನಪ್ರತಿನಿಧಿಗಳಿಗೆ ಸೂಚನೆ ನೀಡುವ ಮೂಲಕ ಎಲ್ಲ ತರಹದ ಅಭಿವೃದ್ಧಿ ಕೆಲಸಗಳಿಗೆ ಚಾಲನೆ ನೀಡುತ್ತ ಬಂದಿದ್ದೇನೆ. ನಿಮ್ಮೆಲ್ಲರ ಪ್ರೀತಿ, ಪ್ರೋತ್ಸಾಹ, ಆಶೀರ್ವಾದಗಳ ಮುಖೇನ ಯಾವುದೇ ಸ್ವಾರ್ಥವಿಲ್ಲದೇ ನಿಸ್ವಾರ್ಥ ಸೇವೆಯನ್ನು ಸಲ್ಲಿಸಿದ್ದೇನೆ ಎಂದು ಹೇಳಲು ನನಗೆ ಹೆಮ್ಮೆ ಎನಿಸುತ್ತಿದೆ," ಎಂದರು.

ಈ ಸಮಯದಲ್ಲಿ ಗ್ರಾಮದ ಹಿರಿಯರು, ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ, ಸಿ.ಸಿ. ಪಾಟೀಲ ಅಣ್ಣ, ಸುರೇಶ ಇಟಗಿ, ಜಗದೀಶ್ ಯಳ್ಳೂರ, ಸಿದ್ದಣ್ಣ ಶಿಂಗಡಿ, ಹೊಳೆಬಸಪ್ಪ ಕರಲಿಂಗಣ್ಣವರ, ಗುರಪ್ಪ ಹೆಬ್ಬಾಳ್ಕರ್, ಶಂಕರ್ ಯಳ್ಳೂರ, ಪಾರವ್ವ ಹುದ್ದಾರ, ಶಿವಾನಂದ ಹಲಕರ್ಣಿಮಠ, ಗೌಸ್ ಜಾಲಿಕೊಪ್ಪ, ಶ್ರೀಕಾಂತ ಮದುಬರ್ಮಣ್ಣವರ, ರಾಜು ಉಪ್ಪಾರ್, ನಾಗರಾಜ ಕರಲಿಂಗಣ್ಣವರ, ಗ್ರಾಮ ಪಂಚಾಯಿತಿ ಸದ್ಯಸರು, ಆಪ್ತ ಸಹಾಯಕರು ಹಾಗೂ ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ