Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಎಲ್ಲರನ್ನೂ ಒಟ್ಟಿಗೆ ಕರೆದುಕೊಂಡು ಹೋಗುವ ಸಮಾಜ ವೀರಶೈವ ಲಿಂಗಾಯತ ಸಮಾಜ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಚಿಕ್ಕಮಗಳೂರು: ದಯೆಯೇ ಧರ್ಮದ ಮೂಲ ಎಂದು ಸಾರಿದವರು ವೀರಶೈವ- ಲಿಂಗಾಯತರು , ಎಲ್ಲರನ್ನೂ ಒಟ್ಟಿಗೆ ಕರೆದುಕೊಂಡು ಹೋಗುವ ಸಮಾಜ ನಮ್ಮದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.

ಚಿಕ್ಕಮಗಳೂರಿನ ಶ್ರೀ ವೀರಶೈವ ಲಿಂಗಾಯತ ಸಮುದಾಯ ಭವನದಲ್ಲಿ ಶನಿವಾರ ನಡೆದ ಶ್ರೀ ಜಗದ್ಗುರು ರೇಣುಕಾಚಾರ್ಯ ಜಯಂತಿ ಹಾಗೂ ವಿಶ್ವ ಗುರು ಬಸವೇಶ್ವರರ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವರು, ಸಮಾಜದ ಮಗಳಾಗಿ ಕಾರ್ಯಕ್ರಮಕ್ಕೆ ಬಂದಿರುವೆ. ಬೇರೆ ಸಮಾಜದವರ ಜೊತೆಗೆ ಹಂಚಿಕೊಂಡು ತಿನ್ನುವ ಸಮಾಜ, ಎಲ್ಲರನ್ನೂ ಒಟ್ಟಿಗೆ ಕರೆದುಕೊಂಡು ಹೋಗುವ ಸಮಾಜ ನಮ್ಮದು ಎಂದರು.

ಕರ್ನಾಟಕದ ಮೂಲೆ ಮೂಲೆಗಳಲ್ಲಿ ವೀರಶೈವ ಲಿಂಗಾಯತ ಸಮಾಜ ಬಾಂಧವರು ಇದ್ದಾರೆ. ಸಮಾಜದ ಸೇವೆಯನ್ನು ಮಗಳಾಗಿ ಮಾಡುವೆ. ಇಡೀ ಕರ್ನಾಟಕ ರಾಜ್ಯಾದ್ಯಂತ ಸಮಾಜಕ್ಕೆ ಸೇವೆ ಮಾಡುವೆ ಎಂದು ಸಚಿವರು ಹೇಳಿದರು.

ಎಂದೆಂದಿಗೂ ಶಾಶ್ವತವಾಗಿ ಉಳಿಯುವಂತಹ ಸಮಾನತೆ, ನ್ಯಾಯ ಮತ್ತು ಮಾನವೀಯ ಮೌಲ್ಯಗಳನ್ನು 12ನೇ ಶತಮಾನದಲ್ಲೆ ಸಾರಿದ ಮಹಾನ್‌ ವ್ಯಕ್ತಿ ಬಸವೇಶ್ವರರು, ಇವರ ತತ್ವ ಆದರ್ಶಗಳು ನಮಗೆ ಮಾದರಿಯಾಗಲಿ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಕರೆ ನೀಡಿದರು.

* *ವೈಯುಕ್ತಿಕವಾಗಿ 10 ಲಕ್ಷ ದೇಣಿಗೆ*
ಲಿಂಗಾಯತ ಭವನದ ನಿರ್ಮಾಣಕ್ಕಾಗಿ ಹತ್ತು ಲಕ್ಷ ರೂ ವೈಯಕ್ತಿಕ ದೇಣಿಗೆ ನೀಡುವುದಾಗಿ ಸಚಿವರು ಘೋಷಿಸಿದರು.
ಜೊತೆಗೆ ಸರ್ಕಾರದಿಂದ ಹೆಚ್ಚಿನ ದೇಣಿಗೆ ಕೊಡಿಸುವುದಾಗಿ ಸಚಿವರು ಭರವಸೆ ನೀಡಿದರು.

* *ಚಿಕ್ಕಮಗಳೂರು ನಿಸರ್ಗದತ್ತವಾದ ಜಿಲ್ಲೆ*
ಚಿಕ್ಕಮಗಳೂರು ರಾಜ್ಯದ ಅತ್ಯಂತ ಸುಂದರ ಜಿಲ್ಲೆ. ಪ್ರಕೃತಿ ಸೌಂದರ್ಯದ ಜೊತೆಗೆ ಹೃದಯ ಶ್ರೀಮಂತರನ್ನು ಹೊಂದಿರುವ ನಾಡು ಇದು. ನನಗೆ ಅದ್ದೂರಿ ಸ್ವಾಗತ ನೀಡಿ ಜನರು ಬರಮಾಡಿಕೊಂಡರು ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.

ಕಾರ್ಯಕ್ರಮದಲ್ಲಿ ವೀರಶೈವ ಲಿಂಗಾಯತ ಸಮಾಜದ ಅಧ್ಯಕ್ಷ ಬಿ.ಎ.ಶಿವಶಂಕರ, ಶಾಸಕರಾದ ಎಚ್.ಡಿ.ತಮ್ಮಯ್ಯ, ಎಚ್.ಎಂ.ಲೋಕೇಶ್, ಎ.ಬಿ.ಸುದರ್ಶನ್, ಬಿ.ಎಂ.ರವಿ ಲಶಂಕರ್, ಎಂ.ಎಸ್.ನಿರಂಜನ್, ಸಿ.ಬಿ.ನಂದೀಶ್ ಸೇರಿದಂತೆ ಹಲವು ಮುಖಂಡರು ಉಪಸ್ಥಿತರಿದ್ದರು.

-------------
* *ನಗರದಲ್ಲಿ ಬೃಹತ್ ಮೆರವಣಿಗೆಯಲ್ಲಿ ಪಾಲ್ಗೊಂಡ ಸಚಿವೆ*
ವೇದಿಕೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವುದಕ್ಕೂ ಮುನ್ನ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಕಅವರು ಕೆಎಂ ರಸ್ತೆಯಲ್ಲಿರುವ ಶ್ರೀ ಬೋಳರಾಮೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದರು‌.
ಬಳಿಕ ತೆರೆದ ವಾಹನದಲ್ಲಿ ಹನುಮಂತಪ್ಪ ಸರ್ಕಲ್ ವರೆಗೂ ಮೆರವಣಿಗೆ ನಡೆಸಲಾಯಿತು. ಇದೇ ವೇಳೆ ಯುವ ಕಾಂಗ್ರೆಸ್ ಕಾರ್ಯಕರ್ತರು ಬೈಕ್ ರ್ಯಾಲಿ ನಡೆಸಿದರು.

ಈ ವೇಳೆ ಶಾಸಕ ಎಚ್.ಡಿ.ತಮ್ಮಯ್ಯ, ಮೂಡಿಗೆರೆ ಶಾಸಕಿ ನಯನಾ ಮೋಟಮ್ಮ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಂಜೇಗೌಡ, ಮುಖಂಡರಾದ ಶ್ರೀನಿವಾಸ್, ಪ್ರವೀಣ್, ಮೊಹಮದ್ ನಯಾಜ್ ಸೇರಿದಂತೆ ಸಾವಿರಾರು ಸಂಖ್ಯೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಮೆರವಣಿಗೆಯಲ್ಲಿ ಸಚಿವರಿಗೆ ಸಾಥ್‌ ನೀಡಿದರು.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ