Press ID & Credential Portal
Apply / Verify  ➔
LIVE TV LocalCrimeNationalInternationalPoliticsEducationSportsHealthFeature
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Local News

ರೀಲ್ಸ್ ಮಾಡಿ...ಬಹುಮಾನ ಗೆಲ್ಲಿ...: ಲಕ್ಷ್ಮೀ ಹೆಬ್ಬಾಳಕರ್ ಬಿಗ್ ಆಫರ್

https://youtu.be/rgECGIrEGcQ?si=GVKHLOFHqSJv4cjb

ಜನ ಜೀವಾಳ ಜಾಲ: ಬೆಳಗಾವಿ : ರಾಜ್ಯದ ಕಾಂಗ್ರೆಸ್ ಸರ್ಕಾರದ ಅತ್ಯಂತ ಮಹತ್ವಾಕಾಂಕ್ಷಿ ಯೋಜನೆಯಾಗಿರುವ ಗೃಹಲಕ್ಷ್ಮೀ ಯೋಜನೆಗೆ ಇದೀಗ ಒಂದು ವರ್ಷ ತುಂಬಿದೆ.

ಈ ಹಿನ್ನೆಲೆಯಲ್ಲಿ ಇದೀಗ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಖಾತೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ನಾಡಿನ ಜನತೆಗೆ ಬಹುದೊಡ್ಡ ಬಹುಮಾನವನ್ನು ಘೋಷಣೆ ಮಾಡಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ರೀಲ್ಸ್ ಮಾಡಿ ಬಹುಮಾನ ಗೆಲ್ಲಿ ಎಂದು ಅವರು ಹೇಳಿದ್ದಾರೆ. ಈ ಮೂಲಕ ಅತಿ ಹೆಚ್ಚು ಜನರನ್ನು ತಲುಪಲಿರುವ ಮೊದಲ 50 ರೀಲ್ಸ್ ಗಳಿಗೆ ಅವರು ಬಹುಮಾನ ಘೋಷಣೆ ಮಾಡುವುದಾಗಿ ಹೇಳಿದ್ದಾರೆ.

ಗೃಹಲಕ್ಷ್ಮೀಯರೇ ರೀಲ್ಸ್ ಮಾಡಿ, ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರಿಂದ ಬಹುಮಾನ ಗೆಲ್ಲಿ..

ರಾಜ್ಯದ ಕುಟುಂಬದ ಯಜಮಾನಿಯರಿಗೆ ಸಂತಸದ ಸುದ್ಧಿ; ‘ಗೃಹಲಕ್ಷ್ಮೀ’ ಯೋಜನೆಯ ಫಲಾನುಭವಿಗಳಾದ ಯಜಮಾನಿಯರು ರೀಲ್ಸ್ ಮಾಡಿ ಬಹುಮಾನ ಗೆಲ್ಲಲು ರಾಜ್ಯದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು ಅತ್ಯುತ್ತಮ ಅವಕಾಶ ಕಲ್ಪಿಸಿದ್ದಾರೆ.

ರಾಜ್ಯ ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆಯಲ್ಲೊಂದಾದ ಗೃಹಲಕ್ಷ್ಮೀ ಯೋಜನೆಯು ಜಾರಿಗೆ ಬಂದು ಇಲ್ಲಿಗೆ ಒಂದು ವರ್ಷವಾಗಿದೆ. ಈ ಸಂದರ್ಭದಲ್ಲಿ ಕುಟುಂಬದ ಎಲ್ಲ ಯಜಮಾನಿಯರಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು ಶುಭಾಶಯ ಮತ್ತು ಅಭಿನಂದನೆ ಸಲ್ಲಿಸಿದ್ದಾರೆ. ಜೊತೆಗೆ ಯಜಮಾನಿಯರಿಗೆ ಒಂದು ಬಹುಮಾನವನ್ನೂ ಘೋಷಿಸಿದ್ದಾರೆ.

ಇಲ್ಲಿಯವರೆಗೆ ಗೃಹಲಕ್ಷ್ಮೀ ಫಲಾನುಭವಿಗಳಾದ ತಮ್ಮ ಜೀವನದಲ್ಲಿ ಏನೆಲ್ಲ ಬದಲಾವಣೆಯನ್ನು ಈ ಒಂದು ವರ್ಷದಲ್ಲಿ ತಂದಿದೆ ಎನ್ನುವುದನ್ನು ಯಜಮಾನಿಯರು ಹಂಚಿಕೊಳ್ಳಲು ಸಚಿವರು ಕೋರಿದ್ದಾರೆ.
ರೀಲ್ಸ್ ಮಾಡಿ
ಸಾಮಾಜಿಕ ಜಾಲ ಜಾಲತಾಣಗಳಾದ ಯುಟ್ಯೂಬ್, ಫೇಸ್ ಬುಕ್, ಇನ್ ಸ್ಟಾಗ್ರಾಮ್ ಗಳಲ್ಲಿ ಶೇರ್ ಮಾಡುವ ಮೂಲಕ ಅದನ್ನು ಹಂಚಿಕೊಳ್ಳುವಂತೆ ಕೋರಿದ್ದಾರೆ.

ಯಾವ ಯಜಮಾನಿಯರು ಮಾಡಿದ ರೀಲ್ಸ್ ಗೆ ಹೆಚ್ಚು ವಿವರ್ಸ್ ಬಂದಿದೆಯೋ ಅಂತಹ ಯಜಮಾನಿಯರಿಗೆ ಒಂದು ಬಹುಮಾನ ಘೋಷಿಸಿದ್ದಾರೆ. ಇಲ್ಲಿಂದ ಒಂದು ತಿಂಗಳು ಅಂದರೆ ಸೆಪ್ಪಂಬರ್ 30ನೇ ತಾರೀಖಿನವರೆಗೆ ಯಜಮಾನಿಯರು ತಮ್ಮ ರೀಲ್ಸ್ ಗಳನ್ನು ಯುಟ್ಯೂಬ್, ಫೇಸ್ ಬುಕ್, ಇನ್ ಸ್ಟಾಗ್ರಾಮ್ ಗಳಲ್ಲಿ ಹಂಚಿಕೊಳ್ಳಬೇಕಿದೆ. ಜಾಸ್ತಿ ವಿವರ್ಸ್ ಸಿಕ್ಕಿದ ಯಜಮಾನಿಯರಿಗೆ ಸಚಿವರು ವೈಯಕ್ತಿಕವಾಗಿ ಒಂದು ಬಹುಮಾನವನ್ನು ನೀಡಲಿದ್ದಾರೆ.

ಮೊದಲ 50 ಯಜಮಾನಿಯರ ರೀಲ್ಸ್ ಹಾದಿಯನ್ನು ಎದುರು ನೋಡುತ್ತಿದ್ದೇನೆ; ಈ ಒಂದು ಗೃಹಲಕ್ಷ್ಮೀ ಯೋಜನೆಯಿಂದ ಜೀವನದಲ್ಲಿ ಆದ ಬದಲಾವಣೆಯನ್ನು ನಮ್ಮೆಲ್ಲ ಕರ್ನಾಟಕದ ಜನರ ಮುಂದೆ ಹಂಚಿಕೊಳ್ಳಬೇಕೆಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು ಗೃಹಲಕ್ಷ್ಮೀ ಯೋಜನೆಯ ಎಲ್ಲ ಯಜಮಾನಿಯರಲ್ಲಿ ಮನವಿ ಮಾಡಿದ್ದಾರೆ.

 

Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಅಂಕಲಗಿ ಪಟ್ಟಣದಲ್ಲಿ ವಿಜಯ ದಶಮಿ ನಿಮಿತ್ತ ಶ್ರೀ ಮಹಾಲಕ್ಷ್ಮೀ ದೇವಿ ಅಗ್ನಿ ಹಾಯುವ ಕಾರ್ಯಕ್ರಮ.ಮಾರ್ಕಂಡೇಯ ನದಿಯಲ್ಲಿ  ಮರ್ಡರ್..?ಬೆಳಗಾವಿಯಲ್ಲಿ ಹೊಸ ಶೋರೂಮ್ ಮೂಲಕ ಕರ್ನಾಟಕದಲ್ಲಿ ತನ್ನ ಅಸ್ತಿತ್ವ ವಿಸ್ತರಿಸಿದ PuREPowerನೀಲಿ ಡ್ರಮ್ ಕೊಲೆ ಪ್ರಕರಣ : ಪತ್ನಿ ಮುಸ್ಕಾನ್‌, ಪ್ರಿಯಕರ ಸಾಹಿಲ್‌ಗೆ ಮರಣದಂಡನೆ ಶಿಕ್ಷೆRCU ದಲ್ಲಿ ಲಕ್ಷಾಂತರ ರೂ  ಗೋಲ್ಮಾಲ್, ಮೂವರು ಜೈಲುಪಾಲು.ಚೌತಿ ರಾತ್ರಿ ಅವಘಡ:  ಚವಾಟಗಲ್ಲಿಯಲ್ಲಿ ನಾಲ್ವರು ಸಜೀವ ದಹನದ್ವಿಚಕ್ರ ವಾಹನ-ಸಾರಿಗೆ ಬಸ್ ಅಪಘಾತ: ಮೂವರು ಸ್ಥಳದಲ್ಲೇ ಸಾವುಬೆಂಗಳೂರು-ಬೆಳಗಾವಿ ನಡುವೆ ಎರಡು ವಿಶೇಷ ರೈಲುಗಳ ಸಂಚಾರಕ್ಕೆ ವ್ಯವಸ್ಥೆ ಮಾಡಿದೆ.ಪಾರ್ಕಿಂಗ್‌ ಮಾಡಿದ್ದ ಕಾರಿನ ಬಾನೆಟ್‌ನಲ್ಲಿ ಅಡಗಿತ್ತು ಬೃಹತ್‌ ಹೆಬ್ಬಾವು ; ಬೆಚ್ಚಿಬಿದ್ದ ನಿವಾಸಿಗಳು  ಥ್ರೋ ಬಾಲ್ ಪಂದ್ಯಾವಳಿಯಲ್ಲಿ ಗೆಲುವು ಸಾಧಿಸಿದ ಬೆಳಗಾವಿ ಜಿಎ ಪ್ರೌಢಶಾಲೆಯ ಬಾಲೆಯರು