Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಚುನಾವಣೆ ಫಲಿತಾಂಶಕ್ಕೆ ತಲೆ ಕೆಡಿಸಿಕೊಳ್ಳದೆ ಪಂಚ ಗ್ಯಾರಂಟಿ ಮುಂದುವರಿಕೆ - ಲಕ್ಷ್ಮೀ ಹೆಬ್ಬಾಳಕರ್

ಮೂಡಲಗಿ : ರಾಜ್ಯದ ನಮ್ಮ ಕಾಂಗ್ರೆಸ್ ಸರಕಾರ ಜನರಿಗಾಗಿ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿದ್ದು, ಚುನಾವಣೆಯ ಫಲಿತಾಂಶಕ್ಕೂ ತಲೆಕೆಡಿಸಿಕೊಳ್ಳದೆ ಜನರಿಗೋಸ್ಕರ ತಂದಿರುವ ಐದೂ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸದೆ ಮುಂದುವರಿಸಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ತಿಳಿಸಿದ್ದಾರೆ.

ಮೂಡಲಗಿಯಲ್ಲಿ ಶ್ರೀ ಮಡ್ಡಿ ವೀರಭದ್ರೇಶ್ವರ ಜಾತ್ರಾ ಮಹೋತ್ಸವ, ರಾಜಗೋಪುರದ ಕಳಸಾರೋಹಣ, ಮಹಾದ್ವಾರದ ಉದ್ಘಾಟನೆ ಹಾಗೂ ರಥೋತ್ಸವದ ನಿಮಿತ್ಯ ನಡೆದ ಸತ್ಸಂಗ ಸಮ್ಮೇಳನ ಸಮಾರಂಭದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಲೋಕಸಭೆ ಚುನಾವಣೆಯ ನಂತರ ಗ್ಯಾರಂಟಿ ಯೋಜನೆಗಳು ನಿಲ್ಲಲಿವೆ ಎನ್ನುವ ವಿರೋಧಿಗಳ ಅಪಪ್ರಚಾರದ ಹಿನ್ನೆಲೆಯಲ್ಲಿ, ಸಚಿವರು ಈ ವಿಷಯ ಸ್ಪಷ್ಟಪಡಿಸಿದರು. ಪಂಚ ಗ್ಯಾರಂಟಿ ಯೋಜನೆಗಳು ಜನರಿಗಾಗಿ ತಂದಿರುವ ಯೋಜನೆಗಳು. ಅವುಗಳನ್ನು ಜನರಿಗೋಸ್ಕರು ಮುಂದುವರಿಸಲಾಗಿದೆ. ಚುನಾವಣೆ ಫಲಿತಾಂಶಕ್ಕೂ ಇದಕ್ಕೂ ಸಂಬಂಧವಿಲ್ಲ. ಕಾಂಗ್ರೆಸ್ ಸರಕಾರ ಕೊಟ್ಟ ಮಾತಿನಂತೆ ನಡೆಯುತ್ತಿದೆ ಎನ್ನುವುದನ್ನು ಸಚಿವರು ಸ್ಪಷ್ಟಪಡಿಸಿದರು.
ಗುಡಿ, ಗಂಡಾರಗಳ ವೈಭವ ನೋಡುವುದಾದರೆ ಅರಬಾವಿ ಕ್ಷೇತ್ರದಲ್ಲಿ ನೋಡಬೇಕು. ಅಷ್ಟು ಚೆನ್ನಾಗಿ ಇಲ್ಲಿನ ದೇವಸ್ಥಾನಗಳು, ಮಹಾದ್ವಾರಗಳು ನಿರ್ಮಾಣವಾಗಿವೆ ಎಂದ ಸಚಿವರು, ಇಲ್ಲಿನ ಜನರು ಯಾವ ಶಾಸಕರು, ಸಂಸದರು ದುಡ್ಡು ಕೊಡುತ್ತಾರೆ ಎಂದು ಕಾಯುವುದಿಲ್ಲ. ತಾವೇ ಕಿಸೆಯಿಂದ ದುಡ್ಡು ಹಾಕಿ ಗುಡಿ ಗುಂಡಾರ ಕಟ್ಟುತ್ತಾರೆ. ಅಷ್ಟು ದಡ್ಡ ಮನಸ್ಸಿರುವ ಜನರು ಇಲ್ಲಿನವರು ಎಂದು ಪ್ರಶಂಸಿಸಿದರು.
ಭಾರತ 5 ಸಾವಿರ ವರ್ಷಗಳ ಇತಿಹಾಸ ಹೊಂದಿದೆ. ಅತ್ಯಂತ ಶ್ರೀಮಂತ ಇತಿಹಾಸ ನಮ್ಮದು. ದೇಶದ ಹಳ್ಳಿ ಹಳ್ಳಿಗಳಲ್ಲಿ, ಗಲ್ಲಿಗಲ್ಲಿಗಳಲ್ಲಿ ಇರುವ ನಮ್ಮ ಸಂಸ್ಕೃತಿ ಇದಕ್ಕೆ ಕಾರಣ. ನಮ್ಮ ಮನೆಯಲ್ಲಿ ಬಂಗಾರವಿಲ್ಲದಿದ್ದರೂ ದೇವರ ಕಳಶಕ್ಕೆ ಬಂಗಾರ ಹಾಕುತ್ತೇವೆ. ಅಂತಹ ಭಕ್ತಿ ನಮ್ಮದು ಎಂದು ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.
ಈ ವರ್ಷ ದೇವರ ಆಶಿರ್ವಾದದಿಂದ ಮಳೆ, ಬೆಳೆ ಚೆನ್ನಾಗಿ ಆಗಿದೆ. ದೇವರ ಆಶಿರ್ವಾದ ನಿಮ್ಮ ಮೇಲಿರಲಿ. ಸಂತೃಪ್ತಿಯ ಜೀವನ ಎಲ್ಲರದ್ದಾಗಲಿ ಎಂದು ಆಶಿಸಿದ ಸಚಿವರು, ಸೆ.3ರಂದು ವೀರಭದ್ರೇಶ್ವರ ಜಯಂತಿ. ಅಂದು ಎಲ್ಲರೂ ಜಯಂತಿಯನ್ನು ಆಚರಣೆ ಮಾಡಬೇಕು ಎಂದರು.
ಯುವ ಕಾಂಗ್ರೆಸ್ ಮುಖಂಡ ಮೃಣಾಲ ಹೆಬ್ಬಾಳಕರ್ ಮಾತನಾಡಿದರು. ಸಮಾರಂಭದಲ್ಲಿ ಹುಕ್ಕೇರಿ ಹಿರೇಮಠದ ಪ.ಪೂ ಚಂದ್ರಶೇಖರ ಶಿವಾಚಾರ್ಯ ಮಹಾಸ್ವಾಮಿಗಳು, ಮುಧೋಳದ ಪ.ಪೂ ಸಿದ್ದರಾಮ ಶಿವಯೋಗಿ ಮಹಾಸ್ವಾಮಿಗಳು, ಕಾಂಗ್ರೆಸ್ ಮುಖಂಡರಾದ ಅಶೋಕ ಪೂಜಾರಿ, ಮಹಾಂತೇಶ ಕಡಾಡಿ, ಶ್ರೀ ಮಡ್ಡಿ ವೀರಭದ್ರೇಶ್ವರ ದೇವಸ್ಥಾನದ ಅಧ್ಯಕ್ಷರಾದ ಭೀಮಪ್ಪ ಹಂದಿಗುಂದ, ಭೀಮಪ್ಪ ಗಡಾದ, ಬಿ.ಬಿ.ಬೆಳಕೊಡ್, ಲಗಮಣ್ಣ ಕಳಸಣ್ಣವರ, ರಾವಸಾಬ್ ಬೆಳಕೊಡ್, ನಿಂಗಪ್ಪ ಪಿರೋಜಿ, ಎಂ.ಜಿ.ಗಾಣಿಗೇರ್ ಹಾಗೂ ದೇವಸ್ಥಾನ ಮಂಡಳಿಯ ಸದಸ್ಯರು ಉಪಸ್ಥಿತರಿದ್ದರು.

ವಿವಿಧ ಸಂಪರ್ಕ ರಸ್ತೆ ಕಾಮಗಾರಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಭೂಮಿ ಪೂಜೆ

ಬೆಳಗಾವಿ : ಬೆಳಗಾವಿ ಗ್ರಾಮೀಣ ಕ್ಷೇತ್ರದ ಬಾಕನೂರ ಗ್ರಾಮದಲ್ಲಿ ವಿವಿಧ ಸಂಪರ್ಕ ರಸ್ತೆ ಕಾಮಗಾರಿಗಳಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಮಂಗಳವಾರ ಭೂಮಿ ಪೂಜೆ ನೆರವೇರಿಸಿದರು.
ಕ್ಷೇತ್ರದ ಅಭಿವೃದ್ಧಿ ನಿರಂತರ. ಪ್ರತಿ ಊರಿನಲ್ಲಿ ಒಂದಿಲ್ಲೊಂದು ಅಭಿವೃದ್ಧಿ ಕಾಮಗಾರಿಗಳು ನಡೆಯುತ್ತಲೇ ಇರುತ್ತವೆ. ಅಭಿವೃದ್ಧಿಗೆ ತಕ್ಕಂತೆ ಕ್ಷೇತ್ರದ ಜನರ ಸಹಕಾರವೂ ಅಗತ್ಯ. ಎಲ್ಲರ ಸಹಕಾರವಿದ್ದರೆ ಹೆಚ್ಚು ಹೆಚ್ಚು ಯೋಜನೆಗಳನ್ನು ತರಲು ನನಗೂ ಉತ್ಸಾಹ ಬರುತ್ತದೆ. ಹಾಗಾಗಿ ಉತ್ತಮ ಕೆಲಸಗಳಿಗೆ ಎಲ್ಲರೂ ಕೈ ಜೋಡಿಸಬೇಕು ಎಂದು ಕೇರಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್, ರಸ್ತೆ ನಿರ್ಮಾಣದ ಕಾಮಗಾರಿಗಳಲ್ಲಿ ಯಾವುದೇ ಲೋಪದೋಷಗಳಾಗದಂತೆ ಎಚ್ಚರವಹಿಸಲು ಗುತ್ತಿಗೆದಾರರಿಗೆ ಸೂಚಿಸಿದರು.

ಈ ಸಮಯದಲ್ಲಿ ಯುವರಾಜ ಕದಂ, ಮನು‌ ಬೆಳಗಾಂವ್ಕರ್, ಸುರೇಶ ನಾಯ್ಕ್, ಪಾಂಡುರಂಗ ನಾಯ್ಕ್, ರಾಮನಿಂಗ ಸಾವಂತ, ಪರಶುರಾಮ ಮಾಜುಕರ್, ಮಾರುತಿ ನಾಯ್ಕ್, ಕೃಷ್ಣ ನಾಯ್ಕ್, ಕಾಳು ನಾಯ್ಕ್, ನಿಂಗು ಕುಲಾಮ್, ರಾಜು ಗಾವಡೆ, ಟೋಪಣ್ಣ ನಾಯ್ಕ್ ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ