Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಆಹಾರ, ಆರೋಗ್ಯದ ಕಡೆಗೆ ಗಮನ ಅಗತ್ಯ: ಲಕ್ಷ್ಮೀ ಹೆಬ್ಬಾಳಕರ್

ಬೆಳಗಾವಿ: ಮೊದಲು ನಮ್ಮ ನೀರು, ವಾತಾವರಣ, ಆಹಾರ ಪದ್ಧತಿ ಎಲ್ಲವೂ ಆರೋಗ್ಯಕರವಾಗಿದ್ದವು. ಆದರೆ ಇತ್ತಿಚಿನ ದಿನಗಳಲ್ಲಿ ಆಹಾರದ ಪದ್ಧತಿಯಲ್ಲಿ ಬಹಳಷ್ಟು ಬದಲಾವಣೆಗಳಾಗಿವೆ. ಹಾಗಾಗಿ ಆಹಾರ ಮತ್ತು ಆರೋಗ್ಯದ ಕಡೆಗೆ ನಾವೆಲ್ಲರೂ ಗಮನ ಕೊಡಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ.

ಬೆಳಗಾವಿಯ ಸಿ.ಪಿ.ಎ.ಡ್ ಮೈದಾನದಲ್ಲಿ ಭಾನುವಾರ ಅಗಸ್ತ್ಯ ಫೌಂಡೇಷನ್ ವತಿಯಿಂದ ಹಮ್ಮಿಕೊಂಡಿದ್ದ ಸೀನಿಯರ್ ಸೇವಾ ವಾಕ್ಥಾನ್ ಮತ್ತು ಸೀನಿಯರ್ ಹೆಲ್ಪ್ ಲೈನ್/ಸೇವಾ ಮಿತ್ರದ ಕಾರ್ಯಕ್ರಮದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಭಾಗವಹಿಸಿದ್ದರು.

ಈ ವೇಳೆ ಮಾತನಾಡಿದ ಅವರು, ಮಹಾಮಾರಿ ಕೊರೋನಾ ನಂತರ ಜೀವನ ಬಹಳಷ್ಟು ಕಷ್ಟಕರವಾಗಿದೆ. ಇಂತಹ ಸಮಯದಲ್ಲಿ ನಾವು ಯಾರ ಮೇಲೆಯೂ ಅವಲಂಬಿತರಾಗದೇ ನಮ್ಮ ಕಾಲ ಮೇಲೆ ನಾವು ಎನ್ನುವಂತೆ ಉತ್ತಮ ಆರೋಗ್ಯಕ್ಕಾಗಿ, ಒಳೆಯ ಉಸಿರಾಟಕ್ಕಾಗಿ ಆರೋಗ್ಯಕರ ಚಟುವಟಿಕೆಗಳಲ್ಲಿ ಭಾಗವಹಿಸೋಣ ಎಂದರು.

ವೃದ್ದಾಪ್ಯದಲ್ಲಿ ನಾವು ಯಾರಿಗೂ ಹೊರೆಯಾಗೋದು ಬೇಡ. ಆರೋಗ್ಯದಿಂದ ಹಾಗೂ ಪ್ರೀತಿಯಿಂದ ಮನೆಯಲ್ಲಿ ಹಾಗೂ ಸಮಾಜದಲ್ಲಿರೋಣ. ಬೆಳಗಾವಿಯಲ್ಲಿ ಇಂತಹ ಆರೋಗ್ಯಕರ ಹವ್ಯಾಸವನ್ನು ಬೆಳೆಸಿಕೊಂಡಿರುವುದ ಸ್ವಾಗತಾರ್ಹ. ನಮ್ಮ ಬೆಳಗಾವಿಯ ಇಷ್ಟೊಂದು ಜನ, ಇಂತಹ ಮ್ಯಾರಥಾನ್ ನಲ್ಲಿ ಭಾಗವಹಿಸಿರುವುದನ್ನು ನೋಡಿದರೆ ಬೆಳಗಾವಿ ಆರೋಗ್ಯಕರವಾಗಿದೆ, ಜತೆಗೆ ಮುಂದೆಯೂ ಆರೋಗ್ಯಕರವಾಗಿರುತ್ತದೆ ಎಂದು ಖಾತ್ರಿಯಾಗಿದೆ ಎಂದು ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.

ಕರ್ನಾಟಕ ರಾಜ್ಯದ ಹಿರಿಯ ನಾಗರಿಕರ ಸಹಾಯವಾಣಿ ಕೇಂದ್ರದ ಅಧ್ಯಕ್ಷ ಅಡಿವೆಪ್ಪ ಬೆಂಡಿಗೇರಿ, ಜಿಲ್ಲಾ ಹಿರಿಯ ನಾಗರಿಕರ ಸಹಾಯವಾಣಿ ಕೇಂದ್ರದ ಅಧ್ಯಕ್ಷ ಬಸವರಾಜ ಗೋಮಾಡಿ, ಅಗಸ್ತ್ಯ ಫೌಂಡೇಷನ್ ಅಧ್ಯಕ್ಷೆ ಪೂರ್ಣಿಮಾದೇವಿ ಜಗತಾಫ್, ಜೈಭಾರತ ಫೌಂಡೇಶನ್ ನ ಪದಾಧಿಕಾರಿಗಳು, ಅಶೋಕ ಐರನ್ ಗ್ರುಪ ನ ಸಿಈಓ ವೆಂಕಟರಮಣ ಹಾಗೂ ಗೋಲ್ಡ್ ಪ್ಲಸ್ ನ ಪದಾಧಿಕಾರಿಗಳು, ನವೀನ್ ಉದೋಶಿ, ಶಶಿಕಲಾ ಕೊಪ್ಪದ, ನಗರದ ಹಿರಿಯ ನಾಗರಿಕರು ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಹ್ಯಾಪಿ ವಾಕರ್ಸ ತಂಡದ ಸದಸ್ಯರಾದ ಆನಂದ ಜಮಖಂಡಿ, ವಿಜಯ ಪೊರವಾಲ, ಉಲ್ಲಾಸ ಬಾಳೇಕುಂದ್ರಿ, ಗಿರೀಶ ಹತ್ತರಕಿ, ಶಿವರಾಯ ಏಳುಕೋಟಿ, ಗುರವ, ರಾಜೇಶ ಕಾಮತ, ಬೋಲಾ, ಎ.ಎಂ.ಪಾಟೀಲ, ಶಿವಾಜಿ, ಸಾಂಬ್ರೇಕರರು 5 km ಹೆಚ್ಚು ನಡೆದು ಕಳೆ ತಂದು ಕೊಟ್ಟರು.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ