Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಅಭಿವೃದ್ದಿಯಲ್ಲಿ ಜನರ ಪಾಲ್ಗೊಳ್ಳುವಿಕೆಗೆ ಆದ್ಯತೆ - ಲಕ್ಷ್ಮೀ ಹೆಬ್ಬಾಳಕರ್

 

ಬೆಳಗಾವಿ:
ಅಭಿವೃದ್ಧಿಯಲ್ಲಿ ಜನರ ಪಾಲ್ಗೊಳ್ಳುವಿಕೆ ಅತ್ಯಗತ್ಯವಾಗಿದ್ದು, ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಜನರನ್ನು ತೊಡಗಿಸಿಕೊಂಡೇ ಅಭಿವೃದ್ಧಿ ಯೋಜನೆಗಳನ್ನು ಜಾರಿಗೊಳಿಸಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಮತ್ತು ವಿಕಲ ಚೇತನರು ಹಾಗೂ ಹಿರಿಯ ನಾಗರಿಕರ ಸಬಲೀಕರಣ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ.

ಬೆಳಗಾವಿ ಗ್ರಾಮೀಣ ಕ್ಷೇತ್ರದ ಪಂತ ಬಾಳೇಕುಂದ್ರಿಯ ವಾಮನ ನಿತ್ಯ ಮಂಗಲ ಕಾರ್ಯಾಲಯದಲ್ಲಿ ಭಾನುವಾರ ಸಂಜೆ ಸುಳೇಭಾವಿ ಜಿಲ್ಲಾ ಪಂಚಾಯತ್ ವ್ಯಾಪಿಯಲ್ಲಿ ಬರುವ ಎಲ್ಲ ಗ್ರಾಮಗಳ ಕಾರ್ಯಕರ್ತರ ಹಾಗೂ ಮತದಾರರ ಅಭಿನಂದನಾ ಕಾರ್ಯಕ್ರಮದಲ್ಲಿ ಭಾಗಿಯಾಗಿ ಅವರು ಮಾತನಾಡಿದರು.

ನಾನು ಶಾಸಕಿಯಾದಾಗಿನಿಂದಲೂ ಜನರೊಂದಿಗೆ ಚರ್ಚಿಸಿಯೇ ಯೋಜನೆಗಳನ್ನು ಜಾರಿಗೊಳಿಸಿದ್ದೇನೆ. ಜನರ ಸಹಕಾರ ಇದ್ದಿದ್ದರಿಂದಲೇ ಇಷ್ಟೊಂದು ದೊಡ್ಡ ಪ್ರಮಾಣದಲ್ಲಿ ಅಭಿವೃದ್ಧಿ ಸಾಧ್ಯವಾಗಿದೆ. ಮುಂದಿನ ದಿನಗಳಲ್ಲಿ ಕ್ಷೇತ್ರಕ್ಕೆ ದೊಡ್ಡ ಯೋಜನೆಗಳನ್ನು ತರುವ ಉದ್ದೇಶವಿದ್ದು, ಇದರಲ್ಲಿ ಸಂಪೂರ್ಣವಾಗಿ ಜನರು ಪಾಲ್ಗೊಳ್ಳುವಂತೆ ಮಾಡಲಾಗುವುದು. ನಾವು- ನೀವೆಲ್ಲ ಸೇರಿ ಕ್ಷೇತ್ರವನ್ನು ಸಮಗ್ರವಾಗಿ ಅಭಿವೃದ್ದಿಪಡಿಸೋಣ ಎಂದು ಅವರು ಹೇಳಿದರು.

ಕಳೆದ ಚುನಾವಣೆಯಲ್ಲಿ ನಿರೀಕ್ಷೆಗೂ ಮೀರಿ ಮತ ನೀಡಿ ನನ್ನನ್ನು ಆಯ್ಕೆ ಮಾಡಿದ್ದೀರಿ. ಇಷ್ಟೊಂದು ಪ್ರೀತಿ, ವಿಶ್ವಾಸವನ್ನು ನಾನು ಎಂದೂ ಕಂಡಿರಲಿಲ್ಲ. ಯಾವುದೇ ಜನಪ್ರತಿನಿಧಿ ಬಯಸುವುದು ಜನರ ಪ್ರೀತಿಯನ್ನು. ಆ ವಿಷಯದಲ್ಲಿ ನಾನು ಧನ್ಯ. ನಿಮ್ಮಂತಹ ಮತದಾರರನ್ನು ಪಡೆದಿರುವುದು ನನ್ನ ಪುಣ್ಯ ಎಂದು ಹೆಬ್ಬಾಳಕರ್ ಹೇಳಿದರು.
ಸ್ಥಳೀಯ ಮುಖಂಡರು, ಕಾರ್ಯಕರ್ತರು, ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಇದ್ದರು. ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಅವರನ್ನು ಸ್ಥಳೀಯರು ಸನ್ಮಾನಿಸಿದರು.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ