Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಬೆಳಗುಂದಿ, ಉಚಗಾವಿಯಲ್ಲಿ ಡಿಗ್ರಿ ಕಾಲೇಜಿಗೆ ಪ್ರಯತ್ನ - ಲಕ್ಷ್ಮೀ ಹೆಬ್ಬಾಳಕರ್

ಬೆಳಗಾವಿ : ಬೆಳಗಾವಿ ಗ್ರಾಮೀಣ ಕ್ಷೇತ್ರದ ಬೆಳಗುಂದಿ ಮತ್ತು ಉಚಗಾಂವ್ ಗ್ರಾಮದಲ್ಲಿ ಪದವಿ ಕಾಲೇಜು ಆರಂಭಿಸುವ ಕನಸು ಹೊಂದಿರುವುದಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ತಿಳಿಸಿದ್ದಾರೆ.

ಶುಕ್ರವಾರ ಸಂಜೆ ಬೆಳಗಾವಿ ಗ್ರಾಮೀಣ ಕ್ಷೇತ್ರದ ಬೆಳಗುಂದಿ ಗ್ರಾಮದ ಶ್ರೀ ಬ್ರಹ್ಮಲಿಂಗ ಯುವಕ ಮಂಡಳದ ಆಶ್ರಯದಲ್ಲಿ‌ ನಡೆದ ಎತ್ತಿನ ಚಕ್ಕಡಿ ಓಡಿಸುವ ಸ್ಪರ್ಧೆಯಲ್ಲಿ (ಬೈಲಗಾಡಿ ಶರ್ಯತ್) ಭಾಗವಹಿಸಿ ಅವರು ಮಾತನಾಡಿದರು.

ಕ್ಷೇತ್ರದಲ್ಲಿ ಸಾಧ್ಯವಾದಷ್ಟು ಶಿಕ್ಷಣ ಸೌಲಭ್ಯ ಹೆಚ್ಚಿಸಲು ಪ್ರಯತ್ನಿಸುತ್ತೇನೆ. ಮುಂದಿನ 5 ವರ್ಷಗಳ ಕಾಲ ಶೈಕ್ಷಣಿಕ ಕ್ರಾಂತಿ ಮಾಡುತ್ತೇನೆ. ಬೆಳಗುಂದಿಯಲ್ಲಿ 2 ಕೋಟಿ ರೂ. ವೆಚ್ಚದಲ್ಲಿ ರೈತ ಭವನ ನಿರ್ಮಾಣ ಮಾಡಲಾಗುವುದು. ಬ್ರಹ್ಮಲಿಂಗ ದೇವಸ್ಥಾನಕ್ಕೆ 25 ಲಕ್ಷ ರೂ.ಗಳನ್ನು ಒದಗಿಸಲಾಗುವುದು ಎಂದು ಹೆಬ್ಬಾಳಕರ್ ತಿಳಿಸಿದರು.

ಗ್ರಾಮೀಣ ಕ್ಷೇತ್ರದ ಜನರ ಆಶಿರ್ವಾದದಿಂದ ನಾನು ಮಂತ್ರಿಯಾಗಿದ್ದೇನೆ. ನಮ್ಮ ಸರಕಾರ ನುಡಿದಂತೆ ನಡೆಯುತ್ತಿದೆ. ಪಂಚ ಗ್ಯಾರಂಟಿ ಮೂಲಕ ಪ್ರತಿ ಕುಟುಂಬಕ್ಕೆ ನೆರವು ನೀಡಲಾಗುತ್ತಿದೆ. ಮುಂದಿನ ದಿನಗಳಲ್ಲಿ ಸಹ ನಿಮ್ಮ ಆಶಿರ್ವಾದ ಇರಲಿ ಎಂದು ಅವರು ವಿನಂತಿಸಿದರು.

ಈ ಸಮಯದಲ್ಲಿ ಯುವರಾಜ ಕದಂ, ರಘುನಾಥ್ ಖಂಡೇಕರ್, ಶಿವಾಜಿ ಬೋಕಡೆ, ಶಿವಾಜಿ ಬೆಟಗೇರಿಕರ್, ಸೋಮನ್ನ ಗಾವುಡಾ, ರೆಹಮಾನ್ ತಹಶಿಲ್ದಾರ, ಪ್ರಹ್ಲಾದ ಚಿರಮುರ್ಕರ್, ರವಿ‌ ನಾಯಕ್, ಯಲ್ಲಪ್ಪ ಬೆಳಗಾಂವ್ಕರ್, ಅಶೋಕ ಗಾವುಡಾ, ರಂಜನಾ ಗಾವುಡಾ, ಬಾಳು ದೇಸೂರಕರ್, ಉಮೇಶ ಪಾಟೀಲ, ವನಿತಾ ಪಾಟೀಲ, ನಿಂಗೂಲಿ ಚವ್ಹಾನ್, ಶಿವಾಜಿ ಪಾಟೀಲ, ಸವಿತಾ ತಳವಾರ, ಗುರುನಾಥ ಪಾಟೀಲ, ಸುಖದೇವಿ ಕಾಂಬಳೆ, ಮಹಾದೇವ್ ಪಾಟೀಲ, ಮನೋಹರ್ ಬೆಳಗಾಂವ್ಕರ್ ಇದ್ದರು.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಾಸಕರ ಮನೆಗಳಿಗೆ ಸೀಮಿತವಾದರೆ BLO ಗಳು ? ಸಾರ್ವಜನಿಕರನ್ನು ಸತಾಯಿಸುತ್ತಿರುವ ಬಿ ಎಲ್ ಒ ಗಳ ವಿರುದ್ಧ ಕ್ರಮಕ್ಕೆ ಅಗ್ರಹಶಾಸಕರ ಮನೆಗಳಿಗೆ ಸೀಮಿತವಾದರೆ BLO ಗಳು ?ದೇಶಾದ್ಯಂತ ಆವರಿಸಿದ ಮೋಡಗಳು ; ಉಪಗ್ರಹ ಚಿತ್ರಗಳಲ್ಲಿ ಸ್ಪಷ್ಟ ; ಮುಂಗಾರು ಬಲಗೊಳ್ಳುತ್ತಿದೆ ಎಂದ ಹವಾಮಾನ ಇಲಾಖೆನೀಟ್‌ ಹೋರಾಟ : ಯುವ ಪ್ರತಿಭಟನಾಕಾರರ ವಿರುದ್ಧ ಯಾವುದೇ ಕ್ರಮವಿಲ್ಲ ಎಂದು ಭರವಸೆ ನೀಡಿದ್ರೆ ಉಪವಾಸ ಅಂತ್ಯ ; ಕೇಂದ್ರಕ್ಕೆ ವಾಂಗ್ಚುಕ್ ಷರತ್ತುಕೋಚಿಂಗ್ ಸೆಂಟರ್‌ನಲ್ಲಿ ಲೈಂಗಿಕ ದೌರ್ಜನ್ಯ: ಆರೋಪಿಯನ್ನು ವಶಕ್ಕೆ ಪಡೆದ ಪೊಲೀಸರುಆಷಾಢ ಏಕಾದಶಿ ಪ್ರಯುಕ್ತ ಧಾರವಾಡ-ಪಂಡರಪುರ ನಡುವೆ ವಿಶೇಷ ರೈಲು ಸಂಚಾರಕೆಎಲ್‌ಇ ಜೆಜಿಎಂಎಂ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಕೆಎಲ್‌ಇ ಆಸ್ಪತ್ರೆ, ಹುಬ್ಬಳ್ಳಿ ಉದ್ಘಾಟನಾ ಸಮಾರಂಭ ಮುಂದೂಡಿಕೆಎನ್‌ಡಿಎಗೆ ಎನ್‌ಸಿಪಿ ಬೆಂಬಲದ ವದಂತಿಗಳ ನಡುವೆ ಪ್ರಧಾನಿ ಮೋದಿ ಭೇಟಿ ಮಾಡಿದ ಶರದ್ ಪವಾರ್–ಸುಪ್ರಿಯಾ ಸುಳೆಗಣಿಕೊಪ್ಪ : ಶಾಸಕ ಬಾಬಾಸಾಹೇಬ ಪಾಟೀಲ ಅವರ ಜನ್ಮದಿನದ ಅಂಗವಾಗಿ ವಿದ್ಯಾರ್ಥಿಗಳಿಗೆ ಸಿಹಿ ಭೋಜನ, ಕಲಿಕಾ ಸಾಮಗ್ರಿ ವಿತರಣೆವಿದ್ಯಾರ್ಥಿಗಳು  ಎನ್ ಸಿಸಿ   ಮಹತ್ವ ಮತ್ತು ಅದರ ಉಪಯೋಗ ಹಾಗೂ ಅನುಕೂಲಗಳ  ಮಾಹಿತಿ ಪಡೆಯಬೇಕು: ಪ್ರೊ . ಹನುಮಂತ ಬನ್ನೂರ