Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಮಹಾರಾಷ್ಟ್ರದ ಚುನಾವಣಾ ಅಖಾಡಕ್ಕೆ ಲಕ್ಷ್ಮೀ ಹೆಬ್ಬಾಳಕರ್ ಎಂಟ್ರಿ

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು ಮಹಾರಾಷ್ಟ್ರ ವಿಧಾನಸಭಾ ಚುನಾವಣಾ ಅಖಾಡಕ್ಕೆ ಧುಮುಕಿದ್ದಾರೆ. ಕರ್ನಾಟಕ ಗಡಿಗೆ ಹೊಂದಿಕೊಂಡಂತೆ ಇರುವ ಚಂದಗಡ ವಿಧಾನಸಭಾ ಕ್ಷೇತ್ರದ ತುಡಯೆ ಗ್ರಾಮದಲ್ಲಿ ಮಹಾ ವಿಕಾಸ ಅಘಾಡಿ (ಎಂವಿಎ) ಅಭ್ಯರ್ಥಿ ನಂದಾತಾಯಿ ಕುಪೆಕರ್ ಪರ ಸಚಿವರು ಗುರುವಾರ ಸಂಜೆ ಪ್ರಚಾರ ನಡೆಸಿದರು.

ಈ ವೇಳೆ ಮಾತನಾಡಿದ ಸಚಿವರು, ಮಹಾರಾಷ್ಟ್ರ ಮತ್ತು ರಾಷ್ಟ್ರದ ಅಭಿವೃದ್ಧಿ ದೃಷ್ಟಿಯಿಂದ ಎಂವಿಎ ಒಕ್ಕೂಟವನ್ನು ಬೆಂಬಲಿಸಬೇಕು. ಕರ್ನಾಟಕದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ ಸಾಕಷ್ಟು ಬದಲಾವಣೆ ಆಗಿದೆ. ಪ್ರತಿ ತಿಂಗಳು ಮಹಿಳೆಯರಿಗೆ ಗೃಹಲಕ್ಷ್ಮೀ ಯೋಜನೆಯಡಿ 2 ಸಾವಿರ ನೀಡಲಾಗುತ್ತಿದೆ. ಕೊಟ್ಟ ಮಾತಿನಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ‌ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸಾರಥ್ಯದ ಸರ್ಕಾರ ಪಂಚ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದೆ. ನಮ್ಮ ರಾಜ್ಯ ಸಾಕಷ್ಟು ಅಭಿವೃದ್ಧಿಯಾಗುತ್ತಿದೆ, ಅದೇ ಮಾದರಿಯಲ್ಲಿ ಮಹಾರಾಷ್ಟ್ರ ಕೂಡ ಅಭಿವೃದ್ಧಿ ಆಗಬೇಕಾದರೆ ಎಂವಿಎ ಅಧಿಕಾರಕ್ಕೆ ಬರಬೇಕು ಎಂದರು.

ಮಹಾರಾಷ್ಟ್ರದಲ್ಲಿ ಎಂವಿಎ ಅಧಿಕಾರಕ್ಕೆ ಬಂದರೆ ಕರ್ನಾಟಕ ಎಲ್ಲಾ ರೀತಿಯಲ್ಲೂ ಸಹಕಾರ ನೀಡಲಿದೆ. ಚಂದಗಡ್ ಕ್ಷೇತ್ರದಿಂದ ನಂದಾತಾಯಿ ಅವರು ಗೆದ್ದರೆ, ನಾನು ಬೆಳಗಾವಿ ಗ್ರಾಮೀಣ ಕ್ಷೇತ್ರವನ್ನು ಅಭಿವೃದ್ಧಿ ಮಾಡಿರುವ ಮಾದರಿಯಲ್ಲೆ ಅವರು ಕೂಡ ಈ ಕ್ಷೇತ್ರವನ್ನು ಅಭಿವೃದ್ಧಿ ಪಡಿಸಲಿದ್ದಾರೆ. ಚಂದಗಡ್ ಕ್ಷೇತ್ರದ ಸರ್ವತೋಮುಖದ ಅಭಿವೃದ್ಧಿಗಾಗಿ ನಂದಾತಾಯಿ‌ ಕುಪೆಕರ್ ಅವರನ್ನು ಬೆಂಬಲಿಸಿ ಎಂದು ಮತದಾರರಲ್ಲಿ ಸಚಿವರು ಮನವಿ ಮಾಡಿದರು.

ಎನ್ ಸಿಪಿ ವರಿಷ್ಠ ಶರದ್ ಪವಾರ್ ಅವರ ಹೆಸರಿಗೆ ಮಹಾರಾಷ್ಟ್ರದಲ್ಲಿ ಬಹಳ ದೊಡ್ಡ ಶಕ್ತಿ ಇದ್ದು, ದೊಡ್ಡ ಪ್ರಮಾಣದಲ್ಲಿ ಅಭಿಮಾನಿಗಳನ್ನು ಹೊಂದಿದ್ದಾರೆ. ಕಾಂಗ್ರೆಸ್, ಶರದ್ ಪವಾರ್ ಸಾರಥ್ಯದ ಎನ್ ಸಿಪಿ‌ (ಎಸ್ ಪಿ) ಹಾಗೂ ಉದ್ದವ್ ಠಾಕ್ರೆ ಸಾರಥ್ಯದ ಶಿವಸೇನಾ (ಯುಬಿಟಿ) ಒಳಗೊಂಡ ಮಹಾ ವಿಕಾಸ ಅಘಾಡಿ ಅಧಿಕಾರಕ್ಕೇರುವುದು ಖಚಿತ ಎಂದು ಸಚಿವರು ವಿಶ್ವಾಸ ವ್ಯಕ್ತಪಡಿಸಿದರು.

ಈ ವೇಳೆ ಚಂದಗಡ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಧ್ಯಕ್ಷ ಸಂಭಾಜಿ‌ ಶಿರೋಳಕರ್, ಯುವ ಕಾಂಗ್ರೆಸ್ ಮುಖಂಡ ಮೃಣಾಲ್ ಹೆಬ್ಬಾಳಕರ್, ಜ್ಯೋತಿಬಾ ಪಾಟೀಲ, ಶಿವಾಜಿ ಸಾವಂತ, ರಜತ್ ಹುಲ್ಜಿ, ಎಂ.ಜೆ.ಪಾಟೀಲ, ಬೈರು ಖಂಡೇಕರ್, ವಿಲಾಸ್ ಪಾಟೀಲ, ತಾನಾಜಿ ವಾಘಮೊರೆ, ಗಣೇಶ ಫಾಠಕ್, ಬಸವಂತ ಅಡಕುರಕರ್, ನಾರಾಯಣ, ವಿಷ್ಣು ಗಾವಡೆ, ಜ್ಯೋತಿಬಾ ಚಂದಿಲಕರ್, ಹನಮಂತ ಪಾಟೀಲ, ದೀಪಕ್ ಪಾಟೀಲ ಮುಂತಾದವರು ಉಪಸ್ಥಿತರಿದ್ದರು.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಾಸಕರ ಮನೆಗಳಿಗೆ ಸೀಮಿತವಾದರೆ BLO ಗಳು ? ಸಾರ್ವಜನಿಕರನ್ನು ಸತಾಯಿಸುತ್ತಿರುವ ಬಿ ಎಲ್ ಒ ಗಳ ವಿರುದ್ಧ ಕ್ರಮಕ್ಕೆ ಅಗ್ರಹಶಾಸಕರ ಮನೆಗಳಿಗೆ ಸೀಮಿತವಾದರೆ BLO ಗಳು ?ದೇಶಾದ್ಯಂತ ಆವರಿಸಿದ ಮೋಡಗಳು ; ಉಪಗ್ರಹ ಚಿತ್ರಗಳಲ್ಲಿ ಸ್ಪಷ್ಟ ; ಮುಂಗಾರು ಬಲಗೊಳ್ಳುತ್ತಿದೆ ಎಂದ ಹವಾಮಾನ ಇಲಾಖೆನೀಟ್‌ ಹೋರಾಟ : ಯುವ ಪ್ರತಿಭಟನಾಕಾರರ ವಿರುದ್ಧ ಯಾವುದೇ ಕ್ರಮವಿಲ್ಲ ಎಂದು ಭರವಸೆ ನೀಡಿದ್ರೆ ಉಪವಾಸ ಅಂತ್ಯ ; ಕೇಂದ್ರಕ್ಕೆ ವಾಂಗ್ಚುಕ್ ಷರತ್ತುಕೋಚಿಂಗ್ ಸೆಂಟರ್‌ನಲ್ಲಿ ಲೈಂಗಿಕ ದೌರ್ಜನ್ಯ: ಆರೋಪಿಯನ್ನು ವಶಕ್ಕೆ ಪಡೆದ ಪೊಲೀಸರುಆಷಾಢ ಏಕಾದಶಿ ಪ್ರಯುಕ್ತ ಧಾರವಾಡ-ಪಂಡರಪುರ ನಡುವೆ ವಿಶೇಷ ರೈಲು ಸಂಚಾರಕೆಎಲ್‌ಇ ಜೆಜಿಎಂಎಂ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಕೆಎಲ್‌ಇ ಆಸ್ಪತ್ರೆ, ಹುಬ್ಬಳ್ಳಿ ಉದ್ಘಾಟನಾ ಸಮಾರಂಭ ಮುಂದೂಡಿಕೆಎನ್‌ಡಿಎಗೆ ಎನ್‌ಸಿಪಿ ಬೆಂಬಲದ ವದಂತಿಗಳ ನಡುವೆ ಪ್ರಧಾನಿ ಮೋದಿ ಭೇಟಿ ಮಾಡಿದ ಶರದ್ ಪವಾರ್–ಸುಪ್ರಿಯಾ ಸುಳೆಗಣಿಕೊಪ್ಪ : ಶಾಸಕ ಬಾಬಾಸಾಹೇಬ ಪಾಟೀಲ ಅವರ ಜನ್ಮದಿನದ ಅಂಗವಾಗಿ ವಿದ್ಯಾರ್ಥಿಗಳಿಗೆ ಸಿಹಿ ಭೋಜನ, ಕಲಿಕಾ ಸಾಮಗ್ರಿ ವಿತರಣೆವಿದ್ಯಾರ್ಥಿಗಳು  ಎನ್ ಸಿಸಿ   ಮಹತ್ವ ಮತ್ತು ಅದರ ಉಪಯೋಗ ಹಾಗೂ ಅನುಕೂಲಗಳ  ಮಾಹಿತಿ ಪಡೆಯಬೇಕು: ಪ್ರೊ . ಹನುಮಂತ ಬನ್ನೂರ