Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಲಕ್ಷ್ಮೀ ಹೆಬ್ಬಾಳಕರ್ ಶ್ರಮ ಸಾರ್ಥಕ; ಕನಸು ನನಸು: ಒಂದೇ ವಾರದಲ್ಲಿ ಅದ್ಭುತ ಪ್ರವಾಸಿ ತಾಣವಾದ ರಾಜಹಂಸಗಡ

 

ಬೆಳಗಾವಿ :
ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಅವರ ಶ್ರಮ ಸಾರ್ಥಕವಾಗಿದೆ. ರಾಜಹಂಸಗಡವನ್ನು ದೊಡ್ಡ ಧಾರ್ಮಿಕ ಪ್ರವಾಸಿ ತಾಣವಾಗಿ ಅಭಿವೃದ್ಧಿಪಡಿಸಬೇಕೆನ್ನುವ ಅವರ ಕನಸು ನನಸಾಗಿದೆ. ನವೀಕೃತ ಸಿದ್ಧೇಶ್ವರ ಮಂದಿರ ಮತ್ತು ಛತ್ರಪತಿ ಶಿವಾಜಿ ಮೂರ್ತಿ ಉದ್ಘಾಟನೆಯಾಗಿ ಒಂದೇ ವಾರದಲ್ಲಿ ರಾಜಹಂಸಗಡ ದೊಡ್ಡ ಮಟ್ಟದಲ್ಲಿ ಪ್ರವಾಸಿಗರನ್ನು ಆಕರ್ಷಿಸುತ್ತಿದೆ. ಭಾನುವಾರ ಒಂದೇ ದಿನ 10 ಸಾವಿರಕ್ಕಿಂತ ಹೆಚ್ಚು ಪ್ರವಾಸಿಗರು ಆಗಮಿಸಿ, ಅಭಿವೃದ್ಧಿ ಕಾರ್ಯಕ್ಕೆ ಪ್ರಶಂಸೆ ವ್ಯಕ್ತಪಡಿಸಿದರು.
ಲಕ್ಷ್ಮೀ ಹೆಬ್ಬಾಳಕರ್ ಶಾಸಕರಾದ ದಿನದಿಂದಲೇ ರಾಜಹಂಸಗಡ ಕೊಟೆಯನ್ನು ಪರಿಪೂರ್ಣ ಪ್ರವಾಸಿ ತಾಣವನ್ನಾಗಿ ಅಭಿವೃದ್ಧಿಪಡಿಸಬೇಕೆನ್ನುವ ಕನಸು ಹೊತ್ತಿದ್ದರು. ಅಲ್ಲಿ ರಾಷ್ಟ್ರದಲ್ಲೇ ಭವ್ಯವಾದ ಛತ್ರಪತಿ ಶಿವಾಜಿ ಮೂರ್ತಿ ಪ್ರತಿಷ್ಠಾಪಿಸಬೇಕೆನ್ನುವ ಗುರಿ ಇಟ್ಟುಕೊಂಡು ಕೆಲಸ ಮಾಡಿದರು. ಯಾವ ಅಡ್ಡಿ, ಆತಂಕಕ್ಕೂ ಬಗ್ಗದೆ ನಿರಂತರ ಪ್ರಯತ್ನ ಮಾಡಿ ಯಶಸ್ವಿಯಾದರು. ಮಾರ್ಚ್ 5ರಂದು ನವೀಕೃತ ಸಿದ್ದೇಶ್ವರ ಮಂದಿರ ಮತ್ತು ಬೃಹತ್ ಛತ್ರಪತಿ ಶಿವಾಜಿ ಮೂರ್ತಿ ಶಾಸ್ತ್ರೋಕ್ತವಾಗಿ ಉದ್ಘಾಟನೆಯಾಯಿತು.

ಉದ್ಘಾಟನೆಯ ದಿನವೇ ಒಂದೂವರೆ ಲಕ್ಷಕ್ಕಿಂತ ಹೆಚ್ಚು ಜನರು ಆಗಮಿಸಿ, ಹರ್ಷೋದ್ಘಾರಗೈದಿದ್ದರು. ಅಲ್ಲಿಂದ ಪ್ರತಿನಿತ್ಯ 2 -3 ಸಾವಿರ ಪ್ರವಾಸಿಗರು ಆಗಮಿಸಿ, ಖುಷಿಪಡುತ್ತಿದ್ದಾರೆ. ಹಿಂದೆ ಯಾರಿಂದಲೂ ಆಗದ ಕೆಲಸವನ್ನು ಮಾಡಿದ್ದಕ್ಕಾಗಿ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಅವರಿಗೆ ಪ್ರಶಂಸೆಯ ಸುರಿಮಳೆಗೈಯುತ್ತಿದ್ದಾರೆ. ಭಾನುವಾರ ಬೆಳಗ್ಗೆಯಿಂದಲೇ ಸಾಲುಗಟ್ಟಿ ವಾಹನಗಳು ರಾಜಹಂಸಗಡದ ಕಡೆಗೆ ಆಗಮಿಸುತ್ತಿದ್ದವು. ಸಹಸ್ರ ಸಹಸ್ರ ಸಂಖ್ಯೆಯಲ್ಲಿ ಜನರು ಆಗಮಿಸಿ ಸಂಭ್ರಮಿಸಿದರು.

ಮುಂದಿನ ದಿನಗಳಲ್ಲಿ ರಾಜಹಂಸಗಡ ರಾಷ್ಟ್ರದಲ್ಲೇ ಒಂದು ಅತ್ಯುತ್ತಮ ಮತ್ತು ಅಪರೂಪದ ಪ್ರವಾಸಿ ತಾಣವಾಗಿ ಬೆಳೆಯುವ ಸೂಚನೆ ವಾರದಲ್ಲೇ ಕಾಣಿಸಿದೆ. ಇನ್ನೂ ಕೆಲವೊಂದು ಸಣ್ಣ ಪುಟ್ಟ ಕೆಲಸಗಳಾಗಬೇಕಿದ್ದು, ಅವುಗಳ ಕಡೆಗೆ ಲಕ್ಷ್ಮೀ ಹೆಬ್ಬಾಳಕರ್ ಗಮನಹರಿಸಿದ್ದಾರೆ. ಸಿದ್ದೇಶ್ವರ ಮಂದಿರವನ್ನು ಇನ್ನೂ ಸ್ವಲ್ಪ ಅಭಿವೃದ್ಧಿಪಡಿಸಬೇಕಿದೆ. ಅಲ್ಲೊಂದು ಸಣ್ಣ ವಾಟರ್ ಫಾಲ್ಸ್ ಮಾಡುವ ಯೋಜನೆ ಹೊಂದಿದ್ದಾರೆ. ಸಣ್ಣಪುಟ್ಟ ಕೆಲಸವನ್ನು ಆದಷ್ಟು ಬೇಗ ಮಾಡಿಸುವ ಯೋಜನೆಯನ್ನು ಅವರು ರೂಪಿಸಿದ್ದಾರೆ.

ಒಟ್ಟಾರೆ, ಲಕ್ಷ್ಮೀ ಹೆಬ್ಬಾಳಕರ್ ಅವರ ಕನಸು ನನಸಾಗಿದೆ, ಶ್ರಮ ಸಾರ್ಥಕವಾಗಿದೆ. ಅವರ ಕೆಲಸಕ್ಕೆ ಎಲ್ಲೆಡೆಯಿಂದ ಪ್ರಶಂಸೆಯ ಮಹಾಪೂರವೇ ಹರಿದುಬರುತ್ತಿದೆ.

ರಾಜಹಂಸಗಡವನ್ನು ಧಾರ್ಮಿಕ ಪ್ರವಾಸಿ ತಾಣವನ್ನಾಗಿ ಅಭಿವೃದ್ಧಿಪಡಿಸಬೇಕೆಂದು ದೊಡ್ಡ ಕನಸು ಕಂಡಿದ್ದೆ. ಈಗ ನನಗೆ ಖುಷಿಯಾಗುತ್ತಿದೆ. ಎಲ್ಲರ ಸಹಕಾರದಿಂದ ಈ ಕೆಲಸ ಪೂರ್ಣಗೊಂಡಿದೆ. ಅಲ್ಲಿ ಪ್ರವಾಸಿಗರಿಗಾಗಿ ಇನ್ನಷ್ಟು ಮೂಲಸೌಕರ್ಯಗಳನ್ನು ಕಲ್ಪಿಸಲು ಪ್ರಯತ್ನಿಸುತ್ತೇನೆ. ಸಹಕರಿಸಿದ ಎಲ್ಲರಿಗೂ ಧನ್ಯವಾದಗಳು.

-ಲಕ್ಷ್ಮೀ ಹೆಬ್ಬಾಳಕರ್, ಶಾಸಕರು
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ