Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಮುಖ್ಯಮಂತ್ರಿಯವರಿಂದ ಇ-ಪ್ರೊಕ್ಯೂರ್‌ಮೆಂಟ್‌ 2.0 ಪೋರ್ಟಲ್‌-ಡಿಐಎಸ್‌ ತಂತ್ರಾಂಶ ಲೋಕಾರ್ಪಣೆ

 

ಬೆಂಗಳೂರು :
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ಜನತಾದರ್ಶನ ನಡೆಸಿದರು.
ಈ ಸಂದರ್ಭದಲ್ಲಿ ಕರ್ನಾಟಕ ಸಾರ್ವಜನಿಕ ಸಂಗ್ರಹಣೆ ಪೋರ್ಟಲ್‌ 2.೦ ಹಾಗೂ ಜಿಲ್ಲೆಗಳ ಪ್ರಗತಿ ಪರಿಶೀಲನೆ ಕುರಿತಂತೆ ಡಿ.ಐ.ಎಸ್. ತಂತ್ರಾಂಶವನ್ನು ಲೋಕಾರ್ಪಣೆ ಮಾಡಿದರು.
ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮ, ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿ ಡಾ. ರಜನೀಶ್‌ ಗೋಯೆಲ್‌, ಇ-ಆಡಳಿತ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್‌ ಮತ್ತು ಸರ್ಕಾರದ ಇತರ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.

*ಸಾರ್ವಜನಿಕ ಸಂಗ್ರಹಣೆ ಪೋರ್ಟಲ್‌ 2.0*

ರಾಜ್ಯದ ಆಯವ್ಯಯದಲ್ಲಿ ಕೈಗೊಂಡ ಎಲ್ಲಾ ಇಲಾಖೆಗಳ ರೂ 1 ಕೋಟಿಗಿಂತ ಹೆಚ್ಚಿನ ಕಾಮಗಾರಿಗಳ ಪ್ರಗತಿಯನ್ನು ಸಮಯಬದ್ದವಾಗಿ ಮೇಲ್ವಿಚಾರಣೆ ಮಾಡಲು ಕಾಂಟ್ರಾಕ್ಟ್ ಮ್ಯಾನೇಜಮೆಂಟ್ ಮಾಡ್ಯೂಲ್‌ನಲ್ಲಿ ಡ್ಯಾಷ್‌ಬೋರ್ಡ್‌ನ್ನು ಇ-ಆಡಳಿತ ಇಲಾಖೆಯ ವತಿಯಿಂದ ಸಿದ್ದಪಡಿಸಿದೆ.

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಜಲಸಂಪನ್ಮೂಲ ಇಲಾಖೆ, ಲೋಕೋಪಯೋಗಿ ಇಲಾಖೆ ಮತ್ತು ಅದರ ವ್ಯಾಪ್ತಿಯಲ್ಲಿರುವ ಎಲ್ಲಾ ಮಂಡಳಿಗಳು ಮತ್ತು ನಿಗಮಗಳಡಿ ನೀಡಲಾದ ರೂ.50 ಲಕ್ಷ ಮತ್ತು ಅದಕ್ಕಿಂತ ಹೆಚ್ಚಿನ ಮೌಲ್ಯದ ಎಲ್ಲಾ ಟೆಂಡರ್‌ಗಳಿಗೆ ಮೂರು ತಿಂಗಳ ಅವಧಿಗೆ ಪ್ರಾಯೋಗಿಕ ಆಧಾರದ ( Pilot Basis) ಮೇಲೆ ಕರ್ನಾಟಕ ಸಾರ್ವಜನಿಕ ಸಂಗ್ರಹಣೆ ಪೋರ್ಟಲ್‌ನಲ್ಲಿ ಗುತ್ತಿಗೆ ನಿರ್ವಹಣಾ ಮಾಡ್ಯೂಲ್‌ನ್ನು ಹೆಚ್ಚಿನ ಪಾರದರ್ಶಕತೆ ತರುವ ನಿಟ್ಟಿನಲ್ಲಿ ಅನುಷ್ಠಾನಗೊಳಿಸಲಾಗುತ್ತಿದೆ.

ಅದರಂತೆ ಇ-ಪ್ರೊಕ್ಯೂರ್‌ಮೆಂಟ್‌ ವೇದಿಕೆಯಲ್ಲಿ ಒಟ್ಟು 40,000 ಟೆಂಡರ್ ಗಳು ಪ್ರಕಟಿಸಲಾಗಿದ್ದು ಈ ಪೈಕಿ ಆಯ್ಕೆಯಾದ 3 ಇಲಾಖೆಗಳ ರೂ 50 ಲಕ್ಷಕ್ಕಿಂತ ಹೆಚ್ಚು ಮೌಲ್ಯದ ಕೇವಲ 3165 ಟೆಂಡರ್ ಗಳನ್ನು ಈ ಯೋಜನೆಗಾಗಿ ಗುರುತಿಸಲಾಗಿದೆ. ಸದರಿ ಇಲಾಖೆಗಳಿಂದ ಕಾಂಟ್ರಾಕ್ಟ್ ಮ್ಯಾನೇಜ್ಮೆಂಟ್ ಸಿಸ್ಟಮ್ ದಲ್ಲಿ ಕಡ್ಡಾಯವಾಗಿ ತಂತ್ರಾಂಶದ ಮೂಲಕ ಮಾಹಿತಿಯನ್ನು ಡ್ಯಾಶ್ ಬೋರ್ಡ್ ದಲ್ಲಿ ಅಳವಡಿಸಲಾಗುವುದು.

*ಡಿಐಎಸ್ ತಂತ್ರಾಂಶ*
ಮುಖ್ಯಮಂತ್ರಿಗಳು ಸೆಪ್ಟಂಬರ್ 12 & 13 ರಂದು ನಡೆದ ‘ಜಿಲ್ಲಾಧಿಕಾರಿ ಮತ್ತು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳ ಸಮ್ಮೇಳನ’ದಲ್ಲಿ ಜಿಲ್ಲೆಗಳಿಗೆ ಸಂಬಂಧಪಟ್ಟಂತೆ, 28 ವಿಷಯಗಳ ಬಗ್ಗೆ ಪರಿಶೀಲನೆ ನಡೆಸಿ ಪ್ರತಿ ತಿಂಗಳೂ ವರದಿಯನ್ನು ಸಲ್ಲಿಸಲು ಎಲ್ಲಾ ‘ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ’ಗಳಿಗೆ ಸೂಚಿಸಿರುತ್ತಾರೆ. ಹಾಗೂ ಅಭಿವೃದ್ಧಿ ಆಯುಕ್ತರಿಗೆ ಸದರಿ ವರದಿಗಳನ್ನು ವಿಶ್ಲೇಷಿಸಿ ಮಂಡಿಸುವಂತೆ ಸೂಚಿಸಲಾಗಿರುತ್ತದೆ.
ಅದರಂತೆ, ಕ್ರಮ ವಹಿಸಿ, ಇ-ಆಡಳಿತ ಇಲಾಖೆಯಿಂದ ‘ಡಿಐಎಸ್ ತಂತ್ರಾಂಶ’ವನ್ನು ಅಭಿವೃದ್ಧಿಪಡಿಸಲಾಗಿರುತ್ತದೆ.
https://districtincharge.karnataka.gov.in
(1) ಈ ತಂತ್ರಾಂಶದ ಮೂಲಕ ಎಲ್ಲಾ ಜಿಲ್ಲಾ ಉಸ್ತುವಾರಿ ಅಧಿಕಾರಿಗಳು ‘online’ ವರದಿಯನ್ನು ಸಲ್ಲಿಸಲು ಅನುವು ಮಾಡಿಕೊಡಲಾಗಿದೆ.
(2) ಈ ತಂತ್ರಾಂಶದ ಮೂಲಕ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ಇತರೆ ಇಲಾಖಾ ಕಾರ್ಯದರ್ಶಿಗಳಿಗೆ ಹಾಗೂ ಜಿಲ್ಲಾಧಿಕಾರಿ /ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಜಿಲ್ಲೆಯಲ್ಲಿರುವ ಸಮಸ್ಯೆ(issues)ಗಳ ಕುರಿತು ಮಾಹಿತಿ ದಾಖಲಿಸಬಹುದು.
(3) ಸದರಿ ಸಮಸ್ಯೆಗಳಿಗೆ (To Issues) ಇಲಾಖಾ ಕಾರ್ಯದರ್ಶಿ/ ಜಿಲ್ಲಾಧಿಕಾರಿ ಮತ್ತು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಈ ತಂತ್ರಾಂಶದ ಮೂಲಕವೇ ತೆಗೆದುಕೊಂಡ ಕ್ರಮದ ಕುರಿತು ವರದಿ ಸಲ್ಲಿಸಬಹುದಾಗಿರುತ್ತದೆ.
(4) ಸಲ್ಲಿಸಲಾಗಿರುವ ಜಿಲ್ಲಾ ವರದಿಗಳ ಕುರಿತ ಎಮ್ಐಎಸ್ ವರದಿಗಳನ್ನು ಮಾನ್ಯ ಮುಂತ್ರಿಗಳು ಈ ತಂತ್ರಾಂಶದಲ್ಲಿ ವೀಕ್ಷಿಸಬಹುದಾಗಿದೆ.
(5) ತಂತ್ರಾಂಶದ ಬಳಕೆ ಬಗ್ಗೆ ಎಲ್ಲಾ ಇಲಾಖಾ/ಜಿಲ್ಲಾ ಸಮಾಲೋಚಕರಿಗೆ ತರಬೇತಿಯನ್ನು ಸಹ ನೀಡಲಾಗಿದೆ.
(6) ತಂತ್ರಾಂಶದ ಲಿಂಕ್ ಅನ್ನು ಇ-ಕಛೇರಿ ಮುಖಪುಟದಲ್ಲಿ ನೀಡಲಾಗಿದ್ದು, ಅಲ್ಲಿಂದಲೇ ಬಳಕೆದಾರರು ತಂತ್ರಾಂಶ ಪ್ರವೇಶಿಸಬಹುದಾಗಿದೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ