Press ID & Credential Portal
Apply / Verify  ➔
LIVE TV LocalCrimeNationalInternationalPoliticsEducationSportsHealthFeature
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Politics News

ಕಾನೂನು ಸುವ್ಯವಸ್ಥೆ, ರಾಜ್ಯದ ಅಭಿವೃದ್ಧಿಗೆ ನೇರ ಸಂಬಂಧವಿದೆ-ರಾಜ್ಯದ ಖ್ಯಾತಿಯನ್ನು ಪೋಲೀಸರು ಹೆಚ್ಚಿಸಬೇಕು: ಸಿದ್ದರಾಮಯ್ಯ

ಬೆಂಗಳೂರು : ಕಾನೂನು ಸುವ್ಯವಸ್ಥೆ ಹಾಗೂ ರಾಜ್ಯದ ಅಭಿವೃದ್ಧಿಗೆ ನೇರ ಸಂಬಂಧವಿದೆ. ಆದ್ದರಿಂದ ಕಾನೂನು ಸುವ್ಯವಸ್ಥೆ ಕಾಪಾಡಲೇಬೇಕು. ಕರ್ನಾಟಕ ಪೋಲೀಸರ ಬಗ್ಗೆ ದೇಶದಲ್ಲಿ ಒಳ್ಳೆ ಹೆಸರಿದೆ. ಈ ಹೆಸರಿಗೆ ಕಳಂಕ ತರುವ ಕೆಲಸ ಯಾರೂ ಮಾಡಬಾರದು. ಹೆಸರನ್ನು ಎತ್ತರಕ್ಕೇರಿಸುವ ಕೆಲಸ ಮಾಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಸಮ್ಮೇಳನ ಹಾಗೂ ಇಲಾಖೆ ಪರಿಶೀಲನಾ ಸಭೆಯ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.

ಕಾನೂನು ಸುವ್ಯವಸ್ಥೆ ಉತ್ತಮವಾಗಿದ್ದರೆ ಹೆಚ್ಚು ಬಂಡವಾಳ ಹೂಡಿಕೆಯಾಗುತ್ತದೆ. ಬಂಡವಾಳ ಹೂಡಿಕೆಯಾದರೆ ಉದ್ಯೋಗ ಸೃಜನೆಯಾಗಿ ತಲಾ ಆದಾಯ ಹೆಚ್ಚಾಗುತ್ತದೆ ಎಂದರು.

*ಕರ್ತವ್ಯ ಲೋಪವಾದರೆ ಸಹಿಸುವುದಿಲ್ಲ*
ಸಾರ್ವಜನಿಕರ ಅಭಿಪ್ರಾಯ ರೂಪಿತವಾಗುವ ಬಗ್ಗೆ ಪೋಲೀಸರು ಗಮನ ಹರಿಸಬೇಕು.ಪೊಲೀಸ್ ವ್ಯವಸ್ಥೆಯಲ್ಲಿ ಜನರ ಆಸ್ತಿಪಾಸ್ತಿ ಪ್ರಾಣ, ಮಾನ ರಕ್ಷಣೆ, ಸುರಕ್ಷಿತ ವ್ಯವಸ್ಥೆ, ನಿರ್ಭಯವಾಗಿ ಬದುಕುವ ವ್ಯವಸ್ಥೆ ನಿರ್ಮಾಣ ಮಾಡುವುದು ನಮ್ಮ ಕರ್ತವ್ಯ. ಒಳ್ಳೆ ಕೆಲಸ ಮಾಡಿದರೆ ಸರ್ಕಾರ ಶ್ಲಾಘನೆ, ಕರ್ತವ್ಯ ಲೋಪವಾದರೆ ಸಹಿಸುವುದಿಲ್ಲ ಎಂದು ಸ್ಪಷ್ಟವಾಗಿ ಸೂಚಿಸಲಾಗಿದೆ ಎಂದರು.

*ಪೊಲೀಸ್ ಠಾಣೆಗೆ ಭೇಟಿ ನೀಡಲೇ ಬೇಕು*

ರಿಯಲ್ ಎಸ್ಟೇಟ್ ಮಾಡುವವರೊಂದಿಗೆ ಯಾವ ಕಾರಣಕ್ಕೂ ಶಾಮೀಲಾಗಬಾರದು. ಇವರೇ ಸ್ವತ: ರಿಯಲ್ ಎಸ್ಟೇಟ್ ಮಾಡುವುದು ತಿಳಿದರೆ ಕಠಿಣ ಕ್ರಮ ಜರುಗಿಸಲಾಗುವುದು. ಎಸ್. ಪಿ, ಡಿಸಿಪಿ, ಐಜಿ, ಪೊಲೀಸ್ ಆಯುಕ್ತರು ಪ್ರತಿ ದಿನ ಒಂದು ಪೊಲೀಸ್ ಠಾಣೆಗೆ ಭೇಟಿ ನೀಡಲೇ ಬೇಕು. ಸ್ಥಳೀಯ ಜನರನ್ನು ಭೇಟಿ ಮಾಡಿ ಇಲ್ಲಿನ ಸಮಸ್ಯೆಗಳೇನು ಎಂದು ಅರಿಯಬೇಕು. ಸ್ಥಳೀಯ ಪೊಲೀಸ್ ಠಾಣೆಗೆ ತಿಳಿಯದೆ ಯಾವ ಅಪರಾಧಗಳು ನಡೆಯಲು ಸಾಧ್ಯವಿಲ್ಲ.ಮಾದಕ ವಸ್ತು, ಕಳ್ಳತನ, ದರೋಡೆ, ಜೂಜು, ಮಟ್ಕಾ ಮುಂತಾದವು ಗೊತ್ತಿಲ್ಲದೆ ನಡೆಯಲು ಸಾಧ್ಯವಿಲ್ಲ. ಕೆಲವೆಡೆ ಪೋಲಿಸಿನವರು ಇಂಥವರ ಜೊತೆ ಶಾಮೀಲಾಗುತ್ತಾರೆ. ಅವರು ಮನಸ್ಸು ಮಾಡಿದರೆ ಬಹುತೇಕ ಅಪರಾಧಗಳನ್ನು ತಡೆಯಲು ಸಾಧ್ಯ. ಇವರೆಲ್ಲರೂ ಜಾಗೃತರಾಗಲು ಪೊಲೀಸ್ ಅಧಿಕಾರಿಗಳು ಮೇಲಿಂದ ಮೇಲೆ ಭೇಟಿ ನೀಡಬೇಕು. ಕನಿಷ್ಠ ಒಂದು ತಿಂಗಳಲ್ಲಿ ಮೂರು ಠಾಣೆಗಳಿಗೆ ಭೇಟಿ ನೀಡಿ ಜನಸಂಪರ್ಕ ಮಾಡಿದರೆ ವಿಷಯ ತಿಳಿಯುತ್ತದೆ ಇದನ್ನು ಕಟ್ಟುನಿಟ್ಟಾಗಿ ಮಾಡಲು ಸೂಚಿಸಲಾಗಿದೆ ಎಂದರು.

*ಪೊಲೀಸರಿಗೆ ದೂರದೃಷ್ಟಿಯಿರಬೇಕು*
ಪೊಲೀಸರ ಮಧ್ಯೆ ಸಮನ್ವಯದ ಕೊರತೆಯಿದೆ. ಪೊಲೀಸರಿಗೆ ದೂರದೃಷ್ಟಿ ಇರಬೇಕು. ಒಂದು ಮಾಹಿತಿ ಬಂದರೆ ಅದರ ಬಗ್ಗೆ ಫಾಲೋ ಆಫ್ ಕ್ರಮ ವಹಿಸಬೇಕು. ಹುಬ್ಬಳ್ಳಿಯಲ್ಲಿ ನೇಹಾ ಕೊಲೆಯ ನಂತರ ಆದ ಮತ್ತೊಂದು ಕೊಲೆ ಪ್ರಕರಣದಲ್ಲಿ ಆರೋಪಿ ಬೆದರಿಕೆ ಹಾಕಿರುವ ಬಗ್ಗೆ ಪೊಲೀಸ್ ಠಾಣೆಯಲ್ಲಿ ಸೂರು ನೀಡಿದಾಗಲೇ ಕ್ರಮಕೈಗೊಂಡಿದ್ದಾರೆ ಕೊಲೆ ತಡೆಯಲು ಸಾಧ್ಯವಾಗುತ್ತಿತ್ತು ಎಂದು ಉದಾಹರಣೆಗಳನ್ನು ನೀಡಿ ಸೂಚನೆ ನೀಡಲಾಗಿದೆ ಎಂದರು.

ಪೊಲೀಸರಲ್ಲಿ ಶಿಸ್ತು ಇರಲೇಬೇಕು. ಎಲ್ಲಾ ಪೋಲೀಸರು ಶಿಸ್ತು ಕಾಪಾಡಿಕೊಂಡು ಒಗ್ಗಟ್ಟಿನಿಂದ ಕೆಲಸ ಮಾಡಬೇಕು ಎಂದು ಸೂಚನೆ ನೀಡಿರುವುದಾಗಿ ತಿಳಿಸಿದರು.

 

*ಹೊಸರೂಪ ಅಪರಾಧ ತಡೆಗೆ ಹೆಚ್ಚಿನ ತರಬೇತಿ*

ಸಮಾಜದಲ್ಲಿ ಬೆಳವಣಿಗೆಯಾದಂತೆ ಹೊಸ ರೂಪದ ಅಪರಾಧಗಳು ಸೃಷ್ಟಿಯಾಗುತ್ತವೆ. ಅವುಗಳನ್ನು ತಡೆಯಲು ತಂತ್ರಜ್ಞಾನ ಸೇರಿದಂತೆ ಹೆಚ್ಚಿನ ತರಬೇತಿ ನೀಡಲು ಸೂಚಿಸಲಾಗಿದೆ.

*ಮಾದಕವಸ್ತುಗಳ ದಂಧೆ ನಿಯಂತ್ರಣಕ್ಕೆ ಕ್ರಮ*
ಮಾದಕವಸ್ತುಗಳ ದಂಧೆ ಮೈಸೂರು, ಬೆಂಗಳೂರು, ಮಂಗಳೂರು, ಹುಬ್ಬಳ್ಳಿ ಧಾರವಾಡ ಬೆಳಗಾವಿ ಮುಂತಾದೆಡೆ ಹೆಚ್ಚಾ ಗುತ್ತಿದೆ. ಮಕ್ಕಳಲ್ಲಿ ಈ ಬಗ್ಗೆ ಜಾಗೃತಿ ಮೂಡಿಸಬೇಕು. ಈ ವ್ಯವಹಾರದಲ್ಲಿ ಭಾಗಿಯಾಗಿರುವವರ ಮೇಲೆ ಕಠಿಣ ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ ಎಂದರು.

*ಜನಸಂದಣಿ / ನಿರ್ಜನ ಪ್ರದೇಶದಲ್ಲಿ ಪೋಲೀಸರು ಸಮವಸ್ತ್ರದಲ್ಲಿರಬೇಕು*
ಇ - ಬೀಟ್ ಎಂದರೇನು ಎಂದು ಬಹಳ ಪೊಲೀಸರಿಗೆ ತಿಳಿದಿಲ್ಲ. ಜನಸಂದಣಿ ಇರುವಲ್ಲಿ ಹಾಗೂ ನಿರ್ಜನ ಪ್ರದೇಶದಲ್ಲಿ ಇ - ಬೀಟ್ ಹೆಚ್ಚು ಮಾಡಲಾಗುವುದು. ಪೊಲೀಸರ ಹಾಜರಿ ಸಮವಸ್ತ್ರದಲ್ಲಿರಬೇಕು. ಆಗ ಜನರಲ್ಲಿ ಭಯ ಮೂಡುತ್ತದೆ. ಇದರಿಂದ ಅಪರಾಧಗಳನ್ನು ನಿಲ್ಲಿಸಲು ಸಾಧ್ಯವಾಗುತ್ತದೆ ಎಂದರು.

*ಪೊಲೀಸರು ಕಾನೂನು ವ್ಯವಸ್ಥೆಯನ್ನು ಸುಧಾರಿಸಬೇಕು*

ಗೃಹ ಸಚಿವರು ಹಾಗೂ ಮುಖ್ಯಮಂತ್ರಿಗಳಿಗೆ ಜೀರೋ ಟ್ರಾಫಿಲ್ ವ್ಯವಸ್ಥೆ ಮಾಡಬಾರದು ಎಂದು ಸೂಚಿಸಲಾಗಿದೆ. ಕಾನ್ಸ್ ಟೇಬಲ್ ಗಳ ಜೊತೆಗೆ ಉನ್ನತ ಅಧಿಕಾರಿಗಳು ಕೂಡ ಸಂಚಾರ ನಿಯಂತ್ರಣ ಮಾಡಲು ಸೂಚಿಸಲಾಗಿದೆ ಎಂದರು. ಪೊಲೀಸರು ಕಾನೂನು ವ್ಯವಸ್ಥೆಯನ್ನು ಸುಧಾರಿಸಬೇಕು ಎಂಬುದು ನಮ್ಮ ಉದ್ದೇಶ , ಇದಕ್ಕೆ ಪೋಲಿಸರು ಸಹಕರಿಸುತ್ತಾರೆ ಎಂಬ ನಂಬಿಕೆ, ವಿಶ್ವಾಸ ಇದೆ. ಪೋಲೀಸರು ಮನಸ್ಸು ಮಾಡಿದರೆ ಅಪರಾಧಗಳನ್ನು ತಡೆಗಟ್ಟುವುದು ಅಸಾಧ್ಯವೇನಲ್ಲ. ಇಂಟೆಲಿಜೆನ್ಸ್ ಬಲಬಡಿಸಲೂ ಕೂಡ ಎಲ್ಲಾ ಪ್ರಯತ್ನ ಮಾಡಲಾಗುವುದು ಎಂದರು.

*ಕರ್ತವ್ಯ ಲೋಪವಾದರೆ ಮುಲಾಜಿಲ್ಲದೆ ಕ್ರಮ*
ನಮ್ಮ ಎಲ್ಲಾ ಕಾರ್ಯಗಳೂ ಕೂಡ ಪಾರದರ್ಶಕವಾಗಿರಬೇಕು ಎಂದು ಸೂಚಿಸಲಾಗಿದೆ. ಉದ್ದೇಶಪೂರ್ವಕವಾಗಿ ಕರ್ತವ್ಯಲೋಪ ಮಾಡಿದರೆ ಮುಲಾಜಿಲ್ಲದೆ ಕ್ರಮ ವಹಿಸಲಾಗುವುದು ಎಂದರು.

*ಬಿ.ಎನ್.ಎಸ್ : ತರಬೇತಿ ನೀಡಲಾಗಿದೆ*

ಹೊಸ ಕಾನೂನಿಗೆ ಸಂಬಂಧಿಸಿದಂತೆ 23 ಅಂಶಗಳಿಗೆ ತಿದ್ದುಪಡಿ ತಂದಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ಈಗಾಗಲೇ ತರಬೇತಿ ನೀಡಲಾಗಿದೆ ಹಾಗೂ ಕೈಪಿಡಿಯನ್ನು ಪ್ರಕಟಿಸಲಾಗಿದೆ. ಹೊಸ ಕಾಯ್ದೆಯಲ್ಲಿ ಸಿ.ಆರ್.ಪಿ.ಸಿಯಲ್ಲಿ ಬದಲಾವಣೆಯಾಗಿದೆ ಎಂದರು. ಎವಿಡಿಯನ್ಸ್, ಸಿ.ಆರ್.ಪಿ.ಸಿ ಕೇಂದ್ರ ಸರ್ಕಾರದ ಕಾಯ್ದೆಯಾಗಿದ್ದು 1860 ನಲ್ಲಿ ರೂಪಿಸಲಾಗಿದೆ ಎಂದರು.

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಅನ್ನಪೂರ್ಣೇಶ್ವರಿ ಪೊಲೀಸ್ ಠಾಣೆಗೆ ಶಾಮಿಯಾನ ಹಾಗೂ 144 ಸೆಕ್ಷನ್ ಹಾಕಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ಗಲಾಟೆ ಹಾಕಬುಹುದೆಂಬ ಉದ್ದೇಶದಿಂದ ಹಾಕಲಾಗಿದೆ ಎಂದರು.

*ಸಿಬಿಐ, ಸಿಐಡಿ ಕೂಡ ತನಿಖಾ ಸಂಸ್ಥೆಗಳೇ*

ವಿರೋಧಪಕ್ಷದವರು ಪ್ರಕರಣಗಳನ್ನು ಸಿಬಿಐ ಗೆ ವಹಿಸಲು ಒತ್ತಾಯಿಸುತ್ತಾರೆ. ಆದರೆ ಅಲ್ಲಿರುವವರೂ ನಮ್ಮ ಪೊಲೀಸರೇ. ಸಿಬಿಐ, ಸಿಐಡಿ ಕೂಡ ತನಿಖಾ ಸಂಸ್ಥೆಗಳೇ ಎಂದರು. ಅವರು ಅಧಿಕಾರದಲ್ಲಿದ್ದಾಗ ಚೋರ್ ಬಚಾವೋ ಸಂಸ್ಥೆ ಎನ್ನುತ್ತಿದ್ದರು. ಕೇಂದ್ರ ಸರ್ಕಾರ ಬೇರೆ ಬೇರೆ ರಾಜ್ಯಗಳಲ್ಲಿನ ಅಪರಾಧಗಳನ್ನು ತನಿಖೆ ಮಾಡಲು ಸ್ಥಾಪಿಸಿರುವ ಸಂಸ್ಥೆ ಸಿಬಿಐ. ರಾಜ್ಯ ಪೋಲೀಸರು ಕೂಡ ತನಿಖೆ ಮಾಡಲು ಸಮರ್ಥರಿದ್ದಾರೆ ಎಂದರು.

Author
Jana Jeevala News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
RCU ದಲ್ಲಿ ಲಕ್ಷಾಂತರ ರೂ  ಗೋಲ್ಮಾಲ್, ಮೂವರು ಜೈಲುಪಾಲು.ಚೌತಿ ರಾತ್ರಿ ಅವಘಡ:  ಚವಾಟಗಲ್ಲಿಯಲ್ಲಿ ನಾಲ್ವರು ಸಜೀವ ದಹನದ್ವಿಚಕ್ರ ವಾಹನ-ಸಾರಿಗೆ ಬಸ್ ಅಪಘಾತ: ಮೂವರು ಸ್ಥಳದಲ್ಲೇ ಸಾವುಬೆಂಗಳೂರು-ಬೆಳಗಾವಿ ನಡುವೆ ಎರಡು ವಿಶೇಷ ರೈಲುಗಳ ಸಂಚಾರಕ್ಕೆ ವ್ಯವಸ್ಥೆ ಮಾಡಿದೆ.ಪಾರ್ಕಿಂಗ್‌ ಮಾಡಿದ್ದ ಕಾರಿನ ಬಾನೆಟ್‌ನಲ್ಲಿ ಅಡಗಿತ್ತು ಬೃಹತ್‌ ಹೆಬ್ಬಾವು ; ಬೆಚ್ಚಿಬಿದ್ದ ನಿವಾಸಿಗಳು  ಥ್ರೋ ಬಾಲ್ ಪಂದ್ಯಾವಳಿಯಲ್ಲಿ ಗೆಲುವು ಸಾಧಿಸಿದ ಬೆಳಗಾವಿ ಜಿಎ ಪ್ರೌಢಶಾಲೆಯ ಬಾಲೆಯರುಜಿಲ್ಲಾ ಮಟ್ಟದ ಶಿಕ್ಷಕ ಪ್ರಶಸ್ತಿ ಪ್ರಕಟ ಡಾ. ಪ್ರಭಾಕರ ಕೋರೆ ಅವರಿಗೆ ಪದ್ಮಶ್ರೀ ಪ್ರಶಸ್ತಿ: ಲಿಂಗಾಯತ ಸಮಾಜದ ವತಿಯಿಂದ ಭವ್ಯ ಸನ್ಮಾನಜಿಲ್ಲೆಯ ಉತ್ತಮ ಶಿಕ್ಷಕರಿಗೆ ರಾಜ್ಯ ಮಟ್ಟದ ಶಿಕ್ಷಕ ಪ್ರಶಸ್ತಿಬೈಕ್ ಕಳ್ಳನನ್ನು ಬಂಧಿಸಿದ ಪೊಲೀಸರು