Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಕರ್ನಾಟಕ ಕಾಂಗ್ರೆಸ್‌ನಲ್ಲಿ ನಾಯಕತ್ವ ಬದಲಾವಣೆ ಚರ್ಚೆ ಮತ್ತೆ ಮುನ್ನೆಲೆಗೆ : ಸಿಎಂ ಸ್ಥಾನದಿಂದ ಕೆಳಗಿಳಿಯಲಿದ್ದಾರಾ ಸಿದ್ದರಾಮಯ್ಯ ?

Advertisement

ಬೆಂಗಳೂರು: ಮಂಗಳವಾರ ದೆಹಲಿಯಲ್ಲಿ ಕಾಂಗ್ರೆಸ್ ಹೈಕಮಾಂಡ್, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ನಡುವೆ ನಡೆದ ಸುದೀರ್ಘ ಸಭೆಗಳ ನಂತರ ಕರ್ನಾಟಕದಲ್ಲಿ ಸಂಭಾವ್ಯ ನಾಯಕತ್ವ ಬದಲಾವಣೆಯ ಬಗ್ಗೆ ಊಹಾಪೋಹಗಳು ಮತ್ತೊಮ್ಮೆ ತೀವ್ರಗೊಂಡಿದೆ. ಕಾಂಗ್ರೆಸ್ ಪಕ್ಷ ಈ ವರದಿಗಳನ್ನು “ಕೇವಲ ವದಂತಿಗಳು” ಎಂದು ಹೇಳಿದೆ. ಹಾಗೂ ನಾಯಕತ್ವದ ವಿಚಾರದ ಬಗ್ಗೆ ಯಾವುದೇ ಚರ್ಚೆ ನಡೆದಿಲ್ಲ ಎಂದು ಹೇಳಿದೆ.

ಆದಾಗ್ಯೂ, ಸಿದ್ದರಾಮಯ್ಯ ಅವರಿಗೆ ಮುಖ್ಯಮಂತ್ರಿ ಹುದ್ದೆಯಿಂದ ಕೆಳಗಿಳಿಯುವಂತೆ ಪಕ್ಷದ ನಾಯಕತ್ವ ಸೂಚಿಸಿದೆ ಎಂದು ನಂಬಲರ್ಹ ಮೂಲಗಳನ್ನು ಉಲ್ಲೇಖಿಸಿ ಅನೇಕ ರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ.
ಡಿ.ಕೆ. ಶಿವಕುಮಾರ ಅವರನ್ನು ಮುಖ್ಯಮಂತ್ರಿ ಗಾದಿಗೆ ಏರಿಸಬೇಕು ಎಂದು ಕೆಲ ಶಾಸಕರ ಗುಂಪು ಆಗ್ರಹಿಸುತ್ತಿರುವ ನಡುವೆ, ರಾಜ್ಯ ಸರ್ಕಾರದಲ್ಲಿ  ನಾಯಕತ್ವ ಬದಲಾವಣೆಯ ಬೆಳವಣಿಗೆಗಳಿಗೆ ಈಗ ಮತ್ತೊಂದು ಪ್ರಮುಖ ತಿರುವು ಸಿಕ್ಕಂತಾಗಿದೆ. ಗುರುವಾರದೊಳಗೆ ಮುಖ್ಯಮಂತ್ರಿ ಬದಲಾವಣೆ ಆಗುತ್ತದೆಯೋ ಇಲ್ಲವೋ ಎಂಬ ಬಗ್ಗೆ  ಸ್ಪಷ್ಟತೆ ಸಿಗುವ ಸಾಧ್ಯತೆಯಿದೆ ಎಂದು ವರದಿಗಳು ಹೇಳಿವೆ.
ಮಂಗಳವಾರ ದೆಹಲಿಯಲ್ಲಿ ಸುದೀರ್ಘವಾಗಿ ನಡೆದ ಸಭೆಯಲ್ಲಿ ಕಾಂಗ್ರೆಸ್ ಹೈಕಮಾಂಡ್, ಈ ವಿಷಯದ ಕುರಿತು ಗಂಭೀರವಾಗಿ ಆಲೋಚಿಸಿ ತಮ್ಮ ಅಂತಿಮ ನಿರ್ಧಾರವನ್ನು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ ಅವರಿಗೆ ತಿಳಿಸುವಂತೆ ಸಿದ್ದರಾಮಯ್ಯ ಅವರಿಗೆ ಸೂಚಿಸಿದೆ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಇನ್ನು ಕೆಲವೇ ದಿನಗಳಲ್ಲಿ ಸಿದ್ದರಾಮಯ್ಯ ತಮ್ಮ ರಾಜೀನಾಮೆ ನೀಡುವ ಸಾಧ್ಯತೆಯಿದೆ ಎಂದು ಮೂಲಗಳನ್ನು ಉಲ್ಲೇಖಿಸಿದ ವರದಿ ಹೇಳಿದೆ.
ರಾಜ್ಯಸಭೆಗೆ ಹೋಗಲು ಸಿದ್ದರಾಮಯ್ಯ ನಿರಾಸಕ್ತಿ..?
ಇದಕ್ಕೂ ಮುನ್ನ, ಸಿದ್ದರಾಮಯ್ಯ ಅವರು ರಾಜ್ಯಸಭಾ ಚುನಾವಣೆಗೆ ಸ್ಪರ್ಧಿಸುವಂತೆ ರಾಹುಲ್ ಗಾಂಧಿ ಅವರು ಸಲಹೆ ನೀಡಿದ್ದರು ಎಂದು ಮೂಲಗಳು ತಿಳಿಸಿವೆ. ಆದರೆ, ತಮಗೆ ರಾಷ್ಟ್ರೀಯ ರಾಜಕಾರಣಕ್ಕೆ ಪ್ರವೇಶಿಸುವ ಯಾವುದೇ ಹಂಬಲವಿಲ್ಲ ಎಂದು ಸ್ಪಷ್ಟಪಡಿಸಿರುವ ಕರ್ನಾಟಕ ಸಿದ್ದರಾಮಯ್ಯ, ಈ ಪ್ರಸ್ತಾವನೆಯ ಬಗ್ಗೆ ಯೋಚಿಸಲು ಕಾಲಾವಕಾಶ ಕೇಳಿದ್ದಾರೆ ಎನ್ನಲಾಗಿದೆ. ಜೂನ್ 8 ರಂದು ರಾಜ್ಯಸಭಾ ಚುನಾವಣೆ ನಿಗದಿಯಾಗಿರುವುದರಿಂದ, ಅದಕ್ಕೂ ಮುನ್ನವೇ ಅವರ ರಾಜೀನಾಮೆ ಪ್ರಕ್ರಿಯೆ ನಡೆಯಬಹುದು ಎಂದು ಅಂದಾಜಿಸಲಾಗಿದೆ.
ದೆಹಲಿಯಲ್ಲಿ ಸುದೀರ್ಘ ಆರು ಗಂಟೆಗಳ ಕಾಲ ನಡೆದ ಮ್ಯಾರಥಾನ್ ಸಭೆಯ ನಂತರ ಪ್ರತಿಕ್ರಿಯಿಸಿದ್ದ ಕಾಂಗ್ರೆಸ್, ಈ ಸಭೆಯು ಕೇವಲ ಕರ್ನಾಟಕದ ರಾಜ್ಯಸಭಾ ಸ್ಥಾನಗಳ ಕುರಿತಷ್ಟೇ ಆಗಿತ್ತು ಎಂದು ಹೇಳಿದೆ. ಹಾಗೂ ಈ ಕುರಿತು ವದಂತಿಗಳನ್ನು ಹಬ್ಬಿಸದಂತೆ ಎಚ್ಚರಿಕೆ ನೀಡಿದೆ. ಆದರೆ, ರಾಜ್ಯ ಸರ್ಕಾರದ ಪ್ರಮುಖ ಬದಲಾವಣೆಗಳ ಕುರಿತು ದೆಹಲಿ ಹೈಕಮಾಂಡ್‌ವಲಯದಿಂದ ನಿರಂತರವಾಗಿ ಮಾಹಿತಿ ಹೊರಬರುತ್ತಲೇ ಇದೆ.
ಮತ್ತೊಂದೆಡೆ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಅವರು ಮುಖ್ಯಮಂತ್ರಿ ಪಟ್ಟ ಅಲಂಕರಿಸುತ್ತಾರೆಯೇ ಇಲ್ಲವೇ ಎಂಬ ಬಗ್ಗೆ ಸಸ್ಪೆನ್ಸ್ ಮುಂದುವರಿದಿದೆ. ಅವರ ಮುಂದಿನ ಪಾತ್ರ ಮತ್ತು ರಾಜ್ಯ ಸರ್ಕಾರದ ನಾಯಕತ್ವ ಬದಲಾವಣೆಯ ಬಗ್ಗೆ ಹೈಕಮಾಂಡ್ ಸದ್ಯಕ್ಕೆ ತುಟಿ ಬಿಚ್ಚಿಲ್ಲ.
ಕರ್ನಾಟಕದಲ್ಲಿ ನಾಯಕತ್ವದ ಬಿಕ್ಕಟ್ಟು ಕಳೆದ ಒಂದು ವರ್ಷಕ್ಕೂ ಹೆಚ್ಚು ಕಾಲದಿಂದ ನಡೆಯುತ್ತಿದೆ. 2023ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗ, ಹೈಕಮಾಂಡ್ ‘ಅಧಿಕಾರ ಹಂಚಿಕೆ’ (ರೊಟೇಷನಲ್ ಸಿಎಂ) ಸೂತ್ರದ ಭರವಸೆ ನೀಡಿತ್ತು ಎಂದು ಡಿ.ಕೆ. ಶಿವಕುಮಾರ ಬೆಂಬಲಿಗರು ಸತತವಾಗಿ ಪ್ರತಿಪಾದಿಸುತ್ತಲೇ ಬಂದಿದ್ದಾರೆ. ಕರ್ನಾಟಕ ಕಾಂಗ್ರೆಸ್‌ನ ಅತ್ಯಂತ ಪ್ರಭಾವಿ ನಾಯಕರಲ್ಲಿ ಒಬ್ಬರಾದ ಡಿ.ಕೆ. ಶಿವಕುಮಾರ ಅವರು ಮುಖ್ಯಮಂತ್ರಿ  ಹುದ್ದೆಯ ಪ್ರಬಲ ಆಕಾಂಕ್ಷಿಯಾಗಿದ್ದರು. ಎರಡೂವರೆ ವರ್ಷಗಳ ನಂತರ ತಮಗೆ ಮುಖ್ಯಮಂತ್ರಿ ಹುದ್ದೆ ನೀಡಲಾಗುವುದು ಎಂಬ ಭರವಸೆಯ ಮೇರೆಗಷ್ಟೇ ಅವರು ಸಿದ್ದರಾಮಯ್ಯ ಸಂಪುಟದಲ್ಲಿ ಉಪಮುಖ್ಯಮಂತ್ರಿಯಾಗಲು ಒಪ್ಪಿಕೊಂಡಿದ್ದರು ಎಂದು ಅವರ ಆಪ್ತ ವಲಯದ ವಾದವಾಗಿದೆ.
ಸಭೆಯಲ್ಲಿ ನಡೆದಿದ್ದೇನು?
ದೆಹಲಿಯಲ್ಲಿ ನಡೆದ ಈ ಉನ್ನತ ಮಟ್ಟದ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ, ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ, ಕೆ.ಸಿ. ವೇಣುಗೋಪಾಲ ಮತ್ತು ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಭಾಗವಹಿಸಿದ್ದರು.
ಹಲವಾರು ಮಾಧ್ಯಮ ವರದಿಗಳ ಪ್ರಕಾರ, ಸಭೆಯ ಅವಧಿಯಲ್ಲಿ ಸಿದ್ದರಾಮಯ್ಯ ಅವರು ಹಿರಿಯ ನಾಯಕರಾದ ಮಲ್ಲಿಕಾರ್ಜುನ ಖರ್ಗೆ, ಕೆ.ಸಿ. ವೇಣುಗೋಪಾಲ ಮತ್ತು ರಣದೀಪ ಸುರ್ಜೇವಾಲಾ ಅವರ ಸಮ್ಮುಖದಲ್ಲಿ, “ಕರ್ನಾಟಕದಲ್ಲಿ ಇಂತಹ ಯಾವುದೇ ‘ಎರಡೂವರೆ ವರ್ಷಗಳ ಅಧಿಕಾರ ಹಂಚಿಕೆ ಸೂತ್ರ’ದ ಬಗ್ಗೆ ನನಗೆ ಮಾಹಿತಿ ಇರಲಿಲ್ಲ” ಎಂದು ಹೇಳಿದ್ದಾರೆ ಎನ್ನಲಾಗಿದೆ. ಆದಾಗ್ಯೂ, ರಾಹುಲ್ ಗಾಂಧಿ ಅವರು ತಮಗೆ ಸೂಚಿಸಿದರೆ ತಾವು ಹುದ್ದೆಯಿಂದ ಕೆಳಗಿಳಿಯಲು ಸಿದ್ಧ ಎಂದು ಅವರು ತಿಳಿಸಿದ್ದಾರೆ ಎನ್ನಲಾಗಿದೆ.
ಅಂತಿಮ ನಿರ್ಧಾರ ತೆಗೆದುಕೊಳ್ಳುವ ಮೊದಲು ಸಿದ್ದರಾಮಯ್ಯ ಅವರು ಹೆಚ್ಚಿನ ಸಮಯವನ್ನು ಕೋರಿದ್ದರು ಮತ್ತು ದೆಹಲಿಯಿಂದ ಹಿಂದಿರುಗಿದ ನಂತರ ಆಪ್ತ ಸಚಿವರು ಮತ್ತು ವಿಶ್ವಾಸಾರ್ಹ ಸಹಾಯಕರೊಂದಿಗೆ ಸಮಾಲೋಚನೆ ನಡೆಸಿದ್ದಾರೆ ಎಂದು ಹೇಳಲಾಗಿದೆ. ಸಿದ್ದರಾಮಯ್ಯ ಅವರಿಗೆ ರಾಜೀನಾಮೆ ನೀಡದಂತೆ ಆಪ್ತರು ಒತ್ತಾಯ ಮಾಡಿದ್ದಾರೆ ಎಂಬ ಎನ್ನಲಾಗಿದೆ. ಇದಕ್ಕೆ ಸಿದ್ದರಾಮಯ್ಯ ರಾಹುಲ್‌ ಗಾಂಧಿ ಸೂಚನೆ ನೀಡಿದರೆ ಪಾಲಿಸಬೇಕಾಗುತ್ತದೆ ಎಂದಿದ್ದಾರೆ ಎನ್ನಲಾಗಿದೆ.

ಇತ್ತೀಚಿನ ವರದಿಯ ಪ್ರಕಾರ,  ಹೈಕಮಾಂಡ್ ನಾಯಕರಾದ ಕೆಸಿ ವೇಣುಗೋಪಾಲ ಹಾಗೂ ಸುರ್ಜೆವಾಲ ಬುಧವಾರ ಅಥವಾ ಗುರುವಾರ ಬೆಂಗಳೂರಿಗೆ ಭೇಟಿ ನೀಡುವ ಸಾಧ್ಯತೆಯಿದೆ. ಅದರ ನಂತರ ಈ ವಾರದಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಸ್ಥಾನದಿಂದ ಕೆಳಗಿಳಿಯಬಹುದು ಎನ್ನಲಾಗಿದೆ.
ಕಾಂಗ್ರೆಸ್ ನಿರಾಕರಣೆ
ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗಳು ನಡೆಯುತ್ತಿರುವ ಬೆನ್ನಲ್ಲೇ, ನಾಯಕತ್ವ ಬದಲಾವಣೆಯ ಕುರಿತು ಯಾವುದೇ ಚರ್ಚೆ ನಡೆದಿಲ್ಲ ಎಂದು ಕಾಂಗ್ರೆಸ್ ಅಧಿಕೃತವಾಗಿ ನಿರಾಕರಿಸಿದೆ. ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಕೆ.ಸಿ. ವೇಣುಗೋಪಾಲ, ಮುಂಬರುವ ರಾಜ್ಯಸಭಾ ಚುನಾವಣೆ ಮತ್ತು ಕರ್ನಾಟಕ ವಿಧಾನ ಪರಿಷತ್ ಚುನಾವಣೆಗಳ ಕಾರ್ಯತಂತ್ರ ಹಾಗೂ ಅಭ್ಯರ್ಥಿಗಳ ಆಯ್ಕೆಯ ಬಗ್ಗೆ ಮಾತ್ರ ಸಭೆಯಲ್ಲಿ ಚರ್ಚಿಸಲಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ. ಕರ್ನಾಟಕದಲ್ಲಿ ನಾಯಕತ್ವ ಬದಲಾವಣೆಯ ವದಂತಿಗಳಲ್ಲಿ ಯಾವುದೇ ಸತ್ಯಾಂಶವಿಲ್ಲ ಎಂದು ಅವರು ಹೇಳಿದ್ದಾರೆ.

Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಯರಿದ್ದಾರೆ...ಏನಿದರ ಅರ್ಥ ?ವಿದ್ಯಾರ್ಥಿನಿಗೆ ಕಿರುಕುಳ: ಕವಿವಿ ಪ್ರಾಧ್ಯಾಪಕ ಡಾ. ದೇವರಾಜನ್ ತಂಗದುರೈ ಅಮಾನತುಇರಾನ್‌-ಅಮೆರಿಕ ಶಾಂತಿ ಒಪ್ಪಂದಕ್ಕೆ ಪೆಜೆಶ್ಕಿಯಾನ್-ಟ್ರಂಪ್ ಸಹಿ ; ತಕ್ಷಣದಿಂದ ಹಾರ್ಮುಜ್ ಜಲಸಂಧಿ ಓಪನ್‌ ; 14 ಅಂಶಗಳ ಒಪ್ಪಂದದಲ್ಲಿ ಏನಿದೆ?ಜಿಂಕೆಯನ್ನೇ ನುಂಗಿದ ಹೆಬ್ಬಾವು !ಪುಸ್ತಕ ಅವಲೋಕನ ಕಾರ್ಯಕ್ರಮಬೆಳಗಾವಿ : ಜಿ.ಎ.ಪ್ರೌಢಶಾಲೆಯ ನೂತನ ಪ್ರಧಾನಿ, ಉಪ ಪ್ರಧಾನಿ ಆಯ್ಕೆ..! ಶತಮಾನದ ಇತಿಹಾಸ ಹೊಂದಿದೆ ಈ ಪ್ರತಿಷ್ಠಿತ ಶಾಲೆಬೆಳಗಾವಿ : ಜಿ.ಎ.ಪ್ರೌಢಶಾಲೆಯ ನೂತನ ಪ್ರಧಾನಿ, ಉಪ ಪ್ರಧಾನಿ ಆಯ್ಕೆ..!ಭಾರತದ ಆಕಾಶದಲ್ಲಿಲ್ಲ ಮಳೆ ತರುವ ಮೋಡಗಳು ; ಆತಂಕಕಾರಿ ವಾಸ್ತವ ಬಿಂಬಿಸಿದ 3 ಉಪಗ್ರಹಗಳ ಚಿತ್ರಗಳು ; ಇದಕ್ಕೆ ಕಾರಣಗಳೇನು?ಬೆಳಗಾವಿ : ಜಿ.ಎ.ಪ್ರೌಢಶಾಲೆಯ ನೂತನ ಪ್ರಧಾನಿ, ಉಪ ಪ್ರಧಾನಿ ಆಯ್ಕೆ..!ಬೆಳಗಾವಿ : ಜಿ.ಎ.ಪ್ರೌಢಶಾಲೆಯ ನೂತನ ಪ್ರಧಾನಿ, ಉಪ ಪ್ರಧಾನಿ ಆಯ್ಕೆ..!