Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಕರ್ನಾಟಕ ಏಳು ಕೋಟಿ ಜನರ ಉಸಿರಾಗಲಿ: ಸಿಎಂ ಸಿದ್ದರಾಮಯ್ಯ

ಮೈಸೂರು : ಕನ್ನಡದ ವಾತಾವರಣವನ್ನು ವಿಸ್ತರಿಸಲು, ಗಟ್ಟಿಗೊಳಿಸಲು ನಾವೆಲ್ಲಾ ಹೆಚ್ಚೆಚ್ಚು ಶ್ರಮಿಸೋಣ. ಕರ್ನಾಟಕ ಬಹುತ್ವದ ಬೀಡು. ಬಹುತ್ವದ ನಾಡು ಕಟ್ಟುವ ವಿಚಾರದಲ್ಲಿ ರಾಜಿಯೇ ಇಲ್ಲ‌ ಎಂದು ಸಿ.ಎಂ.ಸಿದ್ದರಾಮಯ್ಯ ಹೇಳಿದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ರಾಷ್ಟ್ರೀಯ ಸಂತಕವಿ ಕನಕದಾಸ ಅಧ್ಯಯನ ಮತ್ತು ಸಂಶೋಧನಾ ಕೇಂದ್ರ ಜಂಟಿಯಾಗಿ ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಕಾವೇರಿ ಸಭಾಂಗಣದಲ್ಲಿ ಆಯೋಜಿಸಿದ್ದ "ಕರ್ನಾಟಕ ಸಾಂಸ್ಕೃತಿಕ ಮುನ್ನೋಟ: ಚಿಂತನಾ ಸಮಾವೇಶ" ವನ್ನು ಉದ್ಘಾಟಿಸಿ ಮಾತನಾಡಿದರು.

ದೇವರಾಜ ಅರಸರು 1973ರಲ್ಲಿ ಕರ್ನಾಟಕ ಎಂದು ನಾಮಕರಣ ಮಾಡಿದರು. ನಾಮಕರಣಗೊಂಡು 50 ವರ್ಷದ ಸುವರ್ಣ ಸಂಭ್ರಮವನ್ನು ಬಿಜೆಪಿ ಸರ್ಕಾರ ಮಾಡಬೇಕಿತ್ತು. ಅವರು ಮಾಡಲಿಲ್ಲ. ಹೀಗಾಗಿ ನಾನು ಸುವರ್ಣ ಸಂಭ್ರಮವನ್ನು ಬಜೆಟ್ ನಲ್ಲೇ ಘೋಷಿಸಿ ಇದನ್ನು ಕನ್ನಡ ಜನೋತ್ಸವವನ್ನಾಗಿ ಆಚರಿಸಲಾಗುತ್ತಿದೆ ಎಂದರು.

ಕರ್ನಾಟಕ ಮತ್ತು ಕನ್ನಡ ಏಳು ಕೋಟಿ ಜನರ ಉಸಿರಾಗಲಿ. ಇಲ್ಲಿ ಬದುಕನ್ನು ಕಟ್ಟಿಕೊಂಡಿರುವ ಇತರೆ ಭಾಷಿಕರು ಕನ್ನಡ ಮಾತಾಡುವಂತಾದರೆ ಒಳ್ಳೆಯದು. ನಾವು ಯಾವ ಭಾಷೆಗೂ ದ್ವೇಷಿಗಳಲ್ಲ. ಸಾಧ್ಯವಿರುವಷ್ಟು ಭಾಷೆಗಳನ್ನೆಲ್ಲಾ ಕಲಿತರೆ ಒಳ್ಳೆಯದೆ. ಆದರೆ ಕರ್ನಾಟಕದಲ್ಲಿ ಕನ್ನಡದ ವಾತಾವರಣ ನಿರ್ಮಿಸಿ ಕನ್ನಡವನ್ನು ಪೂರ್ತಿಯಾಗಿ ಬಳಸಬೇಕು. ಇದು ಪ್ರತಿಯೊಬ್ಬ ಕನ್ನಡಿಗರ ಜವಾಬ್ದಾರಿ ಎಂದರು.

ತಮಿಳುನಾಡಿನಲ್ಲಿ ತಮಿಳಿನಲ್ಲಿ, ಕೇರಳದಲ್ಲಿ ಮಲಯಾಳಂನಲ್ಲಿ, ಆಂಧ್ರದಲ್ಲಿ ತೆಲುಗಿನಲ್ಲಿ, ಮಹಾರಾಷ್ಟ್ರದಲ್ಲಿ ಮರಾಠಿಯಲ್ಲೇ ವ್ಯವಹರಿಸುತ್ತಾರೆ. ಆದರೆ ನಮ್ಮಲ್ಲಿ ಕನ್ನಡ ಬಿಟ್ಟು ಅವರವರ ಭಾಷೆಯಲ್ಲೇ ಹೆಚ್ಚು ವ್ಯವಹರಿಸಲು ಉತ್ಸುಕರಾಗಿ ಉದಾರಿ ಅನ್ನಿಸಿಕೊಂಡಿದ್ದೇವೆ. ಇದು ಅಷ್ಟು ಸರಿಯಲ್ಲ. ಕನ್ನಡದ ವಾತಾವರಣವನ್ನು ಗಟ್ಟಿಗೊಳಿಸಬೇಕು ಎಂದು ಸಿಎಂ ಕರೆ ನೀಡಿದರು.

*ಕರ್ನಾಟಕ ಬಹುತ್ವದ ಬೀಡು*

ಕರ್ನಾಟಕ ಸರ್ವ ಜನಾಂಗದ ಶಾಂತಿಯ ತೋಟ. ಕನ್ನಡ ನಾಡು ಬಹುತ್ವದ ಬೀಡು. ಇಲ್ಲಿ ಮನುಷ್ಯ ಪ್ರೀತಿಯ ಬಹುತ್ವ ಆಚರಿಸಲ್ಪಡುತ್ತದೆ. ಆದರೆ ವಿದ್ಯಾವಂತರೇ ಬಹುತ್ವ, ಜಾತ್ಯತೀತತೆ ಕೈಬಿಟ್ಟು ತಾರತಮ್ಯ , ಕಂದಾಚಾರವನ್ನು ಆಚರಿಸುತ್ತಿರುವುದು ದುರಂತ ಎಂದು ವಿಷಾದ ವ್ಯಕ್ತಪಡಿಸಿದರು.

ಬಸವಣ್ಣನವರನ್ನು ನಾವು ಸಾಂಸ್ಕೃತಿಕ ನಾಯಕನನ್ನಾಗಿ ಘೋಷಿಸಿದ್ದು ಬಸವಣ್ಣನವರ ವೈಚಾರಿಕ ನಿಲುವುಗಳನ್ನು ನಾವು ಪಾಲಿಸಬೇಕು ಎನ್ನುವ ಉದ್ದೇಶದಿಂದ. ಸರ್ಕಾರಕ್ಕೆ ಕಿರೀಟ ಸಿಗುತ್ತದೆ ಎನ್ನುವ ಕಾರಣಕ್ಕೆ ಘೋಷಣೆ ಮಾಡಿದ್ದಲ್ಲ. ಬಸವಣ್ಣನ ಆಶಯಗಳು, ವಿಚಾರಗಳು, ವೈಚಾರಿಕತೆ ಯುವ ಪೀಳಿಗೆಗೆ ಹೆಚ್ಚೆಚ್ಚು ಗೊತ್ತಾಗಬೇಕು.

ಈ ಮಣ್ಣಿನ ಕನ್ನಡ-ಕರ್ನಾಟಕ-ಬಹುತ್ವ-ವೈಚಾರಿಕತೆ ಎಲ್ಲವೂ ಸೇರಿ ಆಗಿರುವ ಕನ್ನಡತನ ರೂಪುಗೊಂಡಿದೆ. ಈ ಕನ್ನಡತನವನ್ನು, ಇದು ರೂಪುಗೊಂಡ ಚರಿತ್ರೆಯನ್ನು ನಾವು ಈ ತಲೆಮಾರಿಗೆ ದಾಟಿಸುವ ಕೆಲಸವನ್ನು ಪರಿಣಾಮಕಾರಿಯಾಗಿ ತಲುಪಿಸುವ ಉದ್ದೇಶದಿಂದ ಈ ಚಿಂತನಾ ಸಮಾವೇಶವನ್ನು ಆಯೋಜಿಸಲಾಗಿದೆ. ನಿಮ್ಮಂಥಾ ವಿಚಾರವಾದಿಗಳು ಒಟ್ಟಾಗಿ ಸೂಕ್ತವಾದ ಸಾಂಸ್ಕೃತಿಕ‌ ಮುನ್ನೋಟವನ್ನು ನೀಡುತ್ತೀರಿ ಎನ್ನುವ ವಿಶ್ವಾಸವಿದೆ ಎಂದರು.

"ಸುವರ್ಣ ಸಂಭ್ರಮ ಕರ್ನಾಟಕ-50: ಹೆಸರಾಯಿತು ಕರ್ನಾಟಕ, ಉಸಿರಾಗಲಿ ಕನ್ನಡ" ದ ಅಂಗವಾಗಿ ಚಿಂತನಾ ಸಮಾವೇಶ ಆಯೋಜಿಸಲಾಗಿತ್ತು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ, ಸಮಾಜ ಕಲ್ಯಾಣ ಸಚಿವ ಹೆಚ್.ಸಿ.ಮಹದೇವಪ್ಪ, ಕನಕದಾಸ ಅಧ್ಯಯನ ಕೇಂದ್ರದ ಅಧ್ಯಕ್ಷ ಕಾ.ತ.ಚಿಕ್ಕಣ್ಣ, ಗ್ಯಾರಂಟಿ ಅನುಷ್ಠಾನ‌ ಸಮಿತಿ ಉಪಾಧ್ಯಕ್ಷ ಪುಷ್ಪ ಅಮರನಾಥ್, ಮುಕ್ತ ವಿವಿ‌ ಕುಲಪತಿ ಪ್ರೊ.ಶರಣಪ್ಪ ವಿ.ಹಲ್ಸೆ, ಸಂಸ್ಕೃತಿ ಇಲಾಖೆ ನಿರ್ದೇಶಕಿ ಧರಣಿದೇವಿ ಮಾಲಗತ್ತಿ, ವಿಧಾನ ಪರಿಷತ್ ಸದಸದಯರಾದ ಡಾ.ತಿಮ್ಮಯ್ಯ ಸೇರಿ ಹಲವು ಗಣ್ಯರು ಉಪಸ್ಥಿತರಿದ್ದರು.

ಅರ್ಧ ಶತಮಾನದಿಂದ ಕನ್ನಡದ ವಿವೇಕವನ್ನು ವಿಸ್ತರಿಸುತ್ತಿರುವ ಹಿರಿಯ ಸಾಹಿತಿಗಳು, ಬರಹಗಾರರು, ಲೇಖಕರು, ಪತ್ರಕರ್ತರು, ಸಾಮಾಜಿಕ ಕಾರ್ಯಕರ್ತರು, ನಾನಾ ಚಳವಳಿಗಳ ಕಾರ್ಯಕರ್ತರು, ಮುಖಂಡರುಗಳು ಚಿಂತನಾ ಸಮಾವೇಶದಲ್ಲಿ ಭಾಗವಹಿಸಿದ್ದರು.

ರೈತ-ದಲಿತ-ಕಾರ್ಮಿಕ-ಮಹಿಳಾ ಮತ್ತು ಕೋಮುಸೌಹಾರ್ಧ ಹಾಗೂ ಸಂವಿಧಾನ ಉಳಿಸಿ ಚಳವಳಿಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಹಲವು ಮಹನೀಯರುಗಳು ಚಿಂತನಾ ಸಮಾವೇಶದಲ್ಲಿ ಉಪಸ್ಥಿತರಿದ್ದು ತಮ್ಮ ತಮ್ಮ ವಿಚಾರಗಳನ್ನು ಮಂಡಿಸಿದರು.

----
ಎಂಥವರಿರ್ತಾರೆ ಅಂದ್ರೆ-ರಾಜ್ಯಪಾಲರು ಇದಕ್ಕೂ ನೋಟಿಸ್ ಕೊಡ್ತಾರೆ
----------------------------

ಹಿರಿಯ ಸಾಹಿತಿ .ಹಂ.ಪಾ ನಾಗರಾಜಯ್ಯ ಅವರಿಂದ ದಸರಾ ಉದ್ಘಾಟನೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ಹೆಸರಾಂತ ಹಿರಿಯ ಸಾಹಿತಿ ಹಂ.ಪಾ.ನಾಗರಾಜಯ್ಯ ಅವರನ್ನು ಈ ಬಾರಿಯ ದಸರಾ ಉದ್ಘಾಟನೆಗೆ ಆಹ್ವಾನಿಸಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ಮೈಸೂರಿನ ವಿಮಾನ ನಿಲ್ದಾಣದಲ್ಲಿ ಮಾಧ್ಯಮ ದವರೊಂದಿಗೆ ಮಾತನಾಡಿದರು.

ಶಾಸಕ ಮುನಿರತ್ನ ಅವರ ಮೇಲೆ ಮೇಲಿನ ಮೂರು ಪ್ರಕರಣಗಳು ದಾಖಲಾಗಿದ್ದು, ಅವುಗಳನ್ನು ಎಸ್.ಐ ಟಿಗೆ ವಹಿಸಬೇಕೆಂದು ಇಂದು ತಮ್ಮನ್ನು ಭೇಟಿ ಮಾಡಿದ ಒಕ್ಕಲಿಗ ಸಚಿವರು ಹಾಗೂ ಶಾಸಕರು ಮನವಿ ಮಾಡಿದ್ದಾರೆ. ಈ ಬಗ್ಗೆ ಗೃಹ ಸಚಿವ ಜಿ ಪರಮೇಶ್ವರ್ ಅವರೊಂದಿಗೆ ಮಾತನಾಡುವುದಾಗಿ ತಿಳಿಸಿದ್ದೇನೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ಗೆಜೆಟೆಡ್ ಪ್ರೊಬೇಷನರಿ ಹುದ್ದೆಗಳ ಮರು ಪರೀಕ್ಷೆಯನ್ನು ಆದಷ್ಟೂ ಶೀಘ್ರದಲ್ಲಿಯೇ ಏರ್ಪಡಿಸುವಂತೆ ಕೆ.ಪಿ.ಎಸ್.ಸಿ ಗೆ ಸೂಚಿಸಲಾಗಿದೆ ಎಂದರು.
ಕಾನ್ ಸ್ಟಬಲ್ ಹುದ್ದೆಗಳಿಗೆ ವಯೋಮಿತಿಯನ್ನು 27 ರಿಂದ 33 ವರ್ಷಕ್ಕೆ ಏರಿಸಬೇಕೆಂಬ ಬೇಡಿಕೆ ಬಗ್ಗೆ ಮಾತನಾಡಿ ಈ ಕುರಿತು ಒಂದು ಬಾರಿಯ ತೀರ್ಮಾನ ಕೈಗೊಳ್ಳುವಂತೆ ಗೃಹ ಸಚಿವರಿಗೆ ತಿಳಿಸಿದ್ದೇನೆ ಎಂದರು.

*ಅರವತ್ತು ಸಾವಿರ ಗಣೇಶ ಪ್ರತಿಷ್ಠಾಪನೆ*

ದಾವಣಗೆರೆಯಲ್ಲಿ ಗಣೇಶ ವಿಸರ್ಜನೆ ಸಂದರ್ಭದಲ್ಲಿ ಕಲ್ಲು ತೂರಾಟ ಬಗ್ಗೆ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿಗಳು, ಈ ಬಾರಿ ಅರವತ್ತು ಸಾವಿರ ಗಣೇಶಗಳ ಪ್ರತಿಷ್ಠಾಪನೆಯಾಗಿತ್ತು. ದಾವಣಗೆರೆಯಲ್ಲಿ ಕಲ್ಲು ತೂರಾಟ ನಡೆದಿದ್ದು, ನಾಗಮಂಗಲದಲ್ಲಿ ಗಲಭೆ ನಡೆದಿದೆ. ಇಲ್ಲಿ ಪೊಲೀಸರ ಕರ್ತವ್ಯ ನಿರ್ಲಕ್ಷ್ಯ ಕಂಡುಬಂದಿದ್ದು, ಡಿ.ವೈ.ಎಸ್.ಪಿ ಅವರನ್ನು ಅಮಾನತು ಮಾಡಲಾಗಿದೆ ಎಂದರು.

*ಕೋಮು ಗಲಭೆಗೆ ಬಿಜೆಪಿ ಪ್ರಚೋದನೆ*

ಕೋಮು ಗಲಭೆಗಳಿಗೆ ಬಿಜೆಪಿ ಪ್ರಚೋದನೆ ನೀಡುತ್ತಿದೆ. ಇದಕ್ಕೆ ಬಿಜೆಪಿ ಕಾರಣ ಎಂದು ಮುಖ್ಯಮಂತ್ರಿಗಳು ಆರೋಪಿಸಿದರು.

*ಡಿನೋಟಿಫೈ ಪ್ರಕರಣಕ್ಕೆ ಲೋಕಾಯುಕ್ತ ತನಿಖೆ ಬಗ್ಗೆ ಪರಿಶೀಲನೆ:*

ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಹಾಗೂ ಯಡಿಯೂರಪ್ಪರವರ ವಿರುದ್ಧದ ಡಿನೋಟಿಫಿಕೇಷನ್ ಪ್ರಕರಣದಲ್ಲಿ 2021 ರಿಂದ ಲೋಕಾಯುಕ್ತದವರು ತನಿಖೆ ನಡೆಸದಿರುವ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿ, ನಿನ್ನೆ ದಿನೇಶ್ ಗುಂಡೂರಾವ್, ಕೃಷ್ಣಬೈರೇಗೌಡ, ಸಂತೋಷ್ ಲಾಡ್ ಸೇರಿದಂತೆ ಸಚಿವರು ಈ ಬಗ್ಗೆ ದಾಖಲೆಗಳನ್ನು ಬಿಡುಗಡೆ ಮಾಡಿದ್ದಾರೆ. ಡಿನೋಟಿಫೈ ಪ್ರಕರಣದ ಜಮೀನು ಬಹಳ ಬೆಲೆಬಾಳುವಂಥದ್ದಾಗಿದ್ದು, ಕುಮಾರಸ್ವಾಮಿಯವರು ತಮ್ಮ ಸಂಬಂಧಿಕರಿಗೆ ಡಿನೋಟಿಫೈ ಮಾಡಿ , ಜಿಪಿಓ ಆಗಿದೆ. ಅಧಿಕಾರಿಗಳು ಈ ಕ್ರಮವನ್ನು ಕಾನೂನಾತ್ಮಕವಲ್ಲವೆಂದರೂ ಈ ರೀತಿ ಮಾಡಿದ್ದಾರೆ. ಇದಕ್ಕೆ ಸಂಬಂಧಿಸಿದ ಮಾಹಿತಿಗಳನ್ನು ಪಡೆದು ಪರಿಶೀಲನೆ ನಡೆಸಲಾಗುವುದು ಎಂದರು.

*ಸರ್ಕಾರ ಯಾರ ಮೇಲೂ ಆರೋಪ ಮಾಡುವುದಿಲ್ಲ*

ವಿಪಕ್ಷಗಳು ಗಾಜಿನ ಮನೆಯಲ್ಲಿ ಕುಳಿತು ಸರ್ಕಾರದ ಮೇಲೆ ಆರೋಪ ಹೊರಸುತ್ತಿವೆಯೇ ಎಂಬ ಮಾಧ್ಯಮದವರ ಅಭಿಪ್ರಾಯಕ್ಕೆ ಪ್ರತಿಕ್ರಿಯೆ ನೀಡಿ, ನಾವು ಯಾರ ಮೇಲೆಯೂ ಆರೋಪ ಹೊರಿಸುವ ಕೆಲಸವನ್ನು ಮಾಡಿಲ್ಲ. ಕುಮಾರಸ್ವಾಮಿಯವರು ಎಂದಿಗೂ ಹಿಟ್ ಎಂಡ್ ರನ್ ಮಾಡುವವರಾಗಿದ್ದು, ಯಾವ ಆರೋಪಕ್ಕೂ ತಾರ್ಕಿಕ ಅಂತ್ಯ ಕಾಣಿಸುವುದಿಲ್ಲ. ಕುಮಾರಸ್ವಾಮಿಯವರು ಕೇಂದ್ರ ಸಚಿವರಾಗಿದ್ದು, ಜವಾಬ್ದಾರಿಯುತವಾಗಿ ವರ್ತಿಸಬೇಕು. ವಿಷಯದ ಸತ್ಯಾಸತ್ಯತೆಯನ್ನು ಅರಿತು ಮಾತನಾಡಬೇಕು ಎಂದರು.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ