Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಲಕ್ಷ್ಮೀ ಹೆಬ್ಬಾಳಕರ್ ಅವರಿಗೆ ಉಪಮುಖ್ಯಮಂತ್ರಿ ಸ್ಥಾನ ಸಿಗಲಿ: ಸುಳೇಭಾವಿ ಮಹಾಲಕ್ಷ್ಮಿ ದೇವಿಗೆ ವಿಶೇಷ ಪೂಜೆ

Advertisement

ಬೆಳಗಾವಿ : ರಾಜ್ಯದ ನೂತನ ಸರ್ಕಾರದ ರಚನೆಗೆ ಸಂಬಂಧಿಸಿದ ರಾಜಕೀಯ ಬೆಳವಣಿಗೆಗಳ ನಡುವೆಯೇ, ಬೆಳಗಾವಿ ಗ್ರಾಮೀಣ ಕ್ಷೇತ್ರದ ಮುಖಂಡರು ಮತ್ತು ಕಾರ್ಯಕರ್ತರು ಸುಕ್ಷೇತ್ರ ಸುಳೇಭಾವಿಯ ಶ್ರೀ ಮಹಾಲಕ್ಷ್ಮಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿ ಪ್ರಾರ್ಥನೆ ನಡೆಸಿದರು.

ನಿಕಟಪೂರ್ವ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವರು ಹಾಗೂ ಬೆಳಗಾವಿ ಗ್ರಾಮೀಣ ಕ್ಷೇತ್ರದ ಹಾಲಿ ಶಾಸಕಿ ಲಕ್ಷ್ಮೀ ಆರ್. ಹೆಬ್ಬಾಳಕರ್ ಅವರು ರಾಜ್ಯದ ನಿಯೋಜಿತ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದ ಸಚಿವ ಸಂಪುಟದಲ್ಲಿ ಉಪಮುಖ್ಯಮಂತ್ರಿಯಾಗಿ ಹಾಗೂ ಪ್ರಮುಖ ಖಾತೆಗಳ ಸಚಿವರಾಗಿ ಸ್ಥಾನ ಪಡೆಯಲೆಂದು ಶ್ರೀ ಮಹಾಲಕ್ಷ್ಮಿ ದೇವಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು.
ಕ್ಷೇತ್ರದ ಅಭಿವೃದ್ಧಿಗೆ ನಿರಂತರವಾಗಿ ಶ್ರಮಿಸುತ್ತಿರುವ ಲಕ್ಷ್ಮೀ ಹೆಬ್ಬಾಳಕರ್ ಅವರು ಕಳೆದ ಹಲವು ವರ್ಷಗಳಿಂದ ಜನಸೇವೆ, ಮಹಿಳಾ ಸಬಲೀಕರಣ ಹಾಗೂ ಗ್ರಾಮೀಣ ಅಭಿವೃದ್ಧಿಗೆ ಮಹತ್ವದ ಕೊಡುಗೆ ನೀಡಿದ್ದು, ಅವರ ಅನುಭವ ಮತ್ತು ಆಡಳಿತ ಕೌಶಲ್ಯವನ್ನು ಪರಿಗಣಿಸಿ ರಾಜ್ಯ ಸಚಿವ ಸಂಪುಟದಲ್ಲಿ ಮಹತ್ವದ ಜವಾಬ್ದಾರಿ ನೀಡಬೇಕು ಎಂಬುದು ಕಾರ್ಯಕರ್ತರು ಹಾಗೂ ಮುಖಂಡರ ಆಶಯವಾಗಿದೆ ಎಂದು ಈ ಸಂದರ್ಭದಲ್ಲಿ ಅಭಿಪ್ರಾಯ ವ್ಯಕ್ತಪಡಿಸಲಾಯಿತು.
ವಿಶೇಷ ಪೂಜೆಯ ಬಳಿಕ ದೇವಿಯ ಸನ್ನಿಧಾನದಲ್ಲಿ ಸಾಮೂಹಿಕ ಪ್ರಾರ್ಥನೆ ನಡೆಸಿದ ಮುಖಂಡರು, ಲಕ್ಷ್ಮೀ ಹೆಬ್ಬಾಳಕರ್ ಅವರಿಗೆ ಉನ್ನತ ಹುದ್ದೆ ದೊರೆತು ರಾಜ್ಯದ ಜನತೆಗೆ ಇನ್ನಷ್ಟು ಸೇವೆ ಸಲ್ಲಿಸುವ ಅವಕಾಶ ಸಿಗಲಿ ಎಂದು ಹಾರೈಸಿದರು. ಅಲ್ಲದೆ, ರಾಜ್ಯದ ಹೊಸ ಸರ್ಕಾರ ಜನಪರ ಆಡಳಿತ ನೀಡುವ ಮೂಲಕ ಅಭಿವೃದ್ಧಿಯ ಹೊಸ ಅಧ್ಯಾಯ ಬರೆಯಲಿ ಎಂಬ ಆಶಯವನ್ನೂ ವ್ಯಕ್ತಪಡಿಸಿದರು.

 ಗಂಗಣ್ಣ ಕಲ್ಲೂರ, ದೇವಣ್ಣ ಹುಂಕ್ರಿಪಾಟೀಲ, ಲಕ್ಷ್ಮೀನಾರಾಯಣ ಕಲ್ಲೂರ, ದತ್ತಾ ಬಂಡಿಗಣಿ, ಅಡಿವೇಶ್ ಇಟಗಿ, ನಾಗೇಶ್ ದೇಸಾಯಿ, ಬಸವರಾಜ ಮ್ಯಾಗೋಟಿ, ನಾರಾಯಣ ಲೋಕರೆ, ಅಡಿವೆಪ್ಪ ನಾಗರಾಳಿ, ಮಹಾದೇವ ಕೇಸಪ್ಪನಟ್ಟಿ, ತುಳಸಪ್ಪ ಯರಜರ್ವಿ, ಸಂಭಾಜಿ ಯಮೋಜಿ, ಲಕ್ಷ್ಮಣ ಮಂಡು, ರುದ್ರಪ್ಪ ಅಮರಾಪುರ, ಮಹೇಶ್ ಸುಗಣೆನ್ನವರ್, ಸಿದ್ದಬಸವ ಮಂತುರಗಿಮಠ, ನಾಗಯ್ಯ ಕುಡಚಿಮಠ, ಪ್ರೇಮ್ ಕೋಲಕಾರ, ಅಪ್ಸರ್ ಜಮಾದಾರ್ ಸೇರಿದಂತೆ ಬೆಳಗಾವಿ ಗ್ರಾಮೀಣ ಕ್ಷೇತ್ರದ ಅನೇಕ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕೇಂದ್ರ ಸರಕಾರದಿಂದ ವಿಶೇಷ ಯೋಜನೆ ಮತ್ತು ಅನುದಾನ ಒದಗಿಸುವಂತೆ ಕೇಂದ್ರ ಸಚಿವರಿಗೆ ಮನವಿ ಮಾಡಿದ ಕಿರಣ್ ಜಾಧವ ಆಟೋನಗರ, ರಾಮತೀರ್ಥನಗರ ಕೈಗಾರಿಕಾ ಪ್ರದೇಶಗಳಲ್ಲಿ ಮೂಲ ಸೌಕರ್ಯ ಹೆಚ್ಚಿಸಿ ಕೈಗಾರಿಕಾ ಅಭಿವೃದ್ಧಿಗೆ ಉತ್ತೇಜನ ನೀಡಿSSLC ವಿದ್ಯಾರ್ಥಿಗಳಿಗೆ ಲೈಂಗಿಕ ಕಿರುಕುಳ : ಶಿಕ್ಷಕನಿಗೆ ಥಳಿತವಾಯುಪಡೆ ಸಿಬ್ಬಂದಿ ಪತ್ನಿಗೆ ಮತ್ತು ಬರಿಸುವ ಪಾನೀಯ ನೀಡಿ ಅತ್ಯಾಚಾರ, ಬ್ಲ್ಯಾಕ್‌ಮೇಲ್, ಬಲವಂತದ ಮತಾಂತರಕ್ಕೆ ಯತ್ನ; ಇಬ್ಬರ ಬಂಧನಇನ್ಮುಂದೆ ವೈದ್ಯರ ಚೀಟಿ ಇಲ್ಲದೇ ಕೆಮ್ಮಿನ ಔಷಧ ಮಾರಾಟ ನಿಷೇಧಮಾರಿಹಾಳ ಗ್ರಾಮದಲ್ಲಿ ಎನ್‌ಎಸ್‌ಎಸ್ ವಿಶೇಷ ಶಿಬಿರ; ಉಚಿತ ನೇತ್ರ ತಪಾಸಣೆಯಿಂದ ಗ್ರಾಮಸ್ಥರಿಗೆ ಪ್ರಯೋಜನಟೆಲಿಗ್ರಾಮ್ ನಿರ್ಬಂಧಿಸಿದ ಕೇಂದ್ರ ಸರ್ಕಾರಶರಣರು ಜನಪರವಾದ ಸಾಹಿತ್ಯಕ್ಕೆ ಒತ್ತು ನೀಡಿದರು: ಡಾ.ವಿದ್ಯಾವತಿ ಕುಂದರಗಿ* *ಮಹಾಸಭೆಯಲ್ಲಿ ಅಮವಾಸ್ಯೆ ಅನುಭಾವ ಗೋಷ್ಠಿರಾಜ್ಯದ ಹಲವೆಡೆ ಲೋಕಾಯುಕ್ತ ದಾಳಿ ಹಣದ ತೊಂದರೆಯುದ್ದರೂ ಪರರ ಹಣ ಬೇಡವೆಂದು ಚಿಕ್ಕೋಡಿಯಲ್ಲಿ ಪ್ರಾಮಾಣಿಕತೆ ಮೆರೆದ ಕುಂದಾಪುರದ ವ್ಯಕ್ತಿ..!ಐಎಎಸ್‌ ಅಧಿಕಾರಿಗಳೂ ಸೇರಿದಂತೆ ಎಲ್ಲರ ಮೇಲೂ ‘ಎಐ’ ಕಣ್ಗಾವಲು | ಕರ್ತವ್ಯದ ಸ್ಥಳದ ಮಾಹಿತಿ ಸರ್ಕಾರಕ್ಕೆ ಲಭ್ಯ