Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಸತೀಶ ಜಾರಕಿಹೊಳಿ ರಾಜ್ಯ ರಾಜಕೀಯದಲ್ಲೇ ಉಳಿಯಲಿ: ಆಯಿಶಾ ಸನದಿ

ಬೆಳಗಾವಿ: ಉತ್ತರ ಕರ್ನಾಟಕದ ಅಭಿವೃದ್ಧಿ ಹರಿಕಾರ, ಪ್ರಭಾವಿ ನಾಯಕ, ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ಅವರು ರಾಜ್ಯ ರಾಜಕೀಯದಲ್ಲಿ ಇರಬೇಕು. ಹೈಕಮಾಂಡ್‌ ಅವರನ್ನು ಲೋಕಸಭೆ ಚುನಾವಣೆಗೆ ಸ್ಫರ್ಧಿಸಲು ಟಿಕೆಟ್‌ ನೀಡಬಾರದು ಎಂದು ಕೆಪಿಸಿಸಿ ಸದಸ್ಯೆ ಆಯಿಶಾ ಸನದಿ ಮನವಿ ಮಾಡಿದ್ದಾರೆ.

ನಗರದ ಕನ್ನಡ ಸಾಹಿತ್ಯ ಪರಿಷತ್‌ ಕಚೇರಿ ಸಭಾಂಗಣದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸತೀಶ್‌ ಜಾರಕಿಹೊಳಿ ಅವರು ಈಗಾಗಲೇ ಸಚಿವರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬರುವಲ್ಲಿ ಅವರ ಪಾತ್ರವೂ ದೊಡ್ಡದಿದೆ. ಅವರ ದೂರದೃಷ್ಟಿಯಿಂದ ಬೆಳಗಾವಿ ಜಿಲ್ಲೆ ಸೇರಿದಂತೆ ರಾಜ್ಯದಲ್ಲಿ ಅನೇಕ ಅಭಿವೃದ್ಧಿ ಕೆಲಸಗಳು ಸಾಗುತ್ತಿವೆ. ಹೀಗಾಗಿ ಸಚಿವ ಸತೀಶ್ ಜಾರಕಿಹೊಳಿ ಅವರು ರಾಜ್ಯ ರಾಜಕೀಯದಲ್ಲಿ ಇರಬೇಕೆಂದು ಮನವಿ ಮಾಡುತ್ತೇನೆಂದು ತಿಳಿಸಿದರು.

ಬೆಳಗಾವಿ ಲೋಕಸಭಾ ಕ್ಷೇತ್ರದಲ್ಲಿ ಚುನಾವಣೆಗೆ ಸ್ಪರ್ಧಿಸಲು ಅರ್ಹತೆ ಇರುವ ಅನೇಕ ಅಭ್ಯರ್ಥಿಗಳು ಇದ್ದಾರೆ. ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌, ಅಂಜಲಿ ನಿಂಬಾಳ್ಕರ್‌, ಪ್ರಿಯಂಕಾ ಜಾರಕಿಹೊಳಿ ಸೇರಿದಂತೆ ನನಗಾದರೂ ಸ್ಪರ್ಧಿಸಲು ಅವಕಾಶ ನೀಡಬೇಕು. ಕಾರಣ ಸಚಿವ ಸತೀಶ್‌ ಜಾರಕಿಹೊಳಿ ಅವರನ್ನು ಬಿಟ್ಟು ಮಹಿಳೆಯರಿಗಾದರೂ ಟಿಕೆಟ್‌ ನೀಡಬೇಕು. ಇಲ್ಲವಾದರೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ ಅಥವಾ ಪ್ರಿಯಾಂಕಾ ಜಾರಕಿಹೊಳಿ ಅವರಿಗೆ ಟಿಕೆಟ್‌ ನೀಡಿ. ಅವರಿಗೆ ಟಿಕೆಟ್ ನೀಡಿದರೆ ಅವರನ್ನು ಗೆಲ್ಲಿಸಲು ಹಗಲು ರಾತ್ರಿ ದುಡಿಯುತ್ತೇವೆ ಎಂದು ತಿಳಿಸಿದರು.

ನಮ್ಮ ನಾಯಕ ರಾಜ್ಯ ರಾಜಕೀಯದಲ್ಲೇ ಇರಲಿ ಎಂಬುವುದು ನಮ್ಮ ಆಶಯ. ಹೈಕಮಾಂಡ್‌ ನಮ್ಮ ಮನವಿಗೆ ಸ್ಪಂದಿಸಿ ಅವರನ್ನು ರಾಜ್ಯ ರಾಜ್ಯಕೀಯದಲ್ಲಿ ಉಳಿಯಲು ಅವಕಾಶ ನೀಡಬೇಕು ಹಾಗೂ ಮುಂದಿನ ದಿನಗಳಲ್ಲಿ ಅವರಿಗೆ ಡಿಸಿಎಂ ಸ್ಥಾನವನ್ನು ನೀಡಬೇಕೆಂದು ಒತ್ತಾಯಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಪುರಸಭೆ ಸದಸ್ಯ ಖುರ್ಸಿದ್ದ ಮುಲ್ಲಾ, ಲತಾ ಮಾನೆ, ರೋಹಿಣಿ ಬಾಬಾಸೇಕ್, ಸಾರಂಬಿ ಜತ್ತಿ, ಹಸೀನಾ ಪಿರ್ಜಾದೆ ಸೇರಿದಂತೆ ಅನೇಕ ಕಾಂಗ್ರೆಸ್‌ ಕಾರ್ಯಕರ್ತೆಯರು ಇದ್ದರು.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ