Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಮಕ್ಕಳು ನುಡಿದ ಸಾಕ್ಷಿ : ಹಂತಕನಿಗೆ ಜೀವಾವಧಿ ಶಿಕ್ಷೆ ಘೋಷಣೆ

ಬೆಳಗಾವಿ : ಮಕ್ಕಳು ನುಡಿದ ಸಾಕ್ಷಿಯಿಂದಾಗಿ ಹಂತಕನಿಗೆ ಜೀವಾವಧಿ ಶಿಕ್ಷೆ ಘೋಷಣೆಯಾಗಿದೆ.

ಆಸ್ತಿ ವಿಚಾರಕ್ಕೆ ಸಂಬಂಧಿಸಿ ಬಾಲಕನನ್ನು ಕೊಲೆ ಮಾಡಿದ್ದ ದೊಡ್ಡಪ್ಪನಿಗೆ ಜೀವಾವಧಿ ಶಿಕ್ಷೆ ವಿಧಿಸಿ ಇಲ್ಲಿನ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತೀರ್ಪು ಪ್ರಕಟಿಸಿದೆ.

ಬೈಲಹೊಂಗಲ ತಾಲೂಕು ಹಾರೂಗೊಪ್ಪ ಗ್ರಾಮದಲ್ಲಿ 2021ರ ಜನವರಿ 20ರಂದು ಆರು ವರ್ಷದ ಸಿದ್ಧಾರ್ಥ ವೀರೇಶ ಸಂಕನ್ನವರ ಎಂಬ ಬಾಲಕನನ್ನು ಕೊಲೆ ಮಾಡಲಾಗಿತ್ತು. ಬಾಲಕನ ದೊಡ್ಡಪ್ಪ ಈರಪ್ಪ ಸಂಕನ್ನವರ ಕೊಲೆಗೈದ ಆರೋಪಿಯಾಗಿದ್ದು ಆತನಿಗೆ ಈಗ ಶಿಕ್ಷೆ ಆಗಿದೆ.

ಸಿದ್ದಾರ್ಥನ ತಂದೆ ವೀರೇಶ ಮತ್ತು ಆರೋಪಿ ಈರಪ್ಪನ ನಡುವೆ ಆಸ್ತಿ ವಿಚಾರಕ್ಕೆ ಗಲಾಟೆ ನಡೆದಿತ್ತು. ಸಹೋದರನ ಮೇಲಿನ ಆರೋಪಿ, ಸಿಟ್ಟಿನಿಂದ ಆಡುತ್ತಿದ್ದ ಸಿದ್ದಾರ್ಥನನ್ನು ಕುಡುಗೋಲಿನಿಂದ ಕೊಚ್ಚಿ ಕೊಲೆ ಮಾಡಿದ್ದ. ನಂತರ ಈ ಆರೋಪಿ ಸಿದ್ದಾರ್ಥನ 3 ವರ್ಷದ ಸಹೋದರಿ ಅಂಕಿತಾಳ ಮೇಲೂ ಕೊಲೆಗೂ ಯತ್ನಿಸಿದ್ದ. ಆದರೆ ಸಿದ್ದಾರ್ಥನ ತಾಯಿಯ ಮಧ್ಯಪ್ರವೇಶದಿಂದ ಮಗಳ ಪ್ರಾಣ ಉಳಿದಿತ್ತು. ಈ ಬಗ್ಗೆ ಮುರಗೋಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

35 ಸಾಕ್ಷಿಗಳಲ್ಲಿ ಮೂವರು ಮಕ್ಕಳ ಪ್ರತ್ಯೇಕ ಸಾಕ್ಷಿಯಿಂದ ಆರೋಪಿಗೆ ಶಿಕ್ಷೆ ಘೋಷಣೆಯಾಗಿದೆ. ಮಕ್ಕಳು ನ್ಯಾಯಾಧೀಶರ ಮುಂದೆ ನೈಜ ಘಟನೆ ಹೇಳಿದ್ದರು. ಈ ಬಗ್ಗೆ ವಿಚಾರಣೆ ನಡೆಸಿದ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಮಂಜುನಾಥ ನಾಯಕ ಅವರು ಆರೋಪಿ ಮೇಲಿನ ಆರೋಪಣೆಗಳು ಸಾಬೀತಾಗಿರುವ ಹಿನ್ನೆಲೆಯಲ್ಲಿ ಫೆಬ್ರವರಿ 13ರಂದು ಆರೋಪಿಗೆ ಜೀವಾವಧಿ ಶಿಕ್ಷೆ ಪ್ರಕಟ ಮಾಡಿದ್ದಾರೆ. ಸರಕಾರಿ ಅಭಿಯೋಜಕ ನಾರಾಯಣ ಈ ಬಗ್ಗೆ ಮಾಹಿತಿ ನೀಡಿದ್ದು ಆರೋಪಿ ಬಾಲಕನ ಮೇಲೆ ಆರೋಪಿ ಹತ್ಯೆ ಮಾಡಿದ್ದ ಆರೋಪಿಗೆ ಜೈಲು ಶಿಕ್ಷೆ ಗಲ್ಲು ಶಿಕ್ಷೆ ವಿಧಿಸುವಂತೆ ನ್ಯಾಯಾಲಯದ ಎದುರು ಮನವಿ ಮಾಡಿದ್ದೆವು. ನ್ಯಾಯಾಲಯ ಇದೀಗ ಆರೋಪಿಗೆ ಜೀವಾವಧಿ ಶಿಕ್ಷೆ ಹಾಗೂ ಎಪ್ಪತ್ತೈದು ಸಾವಿರ ರೂಪಾಯಿ ದಂಡ ವಿಧಿಸಿದೆ. 25,000 ಕೊಲೆಯಾದ ಮಗುವಿನ ತಂದೆಗೆ ಪರಿಹಾರ ನೀಡುವಂತೆ ನ್ಯಾಯಾಲಯ ಸೂಚಿಸಿದೆ ಎಂದರು.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ