Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಸಿಡಿಲು ಮುನ್ನೆಚ್ಚರಿಕೆ

 

ಬೆಂಗಳೂರು :
ಕರ್ನಾಟಕ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರವು ಸಿಡಿಲಿನಿಂದ ರಕ್ಷಣೆ ಪಡೆಯಬಹುದಾದ ಸರಳ ಮಾರ್ಗಗಳನ್ನು ವಿಪತ್ತು ನಿರ್ವಹಣಾ ಪ್ರಾಧಿಕಾರದ ಪ್ರಕಟಣೆ ತಿಳಿಸಿದೆ. ಸಿಡಿಲು-ಮೊಬೈಲ್‌ ಆಪ್ ನಲ್ಲಿ ಸಿಡಿಲಿನ ಬಗ್ಗೆ ಮುಂಚಿತವಾಗಿ ಮಾಹಿತಿ ಪಡೆದುಕೊಳ್ಳಬಹುದಾಗಿದೆ. ಸಿಡಿಲಿನ ಸಂಭವನೀಯತೆ ಇದ್ದಲ್ಲಿ ಹೊರಗಿನ ಕೆಲಸಗಳನ್ನು ಮುಂದೂಡಿ, ಆದಷ್ಟು ಮನೆಯಲ್ಲಿಯೇ ಇರುವುದು ಸೂಕ್ತ. ಮನೆಯ ಸುತ್ತಲಿನಲ್ಲಿರುವ ಕೊಳೆತ ಹಾಗೂ ಒಣಗಿದ ಮರಗಳನ್ನು ತೆರವುಗೊಳಿಸಬೇಕು.

ಮನೆಯ ಒಳಗಿರುವಾಗ ಸಿಡಿಲು ಬಂದಾಗ ಕಿಟಕಿಯಿಂದ ದೂರವಿರಬೇಕು, ಈ ಸಂದರ್ಭದಲ್ಲಿ ದೂರವಾಣಿ, ಮೊಬೈಲ್ ಮತ್ತು ಎಲೆಕ್ಟ್ರಾನಿಕ್ ಉಪಕರಣಗಳನ್ನು ಬಳಸಬಾರದು. ಗೃಹಪಯೋಗಿ ಉಪಕರಣಗಳ ಫ್ಲಗ್‌ಗಳನ್ನು ತೆಗೆದಿಡಬೇಕು. ಗೋಡೆಯಿಂದ ದೂರವಿರುವುದು ಉತ್ತಮ. ಒಣಮರದ ಪೀಠೋಪಕರಣಗಳು ಸುರಕ್ಷಿತವಾಗಿದ್ದು, ವಿದ್ಯುತೀಕರಣದ ಅಪಾಯ ಇರುವುದರಿಂದ ಸಿಡಿಲಿನ ಸಂದರ್ಭದಲ್ಲಿ ಸ್ನಾನ ಮತ್ತು ಪಾತ್ರೆ ಹಾಗೂ ಇತರ ನೀರಿನೊಂದಿಗಿನ ಕೆಲಸವನ್ನು ಮಾಡಬಾರದು.

 

ಹೊರಾಂಗಣದಲ್ಲಿದ್ದಾಗ ಸಿಡಿಲು ಬರುವ ಲಕ್ಷಣಗಳಿದ್ದಲ್ಲಿ ತಕ್ಷಣ ಸುರಕ್ಷಿತ ಕಟ್ಟಡಗಳ ಒಳಗೆ ಸೇರಿಕೊಳ್ಳಬೇಕು. ಎತ್ತರ ಪ್ರದೇಶದಲ್ಲಿ ಸಿಡಿಲಿನ ಪ್ರಭಾವ ಅಧಿಕವಾಗಿರುವುದರಿಂದ ತಗ್ಗು ಪ್ರದೇಶಗಳಿಗೆ ತೆರಳಬೇಕು. ಸಿಡಿಲಿನ ಸಂದರ್ಭದಲ್ಲಿ ಕೊಡೆ ಅಥವಾ ಛತ್ರಿಯನ್ನು ಬಳಸಬಾರದು. ಮಕ್ಕಳು ಈ ಸಂದರ್ಭದಲ್ಲಿ ಗಾಳಿ ಪಟವನ್ನು ಹಾರಿಸಬಾರದು.

ವಾಹನ ಚಲಿಸುವ ಸಂದರ್ಭದಲ್ಲಿ ಸಿಡಿಲು ಬಂದಾಗ ಮರ ಹಾಗೂ ತಂತಿ ಕಂಬಗಳಿಂದ ವಾಹನವನ್ನುದೂರ ನಿಲ್ಲಿಸಿ, ವಾಹನದೊಳಗೆ ಇರುವುದು ಸೂಕ್ತ. ಬಸ್‌ಗಳಲ್ಲಿ ಪ್ರಯಾಣಿಸುವಾಗ ಕಿಟಕಿಗಳ ಗಾಜನ್ನು ಮುಚ್ಚಬೇಕು. ಕಾಡಿನಲ್ಲಿದ್ದ ಸಂದರ್ಭದಲ್ಲಿ ಕಡಿಮೆ ಮರಗಳಿರುವ ಪ್ರದೇಶದಲ್ಲಿ ಸಣ್ಣ ಮರದ ಕೆಳಗೆ ಆಶ್ರಯ ಪಡೆಯುಬೇಕು. ಗುಂಪಿನಲ್ಲಿದ್ದಾಗ ಜನರಿಂದ ಪರಸ್ಪರ ಅಂತರವನ್ನು ಕಾಪಾಡಿಕೊಳ್ಳುವಂತೆ ವಿಪತ್ತು ನಿರ್ವಹಣಾ ಪ್ರಾಧಿಕಾರದ ಪ್ರಕಟಣೆ ತಿಳಿಸಿದೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ