Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ರಾಜ್ಯದ 10 ಜಿಲ್ಲೆಗಳ 40 ಕಡೆ ಏಕಕಾಲದಲ್ಲಿ ಲೋಕಾಯುಕ್ತ ದಾಳಿ

 

ಬೆಂಗಳೂರು:
ಘೋಷಿತ ಆದಾಯಕ್ಕಿಂತ ಹೆಚ್ಚು ಸಂಪತ್ತು ಹೊಂದಿರುವ ಆರೋಪ ಹೊತ್ತಿರುವ ರಾಜ್ಯದ ವಿವಿಧ ಇಲಾಖೆಗಳ 10 ಅಧಿಕಾರಿಗಳ ವಿರುದ್ಧ ಹತ್ತು ಜಿಲ್ಲೆಗಳಲ್ಲಿ 40 ಕಡೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ಏಕಕಾಲದಲ್ಲಿ ದಾಳಿ ನಡೆಸಿದ್ದಾರೆ.
ರಾಜ್ಯದ 10 ಸರ್ಕಾರಿ ಅಧಿಕಾರಿಗಳ ಮನೆ, ಕಚೇರಿ,ಸಂಬಂಧಿಕರ ಮನೆಗಳ ಮೇಲೂ ಲೋಕಾಯುಕ್ತ ದಾಳಿ ನಡೆದಿದೆ. ದಾಳಿ ವೇಳೆ ಸಿಕ್ಕ ಅಪಾರ ಪ್ರಮಾಣದ ಹಣ, ಒಡವೆಗಳು ಹಾಗೂ ಇನ್ನಿತರ ಆಸ್ತಿಗಳ ಬಗ್ಗೆ ಪರಿಶೀಲನೆ ನಡೆದಿದೆ.

ಚಿಕ್ಕಮಗಳೂರು, ಮಂಡ್ಯ ಮೈಸೂರು, ಕೊಪ್ಪಳ, ಚಾಮರಾಜನಗರ, ಬಳ್ಳಾರಿ, ವಿಜಯನಗರ, ಮಂಗಳೂರು, ಸೇರಿದಂತೆ ಹಲವೆಡೆ ದಾಳಿ ನಡೆಸಲಾಗಿದೆ. ತುಮಕೂರಿನ ಕೆಆರ್‌ಡಿಎಲ್‌ ಇಂಜಿನಿಯರ್​ ಹನುಮಂತರಾಯಪ್ಪ ಮನೆ ಮೇಲೆ ದಾಳಿ ನಡೆಸಿ ಪರಿಶೀಲನೆ ಮಾಡಲಾಗುತ್ತಿದೆ.ಚಿಕ್ಕಮಗಳೂರಿನ ವಾಣಿಜ್ಯ ಅಧಿಕಾರಿ ನೇತ್ರಾವತಿ, ಮಂಡ್ಯ ಪಿಡಬ್ಲ್ಯು ಡಿ ಇಇ ಹರ್ಷ, ಮೈಸೂರಿನ ಮೂಡಾ ಇಂಜಿನಿಯರ್ ಯಜ್ಞೇಂದ್ರ, ಹಾಸನದ ಫುಡ್ ಇನ್ಸ್ ಪೆಕ್ಟರ್ ಜಗನ್ನಾಥ ನಿವಾಸ ಹಾಗೂ ಕಚೇರಿಗಳ ಮೇಲೆ ದಾಳಿ ನಡೆಸಿರುವ ಅಧಿಕಾರಿಗಳು ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ.
ಅಧಿಕಾರಿಗಳ ಆಪ್ತರು, ಸಂಬಂಧಿಕರ ಮನೆಗಳ ಮೇಲೂ ಲೋಕಾಯುಕ್ತ ದಾಳಿ ನಡೆಸಲಾಗಿದೆ ಎಂದು ತಿಳಿದುಬಂದಿದೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬೆಳಗಾವಿ ಪೊಲೀಸರ ಮಹತ್ವದ ಕಾರ್ಯಾಚರಣೆ: ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ವಶ..!ಹಾರ್ಮುಜ್ ಜಲಸಂಧಿಯಲ್ಲಿ ಸ್ಫೋಟಕ ಇರಿಸುವ ಇರಾನ್ ಬೋಟ್‌ ಕಂಡರೆ ಹೊಡೆದುರುಳಿಸಿ: ಅಮೆರಿಕ ನೌಕಾಪಡೆಗೆ ಟ್ರಂಪ್ ಆದೇಶSSLC ಫಲಿತಾಂಶದ ಬೆನ್ನಿಗೆ ಮುಂದಿನ ಪರೀಕ್ಷೆ ದಿನಾಂಕವು ಘೋಷಣೆಬೆಳಗಾವಿ ಬಾಗಿಲಲ್ಲೇ ಇನ್ಮುಂದೆ ವೆಂಕಟೇಶ್ವರನ ದರ್ಶನ ಭಾಗ್ಯ !4 ದಿನಗಳ ಹಿಂದೆ ನದಿಗೆ ಬಿದ್ದ ಮಗುವಿನ ಶವ ಕೊನೆಗೂ ಪತ್ತೆDC ಕಚೇರಿ ಸನಿಹ ಮಾವು ಕೊಯ್ಯುವಾಗ ವಿದ್ಯುತ್ ಸ್ಪರ್ಶಿಸಿ ಗ್ರಾಮ ಸಹಾಯಕ ದುರ್ಮರಣಹೊಲದಲ್ಲಿ ಕೆಲಸ ಮಾಡುತ್ತಿದ್ದ ಇಬ್ಬರು ಸಿಡಿಲು ಬಡಿದು ಸಾವುಹೊಲದಲ್ಲಿ ಕೆಲಸ ಮಾಡುತ್ತಿದ್ದ ಇಬ್ಬರು ಸಿಡಿಲು ಬಡಿದು ಸಾವುಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ