Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ನಾಳೆ ಯಮಕನಮರಡಿ ಕ್ಷೇತ್ರದಲ್ಲಿ ಯತ್ನಾಳ, BJP ಘಟಾನುಘಟಿಗಳಿಂದ ಅಬ್ಬರದ ಪ್ರಚಾರ..!

ನಾಳೆ ಯಮಕನಮರಡಿ ಕ್ಷೇತ್ರದಲ್ಲಿ ಯತ್ನಾಳ, BJP ಘಟಾನುಘಟಿಗಳು..!

ಅಬ್ಬರದ ಪ್ರಚಾರ ನಡೆಸಲಿರುವ ಬೆಂಕಿ ಚೆಂಡು..!

ಬೆಳಗಾವಿ : ವಿಧಾನಸಭೆ ಚುನಾವಣೆ ಘೋಷಣೆಗೂ ಮುನ್ನವೇ ರಾಜ್ಯದಲ್ಲಿ ನಾಯಕರಿಂದ ಭಾರಿ ಪ್ರಚಾರ ನಡೆಯುತ್ತಿರುವಾಗ ಯಮಕನಮರಡಿ ಕ್ಷೇತ್ರದಲ್ಲಿ ಇಲ್ಲಿನ ಬಿಜೆಪಿ ನಾಯಕರು ಈ ಬಾರಿ ಹಾಲಿ ಶಾಸಕ ಸತೀಶ ಜಾರಕಿಹೊಳಿಗೆ ಸೋಲುಣಿಸಲು ಹಿಂದೂ ಪೈರ್ ಬ್ರ್ಯಾಂಡ್ ಆಗಿರುವ ವಿಜಯಪೂರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರಿಂದ ಅಬ್ಬರದ ಪ್ರಚಾರ ನಡೆಸಲು ಮುಂದಾಗಿದ್ದಾರೆ.

ನಾಳೆ (ಶುಕ್ರವಾರ) ಹುಕ್ಕೇರಿ ತಾಲೂಕಿನ ಹೆಬ್ಬಾಳ ಗ್ರಾಮದಲ್ಲಿನ ಶ್ರೀ ಸಿದ್ದೇಶ್ವರ ದೇವಸ್ಥಾನ ಹತ್ತಿರ ಸಂಜೆ 5 ಘಂಟೆಗೆ ಬಿಜೆಪಿ ನೇತೃತ್ವದಲ್ಲಿ ಆಯೋಜಿಸಲಾಗಿರುವ ಕಾರ್ಯಕರ್ತರ ಬೃಹತ್‌ ಸಮಾವೇಶಕ್ಕೆ ಕೆಂದ್ರ ಬಿಂದುವಾಗಿ ಲಿಂಗಾಯತ ಮುಖಂಡ ಹಿಂದೂ ಪೈರ್ ಬ್ರ್ಯಾಂಡ್ ಹಾಗೂ ಬೆಂಕಿ ಚೆಂಡು ಖ್ಯಾತಿಯ ಶಾಸಕ ಬಸನಗೌಡ ಪಾಟೀಲ ಯತ್ನಾಳ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

ಈ ಸಮಾವೇಶದಲ್ಲಿ ಜಿಲ್ಲಾ ಬಿಜೆಪಿ ಘಟಾನುಘಟಿಗಳು ನಾಯಕರಾದ ಲಕ್ಷ್ಮಣ ಸವದಿ, ಜೊಲ್ಲೆ ದಂಪತಿಗಳು, ಕತ್ತಿ ಕುಟುಂಬ, ಶಶಿಕಾಂತ ನಾಯಕ, ಜಿಲ್ಲಾಧ್ಯಕ್ಷರು, ಮುಖಂಡರಾದ ಬಸವರಾಜ ಹುಂದ್ರಿ, ಮಾರುತಿ ಅಷ್ಟಗಿ, ಕಲಗೌಡ ಪಾಟೀಲ ಸೇರಿದಂತೆ ಹಲವರು ಉಪಸ್ಥಿತರಿರಲಿದ್ದಾರೆ.

ಲಿಂಗಾಯತ ಪ್ರಾಬಲ್ಯವಿರುವ ಇಲ್ಲಿ ಸಾವಿರಾರು ಸಂಖ್ಯೆಯಲ್ಲಿ ಕಾರ್ಯಕರ್ತರು ಹಾಗೂ ಯತ್ನಾಳ ಅಭಿಮಾನಿಗಳು ಸೇರಲಿದ್ದು, ನಾಳಿನ ಸಮಾವೇಶ ಹಾಲಿ ಶಾಸಕರಿಗೆ ಪರೋಕ್ಷವಾಗಿ ಸೆಡ್ಡು ಹೊಡೆಯುವ ರೀತಿಯಲ್ಲಿ ನಡೆಯಲಿದೆ ಎಂದು ತಿಳಿದು ಬಂದಿದೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ