Press ID & Credential Portal
Apply / Verify  ➔
LIVE TV LocalCrimeNationalInternationalPoliticsEducationSportsHealthFeature
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ವಿದೇಶಿ ಉದ್ಯೋಗದ ಆಮಿಷ ; ಪೋರ್ಚುಗಲ್‌ಗೆ ಹೋದ ಭಾರತದ ಯುವತಿ ಬಿಯರ್ ಶಾಪ್‌ ಮಾಲೀಕನಿಗೆ ಮಾರಾಟ….?!

ನವದೆಹಲಿ: ವಿದೇಶದಲ್ಲಿ ಕೈತುಂಬ ಸಂಬಳದ ಉದ್ಯೋಗ ಕೊಡಿಸುವುದಾಗಿ ನಂಬಿಸಿ 28 ವರ್ಷದ ನಾಗ್ಪುರ ಮೂಲದ ಯುವತಿಯನ್ನು ಪೋರ್ಚುಗಲ್‌ಗೆ ಕರೆದೊಯ್ದು, ಅಲ್ಲಿ ಬಿಯರ್ ಅಂಗಡಿ ಮಾಲೀಕನಿಗೆ ಮಾರಾಟ ಮಾಡಿ, ಹಿಂಸೆ ನೀಡಿರುವ ಆರೋಪ ಕೇಳಿಬಂದಿದೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪುಣೆಯ ‘ಏಜೆನ್ಸಿ ಸಂಸ್ಥೆಯ ನಿರ್ವಾಹಕರು ಸೇರಿದಂತೆ ಎಂಟು ಮಂದಿ ವಿರುದ್ಧ ಪುಣೆ ಪೊಲೀಸರು ಮಾನವ ಕಳ್ಳಸಾಗಣೆ, ವಂಚನೆ ಮತ್ತು ಸುಲಿಗೆ ಆರೋಪಗಳಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಆರೋಪಿಗಳಿಗಾಗಿ ಶೋಧ ಕಾರ್ಯ ಮುಂದುವರಿದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ನಾಗ್ಪುರದ 28 ವರ್ಷದ ಯುವತಿಗೆ ಇನ್‌ಸ್ಟಾಗ್ರಾಂ ಮೂಲಕ ಪುಣೆಯ ಏಜೆನ್ಸಿ ಸಂಸ್ಥೆಯ ಪರಿಚಯವಾಗಿತ್ತು. ಕಳೆದ ತಿಂಗಳು ಆಕೆ ಸಂಸ್ಥೆಯನ್ನು ಸಂಪರ್ಕಿಸಿದಾಗ, ಪೋರ್ಚುಗಲ್‌ನಲ್ಲಿ ಕ್ಯಾಷಿಯರ್ ಕೆಲಸ ಕೊಡಿಸುವುದಾಗಿ ಸಂಸ್ಥೆಯ ನಿರ್ವಾಹಕರು ಭರವಸೆ ನೀಡಿದ್ದರು. ತಿಂಗಳಿಗೆ ₹1.5 ಲಕ್ಷ ವೇತನ ದೊರೆಯಲಿದೆ ಹಾಗೂ ದಿನಕ್ಕೆ ಕೇವಲ ಎಂಟು ಗಂಟೆಗಳ ಕಾಲ ಕೆಲಸ ಮಾಡಬೇಕಾಗುತ್ತದೆ ಎಂದು ಆಕೆಯನ್ನು ನಂಬಿಸಿದ್ದರು.

ವೀಸಾ ಹಾಗೂ ಇತರ ದಾಖಲೆಗಳ ಸಿದ್ಧತೆಗಾಗಿ ಹಣದ ಅಗತ್ಯವಿದೆ ಎಂದು ಹೇಳಿ ಆರೋಪಿಗಳು ಯುವತಿಯಿಂದ ಹಂತ ಹಂತವಾಗಿ ಒಟ್ಟು ಸುಮಾರು ₹11 ಲಕ್ಷ ಹಣವನ್ನು ಪಡೆದುಕೊಂಡಿದ್ದರು. ಆದರೆ, ಯುವತಿ ಪೋರ್ಚುಗಲ್‌ಗೆ ತಲುಪಿದ ಬಳಿಕ ಪರಿಸ್ಥಿತಿ ಸಂಪೂರ್ಣ ಬದಲಾಗಿತ್ತು. ಅಲ್ಲಿಗೆ ತೆರಳಿದ ತಕ್ಷಣ ‘ಏಜೆಂಟ್‌ಗಳು’ ಆಕೆಯ ಪಾಸ್‌ಪೋರ್ಟ್ ಕಸಿದುಕೊಂಡು, ಎರಡು ದಿನಗಳ ಕಾಲ ಕೊಠಡಿಯೊಂದರಲ್ಲಿ ಕೂಡಿಹಾಕಿದ್ದರು ಎಂದು ಆರೋಪಿಸಲಾಗಿದೆ.
ಬಳಿಕ ಆಕೆಯನ್ನು ಬಿಯರ್ ಅಂಗಡಿಯೊಂದರ ಮಾಲೀಕನಿಗೆ ಮಾರಾಟ ಮಾಡಲಾಗಿದ್ದು, ಅಲ್ಲಿ ಆಕೆಯನ್ನು ಬಲವಂತವಾಗಿ ಕೆಲಸ ಮಾಡಿಸಿ, ತೀವ್ರ ಮಾನಸಿಕ ಮತ್ತು ದೈಹಿಕ ಹಿಂಸೆ ನೀಡಲಾಗಿತ್ತು ಎಂದು ದೂರಿನಲ್ಲಿ ತಿಳಿಸಲಾಗಿದೆ. ಒಂದು ಹಂತದಲ್ಲಿ ಯುವತಿ ತನ್ನ ಪಾಸ್‌ಪೋರ್ಟ್ ವಾಪಸ್ ನೀಡುವಂತೆ ಆರೋಪಿಗಳನ್ನು ಕೇಳಿಕೊಂಡಿದ್ದಾಳೆ. ಆದರೆ, ಪಾಸ್‌ಪೋರ್ಟ್ ಹಿಂದಿರುಗಿಸಲು ಆರೋಪಿಗಳು ಹೆಚ್ಚುವರಿ ಹಣಕ್ಕೆ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ.

ಸುಮಾರು ಒಂದು ತಿಂಗಳ ಕಾಲ ಹಿಂಸೆ ಅನುಭವಿಸಿದ ಬಳಿಕ ಯುವತಿಗೆ ಅಲ್ಲಿಂದ ತಪ್ಪಿಸಿಕೊಳ್ಳುವ ಅವಕಾಶವೊಂದು ಸಿಕ್ಕಾಗ ಯವತಿ ಅಲ್ಲಿಂದ ಪಾರಾಗಿದ್ದಾಳೆ. ಮೊದಲು ಬಸ್ ಮೂಲಕ ಪೋರ್ಚುಗಲ್‌ನ ಲಿಸ್ಬನ್‌ಗೆ ಪರಾರಿಯಾದ ಆಕೆ, ಅಲ್ಲಿಂದ ಮ್ಯಾಡ್ರಿಡ್‌ಗೆ ತೆರಳಿದ್ದಾಳೆ. ನಂತರ ದೋಹಾ ಮಾರ್ಗವಾಗಿ ಭಾರತಕ್ಕೆ ಬರುವಲ್ಲಿ ಯಶಸ್ವಿಯಾಗಿದ್ದಾಳೆ.
ಯುವತಿ ಭಾರತಕ್ಕೆ ಮರಳಿದ ಬಳಿಕವೂ ಆರೋಪಿಗಳ ಬೆದರಿಕೆ ನಿಂತಿರಲಿಲ್ಲ ಎನ್ನಲಾಗಿದೆ. ಆಕೆಗೆ ಮಾಲ್ಟಾದಲ್ಲಿ ಉದ್ಯೋಗ ಕೊಡಿಸುವುದಾಗಿ ಹೇಳಿ ಮತ್ತೊಮ್ಮೆ ₹3 ಲಕ್ಷ ಹಣಕ್ಕೆ ಬೇಡಿಕೆ ಇಟ್ಟಿದ್ದರು. ಯುವತಿ ಹಣ ನೀಡಲು ನಿರಾಕರಿಸಿದಾಗ, ಆಕೆಯ ಪತಿಯನ್ನು ಕೊಲ್ಲುವುದಾಗಿ ಬೆದರಿಕೆ ಹಾಕಿದ್ದಲ್ಲದೆ, ಆಕೆಯ ವಿರುದ್ಧ ಸುಳ್ಳು ಪ್ರಕರಣಗಳಲ್ಲಿ ಸಿಲುಕಿಸುವುದಾಗಿಯೂ ಆರೋಪಿಗಳು ಬೆದರಿಕೆ ಹಾಕಿದ್ದಾರೆ.
ಆರೋಪಿಗಳ ಕಿರುಕುಳದಿಂದ ಬೇಸತ್ತ ಯುವತಿ ಕೊನೆಗೆ ಪುಣೆ ಪೊಲೀಸರಿಗೆ ದೂರು ನೀಡಿದ್ದಾರೆ. ಈ ದೂರಿನ ಆಧಾರದ ಮೇಲೆ ಈ ವಾರದ ಆರಂಭದಲ್ಲಿ   ಸಂಸ್ಥೆಯ ನಿರ್ವಾಹಕರು ಸೇರಿದಂತೆ ಒಟ್ಟು ಎಂಟು ಮಂದಿ ವಿರುದ್ಧ ಮಾನವ ಕಳ್ಳಸಾಗಣೆ, ವಂಚನೆ ಮತ್ತು ಸುಲಿಗೆ ಸೇರಿದಂತೆ ವಿವಿಧ ಆರೋಪಗಳಡಿ ಪ್ರಕರಣ ದಾಖಲಿಸಲಾಗಿದೆ. ಪ್ರಕರಣದ ತನಿಖೆ ಮುಂದುವರಿದಿದ್ದು, ಆರೋಪಿಗಳ ಪತ್ತೆಗಾಗಿ ಪೊಲೀಸರು ಶೋಧ ಕಾರ್ಯ ನಡೆಸುತ್ತಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Author
Jana Jeevala News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಥ್ರೋ ಬಾಲ್ ಪಂದ್ಯಾವಳಿಯಲ್ಲಿ ಗೆಲುವು ಸಾಧಿಸಿದ ಬೆಳಗಾವಿ ಜಿಎ ಪ್ರೌಢಶಾಲೆಯ ಬಾಲೆಯರುಜಿಲ್ಲಾ ಮಟ್ಟದ ಶಿಕ್ಷಕ ಪ್ರಶಸ್ತಿ ಪ್ರಕಟ ಡಾ. ಪ್ರಭಾಕರ ಕೋರೆ ಅವರಿಗೆ ಪದ್ಮಶ್ರೀ ಪ್ರಶಸ್ತಿ: ಲಿಂಗಾಯತ ಸಮಾಜದ ವತಿಯಿಂದ ಭವ್ಯ ಸನ್ಮಾನಜಿಲ್ಲೆಯ ಉತ್ತಮ ಶಿಕ್ಷಕರಿಗೆ ರಾಜ್ಯ ಮಟ್ಟದ ಶಿಕ್ಷಕ ಪ್ರಶಸ್ತಿಬೈಕ್ ಕಳ್ಳನನ್ನು ಬಂಧಿಸಿದ ಪೊಲೀಸರುಭೀಕರ ರಸ್ತೆ ಅಪಘಾತ: ಇಬ್ಬರು ಯುವಕರ ದುರ್ಮರಣಪ್ರಜಾಪಿತ ಬ್ರಹ್ಮಾಕುಮಾರಿ ಶಹಾಪುರ ಕೇಂದ್ರದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮಾಚರಣೆಸುರಂಗದಲ್ಲಿ 9 ದಿನ ಹರೇ ಕೃಷ್ಣ ಪಠಿಸುತ್ತಿದ್ದವ ಜನ್ಮಾಷ್ಟಮಿಯಂದು ಹೊರಬಂದಎರಡೇ ತಿಂಗಳಲ್ಲಿ ಕಾಕ್ರೋಚ್ ಜನತಾ ಪಾರ್ಟಿ ಇಬ್ಬಾಗ: ಅಸ್ತಿತ್ವಕ್ಕೆ ಬಂತು ಹೊಸ ಬಣ!ಅಯೋಧ್ಯೆ ದೇಗುಲದ ಅಭಿವೃದ್ಧಿಗೆ ಭಕ್ತಾದಿಗಳ ಬೆಂಬಲ ಕೋರಿದ ರಾಮಮಂದಿರದ ನೂತನ ಸಿಇಒ