Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಮಹಾಭಾರತದ ಶಕುನಿ ಮಾಮಾ ಖ್ಯಾತಿಯ ಗುಫಿ ಪೈಂಟಲ್ ವಿಧಿವಶ

 

ಮುಂಬೈ:
ಹಿರಿಯ ನಟ ಗುಫಿ ಪೈಂಟಲ್ ಅವರು ಸೋಮವಾರ ಬೆಳಿಗ್ಗೆ 79 ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ ಎಂದು ಅವರ ಕುಟುಂಬ ದೃಢಪಡಿಸಿದೆ. 1980ರ ದಶಕದ ಬಿ.ಆರ್. ಚೋಪ್ರಾ ಅವರ ಮಹಾಭಾರತ ಟಿವಿ ಧಾರಾವಾಹಿಯಲ್ಲಿ ಶಕುನಿ ಮಾಮಾ ಪಾತ್ರದಲ್ಲಿನ ನಟನೆಗೆ ದೇಶಾದ್ಯಂತ ಮನೆಮಾತಾಗಿದ್ದ ಗುಫಿ ಪೈಂಟಲ್‌ ಅವರು ವಯೋಸಹಜ ಆರೋಗ್ಯ ಸಮಸ್ಯೆಗಳಿಂದಾಗಿ ಸೋಮವಾರ ಮುಂಬೈನಲ್ಲಿ ನಿಧನರಾದರು.
“ದುರದೃಷ್ಟವಶಾತ್, ಅವರು ಇನ್ನಿಲ್ಲ. ಅವರು ಬೆಳಿಗ್ಗೆ 9 ಗಂಟೆಗೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು. ಅವರ ಹೃದಯ ಕೈಕೊಟ್ಟಿತು. ಅವರು ನಿದ್ರೆಯಲ್ಲೇ ಶಾಂತವಾಗಿ ನಿಧನರಾದರು” ಎಂದು ಅವರ ಸೋದರಳಿಯ ಹಿತೇನ್ ಪೈಂಟಲ್‌ ತಿಳಿಸಿದ್ದಾರೆ.
ಗುಫಿ ಅವರು ತಮ್ಮ ಮಗ, ಸೊಸೆ ಮತ್ತು ಮೊಮ್ಮಕ್ಕಳನ್ನು ಅಗಲಿದ್ದಾರೆ. ಸೋಮವಾರ ಸಂಜೆ 4 ಗಂಟೆಗೆ ಉಪನಗರ ಅಂಧೇರಿಯಲ್ಲಿರುವ ಚಿತಾಗಾರದಲ್ಲಿ ಅಂತ್ಯಕ್ರಿಯೆ ನಡೆಯಲಿದೆ.
ಗುಫಿ ಪೈಂಟಲ್ ಅವರ ಬಗ್ಗೆ…
ಗುಫಿ ಫೈಂಟಲ್‌ ಅನೇಕ ಟಿವಿ ಧಾರಾವಾಹಿಗಳು ಮತ್ತು ಚಲನಚಿತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ಅವರು ಬಹದ್ದೂರ್ ಶಾ ಜಾಫರ್, ಮಹಾಭಾರತ, ಕಾನೂನ್, ಓಂ ನಮಃ ಶಿವಾಯ, ಸಿಐಡಿ, ಶ್‌… ಕೋಯಿ ಹೈ, ದ್ವಾರಕಾಧೀಶ ಭಗವಾನ್ ಶ್ರೀ ಕೃಷ್ಣ, ರಾಧಾಕೃಷ್ಣ ಮತ್ತು ಜೈ ಕನ್ಹಯಾ ಲಾಲ್ ಕಿ ಹಾಗೂ ಧಾರಾವಾಹಿಗಳಲ್ಲಿ ಕಾಣಿಸಿಕೊಂಡರು. ಅವರು 1975 ರ ರಫೂ ಚಕ್ಕರ್ ಚಲನಚಿತ್ರದೊಂದಿಗೆ ಸಿನೆಮಾ ಲೋಕಕ್ಕೆ ಪ್ರವೇಶ ಮಾಡಿದರು. ಇದರ ನಂತರ, ದಿಲ್ಲಗಿ, ದೇಶ್ ಪರದೇಶ್ ಮತ್ತು ಸುಹಾಗ್ ಸೇರಿದಂತೆ ಅನೇಕ ಚಲನಚಿತ್ರಗಳಲ್ಲಿ ನಟಿಸಿದ್ದಾರೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ