Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಮಹಾಜನ್ ವರದಿ ಅಂತಿಮ : ಡಿಸಿ ವರದಿ

ಬೆಳಗಾವಿ: ಬೆಳಗಾವಿ ಗಡಿ ವಿವಾದ ಸಂಬಂಧ ಮಹಾರಾಷ್ಟ್ರ ಏಕೀಕರಣ ಸಮಿತಿ (ಎಂಇಎಸ್) ಎಂದಿನಂತೆ ತಕರಾರು ತೆಗೆಯುತ್ತಿದೆ. ಈ ನಡುವೆ ಮಹಾರಾಷ್ಟ್ರ ಸರ್ಕಾರ ಬುಧವಾರ ಮುಂಬೈಯಲ್ಲಿ ಬೆಳಗಾವಿ ಗಡಿ ವಿವಾದ ಕುರಿತು ಉನ್ನತ ಮಟ್ಟದ ಸಭೆ ನಡೆಸಿ ಚರ್ಚಿಸಿದೆ. ಬೆಳಗಾವಿ ಗಡಿ ವಿವಾದ ಸಂಬಂಧ ಇಲ್ಲಿಯ ಮಹಾನಗರ ಪಾಲಿಕೆಯಲ್ಲಿ ಕರ್ನಾಟಕದ ಪರ ಅಂಗೀಕರಿಸಬೇಕು ಎಂದು ಕನ್ನಡ ಪರ ಸಂಘಟನೆಗಳು ಹಲವು ತಿಂಗಳುಗಳಿಂದ ಒತ್ತಾಯ ಮಾಡುತ್ತಿವೆ. ಈ ನಡುವೆ ಇದೀಗ ಮಹತ್ವದ ಬೆಳವಣಿಗೆ ನಡೆದಿದೆ.

ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದಕ್ಕೆ ಸಂಬಂಧಿಸಿ ಮಹಾಜನ್ ಆಯೋಗದ ವರದಿಯನ್ನು ಸಂಪೂರ್ಣವಾಗಿ ಜಾರಿಗೊಳಿಸುವ ನಿಲುವನ್ನು ಕರ್ನಾಟಕ ಸರ್ಕಾರವು 1976 ರಲ್ಲಿಯೇ ಕೈಗೊಂಡಿರುವುದರಿಂದ, ಅದಕ್ಕೆ ಅನುಗುಣವಾಗಿ ಮುಂದಿನ ಕ್ರಮ ಕೈಗೊಳ್ಳಬಹುದಾಗಿದೆ ಎಂದು ಬೆಳಗಾವಿ ಡಿಸಿ ರಾಜ್ಯ ಸರ್ಕಾರಕ್ಕೆ ವರದಿ ಸಲ್ಲಿಸಿದ್ದಾರೆ.

ಬೆಳಗಾವಿ ಮಹಾನಗರ ಪಾಲಿಕೆಯಲ್ಲಿ 'ಬೆಳಗಾವಿ ಕರ್ನಾಟಕದ ಅವಿಭಾಜ್ಯ ಅಂಗ' ಎಂಬ ನಿರ್ಣಯ ಅಂಗೀಕರಿಸುವ ಕುರಿತು ಕನ್ನಡ ಸಂಘಟನೆಗಳು ಸಲ್ಲಿಸಿರುವ ಮನವಿ, ಪಾಲಿಕೆ ಆಯುಕ್ತರ ಅಭಿಪ್ರಾಯ ಹಾಗೂ ವಿಧಾನಮಂಡಲದ ಹಿಂದಿನ ನಿರ್ಣಯಗಳನ್ನು ಪರಿಶೀಲಿಸಿದ ಬಳಿಕ ಜಿಲ್ಲಾಧಿಕಾರಿಗಳು ಸರ್ಕಾರಕ್ಕೆ ಈ ವರದಿ ಕಳುಹಿಸಿದ್ದಾರೆ.

ಕರ್ನಾಟಕ ವಿಧಾನಸಭೆ ಹಾಗೂ ವಿಧಾನ ಪರಿಷತ್ತಿನಲ್ಲಿ ಮಹಾಜನ್ ಆಯೋಗದ ವರದಿಯನ್ನು ಸಂಪೂರ್ಣವಾಗಿ ಜಾರಿಗೆ ತರಬೇಕೆಂಬ ನಿರ್ಣಯ ಈಗಾಗಲೇ ಅಂಗೀಕಾರಗೊಂಡಿದೆ. 2022ರ ಡಿಸೆಂಬರ್ 22ರಂದು ವಿಧಾನಸಭೆಯಲ್ಲಿ ಅಂಗೀಕರಿಸಿದ ನಿರ್ಣಯದಲ್ಲೂ ಮಹಾಜನ್ ಆಯೋಗದ ವರದಿಯೇ ರಾಜ್ಯದ ಹಿತರಕ್ಷಣೆಗೆ ಸಮರ್ಥವಾದ ದಾಖಲೆ ಎಂಬ ನಿಲುವನ್ನು ಪುನರುಚ್ಚರಿಸಲಾಗಿದೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.

ಮಹಾರಾಷ್ಟ್ರ ಸರ್ಕಾರವು ಗಡಿ ವಿವಾದವನ್ನು ಸುಪ್ರೀಂ ಕೋರ್ಟ್‌ಲ್ಲಿ ಪ್ರಶ್ನಿಸಿರುವುದರಿಂದ ಪ್ರಕರಣ ನ್ಯಾಯಾಂಗದ ವಿಚಾರಣೆಯಲ್ಲಿದೆ.
ಪ್ರಶ್ನಿಸಿರುವುದರಿಂದ ಪ್ರಕರಣ ನ್ಯಾಯಾಂಗದ ವಿಚಾರಣೆಯಲ್ಲಿದೆ. ಆದಾಗ್ಯೂ, ಮಹಾಜನ್ ಆಯೋಗದ ವರದಿ ಕುರಿತು ಕರ್ನಾಟಕದ ನಿಲುವು ಸ್ಪಷ್ಟವಾಗಿದ್ದು, ರಾಜ್ಯ ಸರ್ಕಾರವು ಹಿಂದೆ ಕೈಗೊಂಡ ನಿರ್ಣಯದ ಅನ್ವಯವೇ ಕ್ರಮ ವಹಿಸಲು ಅವಕಾಶವಿದೆ ಎಂದು ಜಿಲ್ಲಾಧಿಕಾರಿಗಳು ಅಭಿಪ್ರಾಯಪಟ್ಟಿದೆ.

ವರದಿಯ ಕೊನೆಯ ಸಾಲಿನಲ್ಲಿ, "ಕರ್ನಾಟಕ ಸರ್ಕಾರದಿಂದ ಈಗಾಗಲೇ 1976ರಲ್ಲಿ ಮಹಾಜನ ವರದಿಯನ್ನು ಸಂಪೂರ್ಣವಾಗಿ ಜಾರಿಗೆ ತರಬೇಕೆಂದು ನಿರ್ಣಯಿಸಲಾಗಿರುವ ಕಾರಣ, ಅದರಂತೆ ಕ್ರಮ ವಹಿಸಬಹುದಾಗಿದೆ" ಎಂದು ಸ್ಪಷ್ಟವಾಗಿ ಶಿಫಾರಸು ಮಾಡಲಾಗಿದೆ. ಈ ಅಭಿಪ್ರಾಯವು ಬೆಳಗಾವಿ ಮಹಾನಗರ ಪಾಲಿಕೆಯ ನಿರ್ಣಯ ಕುರಿತ ಸರ್ಕಾರದ ಮುಂದಿನ ತೀರ್ಮಾನಕ್ಕೆ ಮಹತ್ವದ ಆಧಾರವಾಗಲಿದೆ.

Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST