Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಕಾಡಾನೆ ಸೆರೆಹಿಡಿಯಲು ಕರ್ನಾಟಕದ ಸಹಾಯಹಸ್ತ ಚಾಚಿದ ಮಹಾರಾಷ್ಟ್ರ

ಬೆಳಗಾವಿ : ಮಹಾರಾಷ್ಟ್ರದ ಸಿಂಧದುರ್ಗ, ಕೊಲ್ಲಾಪುರ ಜಿಲ್ಲೆಯ ಅರಣ್ಯ ಪ್ರದೇಶದಲ್ಲಿನ ರೈತರಿಗೆ ತೊಂದರೆ ನೀಡುತ್ತಿರುವ ಕಾಡಾನೆಗಳನ್ನು ಸೆರೆಹಿಡಿಯಲು ನೆರವಾಗುವಂತೆ ಮಹಾರಾಷ್ಟ್ರದ ಅರಣ್ಯ ಇಲಾಖೆ ಈಗ ಕರ್ನಾಟಕದ ಅರಣ್ಯ ಇಲಾಖೆ ಕೇಳಿದೆ.

ಕೊಲ್ಲಾಪುರದ ಉಪ ಅರಣ್ಯ ಸಂರಕ್ಷಣಾಧಿಕಾರಿ ನೇತೃತ್ವದಲ್ಲಿ ಚಂದಗಡ, ಸಿಂಧುದುರ್ಗ ಜಿಲ್ಲೆಯ ವೆಂಗುರ್ಲಾ ಮತ್ತು ಸಾವಂತವಾಡಿಯ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಗಳು, ವಲಯ ಅರಣ್ಯ ಅಧಿಕಾರಿಗಳು ಖಾನಾಪುರದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಸುನೀತಾ ನಿಂಬರಗಿ, ವಲಯ ಅರಣ್ಯಾಧಿಕಾರಿ ಶ್ರೀಕಾಂತ ಪಾಟೀಲ ಬಳಿ ಚರ್ಚಿಸಿದ್ದಾರೆ.

ಕೊಲ್ಲಾಪುರ ಉಪ ಅರಣ್ಯ ಸಂರಕ್ಷಣಾಧಿಕಾರಿ ಜಿ.ಜಿ.ಸಿಂಗ್‌ ಮಾತನಾಡಿ, ಮಹಾರಾಷ್ಟ್ರದ ಎರಡು ಜಿಲ್ಲೆಗಳ ಅರಣ್ಯ ಪ್ರದೇಶದಲ್ಲಿ 50 ಕ್ಕೂ ಹೆಚ್ಚು ಕಾಡಾನೆಗಳಿವೆ. ಅವು ರೈತರ ಜಮೀನಿಗೆ ನುಗ್ಗಿ ಬೆಳೆ ಹಾನಿ ಮಾಡುತ್ತಿವೆ. ಕಾಡಿನಲ್ಲಿರುವ ಜನರಿಗೆ ಭಯ ಹುಟ್ಟಿಸುತ್ತಿವೆ. ಖಾನಾಪುರದಲ್ಲಿ ನಡೆಸಿದ ಕಾರ್ಯಾಚರಣೆ ಮಾದರಿಯಲ್ಲಿ ಮಹಾರಾಷ್ಟ್ರದ ಅರಣ್ಯದಲ್ಲೂ ಕಾರ್ಯಾಚರಣೆ ನಡೆಸಿ ಕಾಡಾನೆಗಳನ್ನು ಸೆರೆ ಹಿಡಿಯಲು ನೆರವಾಗಬೇಕು' ಎಂದು ಮನವಿ ಮಾಡಿದರು.

ಇದಕ್ಕೆ ಪ್ರತಿಕ್ರಿಯಿಸಿದ ಸುನೀತಾ ನಿಂಬರಗಿ ಅವರು, ಶಿವಮೊಗ್ಗದ ಸಕ್ರೆಬೈಲ್ ಆನೆ ಬಿಡಾರದಲ್ಲಿ ಪಳಗಿದ ಆನೆಗಳನ್ನು ತರಿಸಿ, ಮಹಾರಾಷ್ಟ್ರದ ಕಾಡಾನೆಗಳನ್ನು ಸೆರೆಹಿಡಿಯಲು ಎಲ್ಲ ರೀತಿಯ ಸಹಕಾರ ನೀಡಲು ಸಿದ್ಧ. ಈ ವಿಷಯವಾಗಿ ಮಹಾರಾಷ್ಟ್ರ ಕರ್ನಾಟಕ ಸರ್ಕಾರದ ಜತೆಗೆ ಪತ್ರ ವ್ಯವಹಾರ ನಡೆಸಬೇಕು ಎಂದರು.
ಮಹಾರಾಷ್ಟ್ರದ ಅಧಿಕಾರಿಗಳು ಜಳಗಾ ಗ್ರಾಮದ ಶ್ರೀಗಂಧ ನೆಡುತೋಪು ವೀಕ್ಷಿಸಿದರು. ಬೆಳಗಾವಿ ಉಪ ಅರಣ್ಯ ಸಂರಕ್ಷಣಾಧಿಕಾರಿ ಮರಿಯಾ ಕ್ರಿಸ್ಟು ರಾಜಾ ಇದ್ದರು.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ