Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಮಹಾರಾಷ್ಟ್ರ ಸರ್ಕಾರ ರಚನೆ: ದೇವೇಂದ್ರ ಸಿಎಂ, ಏಕನಾಥ ಶಿಂದೆ, ಅಜಿತ್ ಪವಾರ್ ಡಿಸಿಎಂ

ಮುಂಬೈ: ದೇವೇಂದ್ರ ಫಡ್ನವಿಸ್ ಅವರ ನೇತೃತ್ವದಲ್ಲಿ ಮಹಾಯುತಿ ಸರಕಾರ ಇಂದು ಸಂಜೆ ಐದು ಮೂವತ್ತಕ್ಕೆ ಮಹಾರಾಷ್ಟ್ರದಲ್ಲಿ ಮತ್ತೆ ಅಧಿಕಾರಕ್ಕೆ ಬರಲಿದೆ. ಏಕನಾಥ ಶಿಂದೆ ಮತ್ತು ಅಜಿತ್ ಪವಾರ ನೂತನ ಉಪಮುಖ್ಯಮಂತ್ರಿಗಳಾಗಲಿದ್ದಾರೆ.

ಶಿವಸೇನಾ ಅಧ್ಯಕ್ಷ ಏಕನಾಥ ಶಿಂದೆ ಅವರೇ ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ಪಕ್ಷದ ನಾಯಕ ಉದಯ ಸಮಂತ್ ಘೋಷಿಸಿದ್ದಾರೆ.

ಬಿಜೆಪಿ ನಾಯಕ ದೇವೇಂದ್ರ ಫಡಣವೀಸ್ ಅವರು ಮುಖ್ಯಮಂತ್ರಿಯಾಗಿ ಇಂದು ಸಂಜೆ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಈ ವೇಳೆ ಶಿಂದೆ ಮತ್ತು ಎನ್‌ಸಿಪಿ ನಾಯಕ ಅಜಿತ್ ಪವಾ‌ರ್ ಅವರು ಉಪಮುಖ್ಯಮಂತ್ರಿಗಳಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಹಾಜರಿರಲಿದ್ದಾರೆ ಎಂದು ಉದಯ ಅವರು ಹೇಳಿದ್ದಾರೆ.

ಈ ಹಿಂದಿನ ಮಹಾಯುತಿ ಸರ್ಕಾರದಲ್ಲಿ ಶಿಂದೆ ಅವರು ಮುಖ್ಯಮಂತ್ರಿಯಾಗಿದ್ದ ಕಾರಣ ಈಗ ಬಿಜೆಪಿಗೆ ಅಧಿಕಾರ ನೀಡಲು ಇಚ್ಚಿಸುವುದಿಲ್ಲ ಎನ್ನಲಾಗಿತ್ತು. ಆದರೆ ಈಗ ಶಿಂದೆ ಉಪಮುಖ್ಯಮಂತ್ರಿಯಾಗಲು ಒಪ್ಪಿಕೊಂಡಿದ್ದಾರೆ.

ಮುಂಬೈ: ಮಹಾರಾಷ್ಟ್ರದ ನೂತನ ಮುಖ್ಯಮಂತ್ರಿಯಾಗಿ ಬಿಜೆಪಿಯ ದೇವೇಂದ್ರ ಫಡಣವೀಸ್ ಅವರು ಪ್ರಮಾಣವಚನ ಸ್ವೀಕರಿಸಿದರು. ಶಿವಸೇನಾ ನಾಯಕ ಏಕನಾಥ ಶಿಂದೆ ಮತ್ತು ಎನ್‌ಸಿಪಿಯ ಅಜಿತ್ ಪವಾರ್‌ ಉಪಮುಖ್ಯಮಂತ್ರಿಗಳಾಗಿ ಪ್ರಮಾಣ ವಚನ ಸ್ವೀಕರಿಸಿದರು.

ಆ ಮೂಲಕ ಮಹಾಯುತಿ ಸರ್ಕಾರ ಅಸ್ತಿತ್ವಕ್ಕೆ ಬಂದಿತು. ರಾಜ್ಯಪಾಲ ಸಿ.ಪಿ. ರಾಧಾಕೃಷ್ಣನ್ ಅವರು ಪ್ರತಿಜ್ಞಾ ವಿಧಿ ಬೋಧಿಸಿದರು. ಪ್ರಧಾನಿ ನರೇಂದ್ರ ಮೋದಿ, ಹಲವು ಕೇಂದ್ರ ಸಚಿವರು, ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳು, ಬಾಲಿವುಡ್‌ ತಾರೆಯರು, ಉದ್ಯಮಿಗಳು ಹಾಗೂ ಬಿಜೆಪಿ ನೇತೃತ್ವದ ಮಹಾಯುತಿ ಕೂಟ ಸಾವಿರಾರು ಬೆಂಬಲಿಗರು ಪಾಲ್ಗೊಂಡಿದ್ದರು.

ಫಡಣವೀಸ್ ಸಂಪುಟಕ್ಕೆ ಸೇರಲಿರುವ ಇತರ ಸಚಿವರು ವಿಧಾನಸಭೆಯ ಚಳಿಗಾಲದ ಅಧಿವೇಶನಕ್ಕೂ ಪೂರ್ವದಲ್ಲಿ ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆಯಿದೆ.

ಇಲ್ಲಿನ ಅಜಾದ್ ಮೈದಾನದಲ್ಲಿ ಗುರುವಾರ ಸಂಜೆ ನಡೆದ ಅದ್ದೂರಿ ಸಮಾರಂಭದಲ್ಲಿ ಬಿಜೆಪಿ ನಾಯಕ ದೇವೇಂದ್ರ ಫಡ್ನವೀಸ್ ಮಹಾರಾಷ್ಟ್ರದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು. ಐದು ವರ್ಷಗಳ ನಂತರ ಫಡ್ನವಿಸ್ ಮುಖ್ಯಮಂತ್ರಿಯಾಗಿ ಮರಳಿದ ಹಿನ್ನೆಲೆಯಲ್ಲಿ ಆಜಾದ್ ಮೈದಾನದಲ್ಲಿ ನಡೆದ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಸೇರಿ ಬಾಲಿವುಡ್ ನ ಗಣ್ಯಾತಿಗಣ್ಯರು ಭಾಗವಹಿಸಿದ್ದರು.

ಫಡ್ನವೀಸ್ ಅವರ ಮಹಾಯುತಿ ಮಿತ್ರ ಪಕ್ಷ ಶಿವಸೇನೆಯ ಏಕನಾಥ್ ಶಿಂಧೆ ಮತ್ತು ಎನ್‌ಸಿಪಿಯ ಅಜಿತ್ ಪವಾರ್ ಅವರು ಉಪಮುಖ್ಯಮಂತ್ರಿಗಳಾಗಿ ಪ್ರಮಾಣವಚನ ಸ್ವೀಕರಿಸಿದ್ದು ಈ ಸಲದ ವಿಶೇಷತೆ.
ಕೇಂದ್ರ ಸಚಿವರಾದ ಅಮಿತ್ ಶಾ, ರಾಜನಾಥ್ ಸಿಂಗ್ ಮತ್ತು ಜೆಪಿ ನಡ್ಡಾ ಮತ್ತು ಇತರ ಬಿಜೆಪಿ ನಾಯಕರು, ಬಾಲಿವುಡ್ ನ ಹಲವು ನಟರು ಸಮಾರಂಭದಲ್ಲಿ ಭಾಗಿಯಾಗಿದ್ದರು.
ಶಾರುಖ್ ಖಾನ್, ಸಲ್ಮಾನ್ ಖಾನ್ ಮತ್ತು ರಣಬೀರ್ ಕಪೂರ್ ಸೇರಿದಂತೆ ಬಾಲಿವುಡ್ ಸ್ಟಾರ್ ಗಳು ಭಾಗವಹಿಸಿದ್ದರು. ಕೈಗಾರಿಕೋದ್ಯಮಿಗಳಾದ ಮುಖೇಶ್ ಅಂಬಾನಿ, ಅನಿಲ್ ಅಂಬಾನಿ, ಅನಂತ್ ಅಂಬಾನಿ ಮತ್ತು ಕುಮಾರ್ ಮಂಗಳಂ ಬಿರ್ಲಾ ಸಮಾರಂಭದಲ್ಲಿ ಉಪಸ್ಥಿತರಿದ್ದರು.

 

ಮೂರನೇ ಸಲ ಮುಖ್ಯಮಂತ್ರಿ ಹುದ್ದೆಗೇರಿದ ಕಟ್ಟಾ ಆರ್ ಎಸ್ ಎಸ್ ನಾಯಕ:

ಬಿಜೆಪಿಯ ಹಿರಿಯ ನಾಯಕ ಹಾಗೂ ಶಾಸಕಾಂಗ ಪಕ್ಷದ ನೂತನ ನಾಯಕರಾಗಿ ಆಯ್ಕೆಯಾಗಿರುವ ದೇವೇಂದ್ರ ಫಡ್ನವಿಸ್ ಅವರು ಈಗ ಮಹಾರಾಷ್ಟ್ರದ ಹೊಸ ಮುಖ್ಯಮಂತ್ರಿ.

54 ವರ್ಷ ವಯಸ್ಸಿನ ದೇವೇಂದ್ರ ಫಡ್ನವಿಸ್ ಈ ಹಿಂದೆ ಎರಡು ಸಲ ಮಹಾರಾಷ್ಟ್ರದ ಮುಖ್ಯಮಂತ್ರಿ ಆಗಿ ಕಾರ್ಯನಿರ್ವಹಿಸಿದ್ದರು. ಇದೀಗ ಅವರು ಮತ್ತೊಂದು ಬಾರಿಗೆ ಮುಖ್ಯಮಂತ್ರಿ. ಈ ಹಿಂದೆ ಮುಖ್ಯಮಂತ್ರಿ ಆಗಿ ಕಾರ್ಯ ನಿರ್ವಹಿಸಿದ್ದ ಏಕನಾಥ ಶಿಂದೆ ಮತ್ತು ಉಪಮುಖ್ಯಮಂತ್ರಿಯಾಗಿ ಕಾರ್ಯನಿರ್ವಹಿಸಿದ್ದ ಅಜಿತ್ ಪವಾರ್ ಅವರು ದೇವೇಂದ್ರ ಪಡ್ನವಿಸ್ ಅವರ ಸಚಿವ ಸಂಪುಟದಲ್ಲಿ ಹೊಸದಾಗಿ ಉಪಮುಖ್ಯಮಂತ್ರಿಯಾಗುತ್ತಿರುವುದು ವಿಶೇಷ.

ಮಹಾರಾಷ್ಟ್ರದ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಮಹಾಯುತಿ ಭರ್ಜರಿ ಗೆಲುವು ದಾಖಲಿಸಿದೆ.

ನಾಗ್ಪುರ ನೈರುತ್ಯ ಕ್ಷೇತ್ರದ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ದೇವೇಂದ್ರ ಫಡಣವೀಸ್ ಆರನೇ ಬಾರಿ ಶಾಸಕರಾಗಿ ಆಯ್ಕೆಯಾಗಿದ್ದಾರೆ.

ಹೆಜ್ಜೆ ಗುರುತುಗಳು...

1989ರಲ್ಲಿ 22ನೇ ವಯಸ್ಸಿಗೆ ನಾಗ್ಪುರ ನಗರ ಪಾಲಿಕೆಯ ಕಾರ್ಪೊರೇಟ‌ರ್ ಆಗಿ ಆಯ್ಕೆ

1997ರಲ್ಲಿ 27ನೇ ವಯಸ್ಸಿಗೆ ಕಿರಿಯ ಮೇಯರ್ ಆಗಿ ನೇಮಕ

1999-2004ರಲ್ಲಿ ಮೊದಲ ಬಾರಿಗೆ ವಿಧಾನಸಭೆ ಚುನಾವಣೆ ಸ್ಪರ್ಧಿಸಿ ಗೆಲುವು ಸಾಧಿಸಿದರು. 2004-2009, 2009-2014, 2014-2019, 2019-2024ರವರೆಗೂ ಶಾಸಕರಾಗಿ ಐದು ಸಲ ಆಯ್ಕೆಯಾದರು. ಇದೀಗ ಮತ್ತೆ ಗೆಲುವು ದಾಖಲಿಸುವ ಮೂಲಕ 6ನೇ ಬಾರಿಗೆ ಶಾಸಕರಾಗಿದ್ದಾರೆ.

2014- 2019 ಮುಖ್ಯಮಂತ್ರಿಯಾಗಿದ್ದರು.

2019ರಿಂದ 2022ರವರೆಗೆ ವಿಧಾನಸಭೆಯ ವಿರೋಧ ಪಕ್ಷದ ನಾಯಕರಾಗಿದ್ದರು.

2022ರಿಂದ ಉಪಮುಖ್ಯಮಂತ್ರಿಯಾಗಿದ್ದಾರೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ