Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಕರ್ನಾಟಕಕ್ಕೆ ಬಂದು ಕಬ್ಬಿನ ಟ್ರಾಕ್ಟರ್ ಗೆ ಬೆಂಕಿ ಹಚ್ಚಿದ ಮಹಾರಾಷ್ಟ್ರ ಪುಂಡರು..!

ಕರ್ನಾಟಕದಲ್ಲಿ ಬಂದು ಕಬ್ಬಿನ ಟ್ರಾಕ್ಟರ್ ಗೆ ಬೆಂಕಿ ಹಚ್ಚಿದ ಮಹಾರಾಷ್ಟ್ರ ಪುಂಡರು..!

ಬೆಳಗಾವಿ ಗಡಿಬಾಗದ ಕಬ್ಬು ಸಾಗಿಸುವ ಟ್ರ್ಯಾಕ್ಟರ್‌ ಸುಟ್ಟು ಹಾಕಿದ ಶೇತಕರಿ ಸಂಘಟನೆ ಸೈತಾನರು..?

ಬೆಳಗಾವಿ: ಬೆಳಗಾವಿ ಗಡಿಯಲ್ಲಿರುವ ಮಹಾರಾಷ್ಟ್ರ ಗ್ರಾಮದ ರೈತರು ಟ್ರ್ಯಾಕ್ಟರ್ ನಲ್ಲಿ ಕಬ್ಬು ತುಂಬಿಕೊಂಡು ಬೆಳಗಾವಿ ನಿಂಗ್ಯಾನಟ್ಟಿ ಗ್ರಾಮದ ಗಡಿ ಭಾಗದಲ್ಲಿ ಅಂಟಿಕೊಂಡಿರುವ ಮಹಾರಾಷ್ಟ್ರದ ಓಲಮ್ (ಹೇಮರಸ್) ಸಕ್ಕರೆ ಕಾರ್ಖಾನೆಗೆ ಹೋಗುತ್ತಿದ್ದ ಟ್ರ್ಯಾಕ್ಟರ್‌ಗೆ ಕರ್ನಾಟಕದಲ್ಲಿ ಬಂದು ಬೆಂಕಿ ಹಚ್ಚಿ ದುಷ್ಕರ್ಮಿಗಳು ದುಷ್ಕೃತ್ಯ ಮೆರೆದಿದ್ದಾರೆ.

ಮಹಾರಾಷ್ಟ್ರದ ಚಂದಗಡ ತಾಲೂಕಿನ ತಾವರೆವಾಡಿ ಗ್ರಾಮದ ಉತ್ತಮ ಅರ್ಜುನ್ ಕಾಗಣಕರ ಎಂಬುವರು ತಮ್ಮ ಹೊಲದಲ್ಲಿ ಬೆಳೆದಿದ್ದ ಕಬ್ಬನ್ನು ಸ್ವಂತ ಟ್ರ್ಯಾಕ್ಟರ್ ನಲ್ಲಿ ತುಂಬಿಕೊಂಡು ಸಕ್ಕರೆ ಕಾರ್ಖಾನೆಗೆ ಸಾಗಿಸುತ್ತಿದ್ದರು. ಈ ವೇಳೆ ಬೆಳಗಾವಿ ತಾಲೂಕಿನ ಬೋಡಕೆನಟ್ಟಿ ಗ್ರಾಮದಲ್ಲಿ ಇಂದು(ಶುಕ್ರವಾರ) ನಸುಕಿನ ಜಾವ 1 ಗಂಟೆ ಸುಮಾರಿಗೆ 10 ರಿಂದ 12 ಜನರ ಗುಂಪೊಂದು ಬಂದು ಟ್ರ್ಯಾಕ್ಟರ್ ತಡೆದು ಚಾಲಕನನ್ನು ಹೆದರಿಸಿ ಕೆಳಗೆ ಇಳಿಸಿದ್ದಾರೆ. ಟ್ರಾಯಲಿಯಲ್ಲಿದ್ದ ಕಬ್ಬನ್ನು ಕೆಳಗೆ ಚೆಲ್ಲಿ, ಇಂಜಿನ್ ಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾರೆ. ಸುರಿದ ಪೆಟ್ರೋಲ್ ಹಾಗೂ ವಾಹನದಲ್ಲಿ ಡಿಸೇಲ್ ತಂಬಿದ್ದರಿಂದ ಟ್ರ್ಯಾಕ್ಟರ್ ಬೆಂಕಿಗಾಹುತಿಯಾಗಿ ಸಂಪೂರ್ಣ ಸುಟ್ಟು ಹೋಗಿದೆ.

ಇದರ ಹಿಂದೆ ಮಹಾರಾಷ್ಟ್ರದ ದುಂಡಿಗೆ ಗ್ರಾಮದ ರೈತರು ಹಾಗೂ ಶೇತಕರಿ ಸಂಘಟನೆಗಳ ಕೈವಾಡ ಇರುವುದಾಗಿ ಬಲ್ಲ ಮೂಲಗಳಿಂದ ತಿಳಿದು ಬಂದಿದೆ.

ಮಹಾರಾಷ್ಟ್ರದಲ್ಲಿ ಕಬ್ಬಿನ ದರಕ್ಕಾಗಿ ಪ್ರತಿಭಟನೆಗಳು ನಡೆದಿವೆ. ಈ ಮಧ್ಯದಲ್ಲಿ ಕೇಲ ಬಡಪಾಯಿ ರೈತರು ಹಣದ ಅವಶ್ಯಕತೆಗಾಗಿ ಕರ್ನಾಟಕ ರಸ್ತೆಗಳ ಮೂಲಕ ಕಬ್ಬು ಸಾಗಿಸುತ್ತಿದ್ದಾರೆ. ಅದಕ್ಕಾಗಿ ಆ ಸಂಘಟನೆಗಳು ಇವರ ಮೇಲೆ ಈ ರೀತಿ ದೌರ್ಜನ್ಯ ಮಾಡುತ್ತಿರುವಾಗಿ ಹೇಳಲಾಗುತ್ತಿದೆ.

ಈ ಘಟನೆ ಬೆಳಗಾವಿ ಗಡಿ ಗ್ರಾಮಗಳಲ್ಲಿ ಭಯದ ವಾತಾವರಣ ಸೃಷ್ಟಿಸಿದ್ದು,ರೈತರು ಕಬ್ಬು ಕಳಿಸಲು ಹಿಂದೇಟು ಹಾಕುತ್ತಿದ್ದಾರೆ.

ಈ ಕುರಿತು ಓಲಮ್ ಸಕ್ಕರೆ ಕಾರ್ಖಾನೆ ಹಾಗೂ ಟ್ರ್ಯಾಕ್ಟರ್ ಮಾಲೀಕ ಕಾಕತಿ ಪೊಲೀಸ ಠಾಣೆಯಲ್ಲಿ ದೂರು ನೀಡಿದ್ದಾರೆ. ಘಟನೆ ಸ್ಥಳಕ್ಕೆ ಕಾಕತಿ ಎಎಸ್ಐ ಬಸವರಾಜ ಲಮಾಣಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ