Press ID & Credential Portal
Apply / Verify  ➔
LIVE TV LocalCrimeNationalInternationalPoliticsEducationSportsHealthFeature
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಟ್ರಾಫಿಕ್ ಜಾಮ್‌ನಲ್ಲಿ ಕಾರಿನಲ್ಲೇ ವ್ಯಕ್ತಿಗೆ ಹೃದಯಾಘಾತ, ಬಸ್‌ನಿಂದ ಧಾವಿಸಿ ಬಂದು ಜೀವ ಉಳಿಸಿದ ನರ್ಸ್‌ಗಳು

ಎರ್ನಾಕುಲಂ: ಕೇರಳದ ಎರ್ನಾಕುಲಂ ಜಿಲ್ಲೆಯಲ್ಲಿ ಸಂಚಾರ ದಟ್ಟಣೆಯಲ್ಲಿ ಸಿಲುಕಿದ್ದ ವ್ಯಕ್ತಿಯೊಬ್ಬರಿಗೆ ಹೃದಯಾಘಾತವಾಗಿದ್ದು, ಅವರ ಜೀವವನ್ನು ಇಬ್ಬರು ನರ್ಸ್‌ಗಳು ತೋರಿದ ಸಮಯಪ್ರಜ್ಞೆ ಮತ್ತು ತಕ್ಷಣದ ಸ್ಪಂದನೆ ಆ ವ್ಯಕ್ತಿಯ ಜೀವ ಉಳಿಸಿದೆ.
ಅಂಗಮಾಲಿಯ ಎಲ್‌ಎಫ್ ಆಸ್ಪತ್ರೆಯ ಸಿಬ್ಬಂದಿ ನರ್ಸ್ ಅಂಜಲಿ ಬೈಜು ಹಾಗೂ ಬೆಂಗಳೂರಿನಲ್ಲಿ ನರ್ಸಿಂಗ್ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿನಿ ಆರ್ಧ್ರ ರಾಜ ಅವರು, ಕೇರಳ ಸಾರಿಗೆ ಸಂಸ್ಥೆ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ರಸ್ತೆಬದಿಯಲ್ಲಿ ನಡೆದ ಗದ್ದಲವನ್ನು ಗಮನಿಸಿ ಕೂಡಲೇ ಚಲಿಸುತ್ತಿದ್ದ ಬಸ್‌ನಿಂದ ಇಳಿದು 43 ವರ್ಷದ ವ್ಯಕ್ತಿಗೆ ಸಿಪಿಆರ್ (ಕಾರ್ಡಿಯೋಪಲ್ಮನರಿ ರಿಸಸ್ಸಿಟೇಶನ್) ನೀಡಿ ಜೀವ ಉಳಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ.
ಬುಧವಾರ ಬೆಳಿಗ್ಗೆ ಕಾಲಡಿ ಸೇತುವೆ ಸಮೀಪದ ಎಂಸಿ ರಸ್ತೆಯಲ್ಲಿ ಈ ಘಟನೆ ನಡೆದಿದೆ. ಒಕ್ಕಲ್ ಸಮೀಪದ ತಣ್ಣಿಪುಳದಲ್ಲಿ ಲಾಟರಿ ಅಂಗಡಿ ನಡೆಸುತ್ತಿರುವ ಸಿನೋಜ್ ಎಂಬವರು ಕಾರು ಚಾಲನೆ ಮಾಡಿಕೊಂಡೇ ಆಸ್ಪತ್ರೆಗೆ ತೆರಳುತ್ತಿದ್ದ ವೇಳೆ ತೀವ್ರ ಎದೆನೋವು ಕಾಣಿಸಿಕೊಂಡಿತು. ಇದೇ ವೇಳೆ ಸಂಚಾರ ದಟ್ಟಣೆ ಉಂಟಾಗಿದ್ದರಿಂದ ವಾಹನಗಳು ಮುಂದೆ ಸಾಗಲಿಲ್ಲ. ಪರಿಣಾಮ, ಸಿನೋಜ್ ಕಾರಿನೊಳಗೇ ಕುಸಿದು ಬಿದ್ದರು.
ಇದನ್ನು ಗಮನಿಸಿದ ಅಂಜಲಿ ಬೈಜು ಮತ್ತು ಆರ್ಧ್ರ ರಾಜ ಅವರು ತಕ್ಷಣ ಬಸ್‌ನಿಂದ ಇಳಿದು ಕಾರಿನತ್ತ ಧಾವಿಸಿದರು. ಅವರು ವಿಳಂಬ ಮಾಡದೇ ಸಿನೋಜ್ ಅವರಿಗೆ ಸಿಪಿಆರ್ ಆರಂಭಿಸಿದರು. ಬಳಿಕ ಅವರನ್ನು ಆಸ್ಪತ್ರೆಗೆ ಕರೆದೊಯ್ಯುವಾಗ ವಾಹನದೊಳಗೂ ನಿರಂತರವಾಗಿ ಸಿಪಿಆರ್ ಮಾಡುತ್ತಲೇ ಇದ್ದರು. ಅಂಗಮಾಲಿಯ ಆಸ್ಪತ್ರೆಗೆ ತಲುಪುವಷ್ಟರಲ್ಲಿ ಸಿನೋಜ್ ಅವರಲ್ಲಿ ಚೇತರಿಕೆಯ ಲಕ್ಷಣಗಳು ಕಾಣಿಸಿಕೊಂಡಿದ್ದವು ಎಂದು ವೈದ್ಯರು ತಿಳಿಸಿದ್ದಾರೆ.
ನಂತರ ನಡೆಸಿದ ವೈದ್ಯಕೀಯ ಪರೀಕ್ಷೆಯಲ್ಲಿ ಅವರ ಹೃದಯದ ಪರಿಧಮನಿ (ಕೊರೊನರಿ ಆರ್ಟರಿ)ಯಲ್ಲಿ ಬ್ಲಾಕ್‌ ಉಂಟಾಗಿರುವುದು ಪತ್ತೆಯಾಯಿತು. ಕೂಡಲೇ ಅವರಿಗೆ ತುರ್ತು ಆಂಜಿಯೋಪ್ಲಾಸ್ಟಿ ಚಿಕಿತ್ಸೆ ನೀಡಲಾಯಿತು. ಹೆಚ್ಚಿನ ಚಿಕಿತ್ಸೆಗೆ ಅವರನ್ನು ಉನ್ನತ ವೈದ್ಯಕೀಯ ಕೇಂದ್ರಕ್ಕೆ ಸ್ಥಳಾಂತರಿಸುವ ನಿರೀಕ್ಷೆಯಿದೆ.
ಈ ಜೀವ ರಕ್ಷಣೆ ಕಾರ್ಯದಲ್ಲಿ ಸ್ಥಳೀಯ ನಿವಾಸಿಗಳ ಸಹಕಾರವೂ ಮಹತ್ವದ ಪಾತ್ರ ವಹಿಸಿದೆ. ಸಿನೋಜ್ ಎದೆನೋವಿನಿಂದ ಆಸ್ಪತ್ರೆಗೆ ಧಾವಿಸುತ್ತಿರುವ ವಿಚಾರ ತಿಳಿದ ದಾರಿಹೋಕನೊಬ್ಬ ಕಾರಿನ ಚಾಲನೆ ಮಾಡಲು ಮುಂದೆ ಬಂದರು. ಇತರರು ವಾಹನವನ್ನು ಸಂಚಾರ ದಟ್ಟಣೆಯಿಂದ ಹೊರತೆಗೆದು ಆಂಬ್ಯುಲೆನ್ಸ್ ವ್ಯವಸ್ಥೆ ಮಾಡುವ ಮೂಲಕ ನೆರವಾದರು.
ಇಬ್ಬರು ನರ್ಸ್‌ಗಳ ಸಮಯಪ್ರಜ್ಞೆ, ಧೈರ್ಯ ಮತ್ತು ತ್ವರಿತ ಕ್ರಮದ ಜೊತೆಗೆ ಸಾರ್ವಜನಿಕರ ಸಹಕಾರದಿಂದ ವ್ಯಕ್ತಿಯ ಜೀವ ಉಳಿದಿದ್ದು, ಅವರ ಕಾರ್ಯಕ್ಕೆ ವ್ಯಾಪಕ ಪ್ರಶಂಸೆ ವ್ಯಕ್ತವಾಗುತ್ತಿದೆ. ಅನೇಕರು ಈ ಸಮಯೋಚಿತ ಸ್ಪಂದನೆಯೇ ಸಿನೋಜ್ ಅವರ ಜೀವ ಉಳಿಯಲು ಪ್ರಮುಖ ಕಾರಣ ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

Author
Jana Jeevala News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಥ್ರೋ ಬಾಲ್ ಪಂದ್ಯಾವಳಿಯಲ್ಲಿ ಗೆಲುವು ಸಾಧಿಸಿದ ಬೆಳಗಾವಿ ಜಿಎ ಪ್ರೌಢಶಾಲೆಯ ಬಾಲೆಯರುಜಿಲ್ಲಾ ಮಟ್ಟದ ಶಿಕ್ಷಕ ಪ್ರಶಸ್ತಿ ಪ್ರಕಟ ಡಾ. ಪ್ರಭಾಕರ ಕೋರೆ ಅವರಿಗೆ ಪದ್ಮಶ್ರೀ ಪ್ರಶಸ್ತಿ: ಲಿಂಗಾಯತ ಸಮಾಜದ ವತಿಯಿಂದ ಭವ್ಯ ಸನ್ಮಾನಜಿಲ್ಲೆಯ ಉತ್ತಮ ಶಿಕ್ಷಕರಿಗೆ ರಾಜ್ಯ ಮಟ್ಟದ ಶಿಕ್ಷಕ ಪ್ರಶಸ್ತಿಬೈಕ್ ಕಳ್ಳನನ್ನು ಬಂಧಿಸಿದ ಪೊಲೀಸರುಭೀಕರ ರಸ್ತೆ ಅಪಘಾತ: ಇಬ್ಬರು ಯುವಕರ ದುರ್ಮರಣಪ್ರಜಾಪಿತ ಬ್ರಹ್ಮಾಕುಮಾರಿ ಶಹಾಪುರ ಕೇಂದ್ರದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮಾಚರಣೆಸುರಂಗದಲ್ಲಿ 9 ದಿನ ಹರೇ ಕೃಷ್ಣ ಪಠಿಸುತ್ತಿದ್ದವ ಜನ್ಮಾಷ್ಟಮಿಯಂದು ಹೊರಬಂದಎರಡೇ ತಿಂಗಳಲ್ಲಿ ಕಾಕ್ರೋಚ್ ಜನತಾ ಪಾರ್ಟಿ ಇಬ್ಬಾಗ: ಅಸ್ತಿತ್ವಕ್ಕೆ ಬಂತು ಹೊಸ ಬಣ!ಅಯೋಧ್ಯೆ ದೇಗುಲದ ಅಭಿವೃದ್ಧಿಗೆ ಭಕ್ತಾದಿಗಳ ಬೆಂಬಲ ಕೋರಿದ ರಾಮಮಂದಿರದ ನೂತನ ಸಿಇಒ