ಬೆಳಗಾವಿ: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಉಪನಿರ್ದೇಶಕರನ್ನಾಗಿ ಎ.ಸಿ.ಮನ್ನಿಕೇರಿ ಅವರನ್ನು ನೇಮಕ ಮಾಡಲಾಗಿದೆ.
ಮನ್ನಿಕೇರಿ ಅವರು ಈ ಮೊದಲು ಬಾಗಲಕೋಟೆ ಡಿಡಿಪಿಐ ಆಗಿ ಸೇವೆ ಸಲ್ಲಿಸುತ್ತಿದ್ದರು. ಈ ಹುದ್ದೆಯಲ್ಲಿದ್ದ ಆರ್.ಎಸ್.ಸೀತಾರಾಮು ಬಾಗಲಕೋಟೆ ಜಿಲ್ಲೆಗೆ ವರ್ಗಾವಣೆಯಾಗಿದ್ದು, ತೆರವಾದ ಸ್ಥಾನಕ್ಕೆ ಮನ್ನಿಕೇರಿ ಅವರನ್ನು ನೇಮಕ ಮಾಡಿ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.