Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಮಾರಿಹಾಳದಿಂದ ತುಮ್ಮರಗುದ್ದಿ ರಸ್ತೆ ಕಾಮಗಾರಿಗೆ ಚಾಲನೆ

ಬೆಳಗಾವಿ : ಬೆಳಗಾವಿ ಗ್ರಾಮೀಣ ವಿಧಾನಸಭಾ ಕ್ಷೇತ್ರದ ಮಾರಿಹಾಳ ಗ್ರಾಮದಿಂದ ತುಮ್ಮರಗುದ್ದಿ ಗ್ರಾಮದವರೆಗಿನ ರಸ್ತೆಯ ಡಾಂಬರೀಕರಣದ ಕಾಮಗಾರಿಗೆ ಯುವ ಕಾಂಗ್ರೆಸ್ ಮುಖಂಡ ಮೃಣಾಲ್ ಹೆಬ್ಬಾಳಕರ್ ಹಾಗೂ ಸ್ಥಳೀಯ ಜನಪ್ರತಿನಿಧಿಗಳು ಸೇರಿ ಚಾಲನೆ ನೀಡಿದರು.

ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರ ವಿಶೇಷ ಪ್ರಯತ್ನದಿಂದ ಹಣ ಮಂಜೂರಾಗಿದ್ದು, ಸುಮಾರು 3 ಕೋಟಿ ರೂ,ಗಳ ವೆಚ್ಚದಲ್ಲಿ ರಸ್ತೆಯ ಡಾಂಬರೀಕರಣ ನಡೆಯಲಿದೆ. ಕಾಮಗಾರಿಗೆ ಚಾಲನೆ ನೀಡಿ, ಗುಣಮಟ್ಟದ ಕಾಮಗಾರಿ ನಡೆಸುವಂತೆ ಮತ್ತು ನಿಗದಿತ ಸಮಯದಲ್ಲಿ ರಸ್ತೆ ಪೂರ್ಣಗೊಳಿಸುವಂತೆ ಗುತ್ತಿಗೆದಾರಿಗೆ ಮೃಣಾಲ ಹೆಬ್ಬಾಳಕರ್ ಸೂಚಿಸಿದರು.

ಈ ಸಮಯದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷ ಗಿರಿಜಾ ಪಾಟೀಲ, ಉಪಾಧ್ಯಕ್ಷರು ಹಾಗೂ ಸರ್ವ ಸದಸ್ಯರು, ಬಸವರಾಜ ಮ್ಯಾಗೋಟಿ, ಸಂಜಯ ಚಾಟೆ, ಸಮೀರ್ ಮುಲ್ಲಾ ವಿನೋದ್ ಚೌಹಾನ್, ಶಂಕರ ಚೌಗುಲೆ, ವಿಠ್ಠಲ ಮಲ್ಲಾರಿ, ಬಾಳೇಶ್, ಪ್ರಕಾಶ, ಗುಡದಪ್ಪ, ಬಸವರಾಜ, ರಮೇಶ ಮುಂತಾದವರು ಉಪಸ್ಥಿತರಿದ್ದರು.

ಛತ್ರಪತಿ ಶಿವಾಜಿ ಮೂರ್ತಿ ಸ್ಥಾಪನೆ ಕಾಮಗಾರಿಗೆ ಚಾಲನೆ

ಬೆಳಗಾವಿ : ಬೆಳಗಾವಿ ಗ್ರಾಮೀಣ ಕ್ಷೇತ್ರದ ಸುಳೇಭಾವಿ ಗ್ರಾಮದಲ್ಲಿ ಶ್ರೀ ಛತ್ರಪತಿ ಶಿವಾಜಿ ಮಹಾರಾಜರ ಮೂರ್ತಿಯ ಪ್ರತಿಷ್ಟಾಪನೆ ಹಿನ್ನೆಲೆಯಲ್ಲಿ ಮೂರ್ತಿ ಅಳವಡಿಸುವ ಅಡಿಪಾಯದ ಕಾಂಕ್ರೀಟ್ ಕಾಮಗಾರಿಗೆ ಯುವ ಕಾಂಗ್ರೆಸ್ ಮುಖಂಡ ಮೃಣಾಲ ಹೆಬ್ಬಾಳಕರ್ ಹಾಗೂ ಸ್ಥಳೀಯ ಜನಪ್ರತಿನಿಧಿಗಳು ಸೇರಿ ಭಾನುವಾರ ಪೂಜೆ ನೆರವೇರಿಸಿ, ಚಾಲನೆ‌ ನೀಡಿದರು.

ಈ ಸಮಯದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಫಕೀರವ್ವ ಅಮರಾಪೂರ್, ಗ್ರಾಮ ಪಂಚಾಯತಿಯ ಸರ್ವ ಸದಸ್ಯರು, ಬಸನಗೌಡ ಹುಂಕ್ರಿಪಾಟೀಲ, ದತ್ತಾ ಬಂಡಿಗಣಿ, ನಾನಪ್ಪ ಪಾರ್ವತಿ, ಚಂಬು ಯಮೋಜಿ, ಮುರಗೇಶ್ ಹಂಪಿಹೊಳಿ, ಮಾಜಿ ಗ್ರಾಮ ಪಂಚಾಯತ್ ಅಧ್ಯಕ್ಷ ಮಹೇಶ ಸುಗಣೆನ್ನವರ, ಫಕೀರ್ ಕೋಲಕಾರ್ ಮುಂತಾದವರು ಉಪಸ್ಥಿತರಿದ್ದರು.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪ್ರಶ್ನೆ ಪತ್ರಿಕೆ ಸೋರಿಕೆ ವಿಚಾರಣೆಗೆ ತ್ವರಿತ ನ್ಯಾಯಾಲಯ ಸ್ಥಾಪನೆ: ಪ್ರಧಾನಿ ಮೋದಿಶಾಸಕರ ಮನೆಗಳಿಗೆ ಸೀಮಿತವಾದರೆ BLO ಗಳು ? ಸಾರ್ವಜನಿಕರನ್ನು ಸತಾಯಿಸುತ್ತಿರುವ ಬಿ ಎಲ್ ಒ ಗಳ ವಿರುದ್ಧ ಕ್ರಮಕ್ಕೆ ಅಗ್ರಹಶಾಸಕರ ಮನೆಗಳಿಗೆ ಸೀಮಿತವಾದರೆ BLO ಗಳು ?ದೇಶಾದ್ಯಂತ ಆವರಿಸಿದ ಮೋಡಗಳು ; ಉಪಗ್ರಹ ಚಿತ್ರಗಳಲ್ಲಿ ಸ್ಪಷ್ಟ ; ಮುಂಗಾರು ಬಲಗೊಳ್ಳುತ್ತಿದೆ ಎಂದ ಹವಾಮಾನ ಇಲಾಖೆನೀಟ್‌ ಹೋರಾಟ : ಯುವ ಪ್ರತಿಭಟನಾಕಾರರ ವಿರುದ್ಧ ಯಾವುದೇ ಕ್ರಮವಿಲ್ಲ ಎಂದು ಭರವಸೆ ನೀಡಿದ್ರೆ ಉಪವಾಸ ಅಂತ್ಯ ; ಕೇಂದ್ರಕ್ಕೆ ವಾಂಗ್ಚುಕ್ ಷರತ್ತುಕೋಚಿಂಗ್ ಸೆಂಟರ್‌ನಲ್ಲಿ ಲೈಂಗಿಕ ದೌರ್ಜನ್ಯ: ಆರೋಪಿಯನ್ನು ವಶಕ್ಕೆ ಪಡೆದ ಪೊಲೀಸರುಆಷಾಢ ಏಕಾದಶಿ ಪ್ರಯುಕ್ತ ಧಾರವಾಡ-ಪಂಡರಪುರ ನಡುವೆ ವಿಶೇಷ ರೈಲು ಸಂಚಾರಕೆಎಲ್‌ಇ ಜೆಜಿಎಂಎಂ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಕೆಎಲ್‌ಇ ಆಸ್ಪತ್ರೆ, ಹುಬ್ಬಳ್ಳಿ ಉದ್ಘಾಟನಾ ಸಮಾರಂಭ ಮುಂದೂಡಿಕೆಎನ್‌ಡಿಎಗೆ ಎನ್‌ಸಿಪಿ ಬೆಂಬಲದ ವದಂತಿಗಳ ನಡುವೆ ಪ್ರಧಾನಿ ಮೋದಿ ಭೇಟಿ ಮಾಡಿದ ಶರದ್ ಪವಾರ್–ಸುಪ್ರಿಯಾ ಸುಳೆಗಣಿಕೊಪ್ಪ : ಶಾಸಕ ಬಾಬಾಸಾಹೇಬ ಪಾಟೀಲ ಅವರ ಜನ್ಮದಿನದ ಅಂಗವಾಗಿ ವಿದ್ಯಾರ್ಥಿಗಳಿಗೆ ಸಿಹಿ ಭೋಜನ, ಕಲಿಕಾ ಸಾಮಗ್ರಿ ವಿತರಣೆ