Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಬೃಹತ್ ಜನಜಾಗೃತಿ ಸಮಾವೇಶ

 

ಬೆಳಗಾವಿ :
ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಸುಕ್ಷೇತ್ರ ತಂಗಡಗಿಯ ಶ್ರೀ ಹಡಪದ ಅಪ್ಪಣ್ಣ ಮಹಾ ಸಂಸ್ಥಾನ ಮಠದ ಆವರಣದಲ್ಲಿ ಫೆ. 1ರಂದು ಸಮುದಾಯ ಭವನ ಉದ್ಘಾಟನೆ, ನೂತನ ಕಟ್ಟಡದ ಅಡಿಗಲ್ಲು ಹಾಗೂ ಬೃಹತ್ ಜನಜಾಗೃತಿ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ಅಖಿಲ ಕರ್ನಾಟಕ ಹಡಪದ ಅಪ್ಪಣ್ಣ ಸಮಾಜ ಸೇವಾ ಸಂಘದ ರಾಜ್ಯ ಉಪಾಧ್ಯಕ್ಷ ಸಂತೋಷ ಹಡಪದ ತಿಳಿಸಿದರು.

ಬುಧವಾರ ಬೆಳಗಾವಿಯ ಕನ್ನಡ ಸಾಹಿತ್ಯ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಈ ಎಲ್ಲ ಯೋಜನೆಗಳಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಚಾಲನೆ ನೀಡುವರು. ಮುದ್ದೇಬಿಹಾಳ ಶಾಸಕ ಎ. ಎಸ್. ಪಾಟೀಲ ನಡಹಳ್ಳಿ ಅಧ್ಯಕ್ಷತೆ ವಹಿಸುವರು. ರಾಜ್ಯ ಸರಕಾರದ ಹಲವು‌ ಸಚಿವರು, ಶಾಸಕರು ಸೇರಿ ಲಕ್ಷಾಂತರ ಸಮಾಜ ಬಾಂಧವರು ಸೇರಲಿದ್ದಾರೆ ಎಂದರು.

ನಮ್ಮ‌ ಸಮಾಜ ಆರ್ಥಿಕ, ರಾಜಕೀಯ, ಸಾಮಾಜಿಕವಾಗಿ ಅತ್ಯಂತ ಹಿಂದುಳಿದಿದೆ. ಮೀಸಲಾತಿ ವಿಚಾರದಲ್ಲಿಯೂ ಸಾಕಷ್ಟು ಗೊಂದಲವಿದ್ದು, ಒಂದಿಷ್ಟು ಜನರಿಗೆ 2ಎ ಕೊಟ್ಟರೆ, ಮತ್ತೊಂದಿಷ್ಟು ಜನರಿಗೆ 3ಬಿ ಪಟ್ಟಿಯಲ್ಲಿ ಸೌಲಭ್ಯ ನೀಡುತ್ತಿದ್ದಾರೆ. ಈ ಗೊಂದಲ ಬಗೆಹರಿಸಿ ಹಡಪದ ಸಮಾಜವನ್ನು ಎಸ್ಸಿ ಪಟ್ಟಿಗೆ ಸೇರಿಸಬೇಕು ಎಂದು ಸಮಾವೇಶದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಬೇಡಿಕೆ ಇಡುತ್ತೇವೆ ಎಂದು ಸಂತೋಷ ಹಡಪದ ಮಾಹಿತಿ ನೀಡಿದರು.

ಸಮಾಜದ ರಾಜ್ಯ ಕಾರ್ಯಾಧ್ಯಕ್ಷ ಬಸವರಾಜ ಹಡಪದ, ಜಿಲ್ಲಾಧ್ಯಕ್ಷ ಸುರೇಶ ಹಡಪದ, ತಾಲೂಕಾ ಅಧ್ಯಕ್ಷ ಮಹಾಂತೇಶ ಹಂಪನ್ನವರ, ಸಂಗಮೇಶ ಹಡಪದ, ರಾಜು ನಾವಿ, ವಿಜಯ ಹಡಪದ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ