Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಅಥಣಿ ಜೈನ ಸಮಾಜ ವತಿಯಿಂದ ಸಮ್ಮೇದ ಶಿಖರ್ಜಿ ರಕ್ಷಿಸಿ ಬೃಹತ್ ಪ್ರತಿಭಟನೆ

 

ಅಥಣಿ :
ಜಾರ್ಖಂಡ್ ರಾಜ್ಯದ ಜೈನರ ಪವಿತ್ರ ಕ್ಷೇತ್ರ ಸಮ್ಮೇದ ಶಿಖರ್ಜಿಯನ್ನು ಪ್ರವಾಸ ತಾಣವನ್ನಾಗಿ ಅಧಿಸೂಚನೆ ಹೊರಡಿಸಿದ ಜಾರ್ಖಂಡ್ ಸರಕಾರದ ನಡೆ ಖಂಡಿಸಿ ಅಥಣಿಯಲ್ಲಿ ಇಂದು ಬೃಹತ್ ಪ್ರಮಾಣದಲ್ಲಿ ಪ್ರತಿಭಟನೆ ನಡೆಸಿ ರಾಷ್ಟ್ರಪತಿ, ಪ್ರಧಾನಮಂತ್ರಿ, ಮುಖ್ಯಮಂತ್ರಿಗಳಿಗೆ ಅಥಣಿ ತಹಶೀಲ್ದಾರ್ ಮೂಲಕ ಮನವಿ ಸಲ್ಲಿಸಲಾಯಿತು.

ನಗರದ ಮಹಾವೀರ ವೃತ್ತದಲ್ಲಿ ಪೂಜೆ ಸಲ್ಲಿಸುವ ಮೂಲಕ ಪ್ರತಿಭಟನೆಗೆ ಚಾಲನೆ ನೀಡಲಾಯಿತು. ನಂತರ ಬಸವೇಶ್ವರ ಸರ್ಕಲ್, ಮುರುಘೇಂದ್ರ ಸರ್ಕಲ್ ಮೂಲಕ ಅಂಬೇಡ್ಕರ್ ವೃತ್ತದವರೆಗೆ ಬೃಹತ್ ಪ್ರತಿಭಟನೆ ನಡೆಸಲಾಯಿತು.

ಕೊಲ್ಹಾಪುರದ ಸ್ವಸ್ತಿಶ್ರೀ ಲಕ್ಷ್ಮಿಸೇನ್ ಭಟ್ಟಾರಕ ಭಟ್ಟಾಚಾರ್ಯ ಸ್ವಾಮೀಜಿಯವರು ಮಾತನಾಡಿ ಶಿಖರಜಿಯನ್ನು ಪ್ರವಾಸಿ ತಾಣವಾಗಿ ಮಾಡುವುದರಿಂದ ಅದರ ಪಾವಿತ್ರ್ಯತೆಗೆ ಧಕ್ಕೆ ಉಂಟಾಗಿ ಬಾರ್, ರೆಸ್ಟೋರೆಂಟ್ ಗಳು ಸ್ಥಾಪನೆಯಾಗುವ ಕಾಲ ಬರುವುದು ಈ ಹಿನ್ನೆಲೆಯಲ್ಲಿ ಸರ್ಕಾರದ ನಿರ್ಣಯ ವಾಪಸ್ಸು ಪಡೆದು ಜೈನರ ಧಾರ್ಮಿಕತೆ ರಕ್ಷಿಸಬೇಕು ಎಂದರು. ಜೈನ ಧರ್ಮದ ತತ್ವವು ಬದುಕು ಬದುಕಲು ಬಿಡಿ ಆಗಿದ್ದು ನಾವು ಯಾರ ವಿರುದ್ಧವಿಲ್ಲದೇ ಶಾಂತಿ ಪ್ರಿಯರು ನಮ್ಮ ಧರ್ಮದ ಧಕ್ಕೆ ಬಂದರೆ ಸಹಿಸುವುದಿಲ್ಲ ಎಂದು ಕೇಂದ್ರ ಸರ್ಕಾರ, ಜಾರ್ಖಂಡ್ ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.

ಈ ಪ್ರತಿಭಟನಾ ರ್‍ಯಾಲಿಯಲ್ಲಿ ಕೆಎ ವನಜೋಳ, ವಿದ್ಯಾಧರ ಡುಮ್ಮನ್ನವರ, ರಮೇಶ್ ಬಾಳೆಕಾಯಿ, ಬಾಹುಬಲಿ ಕಡೋಲಿ, ಅರುಣ ಯಲಗುದ್ರಿ, ಗುಂಡು ಇಜಾರೆ, ನಿತೀನ್ ಘೋಂಗಡಿ, ಆರ್ ಪಿ ಹಗೇದ್, ಲೆನಿನ್ ಹಳಿಂಗಲಿ, ರಾಘವೇಂದ್ರ ಹಳಿಂಗಲಿ, ಪ್ರಪುಲ್ ಪಡನಾಡ, ಅಮರ ದುಗ೯ಣ್ಣವರ, ಪುಷ್ಪಕ್ ಪಾಟೀಲ, ಶಾಂತು ನಂದೇಶ್ವರ್ , ಮುತ್ತಣ್ಣ ಕಾತ್ರಾಳ, ರಾಜು ನಾಡಗೌಡ, ಅಶೋಕ ಪಡನಾಡ, ಲಕ್ಷ್ಮಣ ಬಣಜವಾಡ ಸೇರಿದಂತೆ ತಾಲೂಕಿನ ಹಲವು ಗ್ರಾಮಗಳ ಮಹಿಳಾ ಮಂಡಳಿಯ ಸದಸ್ಯರು, ಸೇವಾದಳದ ಕಾರ್ಯಕರ್ತರು, ಸಾವಿರಾರು ಶ್ರಾವಕ ಶ್ರಾವಕಿಯರು ಭಾಗವಹಿಸಿದ್ದರು.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ