ಬೆಳಗಾವಿ : ರಾಜ್ಯ ಕಾಂಗ್ರೆಸ್ ಸರ್ಕಾರದ ದಬ್ಬಾಳಿಕೆ, ಬಿಜೆಪಿ ಶಾಸಕರು, ಮುಖಂಡರು ಹಾಗೂ ಕಾರ್ಯಕರ್ತರ ಮೇಲೆ ಮೊಟ್ಟೆ ಎಸೆದು ಹಲ್ಲೆ ನಡೆಸುವ ಘಟನೆಗಳನ್ನುಬಿಜೆಪಿ ತೀವ್ರವಾಗಿ ಖಂಡಿಸಿತು. ಜೊತೆಗೆ, ದೇಶ ವಿರೋಧಿ ಶಕ್ತಿಗಳೊಂದಿಗೆ ಕೈಜೋಡಿಸಿ ವಿದ್ಯಾರ್ಥಿಗಳನ್ನು ರಾಜಕೀಯ ಸ್ವಾರ್ಥಕ್ಕಾಗಿ ಬಳಸಿಕೊಳ್ಳುತ್ತಿರುವ ಕಾಂಗ್ರೆಸ್ ಪಕ್ಷದ ನಿಲುವಿನ ವಿರುದ್ಧವೂ ಆಕ್ರೋಶ ವ್ಯಕ್ತಪಡಿಸಲಾಯಿತು.
ಅದೇ ರೀತಿ, ದೆಹಲಿಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ನಿವಾಸದ ಮುಂದೆ ಕಾಂಗ್ರೆಸ್ ನಡೆಸಿದ ಪ್ರತಿಭಟನೆಯನ್ನು ಖಂಡಿಸಿ ಬಿಜೆಪಿ ನಾಯಕರು ಶುಕ್ರವಾರ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು .
ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಸುಭಾಷ್ ಪಾಟೀಲ,ಶಾಸಕ ವಿಠ್ಠಲ ಹಲಗೇಕರ, ಮಾಜಿ ಶಾಸಕರಾದ ಸಂಜಯ ಪಾಟೀಲ, ಮಹಾಂತೇಶ ಕವಟಗಿಮಠ ಮಾತನಾಡಿದರು. ಬಿಜೆಪಿ ಮಹಾನಗರ ಅಧ್ಯಕ್ಷೆ ಗೀತಾ ಸುತಾರ,ಮಾಜಿ ಶಾಸಕರಾದ ಅನಿಲ ಬೆನಕೆ, ಮಹಾಂತೇಶ ದೊಡ್ಡಗೌಡ್ರ, ವಿಶ್ವನಾಥ ಪಾಟೀಲ,ಅರವಿಂದ ಪಾಟೀಲ ಹಾಗೂ ಪ್ರಮುಖ ಮುಖಂಡರು, ಪದಾಧಿಕಾರಿಗಳು,ಕಾರ್ಯಕರ್ತರಿದ್ದರು.
ಕಾಂಗ್ರೆಸ್ ಭವನಕ್ಕೆ ಮುತ್ತಿಗೆ ಹಾಕಲು ಹೋರಾಟ ಬಿಜೆಪಿ ನಾಯಕರಿದ್ದ ನಿಯೋಗವನ್ನು ಪೊಲೀಸರು ಅರ್ಧ ದಾರಿಯಲ್ಲೇ ತಡೆ ಹಿಡಿದರು.