Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ನೇಹಾ ಕೊಲೆ ಖಂಡಿಸಿ ಬೆಳಗಾವಿಯಲ್ಲಿಂದು ಬೃಹತ್ ಪ್ರತಿಭಟನೆ

ಬೆಳಗಾವಿ: ಹುಬ್ಬಳ್ಳಿಯಲ್ಲಿ ನಡೆದ ನೇಹಾ ಹತ್ಯೆಯನ್ನು ಖಂಡಿಸಿ ಮಹಿಳಾ ಹಿತರಕ್ಷಣಾ ವೇದಿಕೆ ವತಿಯಿಂದ ಇಂದು ಬೆಳಗಾವಿ ನಗರದಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಸಂಸದೆ ಮಂಗಲಾ ಅಂಗಡಿ ತಿಳಿಸಿದರು.

ನಗರದ ಬಿಜೆಪಿ ಮಾಧ್ಯಮ ಕಾರ್ಯಾಲಯದಲ್ಲಿ ಆಯೋಜನೆ ಮಾಡಲಾಗಿದ್ದ ಮಾಧ್ಯಮಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ನೇಹಾ ಹಿರೇಮಠ ಕೊಲೆಯನ್ನು ನಾವು ಖಂಡಿಸಿತ್ತೇವೆ.‌ ನೇಹಾ ಕೊಲೆಗೆ ನ್ಯಾಯ ಒದಗಿಸಲು ಪ್ರತಿಭಟನೆಗೆ ಕರೆ ನೀಡಿಲಾಗಿದೆ‌.‌ ಪ್ರತಿಭಟನೆಯಲ್ಲಿ ಸಾವಿರಾರು ಮಹಿಳೆಯರು ಭಾಗವಹಿಸಲಿದ್ದಾರೆ. ಈ ರೀತಿ ಘಟನೆಗಳು ಮುಂದೆ ನಡೆಯಬಾರದು.‌ ಆದರೆ ಪದೆ ಪದೆ ಈ ರೀತಿ ಘಟನೆಗಳು ನಡೆಯುತ್ತಿದೆ.‌ ಬೆಳಗಾವಿಯ ವಂಟಮೂರಿಯಲ್ಲಿ ಘಟನೆ ಆಗಿ ಕೇವಲ ನಾಲ್ಕು ತಿಂಗಳು ಅಷ್ಟೆ ಆಗಿದೆ, ಅಷ್ಟರಲ್ಲಿ ಹುಬ್ಬಳ್ಳಿಯಲ್ಲಿ ಘಟನೆ ನಡೆದಿದೆ.‌ ಹಾಗಾಗಿ ಪ್ರತಿಭಟನೆ ಮಾಡುತ್ತಿದೇವೆ. ಎಲ್ಲರೂ ಪ್ರತಿಭಟನೆಯಲ್ಲಿ ಭಾಗವಹಿಸುವುದರ ಮೂಲಕ ನೇಹಾಳಿಗೆ ನ್ಯಾಯ ಕೊಡಿಸುವ ಕೆಲಸ ಆಗಬೇಕು ಎಂದರು.
ಶಾಸಕ ಅಭಯ ಪಾಟೀಲ್ ಮಾತನಾಡಿ, ಕಾಂಗ್ರೆಸ್ ಆಡಳಿತದಲ್ಲಿ ಹಿಂದು ಹೆಣ್ಣು ಮಕ್ಕಳಿಗೆ ರಕ್ಷಣೆ ಇಲ್ಲ. ಮೊನ್ನೆ ಹುಬ್ಬಳ್ಳಿಯಲ್ಲಿ ಆದ ಘಟನೆ ಬೆಳಗಾವಿಯಲ್ಲಿ ಕೂಡ ಮುಂದೆ ಆಗಬಹುದು. ಹಾಗಾಗಿ ಜಾಗೃತರಾಗಬೇಕು. ಹಿಂದು ಹೆಣ್ಣು ಮಕ್ಕಳು ಜಾಗೃತಿರಾಗಬೇಕು. ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಮಹಿಳೆಯರಿಗೆ ರಕ್ಷಣೆ ಇಲ್ಲ. ಮೀತಿಮಿರಿ ಈ ರೀತಿ ಘಟನೆಗಳು ಆಗುತ್ತಿದೆ. ಹಾಗಾಗಿ ಮಹಿಳಾ ಹಿತರಕ್ಷಣಾ ವೇದಿಕೆ ವತಿಯಿಂದ ಪ್ರತಿಭಟನೆ ನಡೆಯಲಿದೆ ಎಂದರು.
ರಾಜ್ಯ ಬಿಜೆಪಿ ವಕ್ತಾರ ಎಂ.ಬಿ ಜೀರಳಿ ಮಾತನಾಡಿ, ಹುಬ್ಬಳ್ಳಿಯಲ್ಲಿ ನಡೆದ ನೇಹಾ ಹತ್ಯೆಯನ್ನು ನಾವು ಅತ್ಯಂತ ಕಟುವಾಗಿ ಖಂಡಿಸುತ್ತೇವೆ. ನೇಹಾ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ಮಾಡಿದರೆ ಅವರ ಮೇಲೇ ಕೇಸ್ ಹಾಕಲಾಗಿದೆ. ನೇಹಾ ಕುರಿತು ಸೋಶಿಯಲ್ ಮೀಡಿಯಾದಲ್ಲಿ ಸುಳ್ಳು ಪೋಸ್ಟ್ ಹಾಕಲಾಗುತ್ತಿದೆ. ಇದರ ಹಿಂದೆ ಜೀಹಾದಿ ಮಾನಸಿಕತೆ ಇದೆ. ಈ ಪ್ರಕರಣ ಕೂಲಂಕಷವಾಗಿ ತನಿಖೆ ಆಗಬೇಕು ಎಂದು ಆಗ್ರಹಿಸಿದರು.‌
ಎಲ್ಲಿಯವರೆಗೆ ನೇಹಾ ಆತ್ಮಕ್ಕೆ ಶಾಂತಿ ಸಿಗುವದಿಲ್ಲವೋ ಅಲ್ಲಿಯವರೆಗೆ ಬಿಜೆಪಿ ಪ್ರತಿಭಟಿಸುತ್ತೆ. ಈ ಕೊಲೆ ಕಾಲೇಜಿನ‌ ಆವರಣದಲ್ಲೇ ಹಾಡಹಗಲೆ ಆಗಿದೆ.‌ ಎಲ್ಲಾ ಪಾಲಕರು ತಮ್ಮ ಮಕ್ಕಳ ಭವಿಷ್ಯ ಏನು ಎಂಬ ಭಯದ ವಾತಾವರಣದಲ್ಲಿ ಇದ್ದಾರೆ. ಕೊಲೆಯಾದ ನಂತರ ಸಿಎಂ ಹಾಗೂ ಗೃಹ ಸಚಿವರ ಪ್ರತಿಕ್ರಿಯೆ ನೋಡಿದರೆ ಏನು ಆಗಿಲ್ಲ, ಅವರ ನಡುವೆ ಸಂಬಂಧ ಇತ್ತು ಎಂದು ಹೇಳಿದ್ದು ಖಂಡಿಸುತ್ತೇವೆ ಎಂದರು.‌

ರಾಜ್ಯ ಬಿಜೆಪಿ ಉಪಾಧ್ಯಕ್ಷ ಅನಿಲ ಬೆನಕೆ, ಪಾಲಿಕೆ ಮೇಯರ್ ಸವಿತಾ ಕಾಂಬಳೆ, ಮಹಾನಗರ ಅಧ್ಯಕ್ಷೆ ಗೀತಾ ಸುತಾರ, ಜಿಲ್ಲಾ ಗ್ರಾಮೀಣ ಅಧ್ಯಕ್ಷ ಸುಭಾಷ ಪಾಟೀಲ, ಮಾಜಿ ಶಾಸಕ ಸಂಜಯ ಪಾಟೀಲ, ಸಿದ್ದನಗೌಡ ಪಾಟೀಲ, ಹನುಮಂತ ಕೊಂಗಾಲಿ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.‌
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ