Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಮೇಯರ್, ನಗರಸೇವಕರ ಅನರ್ಹಗೊಳಿಸಿ ಆದೇಶ

ಬೆಳಗಾವಿ : ಬೆಳಗಾವಿ ಮೇಯರ್ ಮಂಗೇಶ್ ಪವಾರ್ ಮತ್ತು ಕಾರ್ಪೊರೇಟರ್ ಜಯಂತ್ ಜಾಧವ್ ಅವರ ಸದಸ್ಯತ್ವವನ್ನು ರದ್ದುಗೊಳಿಸಿ ಯುಡಿ ಕಾರ್ಯದರ್ಶಿ ಅನರ್ಹಗೊಳಿಸಿ ಆದೇಶ ಹೊರಡಿಸಿದ್ದಾರೆ.

ಬೆಳಗಾವಿ ಗೋವಾವೇಸ್
ತಿನಿಸುಕಟ್ಟೆಯಲ್ಲಿ ಇವರಿಬ್ಬರು ಕಾನೂನು ಬಾಹಿರವಾಗಿ ಮಳಿಗೆಗಳನ್ನು ಪಡೆದುಕೊಂಡಿದ್ದಾರೆ ಎಂಬ ಆರೋಪದ ಮೇಲೆ ಇವರಿಬ್ಬರ ಸದಸ್ಯ ತ್ವದಿಂದ ಅನರ್ಹಗೊಳಿಸಲಾಗಿದೆ ಎಂದು ತಿಳಿಸಲಾಗಿದೆ.

 

ಬೆಳಗಾವಿಯ ಗೋವಾವೇಸ್ ತಿನಿಸು ಕಟ್ಟೆ ಮಳಿಗೆ ಪಡೆದ ವಿವಾದಕ್ಕೆ ಸಂಬಂಧಿಸಿ ಬೆಳಗಾವಿಯ ಹಾಲಿ ಮೇಯರ್ ಮಂಗೇಶ ಪವಾರ ಮತ್ತು ನಗರಸೇವಕ ಜಯಂತ ಜಾಧವ ಅವರ ಸದಸ್ಯತ್ವವನ್ನು ರದ್ದುಗೊಳಿಸಿ ನಗರಾಭಿವೃದ್ಧಿ ಇಲಾಖೆ ಆದೇಶ ಹೊರಡಿಸಿದೆ.

ಈ ಇಬ್ಬರೂ ತಮ್ಮ ಪತ್ನಿಯರ ಹೆಸರಿನಲ್ಲಿ ಮಳಿಗೆ ಪಡೆದಿದ್ದಾರೆ, ಪಾಲಿಕೆ ಸದಸ್ಯರಾಗಿ ಅಧಿಕಾರ ದುರುಪಯೋಗಪಡಿಸಿಕೊಂಡಿದ್ದಾರೆ ಎಂದು ಆರೋಪಿಸಿ ಬೆಳಗಾವಿಯ ಸಾಮಾಜಿಕ ಕಾರ್ಯಕರ್ತ ಸುಜಿತ್ ಮುಳಗುಂದ ಈ ಹಿಂದೆ ಪ್ರಾದೇಶಿಕ ಆಯುಕ್ತರಿಗೆ ದೂರು ಸಲ್ಲಿಸಿದ್ದರು. ಪ್ರಾದೇಶಿಕ ಆಯುಕ್ತರು ಈ ಇಬ್ಬರು ಸದಸ್ಯತ್ವ ರದ್ದುಗೊಳಿಸಿ ಆದೇಶ ಹೊರಡಿಸಿದ್ದರು.

ಆದರೆ ಅವರು ಹೈಕೋರ್ಟ್ ಮೆಟ್ಟಿಲೇರಿ ತಡೆಯಾಜ್ಞೆ ತಂದಿದದ್ದರು. ಈ ನಡುವೆ ಮಂಗೇಶ ಪವಾರ್ ಬೆಳಗಾವಿ ಮೇಯರ್ ಆಗಿ ಆಯ್ಕೆಯಾದರು.

ಈ ಪ್ರಕರಣ ಕುರಿತು ವಿಚಾರಣೆ ನಡೆಸಿ ಸೂಕ್ತ ಕ್ರಮ ತೆಗೆದುಕೊಳ್ಳುವಂತೆ ಹೈಕೋರ್ಟ್ ಸರಕಾರಕ್ಕೆ ನರ್ದೇಶನ ನೀಡಿತ್ತು. ಅದರಂತೆ ನಗರಾಭಿವದ್ಧಿ ಇಲಾಖೆ ಪ್ರಧಾನ ಕಾರ್ಯದರ್ಶಿಗಳು ವಿಚಾರಣೆ ನಡೆಸಿ ಈ ಇಬ್ಬರ ಸದಸ್ಯತ್ವವನ್ನು ರದ್ದುಗೊಳಿಸಿ ಆದೇಶ ಹೊರಡಿಸಿದ್ದಾರೆ. ವಾರ್ಡ್ ನಂಬರ್ 23 ಮತ್ತು 41 ಸ್ಥಾನಗಳು ತೆರವಾಗಿವೆ ಎಂದು ಘೋಷಿಸಿದ್ದಾರೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ