Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ವಿಕಲಚೇತನರಿಗೆ ಒಂದು ಲಕ್ಷದವರೆಗೂ ವೈದ್ಯಕೀಯ ಪರಿಹಾರ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

 

ಬೆಂಗಳೂರು: ರಾಜ್ಯದಲ್ಲಿ ವಿಕಲಚೇತನರಿಗೆ ಸರ್ಕಾರದಿಂದ ಅಂಗವಿಕಲತೆ ನಿವಾರಣಾ ವೈದ್ಯಕೀಯ ಪರಿಹಾರ ನಿಧಿ ಯೋಜನೆ, ನಿರಾಮಯ ಆರೋಗ್ಯ ವಿಮಾ ಯೋಜನೆ ಹಾಗೂ ಕಾಕ್ಲಿಯರ್ ಇಂಪ್ಲಾಂಟ್ ಯೋಜನೆಗಳು ಜಾರಿಯಲ್ಲಿವೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ತಿಳಿಸಿದರು.

ಶುಕ್ರವಾರ ವಿಧಾನಪರಿಷತ್ ಕಲಾಪದಲ್ಲಿ ವೈ.ಎಂ.ಸತೀಶ್ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, ವಿಕಲಚೇತನರಿಗಾಗಿ ಪ್ರಮುಖ ಮೂರು ಯೋಜನೆಗಳನ್ನು ಜಾರಿಗೆ ತರಲಾಗಿದೆ ಎಂದರು.

ಅಂಗವಿಕಲತೆ ನಿವಾರಣಾ ವೈದ್ಯಕೀಯ ಪರಿಹಾರ ನಿಧಿ ಯೋಜನೆಯಡಿ ಶಸ್ತ್ರಚಿಕಿತ್ಸೆಯ ಮುಖಾಂತರ ವಿಕಲಚೇತನತೆಯನ್ನು ನಿವಾರಣೆ ಮಾಡಿಕೊಳ್ಳಲು ಅಥವಾ ಕಡಿಮೆ ಮಾಡಿಕೊಳ್ಳಲು ಎಲ್ಲಾ ಸರ್ಕಾರಿ ಆಸ್ಪತ್ರೆಗಳು ಅಥವಾ ಕರ್ನಾಟಕದ ಸುಸಜ್ಜಿತ ಖಾಸಗಿ ಆಸ್ಪತ್ರೆಗಳಲ್ಲಿ ಶಸ್ತ್ರಚಿಕಿತ್ಸೆ ಮಾಡಿಸಿಕೊಳ್ಳಲು 1 ಲಕ್ಷ ರೂಪಾಯಿ ವರೆಗೆ ಸಹಾಯ ಧನ ಮಂಜೂರು ಮಾಡಲಾಗುತ್ತಿದೆ ಎಂದು ಹೇಳಿದರು.

ಪ್ರಸ್ತುತ ರಾಜ್ಯದಲ್ಲಿ ನ್ಯಾಷನಲ್ ಟ್ರಸ್ಟ್ ಆಕ್ಟ್ ಅಡಿಯಲ್ಲಿ ನಿರಾಮಯ ಆರೋಗ್ಯ ವಿಮಾ ಯೋಜನೆಯನ್ನು ಜಾರಿಗೆ ತಂದಿದ್ದು, ಬಡತನ ರೇಖೆಗಿಂತ ಕೆಳಗಿರುವ ಕುಟಂಬದ ವಿಕಲಚೇತನ ವ್ಯಕ್ತಿ ಒಂದು ಬಾರಿ ವಾರ್ಷಿಕ 250 ರೂಪಾಯಿಗಳನ್ನು ಸರ್ಕಾರದಿಂದ ವಿಮಾ ಕಂತಾಗಿ ಪಾವತಿಸಿ ಪ್ರತಿವರ್ಷ ಒಂದು ಲಕ್ಷಗಳವರೆಗೆ ಉಚಿತವಾಗಿ ವೈದ್ಯಕೀಯ ಸೌಲಭ್ಯ ಪಡೆಯಬಹುದು ಎಂದರು.

ಇನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಕಾಕ್ಲಿಯಾರ್ ಇಂಪ್ಲಾಂಟ್ ಯೋಜನೆ ಅಡಿಯಲ್ಲಿ ಕಡ್ಡಾಯ ನವಜಾತ ಶಿಶುಗಳ ಶ್ರವಣ ತಪಾಸಣೆ ನಡೆಸಿ, ಗುರುತ ಹಚ್ಚಿದ ತೀವ್ರತರವಾದ/ಗಂಭೀರ ಸ್ವರೂಪದ ಶ್ರವಣದೋಷವುಳ್ಳ 6 ವರ್ಷದ ಕೆಳಗಿನ ಮಕ್ಕಳಿಗೆ ಶ್ರವಣ ಸಾಧನಗಳನ್ನು ನೀಡಲಾಗುವುದು. ಜೊತೆಗೆ ಟ್ರಯಲ್ ಆಡಿಟರಿವರ್ಬಲ್ ಥೆರಪಿಯನ್ನು ಒದಗಿಸಲಾಗುವುದು, ವಿವಿಧ ಥೆರಪಿ ಚಿಕತ್ಸೆಗಳನ್ನು ಉಚಿತವಾಗಿ ಒದಗಿಸಲಾಗುತ್ತಿದ್ದು, 2016-17 ರಿಂದ ಇಲ್ಲಿಯವರೆಗೆ 665 ಫಲಾನುಭವಿಗಳಿಗೆ ಶಸ್ತ್ರಚಿಕಿತ್ಸೆ ನಡೆಸಲಾಗಿದೆ ಎಂದು ಸಚಿವರು ಮಾಹಿತಿ ನೀಡಿದರು.

ಜೊತೆಗೆ ನಿರಾಮಯ ಆರೋಗ್ಯ ವಿಮಾ ಯೋಜನೆಯಡಿ 4 ಬಗೆಯ ವಿಕಲಚೇತನರಿಗೆ ಖಾಸಗಿ ಅಥವಾ ಸರ್ಕಾರಿ ಆಸ್ಪತ್ರೆಗಳಲ್ಲಿ ಪಡೆದ ಚಿಕಿತ್ಸೆಯ ಗರಿಷ್ಠ 1 ಲಕ್ಷದವರೆಗೆ ಶಸ್ತ್ರಚಿಕಿತ್ಸೆ ಹಾಗೂ ವೈದ್ಯಕೀಯ ವೆಚ್ಚಗಳನ್ನು ಕೇಂದ್ರ ಸರ್ಕಾರ ಗುರುತಿಸಿರುವ ಸಂಸ್ಥೆಯ ಮುಖಾಂತರ ಪಡೆಯುತ್ತಿದ್ದಾರೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.

ಸಚಿವರ‌‌ ನಿರ್ವಹಣೆಗೆ‌ ವೈ.ಎಂ.ಸತೀಶ್ ಶ್ಲಾಘನೆ :
ವಿಕಲಚೇತನರಿಗೆ ಕೈಗೊಂಡಿರುವ ಕಾರ್ಯಕ್ರಮಗಳು ಹಾಗೂ ಯೋಜನೆಗಳ ಬಗ್ಗೆ ಸರ್ಕಾರ ಹಾಗೂ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರ ಕಾರ್ಯಕ್ಷಮತೆಗೆ ವಿಧಾನ ಪರಿಷತ್ ಸದಸ್ಯ ಸತೀಶ್ ಮೆಚ್ಚುಗೆ ವ್ಯಕ್ತಪಡಿಸಿದರು. ಪ್ರಶ್ನೆ ಮಧ್ಯೆಯೇ ಸಚಿವರನ್ನು‌ ಶ್ಲಾಘಿಸಿದರು. ಪ್ರತಿಯಾಗಿ ಸಚಿವರು ಸತೀಶ್ ಅವರಿಗೆ ಧನ್ಯವಾದ ಅರ್ಪಿಸಿದರು.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ