ಬೆಳಗಾವಿ: ಸುಪ್ರೀಂಕೋರ್ಟ್ ವಕೀಲ ಮೋಹನ ಕಾತರಕಿ ಜೂ. 17ರಂದು ಬೆಳಿಗ್ಗೆ 11 ಗಂಟೆಗೆ ಬೆಳಗಾವಿಗೆ ಆಗಮಿಸಲಿದ್ದು, ಸರ್ಕಿಟ್ ಹೌಸ್‌ನಲ್ಲಿ ಕನ್ನಡ ಸಂಘಟನೆಗಳ ಮುಖಂಡರ ಜೊತೆಗೆ ನೆಲ, ಜಲ, ಭಾಷೆ ಮತ್ತು ಪಾಲಿಕೆಯ ಸಂಬಂಧ ಸಂವಾದ ನಡೆಸಲಿದ್ದಾರೆ.
ರಾಮದುರ್ಗ ತಾಲ್ಲೂಕಿನ ಹುಲಕುಂದ ಮೂಲದವರಾದ ಕಾತರಕಿ ಅವರು ಮಹಾದಾಯಿ, ಕೃಷ್ಣ ಮತ್ತು ಕಾವೇರಿ ಜಲವಿವಾದಗಳ ಪ್ರಕರಣಗಳಲ್ಲಿ ಕರ್ನಾಟಕ ಪರವಾಗಿ ಸಮರ್ಥವಾಗಿ ವಾದ ಮಂಡಿಸಿ ಜಯ ಗಳಿಸಿಕೊಟ್ಟಿದ್ದಾರೆ.
ಕನ್ನಡ ಸಂಘಟನೆಗಳ ಮುಖಂಡರು, ಪದಾಧಿಕಾರಿಗಳು, ಪತ್ರಕರ್ತರೂ ಸಂವಾದದಲ್ಲಿ ಪಾಲ್ಗೊಳ್ಳಬಹುದು ಎಂದು ಜಿಲ್ಲಾ ಕನ್ನಡ ಸಂಘಟನೆಗಳ ಕ್ರಿಯಾ ಸಮಿತಿ ಅಧ್ಯಕ್ಷ ಅಶೋಕ ಚಂದರಗಿ ತಿಳಿಸಿದ್ದಾರೆ.
