Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಕರ್ನಾಟಕಕ್ಕೆ ಬಿಸಿ ಗಾಳಿಯ ಆತಂಕ : ತಾಪಮಾನ 45 ಡಿಗ್ರಿ ತಲುಪುವ ಸಾಧ್ಯತೆ, ಹವಾಮಾನ ಇಲಾಖೆ ಮುನ್ನೆಚ್ಚರಿಕೆ

 

 

ಬೆಂಗಳೂರು: ರಾಜ್ಯದಲ್ಲಿ ತಾಪಮಾನದ ಬೇಗೆ ಮಿತಿಮೀರಿದೆ. ಬೆಂಗಳೂರು ಸೇರಿದಂತೆ ರಾಜ್ಯದಾದ್ಯಂತ ತಾಪಮಾನದಲ್ಲಿ ಭಾರೀ ಏರಿಕೆಯಾಗಿದ್ದು, ಜನಜೀವನ ತತ್ತರಿಸಿದೆ. ಮುಂದಿನ ಎರಡು ದಿನಗಳಲ್ಲಿ ಬಿಸಿಗಾಳಿ (Heatwave) ಮತ್ತಷ್ಟು ತೀವ್ರಗೊಳ್ಳಲಿದ್ದು, ನಾಗರಿಕರು ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ.

 

ಕರಾವಳಿ ಜಿಲ್ಲೆಗಳು ಹಾಗೂ ಕಲ್ಯಾಣ ಕರ್ನಾಟಕದ ಭಾಗಗಳಲ್ಲಿ ಸದ್ಯ ತೀವ್ರ ಸೆಖೆ ಆವರಿಸಿದೆ. ಮುಂಬರುವ ದಿನಗಳಲ್ಲಿ ಇಲ್ಲಿನ ಉಷ್ಣಾಂಶವು 45 ಡಿಗ್ರಿ ಸೆಲ್ಸಿಯಸ್‌ ತಲುಪುವ ಸಾಧ್ಯತೆಯಿದೆ ಎಂದು ಅಂದಾಜಿಸಲಾಗಿದೆ.

ಉತ್ತರ ಕನ್ನಡ ಜಿಲ್ಲೆಯಲ್ಲಿ ಪ್ರಸ್ತುತ 37 ಡಿಗ್ರಿ ಸೆಲ್ಸಿಯಸ್ ವರೆಗೆ ತಾಪಮಾನ ದಾಖಲಾಗಿದ್ದು, ಇದು ಕೆಲವು ಪ್ರದೇಶಗಳಲ್ಲಿ 42 ಡಿಗ್ರಿವರೆಗೆ ಏರಿಕೆಯಾಗುವ ಸಾಧ್ಯತೆಯಿದೆ.

 

ದಕ್ಷಿಣ ಕನ್ನಡ ಮತ್ತು ಉಡುಪಿಯಲ್ಲಿಯೂ ಸಹ ಸಾಮಾನ್ಯಕ್ಕಿಂತ ಹೆಚ್ಚಿನ ತಾಪಮಾನ ದಾಖಲಾಗಿದೆ. ಕರಾವಳಿಯ ಕೆಲವು ಭಾಗಗಳಲ್ಲಿ ಸಾಧಾರಣ ಮಳೆಯ ಮುನ್ಸೂಚನೆ ಇದ್ದರೂ, ಅದು ಬಿಸಿಲಿನ ತಾಪವನ್ನು ತಗ್ಗಿಸಲು ಸಹಕಾರಿಯಾಗುವ ಸಾಧ್ಯತೆ ಕಡಿಮೆ ಎಂದು ಹೇಳಲಾಗಿದೆ.

 

ಬಿಸಿಗಾಳಿ ಅಲರ್ಟ್ ಘೋಷಿತ ಜಿಲ್ಲೆಗಳು

ಉತ್ತರ ಒಳನಾಡಿನ ಜಿಲ್ಲೆಗಳಾದ ವಿಜಯಪುರ, ಕಲಬುರಗಿ, ಬೀದರ ಮತ್ತು ಬಾಗಲಕೋಟೆಗಳಲ್ಲಿ ‘ಹೀಟ್ ವೇವ್ ಅಲರ್ಟ್’ ಘೋಷಿಸಲಾಗಿದೆ. ಒಣ ಹವೆ ಮುಂದುವರಿಯಲಿದ್ದು, ಬೆಳಗಾವಿ, ಹಾವೇರಿ, ಗದಗ, ಧಾರವಾಡ, ಕೊಪ್ಪಳ, ಬಳ್ಳಾರಿ, ರಾಯಚೂರು, ಯಾದಗಿರಿ ಮತ್ತು ವಿಜಯನಗರ ಜಿಲ್ಲೆಗಳಲ್ಲಿಯೂ ಒಣ ಹವೆ ಮುಂದುವರಿಯಲಿದೆ.

 

ಆರೋಗ್ಯ ಇಲಾಖೆಯ ಮುನ್ನೆಚ್ಚರಿಕೆಗಳು

ಬಿಸಿಲಿನಿಂದ ಉಂಟಾಗುವ ಅನಾರೋಗ್ಯ ತಡೆಯಲು ವೈದ್ಯರು ಮತ್ತು ಅಧಿಕಾರಿಗಳು ಕೆಲವು ಪ್ರಮುಖ ಸಲಹೆಗಳನ್ನು ನೀಡಿದ್ದಾರೆ. ಬೆಳಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ಅನಿವಾರ್ಯ ಕೆಲಸವಿಲ್ಲದೆ ಹೊರಗೆ ಬರಬಾರದು. ವಿಶೇಷವಾಗಿ ಮಧ್ಯಾಹ್ನ 12 ರಿಂದ 4 ಗಂಟೆಯ ನಡುವೆ ಸೂರ್ಯನ ತಾಪ ಹೆಚ್ಚಿರುವುದರಿಂದ ಮನೆಯೊಳಗಿರಲು ಸೂಚಿಸಲಾಗಿದೆ.

ದೇಹದಲ್ಲಿ ನೀರಿನಂಶ ಕಡಿಮೆಯಾಗದಂತೆ (Dehydration) ಎಚ್ಚರವಹಿಸಬೇಕು. ನೀರು, ಎಳನೀರು, ಮಜ್ಜಿಗೆ ಮತ್ತು ತಾಜಾ ಹಣ್ಣಿನ ರಸಗಳನ್ನು ಹೆಚ್ಚಾಗಿ ಸೇವಿಸಿ. ಸಕ್ಕರೆ ಅಂಶವಿರುವ ಹಾಗೂ ಕೆಫೀನ್ ಮಿಶ್ರಿತ ಪಾನೀಯಗಳನ್ನು ಸೇವಿಸಬೇಡಿ ಎಂದು ಸಲಹೆ ನೀಡಲಾಗಿದೆ. ಶಾಲಾ ರಜೆಯ ಅವಧಿಯಲ್ಲಿ ಮಕ್ಕಳು ನೇರ ಬಿಸಿಲಿಗೆ ಒಡ್ಡಿಕೊಳ್ಳದಂತೆ ಪೋಷಕರು ಗಮನಹರಿಸಬೇಕು ಎಂದು ತಿಳಿಸಲಾಗಿದೆ. ಹಗುರವಾದ, ತಿಳಿ ಬಣ್ಣದ ಹತ್ತಿ ಬಟ್ಟೆಗಳನ್ನು ಧರಿಸಿ. ಹೊರಹೋಗುವಾಗ ಛತ್ರಿ, ಟೋಪಿ ಅಥವಾ ಸ್ಕಾರ್ಫ್ ಬಳಸುವುದು ಒಳ್ಳೆಯದು ಎಂದು ತಿಳಿಸಲಾಗಿದೆ.

ಕೆಲವೆಡೆ ಮಳೆಯ ಮುನ್ಸೂಚನೆ

ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಶಿವಮೊಗ್ಗ, ಮೈಸೂರು, ಮಂಡ್ಯ, ಕೊಡಗು, ಹಾಸನ ಮತ್ತು ಚಿಕ್ಕಮಗಳೂರು ಜಿಲ್ಲೆಗಳ ಕೆಲವು ಭಾಗಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ರಾಜ್ಯದಾದ್ಯಂತ ತಾಪಮಾನ ಏರುತ್ತಲೇ ಇರುವುದರಿಂದ, ಬಿಸಿಲಿನ ಅಪಾಯಗಳನ್ನು ಕಡಿಮೆ ಮಾಡಲು ಪ್ರತಿಯೊಬ್ಬರೂ ಜಾಗರೂಕರಾಗಿರುವುದು ಅಗತ್ಯ ಎಂದು ಅಧಿಕಾರಿಗಳು ಹೇಳಿದ್ದಾರೆ.
Advertisement
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬೆಳಗಾವಿ ಪೊಲೀಸರ ಬೇಜವಾಬ್ದಾರಿಗೆ ಮೊಮ್ಮಗನಿಂದಲೇ ಕೊಲೆಯಾದ ಅಜ್ಜಿ..!ರಾಜಧಾನಿ ಎಕ್ಸ್‌ಪ್ರೆಸ್‌ನಲ್ಲಿ ಭಾರಿ ಬೆಂಕಿ ಅವಘಡ; 68 ಪ್ರಯಾಣಿಕರ ಸ್ಥಳಾಂತರವಿದೇಶಕ್ಕೆ ತೆಗೆದುಕೊಂಡು ಹೋಗಿದ್ದ ಸಾವಿರ ವರ್ಷಗಳ ಹಿಂದಿನ ತಾಮ್ರ ಶಾಸನಕ್ಕೆ ಕೊನೆಗೂ ಭಾರತಕ್ಕೆ ವಾಪಸ್..!ಮೂತ್ರ ವಿಸರ್ಜನೆಗೆ ತೆರಳಿದ್ದ ಗೋವಾ ಕಾಂಗ್ರೆಸ್‌ ಅಭ್ಯರ್ಥಿಗೆ  ಕಚ್ಚಿದ ಹಾವು; ಚುನಾವಣಾ ಪ್ರಚಾರದ ಮಧ್ಯೆ ಕೇತನ್ ಭಾಟಿಕರ್ ಸಾವು..ಮೂತ್ರ ವಿಸರ್ಜನೆಗೆ ತೆರಳಿದ್ದ ಗೋವಾ ಕಾಂಗ್ರೆಸ್‌ ಅಭ್ಯರ್ಥಿಗೆ  ಕಚ್ಚಿದ ಹಾವು; ಚುನಾವಣಾ ಪ್ರಚಾರದ ಮಧ್ಯೆ ಕೇತನ್ ಭಾಟಿಕರ್ ಸಾವು..ರಾಜ್ಯದಲ್ಲಿ ಜೂನ್ 1ಕ್ಕೆ ಶಾಲೆ ಪ್ರಾರಂಭೋತ್ಸವ : ಅಂದೇ ಪೋಷಕರ ಮಹಾಸಭೆಪೋಕ್ಸೋ ಪ್ರಕರಣ : ಪೊಲೀಸರ ಮುಂದೆ ಶರಣಾದ ಕೇಂದ್ರ ಸಚಿವ ಬಂಡಿ ಸಂಜಯ ಪುತ್ರ3 ನೇ ಮಗು ಜನಿಸಿದರೆ ₹30 ಸಾವಿರ, 4ನೇ ಮಗು ಜನಿಸಿದರೆ ₹40 ಸಾವಿರ ಧನಸಹಾಯ ! ವಿಶಿಷ್ಟ ಯೋಜನೆ ಘೋಷಿಸಿದ ಆಂಧ್ರ ಸಿಎಂ…!SSLC ಮರುಮೌಲ್ಯಮಾಪನ : ಜಿಲ್ಲೆಯ ವಿದ್ಯಾರ್ಥಿ ಈಗ ಇಡೀ ರಾಜ್ಯಕ್ಕೆ ಪ್ರಥಮ..!ಕಕ್ಷಿದಾರರ ಸಮಾಲೋಚನಾ ಸ್ಪರ್ಧೆ: ರಾಷ್ಟ್ರೀಯ ಕಾನೂನು ಉತ್ಸವದಲ್ಲಿ ಪ್ರಥಮ ಸ್ಥಾನ ಪಡೆದ ಗದಗ ಮಾನ್ವಿ ಕಾನೂನು ಮಹಾವಿದ್ಯಾಲಯದ ವಿದ್ಯಾರ್ಥಿಗಳು