ಚಿತ್ರದುರ್ಗ: ಯೋಜನಾ ಮತ್ತು ಸಾಂಖಿಕ, ಜಿಲ್ಲಾ ಉಸ್ತುವಾರಿ ಸಚಿವ ಡಿ ಸುಧಾಕರ್ (62) ಇಂದು ಬೆಳಗಿನ ಜಾವ ಬೆಂಗಳೂರಿನ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನಿಧನ ಹೊಂದಿದರು.
ಸಚಿವರಿಗೆ ಪತ್ನಿ ಪುತ್ರ ಹಾಗೂ ಪುತ್ರಿ ಇದ್ದಾರೆ.
ಶ್ವಾಸಕೋಶದ ಸೋಂಕಿನಿಂದ ಬಳಲುತ್ತಿದ್ದ ಅವರು ಚಿಕಿತ್ಸೆಗೆ ಸ್ಪಂದಿಸದೇ ಕೊನೆಯುಸಿರೆಳೆದರು.
ಮಂಡಿ ಚಿಪ್ಪು ಶಸ್ತ್ರಚಿಕಿತ್ಸೆಗಾಗಿ ಯಶವಂತಪುರದಲ್ಲಿದ್ದ ಮಣಿಪಾಲ ಆಸ್ಪತ್ರೆಗೆ ದಾಖಲಾಗಿದ್ದ ಅವರಿಗೆ ಶ್ವಾಸಕೋಶದ ಸೋಂಕು ತಗಲಿತ್ತು.
ಯಶವಂತಪುರ ಆಸ್ಪತ್ರೆಯಿಂದ ಎಲೆಕ್ಟ್ರಾನಿಕ್ ಸಿಟಿಯಲ್ಲಿರುವ ಕಿಮ್ಸ್ ಆಸ್ಪತ್ರೆಗೆ ಅವರನ್ನು ಸ್ಥಳಾಂತರಿಸಲಾಗಿತ್ತು. ತಜ್ಞ ವೈದ್ಯರ ಸತತ ಚಿಕಿತ್ಸೆ ನಂತರವೂ ಅವರು ಚೇತರಿಸಿಕೊಂಡಿರಲಿಲ್ಲ.
