Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಮಾರ್ಗಸೂಚಿಗಳನ್ವಯ ಪಡಿತರ ಚೀಟಿ‌ ಪರಿಷ್ಕರಣೆಯಾಗಲಿ: ಸಚಿವ ಕೆ.ಎಚ್.ಮುನಿಯಪ್ಪ

 

ಬೆಳಗಾವಿ: ಬಡ ಜನರ ಶ್ರೇಯೋಭಿವೃದ್ಧಿಗಾಗಿ ರಾಜ್ಯ ಸರಕಾರ ಅನೇಕ ಯೋಜನೆಗಳನ್ನು ಜಾರಿಗೊಳಿಸಿದ್ದು ಅರ್ಹ ಫಲಾನುಭವಿಗಳಿಗೆ ಸೌಲಭ್ಯಗಳು ದೊರಕಬೇಕು. ಪಡಿತರ ಚೀಟಿ ಪರಿಷ್ಕರಣೆಗೆ ಹೊರಡಿಸಲಾಗಿರುವ ಮಾರ್ಗಸೂಚಿಗಳ ಪ್ರಕಾರ ಪಡಿತರ ಚೀಟಿಗಳ ಪರಿಷ್ಕರಣೆಗೆ ಕ್ರಮ ಕೈಗೊಳ್ಳುವಂತೆ ಆಹಾರ‌ ಮತ್ತು ನಾಗರಿಕ‌ ಸರಬರಾಜು ಇಲಾಖೆ ಸಚಿವ
ಕೆ.ಎಚ್.ಮುನಿಯಪ್ಪ ಅವರು ಅಧಿಕಾರಿಗಲಕಿಗೆ ತಿಳಿಸಿದರು.

ಬೆಳಗಾವಿ ಸುವರ್ಣ ವಿಧಾನಸೌಧದಲ್ಲಿ‌ ಬುಧವಾರ (ಫೆ.4) ಜರುಗಿದ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಹಾಗೂ ಕಾನೂನು ಮಾಪನ ಶಾಸ್ತ್ರ ಇಲಾಖೆಯ ಬೆಳಗಾವಿ ವಿಭಾಗ ಮಟ್ಟದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಆಹಾರ ಇಲಾಖಾ ಅಧಿಕಾರಿಗಳು ತಮ್ಮ ಜವಾಬ್ದಾರಿಯನ್ನು ಅರಿತು ಕಾರ್ಯ ನಿರ್ವಹಿಸಬೇಕು. ಪಡಿತರ ಚೀಟಿ ಪರಿಷ್ಕರಣೆ ಸಂದರ್ಭದಲ್ಲಿ ಅರ್ಹ ಬಿ.ಪಿ.ಎಲ್‌. ಪಡಿತರ ಚೀಟಿದಾರರಿಗೆ ತೊಂದರೆ ಅಗದಂತೆ ನಿಗಾವಹಿಸುವದರ ಜೊತೆಗೆ ಅನರ್ಹ ಬಿ.ಪಿ.ಎಲ್ ಕಾರ್ಡಗಳನ್ನು‌ ಪತ್ತೆ ಹಚ್ಚಲು ಇಲಾಖಾ ಅಧಿಕಾರಿಗಳು, ಸಿಬ್ಬಂದಿಗಳು ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸುವಂತೆ ತಿಳಿಸಿದರು.

ಬೆಳಗಾವಿ ಕಂದಾಯ ವಿಭಾಗದಲ್ಲಿ ಅಂದಾಜು 13 ಲಕ್ಷ ಫಲಾನುಭವಿಗಳು ಈ-ಕೆವೈಸಿ ನೀಡದೆ‌ ಪಡಿತರ ಪಡೆದಿರುವುದಿಲ್ಲ ಅಂತಹ ಫಲಾನುಭವಿಗಳನ್ನು ಗುರುತಿಸಿ ಅಂತಹವರ‌ ವಿವರಗಳನ್ನು ಆಯಾ ನ್ಯಾಯಬೆಲೆ ಅಂಗಡಿಗಳಲ್ಲಿ ಪ್ರಚುರಪಡಿಸಿ ವರದಿ ನೀಡಬೇಕು. ಫೆ.20ರೊಳಗಾಗಿ ಎಲ್ಲ‌ ನ್ಯಾಯಬೆಲೆ‌‌ ಅಂಗಡಿಗಳಲ್ಲಿ ಥರ್ಮಲ‌್ ಪ್ರಿಂಟರಗಳನ್ನು‌‌ ಅಳವಡಿಸಲು‌ ಕ್ರಮ ಕೈಗೊಳ್ಳುವಂತೆ ತಿಳಿಸಿದರು.

ಆಹಾರ ಧಾನ್ಯಗಳನ್ನು ಸರಬರಾಜು ಮಾಡುವಂತಹ ಲಾರಿಗಳಿಗೆ ಜಿ.ಪಿ.ಎಸ್ ಅಳವಡಿಸುವುದು ಕಡ್ಡಾಯವಾಗಿದ್ದು ಈ ಕುರಿತು ಅಧಿಕಾರಿಗಳು‌ ಪರಿಶೀಲಿಸಬೇಕು.

ಬೆಂಬಲ ಬೆಲೆ‌ ಯೋಜನೆ‌ ಅಡಿ ತೆರೆಯಲಾದ ಖರೀದಿ‌‌‌‌‌ ಕೇಂದ್ರಗಳಲ್ಲಿ ನಿಯಮಾನುಸಾರ ಆಹಾರ ಧಾನ್ಯಗಳನ್ನು ಖರೀದಿಸಲಾಗುತ್ತಿರುವ‌ ಕುರಿತು ಪರಿಶೀಲಿಸಬೇಕು. ಸರ್ಕಾರ ನಿಗದಿ‌ ಪಡಿಸಿದ ದರದಂತೆ ಬೆಂಬಲ ಬೆಲೆ‌ಯಡಿ ಖರೀದಿಸಬೇಕು ಈ ಯೋಜನೆಯಡಿ ಯಾವುದೇ ಅವ್ಯವಹಾರಗಳು ನಡೆಯದಂತೆ ನಿಗಾವಹಿಸಲು ತಿಳಿಸಿದರು.

ಆಹಾರ ಮತ್ತು‌ ನಾಗರಿಕ ಸರಬರಾಜು ನಿಗಮದ ಅಧೀನದಲ್ಲಿ ಇರುವಂತಹ ಗೋದಾಮುಗಳನ್ನು ನಿಯಮಿತವಾಗಿ ಪರಿಶೀಲಿಸಿ ಅವಶ್ಯಕತೆಗಿಂತ ಹೆಚ್ಚಿನ ಆಹಾರ ಧಾನ್ಯ ಸಂಗ್ರಹವಾಗದಂತೆ ನಿಗಾವಹಿಸಲು ತಿಳಿಸಿದರು.

ಜಿಲ್ಲಾ‌ ಹಾಗೂ ತಾಲೂಕು ಮಟ್ಟದಲ್ಲಿ‌ ಶೀಘ್ರವೆ ಜಾಗೃತ ಸಮಿತಿಗಳನ್ನು ರಚಿಸಲು ಸೂಚಿಸಿದರು. ಈ ಕುರಿತು ಜಿಲ್ಲಾ‌ ಉಸ್ತುವಾರಿ‌ ಸಚಿವರನ್ನು ಶಾಸಕರುಗಳ ಜೊತೆ ನಿರಂತರ‌‌‌ ಸಮನ್ವಯ ಸಾಧಿಸಬೇಕು. ಇದರ ಜೊತೆಗೆ ತಮ್ಮ‌ ಜಿಲ್ಲಾ ವ್ಯಾಪ್ತಿಯಲ್ಲಿನ ಎಲ್ಲ ಗ್ಯಾಸ್ ಏಜೆನ್ಸಿಗಳನ್ನು ನಿಯಮಿತವಾಗಿ ಪರಿಶೀಲಿಸಬೇಕು.

ಸಕ್ಕರೆ ಕಾರ್ಖಾನೆಗಳಲ್ಲಿ ತೂಕದ ಸಾಧನಗಳಲ್ಲಿ ರೈತರಿಗೆ ಮೋಸ ಆಗದಂತೆ ಎಲ್ಲ ಸಕ್ಕರೆ‌ ಕಾರ್ಖಾನೆಗಳಲ್ಲಿ ಮಾರ್ಗಸೂಚಿಗಳನ್ವಯ ತೂಕದ‌ಸಾಧನಗಳನ್ನು ಅಳವಡಿಸಿರುವದರ‌ ಕುರಿತು‌ ಖಾತರಿ‌ ಪಡಿಸಿಕೊಳ್ಳುವಂತರ ಸಚಿವ ಕೆ.ಎಚ್.ಮುನಿಯಪ್ಪ ಅವರು ಸೂಚನೆ ನೀಡಿದರು.

ಆಹಾರ ಇಲಾಖೆ ಆಯುಕ್ತರಾದ ವಾಸವಿ ರೆಡ್ಡಿ ಜೊಸ್ನಾ ಅವರು ಮಾತನಾಡಿ ಅನ್ನಭಾಗ್ಯ ಯೋಜನೆಯಡಿ ಬೆಳಗಾವಿ ವಿಭಾಗಕ್ಕೆ ಸೆಪ್ಟೆಂಬರ ಅಂತ್ಯದ ವರೆಗೆ 2759.02ಕೋಟಿ ರೂ ಡಿಬಿಟಿ ಮೂಲಕ ಸಂದಾಯಿಸಲಾಗಿರುತ್ತದೆ. ಬೆಳಗಾವಿ‌ ಕಂದಾಯ ವಿಭಾಗದಲ್ಲಿ 5231 ನ್ಯಾಯಬೆಲೆ ಅಂಗಡಿಗಳಿದ್ದು ಹೊಸ ಪಡಿತರ ಅಂಗಡಿಗಳನ್ನು ತೆರೆಯಲು ಇರುವಂತಹ ಮಾರ್ಗಸೂಚಿಗಳನ್ವಯ ಪ್ರಸ್ತಾವನೆಯನ್ನು ಸಲ್ಲಿಸಲು ತಿಳಿಸಿದರು.

ಕಾನೂನು ಮಾಪನ ಇಲಾಖೆ ನಿಯಂತ್ರಕರಾದ ಅನೀತಾ ಲಕ್ಷ್ಮೀ ಅವರು ಮಾತನಾಡಿ ಬೆಳಗಾವಿ ಕಂದಾಯ ವಿಭಾಗದಲ್ಲಿ ಜನೇವರಿ -2025ರ ಅಂತ್ಯದ ವರೆಗೆ 12.15 ಕೋಟಿ ರಾಜಸ್ವ ಸಂಗ್ರಹ ಮಾಡಲಾಗಿರುತ್ತದೆ. ಒಟ್ಟು 11418 ತಪಾಸಣೆ ನಡೆಸಿ 2218 ಮೊಕದ್ದಮೆಗಳನ್ನು ಹೂಡಿ ರೂ. 73.88 ಲಕ್ಷ ಅಭಿಸಂಧಾನ ದಂಡವನ್ನು ವಿಧಿಸಲಾಗಿದೆ. ಬೆಳಗಾವಿ ಕಂದಾಯ ವಿಭಾಗದಲ್ಲಿ ಪ್ರಸಕ್ತ ವರ್ಷದಲ್ಲಿ 1821 ಪೆಟ್ರೊಲ ಪಂಪಗಳನ್ನು ತಪಾಸಣೆ ಗೈದಿದ್ದು ಈ ಪೈಕಿ 225 ಮೊಕದ್ದಮೆಗಳನ್ನು ಹೂಡಿ 5,55,00 ರೂ.ಗಳ ಅಭಿಸಂದಾನ ಶುಲ್ಕವನ್ನು ಸಂಗ್ರಹಿಸಲಾಗಿರುತ್ತದೆ ಎಂದು ಮಾಹಿತಿ ನೀಡಿದರು.

ಸಭೆಯಲ್ಲಿ ಸಚಿವರ ವಿಶೇಷ ಕರ್ತವ್ಯಾಧಿಕಾರಿ ವೆಂಕಟೇಶ, ಆಪ್ತ ಕಾರ್ಯದರ್ಶಿ ನಟರಾಜ, ಆಹಾರ ಇಲಾಖೆ ಆಯ್.ಟಿ.ವಿಭಾಗದ ಮುಖ್ಯಸ್ಥ ಎಂ.ವಿ.ಚಂದ್ರಕಾಂತ, ಆಹಾರ ಇಲಾಖೆ ಆಯುಕ್ತರ ಕಚೇರಿ ಜಂಟಿ ನಿರ್ದೆಶಕ ಎಂ.ಎಸ್.ಬಾಬು, ಕಾನೂನಹ ಮಾಪನ ಶಾಸ್ತ್ರ ಇಲಾಖೆ ಜಂಟಿ ನಿಯಂತ್ರಕ ಎಸ್.ಆರ್.ಮಾಳಿ ಸೇರಿದಂತೆ‌ ಬೆಳಗಾವಿ ಕಂದಾಯ ವಿಭಾಗದ ವಿವಿಧ ಜಿಲ್ಲೆಗಳ ಜಂಟಿ ನಿರ್ದೆಶಕರು, ಉಪನಿರ್ದೆಶಕರುಗಳು ಹಾಜರಿದ್ದರು.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ